ಮಕ್ಕಳಿಬ್ಬರು ಆಟವಾಡುತ್ತ ನೀರಿನ ಸಂಪಿಗೆ ಬಿದ್ದು ದುರ್ಮರಣಕ್ಕೀಡಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ನಡೆದಿದೆ.
ಬೆಳಗಾವಿ : ಮಕ್ಕಳಿಬ್ಬರು ಆಟವಾಡುತ್ತ ನೀರಿನ ಸಂಪಿಗೆ ಬಿದ್ದು ದುರ್ಮರಣಕ್ಕೀಡಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ನಡೆದಿದೆ.
ಮಧ್ಯಾಹ್ನ 12 ಗಂಟೆ ವೇಳೆಗೆ ಈ ದುರ್ಘಟನೆ ನಡೆದಿದೆ.
ಸವದತ್ತಿ ನಗರದ ಗುರ್ಲ್ ಹೊಸೂರು ವಾರ್ಡಿನಲ್ಲಿರುವ ನಿರ್ಮಾಣ ಹಂತದಲ್ಲಿರುವ ವಾಲ್ಮೀಕಿ ಭವನ ಕಟ್ಟಡದ ನೀರು ಸಂಗ್ರಹ ಮಾಡುವ ಸಂಪಿನಲ್ಲಿ ಪ್ರಗತಿ ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ಖಾಸಗಿ ಶಾಲೆಯ ನರ್ಸರಿ ಓದುತ್ತಿರುವ 4 ವರ್ಷದ ಮಕ್ಕಳು ಬಿದ್ದಿದ್ದಾರೆ.
ಶ್ಲೋಕ ಶಂಭುಲಿಂಗಪ್ಪ ಗುಡಿ ಹಾಗೂ ಚಿದಾನಂದ ಪ್ರಕಾಶ ಸಾಲುಂಕೆ ಆಟವಾಡುತ್ತಾ ಹೋಗಿ ಆಕಸ್ಮಿಕವಾಗಿ ನೀರು ತುಂಬಿರುವ ಸಂಪಿನಲ್ಲಿ ಬಿದ್ದು ಮೃತಪಟ್ಟಿದ್ದಾರೆ.
ಸವದತ್ತಿ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.