BELTHANGADY
ಬೆಳ್ತಂಗಡಿ: ಬಡವರ ಕಷ್ಟಕ್ಕೆ ಮಿಡಿಯುವ ‘ವೀರಾಂಜನೇಯ ಸೇವಾ ಸಮಿತಿ’ಯಿಂದ ಮೂರು ಕುಟುಂಬಗಳಿಗೆ ಧನ ಸಹಾಯ
ಬೆಳ್ತಂಗಡಿ: ಬಡವರ ಸೇವೆಯನ್ನೇ ದೇವರ ಸೇವೆ ಎಂದು ನಂಬಿ ಅದನ್ನು ಪ್ರಯೋಗಾತ್ಮಕ ನೆಲೆಯಲ್ಲಿ ಮನಗಂಡು ಕಳೆದ 5 ವರ್ಷಗಳಿಂದ ಸಮಾಜ ಸೇವೆ ಮಾಡುತ್ತಾ ಬಂದಿರುವ ವೀರಾಂಜನೇಯ ಸೇವಾ ಸಮಿತಿ ಮೂರು ಬಡಕುಟುಂಬಕ್ಕೆ ಸಹಾಯಹಸ್ತ ನೀಡಿ ಪರರ ನೋವಿಗೆ ಸ್ಪಂದಿಸಿ ತನ್ನ ಸೇವೆಯನ್ನು ಮುಂದುವರಿಸಿದೆ.
52ನೇ ಸೇವಾಯೋಜನೆಯಾಗಿ ಮೂಡಬಿದ್ರೆ ತಾಲೂಕಿನ ವಾಲ್ಪಡಿಯ ಸುಜಯ ಎಂಬವರು ಸಕ್ಕರೆ ಕಾಯಿಲೆ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸಾ ವೆಚ್ಚಕ್ಕೆ ಈವರೆಗೆ ಸರಿಸುಮಾರು 2 ಲಕ್ಷದಷ್ಟು ಹಣ ಖರ್ಚು ಮಾಡಿದ್ದಾರೆ.
ಈ ಬಡಕುಟುಂಬದ ಕಷ್ಟಕ್ಕೆ ಮರುಗಿದ ಶ್ರೀ ವೀರಾಂಜನೇಯ ಸೇವಾ ಸಮಿತಿ 10,000ರೂ ಸಹಾಯಧನದ ಚೆಕ್ಕನ್ನು ನೀಡಿದ್ದಾರೆ.
ಇನ್ನು 53ನೇ ಸೇವಾಯೋಜನೆಯಾಗಿ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಕು.ಶಿಲ್ಪಾ ಎಂಬವರು ಕಳೆದ ಒಂದು ವಾರಗಳ ಹಿಂದೆ ತಲೆಯ ನರದ ಸಮಸ್ಯೆಯಿಂದ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.
ಈ ಬಡಕುಟುಂಬಕ್ಕೆ ಶ್ರೀ ವೀರಾಂಜನೇಯ ಸೇವಾ ಸಮಿತಿಯು 10,000ರೂ ಸಹಾಯಧನದ ಚೆಕ್ಕನ್ನು ಶಿಲ್ಪಾ ಇವರ ಬಡಕುಟುಂಬಕ್ಕೆ ಹಸ್ತಾಂತರಿಸಿದರು.
54ನೇ ಸೇವಾಯೋಜನೆಯಾಗಿ, ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದ ಪ್ರವೀಣ್ ಎಂಬವರ ತಾಯಿ ಕಳೆದ 8 ತಿಂಗಳುಗಳಿಂದ ಹಾಗೂ ಇವರ ಪತ್ನಿ 2 ತಿಂಗಳುಗಳಿಂದ ಪಾರ್ಶ್ವವಾಯು ಸಮಸ್ಯೆಯಿಂದ ಬಳಲುತ್ತಿದ್ದರು.
ಈಗಾಗಲೇ ಹಲವಾರು ಸಾಲಮೂಲಗಳನ್ನು ಮಾಡಿ ಹಾಸ್ಪಿಟಲ್ ವೆಚ್ಚ ಭರಿಸಿದ್ದರು. ಈ ಬಡಕುಟುಂಬಕ್ಕೆ ಶ್ರೀ ವೀರಾಂಜನೇಯ ಸೇವಾ ಸಮಿತಿಯು 15,000ರೂ ಸಹಾಯಧನದ ಚೆಕ್ಕನ್ನು ಬಡಕುಟುಂಬಕ್ಕೆ ಹಸ್ತಾಂತರಿಸಿದ್ದಾರೆ.
BELTHANGADY
ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು
ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು(59 ವ) ಅವರು ಹೃದಯಾಘಾತದಿಂದ ಮೇ.1ರಂದು ರಾತ್ರಿ ನಿಧನರಾಗಿದ್ದಾರೆ.
ಮುಂದೆ ಓದಿ..;ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ
ಕೋಟದಲ್ಲಿ ಮೇ.1ರಂದು ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಕುಕ್ಕಿತ್ತಾಯನ ವೇಷ ಹಾಕಿದ್ದರು. ಮೇಳದ ಬಳಿಕ ಚೌಕಿಯಲ್ಲಿ ಬಣ್ಣ ತೆಗೆಯುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.
ನಾರಾಯಣ ಮಯ್ಯು ಹಾಗೂ ಲಕ್ಷ್ಮೀ ದಂಪತಿ ಪುತ್ರನಾಗಿದ್ದು 1964ರಲ್ಲಿ ಪುತ್ತೂರಿನ ಸೇಡಿಯಾಪಿನಲ್ಲಿ ಜನಿಸಿದರು. ತನ್ನ 18 ನೇ ವಯಸ್ಸಿನಲ್ಲಿ ಯಕ್ಷಗಾನದಲ್ಲಿ ಬಣ್ಣ ಹಚ್ಚಲು ಆರಂಭಿಸಿದ ಇವರು ಸ್ತ್ರೀ ವೇಷ, ರಾಜ ವೇಷ, ಪುಂಡು ವೇಷಗಳಲ್ಲಿ ನಿಸ್ಸೀಮರಾಗಿದ್ದರು. ಇನ್ನು ಮಾಲಿನಿ, ಚಿತ್ರಾಂಗದೆ, ಮೋಹಿನಿ, ದಾಕ್ಷಾಯಿನಿ, ಪ್ರಮೀಳೆ, ಶ್ರೀ ದೇವಿ, ಸೀತೆ, ದೇವೆಂದ್ರ, ದುಶ್ಯಾಸನ ಮೊದಲಾದ ಪಾತ್ರಗಳ ಅಭಿನಯದಲ್ಲಿಯೂ ಸೈ ಎನಿಸಿಕೊಂಡಿದ್ದರು. ಮೃತರು ಆರೋಗ್ಯ ಸಹಾಯಕಿಯಾಗಿರುವ ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.
BELTHANGADY
ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ
ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.
ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?
ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
BANTWAL
ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.
ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.
- DAKSHINA KANNADA6 days ago
ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ
- FILM6 days ago
ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ
- FILM7 days ago
ಹೊಸ ಅವತಾರದಲ್ಲಿ ZEE ಕನ್ನಡ ‘ಕಾಮಿಡಿ ಕಿಲಾಡಿಗಳು’… ಸ್ಟಾರ್ ನಿರೂಪಕರು ಈಗ ಜಡ್ಜಸ್? ಏನಿದು ಟ್ವಿಸ್ಟ್?
- DAKSHINA KANNADA6 days ago
ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