Wednesday, October 20, 2021

ರಾಜಕಾರಣಿ ಎಂದರೆ ಜನರ ಮೇಲೆ ಫಾರ್ಚ್ಯೂನರ್‌ ಕಾರು ಹರಿಸುವುದಲ್ಲ: ಬಿಜೆಪಿ ರಾಜ್ಯಾಧ್ಯಕ್ಷ

ಲಖನೌ: ರಾಜಕಾರಣಿ ಎಂದರೆ ಜನರನ್ನು ಲೂಟಿ ಮಾಡುವುದಲ್ಲ, ಜನರ ಮೇಲೆ ಫಾರ್ಚ್ಯೂನರ್‌ ಕಾರು ಹರಿಸುವುದಲ್ಲ ಎಂದು ಉತ್ತರ ಪ್ರದೇಶದ ಬಿಜೆಪಿ ರಾಜ್ಯಾಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಅವರು ಹೇಳಿದ್ದಾರೆ. ಸದ್ಯ ಈ ವಿಡಿಯೋ ವೈರಲ್‌ ಆಗಿದೆ.


ಬಿಜೆಪಿಯ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಕಾರ್ಯಕಾರಿಣಿಯ ಉದ್ಘಾಟನಾ ಸಮಾರಂಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಒಬ್ಬರ ನಡವಳಿಕೆಯ ಆಧಾರದ ಮೇಲೆ ಚುನಾವಣೆ ಗೆಲ್ಲಬೇಕು.

ರಾಜಕೀಯ ಎಂದರೆ ನಿಮ್ಮ ಸಮಾಜ ಮತ್ತು ನಿಮ್ಮ ರಾಷ್ಟ್ರದ ಸೇವೆ. ಇದರಲ್ಲಿ ಯಾವುದೇ ಜಾತಿ ಮತ್ತು ಧರ್ಮದ ಸಂಬಂಧವಿಲ್ಲ ಎಂದು ಅವರು ಹೇಳಿದರು.

ಉತ್ತರ ಪ್ರದೇಶದ ಲಖಿಂಪುರ ಖೇರಿ ಎಂಬಲ್ಲಿ ಇತ್ತೀಚೆಗೆ ಪ್ರತಿಭಟನಾ ನಿರತ ರೈತರ ಮೇಲೆ ಎಸ್‌ಯುವಿಯೊಂದು ಹರಿದು, ನಾಲ್ವರು ರೈತರು ಮೃತಪಟ್ಟಿದ್ದರು.

ರೈತರ ಮೇಲೆ ಹರಿದ ಎಸ್‌ಯುವಿಯನ್ನು ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ಚಲಾಯಿಸುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ.

 

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...