Connect with us

LATEST NEWS

ಬೆಳಗಾವಿ ತ್ರಿವಳಿ ಕೊಲೆ ಪ್ರಕರಣ: ಆರೋಪಿ ನಿರ್ದೋಷಿ ಎಂದ ಹೈಕೋರ್ಟ್

Published

on

ಬೆಳಗಾವಿ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬೆಳಗಾವಿಯ ಕುವೆಂಪು ನಗರದ ತ್ರಿವಳಿ ಕೊಲೆ ಆರೋಪಿ ಪ್ರವೀಣ್ ಭಟ್‌ನನ್ನು ನಿರ್ದೋಷಿ ಎಂದು ಧಾರವಾಡ ಹೈಕೋರ್ಟ್‌ ತೀರ್ಪನ್ನು ನೀಡಿದೆ.

ಬಟ್ಟೆ ವ್ಯಾಪಾರಿಯ ಮನೆಗೆ ನುಗ್ಗಿದ ಯುವಕ, ಗೃಹಿಣಿ ಮತ್ತು ಇಬ್ಬರು ಮಕ್ಕಳ ಕಗ್ಗೊಲೆ ಮಾಡಿದ್ದ ಎಂದು ಆರೋಪಿಸಲಾಗಿತ್ತು. ಇದೀಗ ಈ ಪ್ರಕರಣದ ಆರೋಪಿ ಪ್ರವೀಣ್ ಭಟ್ ನಿರ್ದೋಷಿ ಎಂದು ಹೈಕೋರ್ಟ್‌ ಧಾರವಾಡ ಪೀಠ ಆದೇಶ ಹೊರಡಿಸಿದೆ.

ಇದಕ್ಕಿಂತ ಪೂರ್ವದಲ್ಲಿ ಬೆಳಗಾವಿ ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೀಡಿದ್ದ ಆದೇಶ ತಿರಸ್ಕರಿಸಿದ್ದ ಹೈಕೋರ್ಟ್, ಪ್ರವೀಣ್ ಭಟ್ ನಿರ್ದೋಷಿ ಎಂದು ತೀರ್ಪು ನೀಡಿದೆ. ನ್ಯಾಯಾಧೀಶರಾದ ಕೆ. ಎಸ್. ಮುದಗಲ್, ಎಂಜಿಎಸ್ ಕಮಲ್ ಈ ತೀರ್ಪು ನೀಡಿದ್ದಾರೆ.

ಈ ತ್ರಿವಳಿ ಕೊಲೆಗೆ ಅನೈತಿಕ ಸಂಬಂಧವೇ ಕಾರಣ ಎನ್ನಲಾಗಿತ್ತು. ರೀನಾ ಹಾಗೂ ಪ್ರವೀಣ್ ಭಟ್ ನಡುವಿನ ಸಂಬಂಧ ಈ ಮಟ್ಟಕ್ಕೆ ತಂದಿತ್ತು ಎನ್ನಲಾಗಿದೆ. ಬೆಳಗಾವಿ ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಪ್ರವೀಣ್, ತಾಯಿ ಮತ್ತು ಇಬ್ಬರು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಎಂದು ತನಿಖೆ ವೇಳೆ ಪೊಲೀಸರು ತಿಳಿಸಿದ್ದರು.

‘ಬೆಳಗಾವಿಯ ಕುವೆಂಪು ನಗರದಲ್ಲಿ ವಾಸವಾಗಿದ್ದ ರೀನಾ ಮಾಲಗತ್ತಿ ಹಾಗೂ ಯುವಕ ಪ್ರವೀಣ್ ಭಟ್ ನಡುವೆ ಸ್ನೇಹ ಸಲುಗೆ ಬೆಳೆದಿತ್ತು. ಎರಡು ವರ್ಷದವರೆಗೆ ಇಬ್ಬರ ಮಧ್ಯೆ ಅನೈತಿಕ ಸಂಬಂಧ ಮುಂದುರಿದಿತ್ತು.

