Monday, January 24, 2022

ನಿಂತಿದ್ದ ಲಾರಿಗೆ ದ್ವಿಚಕ್ರ ವಾಹನ ಢಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಬೆಳಗಾವಿ: ಡಾಬಾದಲ್ಲಿ ಊಟ ಮಾಡಿ ವಾಪಸ್ ಮನೆಗೆ ಬರುತ್ತಿದ್ದಾಗ ನಿಂತಿದ್ದ ಲಾರಿಗೆ ಹಿಂಬದಿಯಿಂದ ದ್ವಿಚಕ್ರ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಬೆಳಗಾವಿ ನಗರದ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಿನ್ನೆ ಮಧ್ಯರಾತ್ರಿ ರಾಷ್ಟ್ರೀಯ ಹೆದ್ದಾರಿ ಬಳಿಯ ಯಮನಾಪುರ ಸಮೀಪದ ಬರ್ಡೆ ಹಾಗೂ ಗಾವಕರಿ ಡಾಬಾ ಎದುರು ಸಂಭವಿಸಿದೆ.


ಚವಾಟ ಗಲ್ಲಿಯ ಶ್ರೀನಾಥ ದಿಗಂಬರ ಪವಾರ (21) ಹಾಗೂ ಸದಾಶಿವ ನಗರದ ರಚಿತ್ ರಂಜನ್ ಡುಮಾವತ್ (21) ಮೃತಪಟ್ಟಿದ್ದಾರೆ.

ಇಲ್ಲಿನ ಲಿಂಗರಾಜ ಕಾಲೇಜಿನಲ್ಲಿ ಬಿ.ಕಾಂ. ತೃತೀಯ ವರ್ಷದಲ್ಲಿ ಓದುತ್ತಿದ್ದ ಈ ಇಬ್ಬರೂ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿದೆ.

ಮೃತ ಯುವಕ ಶ್ರೀನಾಥ ಅವರ ತಂದೆ ದಿಗಂಬರ ಪವಾರ ಬೆಳಗಾವಿಯ ಮರಾಠಾ ಕೋ ಆಪ್ ಬ್ಯಾಂಕ್ ಅಧ್ಯಕ್ಷರಾಗಿದ್ದಾರೆ. ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Hot Topics

ಕಾರ್ಕಳದಲ್ಲಿ ಕೊರೋನಾದಂತೆ ಹರಡುತ್ತಿದೆ ಕಾಲು ಬಾಯಿ ರೋಗ

ಕಾರ್ಕಳ: ಇಲ್ಲಿನ ಆಸುಪಾಸಿನಲ್ಲಿ ಪ್ರಾಣಿಗಳಲ್ಲಿ ಕಂಡುಬರುವ ಅದರಲ್ಲೂ ಜಾನುವಾರಿನಲ್ಲಿ ಸಾಂಕ್ರಾಮಿಕ ಕಾಲುಬಾಯಿ ರೋಗ ಹರಡುತ್ತಿದೆ.ಇದರಿಂದಾಗಿ ಈಗಾಗಲೇ ಹಲವು ಜಾನುವಾರು ಬಲಿಯಾಗಿದ್ದು, ಪಶು ಇಲಾಖೆಯ ನಿರ್ಲಕ್ಷ್ಯದ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.ಕಾರ್ಕಳ ನಗರ, ತೆಳ್ಳಾರು, ಮಿಯಾರು,...

ಮಂಗಳೂರಿನ ಕುವರಿ ರೆಮೊನಾ ಇವೆಟ್ಟಾ ಪಿರೇರಾಗೆ ರಾಷ್ಟ್ರೀಯ ಬಾಲಪುರಸ್ಕಾರ ಪ್ರಶಸ್ತಿ

ಮಂಗಳೂರು: ಈ ಬಾರಿಯ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲಪುರಸ್ಕಾರ ಪ್ರಶಸ್ತಿ ಮಂಗಳೂರಿನ ರೆಮೊನಾ ಇವೆಟ್ಟಾ ಪಿರೇರಾ ಅವರಿಗೆ ದೊರೆತಿದೆ.ಸಾಂಸ್ಕೃತಿಕ ರಂಗದಲ್ಲಿ ಮಾಡಿದ ಸಾಧನೆಗೆ ಈ ಗೌರವ ಲಭಿಸಿದ್ದು, ಪುರಸ್ಕಾರವು ಒಂದು ಲಕ್ಷ ಮೊತ್ತ,...

“ಬಿಜೆಪಿಗರಿಗೆ ವಿಶ್ವಗುರು ನರೇಂದ್ರ ಮೋದಿ ಒಬ್ಬರೇ”

ಮಂಗಳೂರು: ಬಿಜೆಪಿಗರಿಗೆ ಇಡೀ ಪ್ರಪಂಚದಲ್ಲಿ ಏಕೈಕ ಗುರು ವಿಶ್ವಗುರು ಎನ್ನುವ ನರೇಂದ್ರ ಮೋದಿ ಬಿಟ್ಟು ಬೇರೆ ಯಾವ ಗುರುಗಳಿಗೂ ಗೌರವ ಕೊಡದಿದ್ದುದನ್ನು ನೋಡಿದ್ದೇವೆ ಎಂದು ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್...