Connect with us

    BELTHANGADY

    ಬೆಳ್ತಂಗಡಿ: ಆಕಸ್ಮಿಕವಾಗಿ ಓಮ್ನಿ ಕಾರಿಗೆ ಬೆಂಕಿ

    Published

    on

    ಬೆಳ್ತಂಗಡಿ: ಮಾರುತಿ ಓಮ್ನಿ ಕಾರು ಹೊತ್ತಿ ಉರಿದ ಘಟನೆ ಬೆಳ್ತಂಗಡಿ ನಗರದ ಕಲ್ಲಗುಡ್ಡೆಯಲ್ಲಿ ನಿನ್ನೆ (ಅ.22) ರಾತ್ರಿ ಸಂಭವಿಸಿದೆ.


    ಕಾರು ಚಲಿಸುತ್ತಿರುವ ವೇಳೆಯೇ ಆಕಸ್ಮಿಕವಾಗಿ ಬೆಂಕಿ ಹೊತ್ತಿ ಉರಿದಿದ್ದು, ಸದ್ಯ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.


    ಶಾರ್ಟ್ ಸರ್ಕ್ಯೂಟ್‌ನಿಂದ ಈ ರೀತಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

    ಕೂಡಲೇ ಸ್ಥಳೀಯರು ಧಾವಿಸಿ ಬೆಂಕಿ ನಂದಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    BELTHANGADY

    ಬೆಳ್ತಂಗಡಿ: ಮತ್ತೆ ಕಾಡಾನೆ ಹಾವಳಿ

    Published

    on

    ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಮಲ್ಲ, ನಂದಿಕಾಡು, ಆರ್ನಂದಿಕಾಡು ಪರಿಸರದಲ್ಲಿ ಕಾಡಾನೆಗಳ ಹಿಂಡು ಓಡಾಟ ನಡೆಸಿದ್ದು, ವ್ಯಾಪಕವಾಗಿ ಕೃಷಿ ಹಾನಿಯಾಗಿದೆ.


    ಆನೆಗಳು ಸದಾಶಿವ ಮಲೆಕುಡಿಯ ಅವರ ತೋಟಕ್ಕೆ ನುಗ್ಗಿದ್ದು, ಸುಮಾರು 150 ಅಡಿಕೆ ಮರಗಳನ್ನು ಸಂಪೂರ್ಣವಾಗಿ ಮುರಿದು ಹಾಕಿವೆ. ತೆಂಗಿನ ಮರಗಳು ಹಾಗೂ ಇತರ ಮರಗಳನ್ನೂ ನೆಲಕ್ಕೆ ಉರುಳಿಸಿವೆ. ಇವರದ್ದೇ ಸುಮಾರು ಒಂದೂವರೆ ಎಕ್ರೆ ಗದ್ದೆಯಲ್ಲಿನ ಭತ್ತದ ಕೃಷಿಯನ್ನೂ ಸಂಪೂರ್ಣವಾಗಿ ನಾಶ ಮಾಡಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.

    ಮನೆಗಳ ಸಮೀಪದಲ್ಲೇ ಕಾಡಾನೆಗಳು ಓಡಾಡಿದ್ದು, ಇದು ಜನರು ಆತಂಕ ಹೆಚ್ಚಲು ಕಾರಣವಾಗಿದೆ. 6ಕ್ಕೂ ಹೆಚ್ಚು ಆನೆಗಳು ತಂಡದಲ್ಲಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಆನೆಗಳು ಇದೇ ಪರಿಸರದ ಅರಣ್ಯದಲ್ಲಿ ಬೀಡು ಬಿಟ್ಟಿರುವ ಅನುಮಾನವಿದ್ದು, ಸ್ಥಳೀಯ ಜನರಲ್ಲಿ ಆತಂಕ ಹೆಚ್ಚಿಸಿದೆ. ಕೆಲವು ದಿನಗಳ ಹಿಂದೆ 6ಕ್ಕೂ ಹೆಚ್ಚು ಆನೆಗಳಿದ್ದ ಹಿಂಡೊಂದು ಚಾರ್ಮಾಡಿಯಲ್ಲಿ ಕೃಷಿಗೆ ಹಾನಿಯುಂಟು ಮಾಡಿತ್ತು.

    Continue Reading

    BELTHANGADY

    ಬೆಳ್ತಂಗಡಿ: ಅಕ್ರಮವಾಗಿ ಗೋ ಸಾಗಾಟ, ಇಬ್ಬರು ಆರೋಪಿಗಳ ಬಂಧನ

    Published

    on

    ಬೆಳ್ತಂಗಡಿ: ಪಿಕ್‌ಅಪ್‌ ವಾಹನದಲ್ಲಿ ಜೈ ಶ್ರೀರಾಮ್‌ ಎಂದು ಬರೆದುಕೊಂಡು ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

    ಚಿಕ್ಕಮಗಳೂರಿನ ಕೊಟ್ಟಿಗೆಹಾರದಿಂದ ಈ ಅಕ್ರಮ ಸಾಗಾಟ ಮಾಡಲಾಗುತ್ತಿದ್ದು ಗೂಡ್ಸ್‌ ವಾಹನದಲ್ಲಿದ್ದ ಒಂದು ಗೋವು ಹಾಗೂ ಮೂರು ಹೋರಿಗಳನ್ನು ರಕ್ಷಣೆ ಮಾಡಲಾಗಿದೆ.