ಬಳಿಕ ಪ್ರವೀಣ್ ಅಂತರ ಕಾಯ್ದುಕೊಳ್ಳಲು ಯತ್ನಿಸಿದ. ಇದರಿಂದ ಕೋಪಗೊಂಡ ರೀನಾ ತಕರಾರು ತೆಗೆದರು. ತನ್ನಿಂದ ದೂರಾದರೆ ಅನೈತಿಕ ಸಂಬಂಧದ ಸಂಗತಿಯನ್ನು ಬಹಿರಂಗ ಮಾಡುತ್ತೇನೆ ಎಂದೂ ಬೆದರಿಸಿದ್ದರು.

ಕೊಲೆಗೆ ಇದು ಕಾರಣವೆಂದು ನಮೂದಿಸಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ರೀನಾ ಕೊಲೆಯಾದ ದಿನವೇ ಪ್ರಿಯಕರ ಪ್ರವೀಣ್ ಜನ್ಮದಿನವಿತ್ತು. ಸ್ನೇಹಿತರೊಂದೆಗೆ ಪಾರ್ಟಿ ಮುಗಿಸಿಕೊಂಡು ಬಂದಿದ್ದ ಪ್ರವೀಣ್ ರೀನಾ ತಡರಾತ್ರಿ ಟೆರೆಸ್ ಮೇಲೆ ಬಂದು ಶುಭಾಶಯ ಹೇಳಿದ್ದರು. ಬಹಳ ಹೊತ್ತು ಇಬ್ಬರೂ ಮಾತನಾಡಿದ ಬಳಿಕ ಪ್ರವೀಣ್ ಮನೆಗೆ ಮರಳಿದ್ದ.

ಬೇರೊಂದು ಯುವತಿ ಜತೆಗೆ ಮದುವೆಯಾಗಿ ಜೀವನ ಕಟ್ಟಿಕೊಳ್ಳಲು ರೀನಾ ಅಡ್ಡಗಾಲು ಹಾಕಬಹುದು ಎಂಬ ಭಯ ಪ್ರವೀಣ್‌ಗೆ ಇತ್ತು. ಹೀಗಾಗಿ ಪ್ರಿಯತಮೆಯನ್ನು ಮುಗಿಸಲು ನಿರ್ಧರಿಸಿದ್ದ’ ಎಂಬುದೂ ದೋಷಾರೋಪ ಪಟ್ಟಿಯಲ್ಲಿದೆ.

‘2015ರ ಆಗಸ್ಟ್ 16ರಂದು ನಸುಕಿನ 3ಕ್ಕೆ ರೀನಾ ಅವರ ಬೆಡ್ ರೂಮಿಗೆ ಬಂದ ಆರೋಪಿ ಚಾಕುವಿನಿಂದ ಕತ್ತು ಸೀಳಿದ್ದ. ರೀನಾ ಕೂಗಾಟ ಕೇಳಿ ಮಕ್ಕಳೂ ಎಚ್ಚರಗೊಂಡಿದ್ದರು. ಸಾಕ್ಷ್ಯ ನಾಶಮಾಡುವ ಉದ್ದೇಶದಿಂದ ಮಗ ಆದಿತ್ಯಾ ಹಾಗೂ ಮಗಳು ಸಾಹಿತ್ಯ ಅವರ ಕತ್ತು ಹಿಸುಕಿ, ಕಾಲಲ್ಲಿ ತುಳಿದು ಕೊಲೆ ಮಾಡಲಾಗಿದೆ’.

ಆರೋಪವನ್ನು ಪ್ರವೀಣ್ ಮೇಲೆ ಹೊರಿಸಲಾಗಿತ್ತು. ಪೊಲೀಸರ ವಿಚಾರಣೆ ಕಾಲಕ್ಕೆ ಆರೋಪಿ ತನ್ನ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದ. ಇದೆಲ್ಲ ವಿಚಾರಣೆ ನಡೆಸಿ, 2018ರಲ್ಲಿ ಏಪ್ರಿಲ್ 16ರಂದು ಪ್ರವೀಣ್ ಗೆ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿತ್ತು.

