ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರಿಗೆ ಕೊರೋನಾ ಪಾಸಿಟಿವ್..!
ಬೆಳ್ತಂಗಡಿ : ಬೆಳ್ತಂಗಡಿ ಶಾಸಕ ಹರೀಶ್ ಪೂಜಾರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಈ ಕುರಿತಂತೆ ಟ್ವೀಟ್ ರಲ್ಲಿ ಸ್ವತ ಮಾಹಿತಿ ಹಂಚಿಕೊಂಡಿದ್ದಾರೆ.
ಸಿಎಂ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢವಾಗುವ ಮುನ್ನ ಹರೀಶ್ ಪೂಂಜಾ ಸಿಎಂ ಅವರನ್ನು ಭೇಟಿಯಾಗಿದ್ದರು.
ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢವಾದ ಹಿನ್ನಲೆ ಹರೀಶ್ ಪೂಂಜಾ ಅವರು ಸ್ವತಃ ಕ್ವಾರಂಟೈನ್ ಗೆ ಒಳಗಾಗಿದ್ದರು ಮತ್ತು ಕೋವಿಡ್ ಟೆಸ್ಟ್ ಗೂ ಒಳಪಟ್ಟಿದ್ದರು.
ಇದೀಗ ವರದಿ ಬಂದಿದ್ದು, ಸೋಂಕು ತಗುಲಿರೋದು ದೃಢವಾಗಿದೆ. ಈ ಕುರಿತಂತೆ ಮಾಹಿತಿ ಟ್ವೀಟರ್ ನಲ್ಲಿ ಮಾಹಿತಿ ನೀಡಿದ ಶಾಸಕ ಹರೀಶ್ ಪೂಂಜಾ ಸಣ್ಣ ಮಟ್ಟಿನ ಜ್ವರ ಇದ್ದ ಕಾರಣ ಮಾಡಿಸಿದ ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ.
ಸಣ್ಣ ಮಟ್ಟಿನ ಜ್ವರ ಬಿಟ್ಟು ಬೇರೆ ಯಾವುದೇ ಲಕ್ಷಣಗಳಿಲ್ಲದೆ ಇರುವುದರಿಂದ ಮನೆಯಲ್ಲಿಯೇ ಶುಶ್ರೂಷೆ ಪಡೆಯುತ್ತಿದ್ದೇನೆ.
ಕಳೆದ ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆವಹಿಸಿ ಎಂದು ಮನವಿ ಮಾಡಿದ್ದಾರೆ.