    ಅಕ್ಟೋಬರ್ 18 ರ ರಾತ್ರಿ ಗೋ ಸಾಗಾಟದ ಮಾಹಿತಿ ಪಡೆದ ವಿಟ್ಲ ಹಾಗೂ ಗುರುವಾಯನಕೆರೆಯ ಹಿಂದೂ ಸಂಘಟನೆ ಕಾರ್ಯಕರ್ತರು ವಾಹನ ಅಡ್ಡಗಟ್ಟಿದ್ದರು. ಕೇರಳದ ಕಸಾಯಿಖಾನೆಗೆ ಈ ಗೋವುಗಳನ್ನು ಸಾಗಿಸುತ್ತಿದ್ದರು ಎಂದು ಸಂಘಟನೆಯ ಕಾರ್ಯಕರ್ತರು ಆರೋಪಿಸಿದ್ದಾರೆ.

    ವಾಹನದಲ್ಲಿದ್ದ ಕೊಟ್ಟಿಗೆಹಾರದ ಆಶ್ವಥ್ ಹಾಗೂ ಸಚಿನ್‌ ಇಬ್ಬರು ಈ ಅಕ್ರಮ ಗೋ ಸಾಗಾಟ ನಡೆಸುತ್ತಿದ್ದರು. ತತ್ವಮಸಿ ಎಂಬ ಹೆಸರಿನ ಇಂಟ್ರಾ ಗೋಡ್ಸ್‌ ವಾಹನದಲ್ಲಿ, ಜೈ ಶ್ರೀ ರಾಮ್‌ ಎಂದು ಗ್ಲಾಸ್ ಮೇಲೆ ಬರೆಯಲಾಗಿತ್ತು. ಕಾರ್ಯಾಚರಣೆ ನಡೆಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು ಬಳಿಕ ಬೆಳ್ತಂಗಡಿ ಪೊಲೀಸರಿಗೆ ಆರೋಪಿಗಳನ್ನು ಒಪ್ಪಿಸಿದ್ದಾರೆ. ಆರೋಪಿಗಳ ವಿರುದ್ಧ ಕೇಸು ದಾಖಲಿಸಿಕೊಂಡ ಪೊಲೀಸರು ವಿಚಾರಣೆ ನಡೆಸಿದ್ದಾರೆ.

    Continue Reading

    BELTHANGADY

    ಅಪ್ರಾಪ್ತ ಬಾಲಕಿಗೆ ಕಿರುಕುಳ; ಆರೋಪಿ ಅರೇಸ್ಟ್

    Published

    on

    ಬೆಳ್ತಂಗಡಿ: ಶಾಲಾ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಕೊಂಡು ಬಂದು ಮೊಬೈಲ್ ನಂಬರ್ ಕೇಳುವ ಮೂಲಕ ಆಕೆಗೆ ಕಿರುಕುಳ ನೀಡುತ್ತಿದ್ದ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

    ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಪುಲ್ಲಾಯಿ ಎನ್ನುವಲ್ಲಿ ಈ ಘಟನೆ ನಡೆದಿದೆ.

    ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ ನಿವಾಸಿ, ಹುಲ್ಲು ಕಟಾವು ಯಂತ್ರದ ಮೆಕ್ಯಾನಿಕ್‌ ಆಗಿರುವ ಜುಮಾರ್‌ (24) ಬಂಧಿತ ಆರೋಪಿ. ಸಂಬಂಧಿ ಹಾಗೂ ನೆರೆಯ ವಿದ್ಯಾರ್ಥಿನಿಯೊಂದಿಗೆ ಬಾಲಕಿ ಕಾಲೇಜಿಗೆ ಹೋಗುತ್ತಿರುವ ವೇಳೆ ಕಳೆದ ಐದು ದಿನಗಳಿಂದ ಆರೋಪಿಯು ಬೈಕಿನಲ್ಲಿ ಹಿಂಬಾಲಿಸಿಕೊಂಡು ಹೋಗುತ್ತಿದ್ದ.

    ಬೈಕ್‌ನಲ್ಲಿ ಜೊತೆಯಾಗಿ ಬರುವಂತೆ ಒತ್ತಾಯಿಸಿದ್ದು ಮಾತ್ರವಲ್ಲದೆ, ಮೊಬೈಲ್‌ ನಂಬರ್ ಕೊಡುವಂತೆ ಕೇಳಿಕೊಳ್ಳುತ್ತಿದ್ದ.

    ಅಂತೆಯೇ ಅ. 15ರಂದು ಬೆಳಗ್ಗೆ 7.45 ಗಂಟೆಗೆ ಎಂದಿನಂತೆ ಕಾಲೇಜಿಗೆ ಹೋಗುತ್ತಿದ್ದ ವೇಳೆ ಅತ ಬೈಕ್‌ ಅನ್ನು ಚಲಾಯಿಸಿಕೊಂಡು ಮುಂದಕ್ಕೆ ಹೋಗಿ ವಾಪಸು ಹಿಂದಕ್ಕೆ ತಿರುಗಿಸಿಕೊಂಡು ಬಂದು ತೊಂದರೆ ನೀಡಿದ್ದಾಗಿ ಆರೋಪಿಸಲಾಗಿದೆ.

    ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ವೇಣೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Continue Reading

    LATEST NEWS

    Trending