ಈಗ ಹೈಕೋರ್ಟ್‌ನಿಂದಲೇ ಪ್ರವೀಣ್ ದೋಷಮುಕ್ತರಾದ ಹಿನ್ನೆಲೆಯಲ್ಲಿ ಪ್ರಕರಣ ದೊಡ್ಡ ತಿರುವು ಪಡೆದಿದೆ.

ರೀನಾ ಗಂಡ ರಿತೇಶ ಮಾಲಗತ್ತಿ, ಜವಳಿ ವ್ಯಾಪಾರಿಯಾಗಿದ್ದ. ಹಾಗಾಗಿ ಉದ್ಯಮದ ಸಂಬಂಧ ಕೆಲವೊಮ್ಮೆ ಎರಡೂರು ದಿನ ಮನೆಗೆ ಬರುತ್ತಿರಲಿಲ್ಲ. ಈ ವೇಳೆ ರೀನಾ ಮಾಲಗತ್ತಿ ಪ್ರವೀಣ್‌ನನ್ನು ಮನೆಗೆ ಆಹ್ವಾನಿಸಿ, ಅನೈತಿಕ ಚುಟುವಟಿಕೆಗೆ ಸಹಕರಿಸುವಂತೆ ಒತ್ತಾಯಿಸುತ್ತಿದ್ದಳು.

ರಿತೇಶ ಮನೆಯಲ್ಲಿ ಇಲ್ಲದ ಸಮಯದಲ್ಲಿ ಹಲವು ಸಲ ರೀನಾ ಭೇಟಿಗೆ ಮನೆಗೆ ಭೇಟಿ ನೀಡುತ್ತಿದ್ದ ಪ್ರವೀಣ್, ಒಮ್ಮೆಯೂ ಮುಂಬಾಗಿಲಿನಿಂದ ಹೋಗಿರಲಿಲ್ಲ. ಹಗ್ಗ ಏರಿ ರೀನಾಳನ್ನು ಭೇಟಿ ಮಾಡಿತ್ತಿದ್ದನಂತೆ.

ಹತ್ಯೆ ಘಟನೆ ನಡೆದ ದಿನ ರಾತ್ರಿ ಎರಡು ಸಲ ಆರೋಪಿ ಪ್ರವೀಣ್ ರೀನಾ ಮನೆಗೆ ಹೋಗಿದ್ದ ಎಂಬ ಮಾಹಿತಿ ಪೊಲೀಸ್ ತನಿಖೆಯಿಂದ ಪತ್ತೆ ಹಚ್ಚಿದ್ದರು. 2015 ಆಗಸ್ಟ್ 16 ರಂದು ಬೆಳಗಿನ ಜಾವ ನಡೆದ ತ್ರಿವಳಿ ಕೊಲೆ ಪ್ರಕರಣದ ಸಂಬಂಧ ಪ್ರವೀಣ್ ಭಟ್‌ನನ್ನು ಬಂಧಿಸಿ, ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಲಾಗಿತ್ತು. ಆದರೆ ಈಗ ಆತ ನಿರ್ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ.

DAKSHINA KANNADA

ಮಂಡ್ಯದಲ್ಲಿ ಅವಳಿ ಮಕ್ಕಳ ಸಾ*ವಿನ ಪ್ರಕರಣಕ್ಕೆ ಟ್ವಿಸ್ಟ್..! ತಾಯಿಯಿಂದ ಕೃತ್ಯ..!

