Connect with us

    BELTHANGADY

    ಬೆಳ್ತಂಗಡಿ: ನೇರಾ ನಡೆನುಡಿಯ ಖಡಕ್ ಪೊಲೀಸ್ ಅಧಿಕಾರಿ ACP ಸುಭಾಶ್ಚಂದ್ರ ನಿಧನ..!

    Published

    on

    ನಿವೃತ್ತ ಅಸಿಸ್ಟಂಟ್ ಕಮಿಷನರ್ ಆಫ್ ಪೊಲೀಸ್, ಬೆಳ್ತಂಗಡಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಸುರ್ಯ ಗುತ್ತು ಸುಭಾಶ್ಚಂದ್ರ ಅವರು ಅಲ್ಪಕಾಲದ ಅನಾರೋಗ್ಯದಿಂದ ಇಂದು ಮುಂಜಾನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

    ಬೆಳ್ತಂಗಡಿ: ನಿವೃತ್ತ ಅಸಿಸ್ಟಂಟ್ ಕಮಿಷನರ್  ಪೊಲೀಸ್, ಬೆಳ್ತಂಗಡಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಸುರ್ಯ ಗುತ್ತು ಸುಭಾಶ್ಚಂದ್ರ ಅವರು ಅಲ್ಪಕಾಲದ ಅನಾರೋಗ್ಯದಿಂದ ಇಂದು ಮುಂಜಾನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

    ಆರೋಗ್ಯ ಸಮಸ್ಯೆಯಿಂದ ಸುಭಾಶ್ಚಂದ್ರ (70) ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

    ಅವರು 1979 ರಲ್ಲಿ ಪೊಲೀಸ್ ಇಲಾಖೆಗೆ ಎಸೈ ಆಗಿ ಸೇರ್ಪಡೆಗೊಂಡ ಸುಭಾಶ್ಚಂದ್ರರು ಓರ್ವ ಪ್ರಮಾಣಿಕ, ದಕ್ಷ ಮತ್ತು ನೇರಾ ನಡೆನುಡಿಯ ಖಡಕ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.

    ಬಳಿಕ ಬೆಂಗಳೂರು, ಮಡಿಕೇರಿ, ಮುಲ್ಕಿ,  ಕಾರವಾರ, ಉಡುಪಿ, ಮಂಗಳೂರು, ಬೆಳ್ತಂಗಡಿ, ಪುತ್ತೂರು ಮತ್ತಿತರ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದರು.

    1992 ರ ಅಯೋಧ್ಯೆ ಘಟನೆ ಬಳಿಕ ನಡೆದ ಕೋಮು ಗಲಭೆ ಕರಾವಳಿಗೂ ಹಬ್ಬಿದಾಗ ಮುಲ್ಕಿ ಪೊಲೀಸ್ ಠಾಣಾಧಿಕಾರಿಯಾಗಿದ್ದ ಸುಭಾಸ್ಚಂದ್ರ ಅವರು ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದು , ಈ ಸಂದರ್ಭ ಅವರ ಮೇಲೆ ದುಷ್ಕರ್ಮಿಗಳಿಂದ ದಾಳಿಯೂ ನಡೆದಿತ್ತು.

    ಪೊಲೀಸ್ ಇಲಾಖೆಯಲ್ಲಿ ಅವರು ಸಲ್ಲಿಸಿದ ವಿಶೇಷ ಸೇವೆಗಾಗಿ ಅವರಿಗೆ 2008 ರಲ್ಲಿ ಮುಖ್ಯ ಮಂತ್ರಿಯವರ ಪದಕ ಲಭಿಸಿತ್ತು.

    ಅವರು ಒಂದು ವರ್ಷದ ಕಾಲ ಕೊಸೊವೊದಲ್ಲಿ ವಿಶ್ವ ಸಂಸ್ಥೆಯ ಶಾಂತಿ ಪಾಲನಾ ಪಡೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು.

    ದಿವಂಗತರು ಪತ್ನಿ, ಓರ್ವ ಪುತ್ರ, ಸಹೋದರ ಎಸ್. ಡಿ.ಎಂ. ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಎಸ್. ಸತೀಶ್ಚಂದ್ರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

    BELTHANGADY

    ಅಪ್ರಾಪ್ತ ಬಾಲಕಿಗೆ ಕಿರುಕುಳ; ಆರೋಪಿ ಅರೇಸ್ಟ್

    Published

    on

    ಬೆಳ್ತಂಗಡಿ: ಶಾಲಾ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಕೊಂಡು ಬಂದು ಮೊಬೈಲ್ ನಂಬರ್ ಕೇಳುವ ಮೂಲಕ ಆಕೆಗೆ ಕಿರುಕುಳ ನೀಡುತ್ತಿದ್ದ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

    ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಪುಲ್ಲಾಯಿ ಎನ್ನುವಲ್ಲಿ ಈ ಘಟನೆ ನಡೆದಿದೆ.

    ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ ನಿವಾಸಿ, ಹುಲ್ಲು ಕಟಾವು ಯಂತ್ರದ ಮೆಕ್ಯಾನಿಕ್‌ ಆಗಿರುವ ಜುಮಾರ್‌ (24) ಬಂಧಿತ ಆರೋಪಿ. ಸಂಬಂಧಿ ಹಾಗೂ ನೆರೆಯ ವಿದ್ಯಾರ್ಥಿನಿಯೊಂದಿಗೆ ಬಾಲಕಿ ಕಾಲೇಜಿಗೆ ಹೋಗುತ್ತಿರುವ ವೇಳೆ ಕಳೆದ ಐದು ದಿನಗಳಿಂದ ಆರೋಪಿಯು ಬೈಕಿನಲ್ಲಿ ಹಿಂಬಾಲಿಸಿಕೊಂಡು ಹೋಗುತ್ತಿದ್ದ.

    ಬೈಕ್‌ನಲ್ಲಿ ಜೊತೆಯಾಗಿ ಬರುವಂತೆ ಒತ್ತಾಯಿಸಿದ್ದು ಮಾತ್ರವಲ್ಲದೆ, ಮೊಬೈಲ್‌ ನಂಬರ್ ಕೊಡುವಂತೆ ಕೇಳಿಕೊಳ್ಳುತ್ತಿದ್ದ.

    ಅಂತೆಯೇ ಅ. 15ರಂದು ಬೆಳಗ್ಗೆ 7.45 ಗಂಟೆಗೆ ಎಂದಿನಂತೆ ಕಾಲೇಜಿಗೆ ಹೋಗುತ್ತಿದ್ದ ವೇಳೆ ಅತ ಬೈಕ್‌ ಅನ್ನು ಚಲಾಯಿಸಿಕೊಂಡು ಮುಂದಕ್ಕೆ ಹೋಗಿ ವಾಪಸು ಹಿಂದಕ್ಕೆ ತಿರುಗಿಸಿಕೊಂಡು ಬಂದು ತೊಂದರೆ ನೀಡಿದ್ದಾಗಿ ಆರೋಪಿಸಲಾಗಿದೆ.

    ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ವೇಣೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Continue Reading

    BELTHANGADY

    ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯ ಚರಂಡಿಗೆ ಬಿದ್ದ ಕಾರು

    Published

    on

    ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಚರಂಡಿಗೆ ಬಿದ್ದ ಘಟನೆ ಬೆಳ್ತಂಗಡಿಯ ಕಾಶಿಬೆಟ್ಟುವಿನಲ್ಲಿ ನಡೆದಿದೆ.

    ಉಡುಪಿಯಿಂದ ಮೂವರು ಯುವಕರು ಅರಿಕೋಡಿ ದೇವಸ್ಥಾನಕ್ಕೆ ತೆರಳುತ್ತಿದ್ದರು. ಸುಮಾರು ಬೆಳಗ್ಗೆ 4.45 ರ ವೇಳೆಗೆ ಕಾರು ಚಾಲಕನ ನಿಯಂತ್ರಣ ತಪ್ಪಿ ಕಾಶಿಬೆಟ್ಟು ಬಳಿ ರಾಷ್ಟ್ರೀಯ ಹೆದ್ದಾರಿಯ ಚರಂಡಿಗೆ ಬಿದ್ದಿದೆ.

    ಚಾಲಕ ನಿದ್ದೆಯ ಮಂಪರಿನಲ್ಲಿ ಇದ್ದದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಕ್ರೇನ್ ಸಹಾಯದಿಂದ ಕಾರನ್ನು ಮೇಲೆತ್ತಲಾಗಿದೆ.

    Continue Reading

    BELTHANGADY

    ಬೆಳ್ತಂಗಡಿ: ಪಾದಚಾರಿಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ

    Published

    on

    ಬೆಳ್ತಂಗಡಿ: ಪಾದಚಾರಿಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದ ಘಟನೆ ಬುಧವಾರ ನಿಡಿಗಲ್ ಸಮೀಪ ಸಂಭವಿಸಿದೆ.

    ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದ ಪಾದಾಚಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ ತಿಳಿದು ಬಂದಿದೆ.

    ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

    Continue Reading

    LATEST NEWS

    Trending