ಬೆಂಗಳೂರು: ಅದು ನಳಿನ್ ಕುಮಾರ್ ಕಟೀಲು ಅವರ ಧ್ವನಿಯೇ ಆಗಿದೆ. ಅವರ ನಗು ಮಿಮಿಕ್ರಿ ಮಾಡಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಡಿಯೋವೊಂದರ ಪ್ರಕರಣದ ಬಗ್ಗೆ ಮಾತನಾಡಿ, “ಕಟೀಲು ಧ್ವನಿ ಕೇಳಿಸಿಕೊಂಡರೆ, ಸಿಎಂ ರಾಜಿನಾಮೆ ನೀಡುವುದು ಪಕ್ಕಾ ಅನಿಸುತ್ತದೆ. ಅದು ಕಟೀಲು ಅವರ ಧ್ವನಿಯೇ ಆಗಿದೆ. ಅವರ ನಗು ಅನುಕರಣೆ ಮಾಡಲು ಆಗೊಲ್ಲಾ ಅವರ ನಗುನ ಮಿಮಿಕ್ರಿ ಮಾಡಲು ಸಾಧ್ಯವಿಲ್ಲ. ಅದು ಕಟೀಲು ಅವರ ಧ್ವನಿ ಎಂದು ಈಶ್ವರಪ್ಪರಿಗೆ ತಿಳಿದಿದೆ. ಅದಕ್ಕೇ ಈಶ್ವರಪ್ಪ, ನಾನೇನು ಗೂಟ ಹೊಡೆದುಕೊಂಡು ಕೂರಲು ಬಂದಿಲ್ಲ ಎಂದು ಹೇಳಿಕೆ ನೀಡಿದ್ದಾರೆ” ಎಂದು ಹೇಳಿದರು.