Published

on

ಮಂಗಳೂರು,(ಮಂಡ್ಯ): ಮಂಡ್ಯದಲ್ಲಿ ಐಸ್‌ ಕ್ರೀಮ್‌ ತಿಂದು ಅವಳಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌ ಸಿಕ್ಕಿದೆ. ಬುಧವಾರ ಅವಳಿ ಮಕ್ಕಳು ಸಾವನ್ನಪ್ಪಿದ್ದರು. ಐಸ್ ಕ್ರೀಂ ತಿಂದು ಮಕ್ಕಳು ಇಹಲೋಕ ತ್ಯಜಿಸಿವೆ ಎನ್ನಲಾಗಿತ್ತು. ಆದರೆ, ಮರಣೋತ್ತರ ಪರೀಕ್ಷೆ ಬಳಿಕ ಸತ್ಯಾಂಶ ಬಯಲಾಗಿದೆ. ತಾಯಿಯೇ ಮಕ್ಕಳಿಗೆ ವಿಷ ಹಾಕಿ ಸಾಯಿಸಿದ್ದಾಳೆ ಎನ್ನುವುದು ಖಚಿತವಾಗಿದೆ.

ಹೆತ್ತ ಮಕ್ಕಳಿಗೆ ವಿಷವಿಕ್ಕಿದ ತಾಯಿ!

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದ ಪೂಜಾ ಹಾಗೂ ಪ್ರಸನ್ನ ದಂಪತಿಗಳ ಒಂದೂವರೆ ವರ್ಷದ ಅವಳಿ ಕಂದಮ್ಮಗಳು ಸಾವನ್ನಪ್ಪಿದ್ದವು.

ಪೊಲೀಸ್‌ ತನಿಖೆಯ ಬಳಿಕ ತಾಯಿ ಪೂಜಾಳೇ ಮೂವರು ಮಕ್ಕಳಿಗೆ ವಿಷ ಹಾಕಿದ್ದಾಳೆಂಬುದು ಗೊತ್ತಾಗಿದೆ.

ತ್ರಿಶುಲ್, ತ್ರಿಶ ಅವಳಿ ಮಕ್ಕಳು ಹಾಗೂ ಮಗಳು ಬೃಂದಾಗೆ ಪೂಜಾ ಹಾಕಿದ್ದಳು. ಬಳಿಕ ಐಸ್ ಕ್ರೀಂ ತಿಂದು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಬಿಂಬಿಸಲಾಗಿತ್ತು. ಇದೀಗ ಪೊಲೀಸ್ ವಿಚಾರಣೆ ವೇಳೆ ಸತ್ಯಾಂಶ ಬಯಲಾಗಿದೆ.

ಪೂಜಾ ಪತಿ ಪ್ರಸನ್ನ ಪದೇ ಪದೇ ಜಗಳವಾಡುತ್ತಿದ್ದರು. ಈ ಜಗಳದಿಂದ ಬೇಸತ್ತು ಬುಧವಾರ ಮಕ್ಕಳಿಗೆ ತಾಯಿ ವಿಷ ಉಣಿಸಿದ್ದಾಳೆ. ಬಳಿಕ ತಾನೂ ಸೇವಿಸಿದ್ದಳು. ಕೂಡಲೇ ಮಕ್ಕಳು ಹಾಗೂ ಪೂಜಾಳನ್ನು ಮಂಡ್ಯ‌ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿ, ಆಸ್ಪತ್ರೆಯಲ್ಲಿ ಅವಳಿ ಜವಳಿ ಕಂದಮ್ಮಗಳು ಕೊನೆಯುಸಿರೆಳೆದಿದ್ದವು.

ಸದ್ಯ ತಾಯಿ ಹಾಗೂ ಮೊದಲ ಮಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Continue Reading

DAKSHINA KANNADA

ಕಾರ್ಪೋರೇಟರ್ ಮಗಳ ಹ*ತ್ಯೆ..! ಒಂಬತ್ತು ಬಾರಿ ಇರಿದ ಪಾಪಿ…!

