ಬೆಳ್ತಂಗಡಿ: ಬೆಳ್ತಂಗಡಿಯ ಕೊಯ್ಯೂರು ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸ್ಮಿತಾಶ್ರೀ ಪಿಯುಸಿಯ ಪರೀಕ್ಷೆಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಇವರು ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾಗಿದ್ದು 2021-22 ಸಾಲಿನ ಪಿಯುಸಿ ಪರೀಕ್ಷೆಯ ಕನ್ನಡ ವಿಷಯದ ಮರುಮೌಲ್ಯಮಾಪನದಲ್ಲಿ 6 ಅಂಕಗಳನ್ನು ಹೆಚ್ಚುವರಿಯಾಗಿ ಪಡೆದು ಒಟ್ಟು 571 (95.16%) ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾರೆ.