Connect with us

    BELTHANGADY

    ಬೆಳ್ತಂಗಡಿ: ಕೊಕ್ಕಡದ ಶಾಲೆಯಲ್ಲಿ ಕಳ್ಳತನಕ್ಕೆ ಯತ್ನ- ನಾಲ್ವರು ಆರೋಪಿಗಳ ಬಂಧನ

    Published

    on

    ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ ಕೊಕ್ಕಡದ ಶಾಲೆಯಲ್ಲಿ ಕಳ್ಳತನ ನಡೆಸಿದ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬಂಧಿತರಿಂದ ಕಳ್ಳತನ ಮಾಡಿದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

    ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ ಕೊಕ್ಕಡದ ಶಾಲೆಯಲ್ಲಿ ಕಳ್ಳತನ ನಡೆಸಿದ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬಂಧಿತರಿಂದ ಕಳ್ಳತನ ಮಾಡಿದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

    ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಡಬ ತಾಲೂಕಿನ ಕುಟ್ರುಪ್ಪಾಡಿ ನಿವಾಸಿಯಾ 24 ವರ್ಷದ ರಕ್ಷಿತ್ ಡಿ, 29 ವರ್ಷದ ತೀರ್ಥೇಶ್ ಎಂ, 30 ವರ್ಷದ ಯಜ್ಞೇಶ್ ಯು.ಕೆ, 23 ವರ್ಷದ ರೋಹಿತ್ ಶೆಟ್ಟಿ ಬಂಧಿತ ಆರೋಪಿಗಳಾಗಿದ್ದಾರೆ.

    ಇವರು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸರಕಾರಿ ಪ್ರೌಢಶಾಲೆಯ ಬಾಗಿಲು ಮುರಿದು ಅಲ್ಲಿರಿಸಲಾಗಿದ್ದ ಸುಮಾರು 32 ಸಾವಿರ ರೂ. ಮೌಲ್ಯದ ಎಂಟು ಬ್ಯಾಟರಿಗಳನ್ನು ಕಳವು ಮಾಡಿದ್ದರು.

    ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಒಂದು ಕಾರು ಹಾಗೂ ವಿವಿದೆಡೆ ಕಳ್ಳತನ ಮಾಡಿದ ಸುಮಾರು ಎರಡು ಲಕ್ಷ ರೂ.

    ಮೌಲ್ಯದ ಬ್ಯಾಟರಿ ಹಾಗು ಕಳ್ಳತನಕ್ಕೆ ಉಪಯೋಗಿಸಿದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

    ವಿಚಾರಣೆಯ ವೇಳೆ ಆರೋಪಿಗಳು ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ನಡೆಸಿರುವುದು ಬಹಿರಂಗಗೊಂಡಿದ್ದು ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ನಾಲ್ಕು ಶಾಲೆಗಳಿಂದ, ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಎರಡು ಶಾಲೆಗಳಿಂದ, ಪುತ್ತೂರು ನಗರ ಠಾಣಾ ವ್ಯಾಪ್ತಿಯ ಒಂದು ಶಾಲೆಯಿಂದ, ಬಂಟ್ವಾಳ ಠಾಣಾ ವ್ಯಾಪ್ತಿಯ ಒಂದು ಶಾಲೆಯಿಂದ ಹಾಗೂ ಧರ್ಮಸ್ಥಳ ಠಾಣಾ ವ್ಯಾಪ್ತಿಯ ಒಂದು ಶಾಲೆಯಲ್ಲಿ ಹೀಗೆ ಒಂಬತ್ತು ಶಾಲೆಗಳಲ್ಲಿ ಕಳ್ಳತನ ನಡೆಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಬೆಳ್ತಂಗಡಿ ವೃತ್ತ ನಿರೀಕ್ಷಕ ಶಿವಕುಮಾರ್ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಠಾಣೆಯ ಎಸ್.ಐ ಅನಿಲ್ ಕುಮಾರ್ ಹಾಗೂ ತಂಡ ಇದೀಗ ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

    BELTHANGADY

    ಅಂತರಾಷ್ಟ್ರೀಯ ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ

    Published

    on

    ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ಸಿದ್ದಾರ್ಥ್ ಎಂ.ಸಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ಫ್ಲಾಯ್ಡ್ ಮಿಸ್ಕಿತ್ ರಾಷ್ಟ್ರಮಟ್ಟದ ಟಾರ್ಗೆಟ್ ಬಾಲ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ನೇಪಾಳದ ಕಠ್ಮಂಡುವಿನಲ್ಲಿ ಜುಲೈ 8 ರಿಂದ ಜರುಗಿದ ಅಂತರಾಷ್ಟ್ರೀಯ ಮಟ್ಟದ ದಕ್ಷಿಣ ಏಷ್ಯಾ ಟಾರ್ಗೆಟ್ ಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

    ಫ್ಲಾಯ್ಡ್ ಮಿಸ್ಕಿತ್ ಮಡಂತ್ಯಾರು ನಿವಾಸಿ ಬೇಬಿ ಡಯಾನ ಮಿಸ್ಕಿತ್ ಹಾಗೂ ಕ್ಲೌಡಿ ಫ್ರಾನ್ಸಿಸ್ ಮಿಸ್ಕಿತ್ ದಂಪತಿಗಳ ಪುತ್ರರಾಗಿದ್ದು, ಸಿದ್ಧಾರ್ಥ್ ಎಂ.ಸಿ ಮಂಗಳೂರಿನ ಕಪಿತಾನಿಯೊ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಮಮಿತಾ ಹಾಗೂ ಬಿ.ಸಿ.ರೋಡ್ ನ ನ್ಯಾಯವಾದಿ ಪಿ.ಚೆನ್ನಪ್ಪ ಸಾಲಿಯಾನ್ ದಂಪತಿಗಳ ಪುತ್ರರಾಗಿದ್ದಾರೆ.

    ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ರಾಘವೇಂದ್ರ ವಿಟ್ಲ ತರಬೇತಿ ನೀಡಿರುತ್ತಾರೆ.

    Continue Reading

    BELTHANGADY

    ಬೆಳ್ತಂಗಡಿ: ವಿದ್ಯುತ್‌ ತಗುಲಿ ಯುವಕ ಮೃ*ತ್ಯು

    Published

    on

    ಉಪ್ಪಿನಂಗಡಿ: ಮನೆಯಲ್ಲಿ ವಿದ್ಯುತ್ ಇಲ್ಲವೆಂದು ವಿದ್ಯುತ್ ಪರಿವರ್ತಕದ ಬಳಿ ಫ್ಯೂಸ್ ಹಾಕಲು ತೆರಳಿದ ಯುವಕನೋರ್ವ ವಿದ್ಯುತ್ ಆಘಾ*ತಕ್ಕೆ ಬ*ಲಿಯಾದ ಘಟನೆ ಜು.15ರಂದು ಇಳಂತಿಲ ಗ್ರಾಮದ ಗೋಳಿತ್ತಡಿ ಎಂಬಲ್ಲಿ ನಡೆದಿದೆ.

    ಹರೀಶ (32) ಮೃ*ತ ಯುವಕ. ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದ ಈತ ಉತ್ತಮ ಕಬಡ್ಡಿ ಆಟಗಾರನೂ ಆಗಿದ್ದು, ತನ್ನ ಮನೆಗೆ ವಿದ್ಯುತ್ ಬರುತ್ತಿಲ್ಲವೆಂದು ವಿದ್ಯುತ್ ಪ್ರವಹಿಸಿ ಈತ ಮೃ*ತಪಟ್ಟಿದ್ದಾರೆ.

    Continue Reading

    BELTHANGADY

    ವಿಧಾನಸಭಾ ಅಧಿವೇಶನ: ಫಝಲ್ ಕೋಯಮ್ಮ ತಂಙಳ್, ನಿರೂಪಕಿ ಅಪರ್ಣಾ ಸಹಿತ ಅಗಲಿದ ಗಣ್ಯರಿಗೆ ಸಂತಾಪ

    Published

    on

    ಬೆಂಗಳೂರು: ವಿಧಾನ ಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ಇಂದು ಪೂರ್ವಾಹ್ನ 11 ಗಂಟೆಗೆ ಆರಂಭಗೊಂಡಿತು.

    ಸದನ ಆರಂಭಗೊಳ್ಳುತ್ತಿದ್ದಂತೆ ಸಭಾಧ್ಯಕ್ಷರಾದ ಯು.ಟಿ.ಖಾದರ್‌ ಅವರು ಸಂತಾಪ ಸೂಚಿಸುವ ನಿರ್ಣಯವನ್ನು ಮಂಡಿಸಿ, ಅಗಲಿದ ಗಣ್ಯರ ಕೊಡುಗೆಗಳನ್ನು ಸ್ಮರಿಸಿದರು.

    ಅಗಲಿದ ಗಣ್ಯರಾದ ಧಾರ್ಮಿಕ ಮುಖಂಡ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ (ಕೂರತ್ ತಂಙಳ್), ನಿರೂಪಕಿ ಅಪರ್ಣಾ, ಸಾಹಿತಿ ಕಮಲಾ ಹಂಪನಾ, ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರಿಗೆ ಸದನಗಳ ಸದಸ್ಯರು ಸಂತಾಪ ಅರ್ಪಿಸಿದರು.

    Continue Reading

    LATEST NEWS

    Trending