Published

on

ಮಂಗಳೂರು (ಹುಬ್ಬಳ್ಳಿ) : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ. ನೇಹಾ ಹಿರೇಮಠ ಕೊಲೆಗೀಡಾದಾಕೆ. ಕಾಲೇಜ್ ಕ್ಯಾಂಪಸ್​ನಲ್ಲಿರುವ ಕ್ಯಾಂಟೀನ್​ನಲ್ಲಿ ಫೈಜಲ್ ಎಂಬಾತ 9 ಬಾರಿ ಚಾಕುವಿನಿಂದ ಇರಿದಿದ್ದಾನೆ. ತಕ್ಷಣ ನೇಹಾಳನ್ನು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನೇಹಾ ಮೃತಪಟ್ಟಿದ್ದಾಳೆ.

                  ತಂದೆ ನಿರಂಜನ್ ಹಿರೇಮಠ ಜೊತೆಗೆ ನೇಹಾ

ಪ್ರೀತಿ ನಿರಾಕರಣೆಗೆ ಪಾಪಿಯಿಂದ ಹೇಯ ಕೃತ್ಯ..!

ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿರುವ ನೇಹಾ ಹಿರೇಮಠಗೆ ಆರೋಪಿ ಫೈಜಲ್ ಎಂಬಾತ ಪ್ರೀತಿಸುವಂತೆ ಪೀಡಿಸಿದ್ದಾನೆ. . ಆದರೆ, ನೇಹಾ ಇದನ್ನು ನಿರಾಕರಿಸುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ.
ಆರೋಪಿ ಫೈಜಲ್ ಕೊಂಡಿಕೊಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಠಾಣೆ‌ ಪೊಲೀಸರಿಂದ ಆರೋಪಿಯ ವಿಚಾರಣೆ ನಡೆಸಲಾಗಿದೆ.ಇನ್ನು ನೇಹಾ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

 

Continue Reading

DAKSHINA KANNADA

“ಸೆಕ್ಸ್‌” ನನ್ನ ಸಾಮರ್ಥ್ಯದ ರಹಸ್ಯ…! ಮಾಜಿ ಸಂಸದೆಯ ಹೇಳಿಕೆ ವೈರಲ್‌..!

Published

on

ಮಂಗಳೂರು ( ಪಶ್ಚಿಮ ಬಂಗಾಳ ) : ಮಾಜಿ  ಸಂಸದೆ ಮಹುವಾ ಮೋಯಿತ್ರಾ ( Mahua Moitra ) ವಿವಾದದ ಕಾರಣದಿಂದ ಸಂಸತ್‌ನಿಂದ ಉಚ್ಚಾಟಿತರಾಗಿದ್ದರು. ಕೇಂದ್ರ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದಿದ್ದರು ಎಂಬ ಆರೋಪ ಅವರ ಮೇಲಿತ್ತು. ಈಗ ಅವರು ಮತ್ತೊಂದು ವಿವಾದಕ್ಕೆ ಸಿಲುಕಿದ್ದು ಅವರ ಹೇಳಿಕೆ ಬಾರಿ ವೈರಲ್ ಆಗಿದೆ. ಕೃಷ್ಣ ನಗರ ಲೋಕಸಭಾ ಕ್ಷೇತ್ರದಿಂದ ಟಿಎಂಸಿ ಅಭ್ಯರ್ಥಿಯಾಗಿ ಅವರು ಕಣಕ್ಕೆ ಇಳಿದಿದ್ದಾರೆ. ಭರ್ಜರಿ ಪ್ರಚಾರ ನಡೆಸುತ್ತಿರುವ ಅವರನ್ನ ಪತ್ರಕರ್ತರೊಬ್ಬರು ಸಂದರ್ಶನ ನಡೆಸಿದ್ದಾರೆ. ಈ ವೇಳೆ ಪತ್ರಕರ್ತ ನಿಮ್ಮ ಸಾಮಾರ್ಥ್ಯದ ರಹಸ್ಯ ಏನು ಎಂಬ ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ಮೊಯಿತ್ರಾ ಅವರು “ಸೆಕ್ಸ್‌” ಎಂದು ಹೇಳಿರುವ ವಿಡಿಯೋವನ್ನು ಮೋದಿ ಕಾ ಪರಿವಾರ ವೈರಲ್ ಮಾಡಿದೆ. ವಿಡಿಯೊ ವೈರಲ್‌ ಆಗುತ್ತಲೇ ಜನ ಟೀಕೆ ವ್ಯಕ್ತಪಡಿಸಿದ್ದಾರೆ. ಒಬ್ಬ ಸಂಸದೆಯಾಗಿ ಬಹಿರಂಗವಾಗಿ ಹೀಗೆ ಹೇಳುವುದು ತಪ್ಪು ಎಂದು ಖಂಡಿಸಿದ್ದಾರೆ.

ನ್ಯೂಸ್‌ ದಿ ಟ್ರುತ್‌ ಎಂಬ ಮಾದ್ಯಮ ಮಾಡಿದ ಸಂದರ್ಶನ

ಸ್ಪಷ್ಟನೆ ನೀಡಿದ ಸಂದರ್ಶನ ನೀಡಿದ ವರದಿಗಾರ..!

“ಮಹುವಾ ಮೊಯಿತ್ರಾ ಅವರನ್ನು ಸಂದರ್ಶನ ಮಾಡಿದ್ದು ನಾನೇ. ನಿಮ್ಮ ಸಾಮರ್ಥ್ಯದ ಗುಟ್ಟೇನು ಎಂಬುದಾಗಿ ಕೇಳಿದೆ. ಅದಕ್ಕೆ ಅವರು, ಎಗ್ಸ್‌ (ಮೊಟ್ಟೆಗಳು) ಎಂಬುದಾಗಿ ಎರಡು ಬಾರಿ ಉತ್ತರಿಸಿದರು. ಆದರೆ, ಭಕ್ತ ಮಂಡಳಿಯು ಎಗ್ಸ್‌ ಎಂಬುದನ್ನು ಸೆಕ್ಸ್‌ ಎಂಬುದಾಗಿ ತಿರುಚಿದೆ” ಎಂಬುದಾಗಿ ನ್ಯೂಸ್‌ ದಿ ಟ್ರುತ್‌ ಎಂಬ ಮಾಧ್ಯಮ ಸಂಸ್ಥೆ ವರದಿಗಾರ ತಮಲ್‌ ಸಾಹ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಆದರೆ, ವರದಿಗಾರ ಸ್ಪಷ್ಟನೆ ನೀಡುವ ಹೊತ್ತಿಗೆ ವಿಡಿಯೊ ಭಾರಿ ವೈರಲ್‌ ಆಗಿದ್ದು, ಟೀಕೆಗಳು ವ್ಯಕ್ತವಾಗಿವೆ.

49 ವರ್ಷದ ಮಹುವಾ ಮೊಯಿತ್ರಾ ಅವರು ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸುವ ಪ್ರಶ್ನೆಗಳನ್ನು ಕೇಳಲು 2 ಕೋಟಿ ರೂ. ನಗದು ಸೇರಿದಂತೆ ಲಂಚ ಪಡೆದ ಆರೋಪ ಹೊತ್ತಿದ್ದಾರೆ. ಮೊಯಿತ್ರಾ ಅವರು ತಮ್ಮ ಸಂಸತ್ತಿನ ಲಾಗ್-ಇನ್ ವಿವರಗಳನ್ನು ಉದ್ಯಮಿ ದರ್ಶನ್ ಹಿರಾನಂದಾನಿಗೆ ನೀಡಿದ್ದನ್ನು ಮೋಯಿತ್ರಾ ಒಪ್ಪಿಕೊಂಡಿದ್ದರು.  ಈ ಹಿನ್ನೆಲೆಯಲ್ಲಿ ಅವರನ್ನು ಡಿಸೆಂಬರ್ 8, 2023ರಂದು ಲೋಕಸಭೆಯಿಂದ ಉಚ್ಚಾಟಿಸಲಾಗಿತ್ತು.

 

Continue Reading

LATEST NEWS

Trending