Connect with us

    BELTHANGADY

    ಬೆಂಗಳೂರು ವಿವಿಯ ಕುಲಸಚಿವರಾಗಿ ಬೆಳ್ತಂಗಡಿಯ ಶೇಕ್ ಲತೀಫ್ ನೇಮಕ

    Published

    on

    ಬೆಂಗಳೂರು ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಬೆಳ್ತಂಗಡಿ ತಾಲೂಕು ಉಜಿರೆಯ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿ ವಾಸ್ತವ್ಯವಿರುವ ಶೇಕ್ ಲತೀಫ್ ಅಧಿಕಾರ ಸ್ವೀಕರಿಸಿದ್ದಾರೆ.

    ಬೆಂಗಳೂರು:  ಬೆಂಗಳೂರು ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಬೆಳ್ತಂಗಡಿ ತಾಲೂಕು ಉಜಿರೆಯ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿ ವಾಸ್ತವ್ಯವಿರುವ ಶೇಕ್ ಲತೀಫ್ ಅಧಿಕಾರ ಸ್ವೀಕರಿಸಿದ್ದಾರೆ.

    ಕೆಎಎಸ್ ಅಧಿಕಾರಿಯಾಗಿರುವ ಶೇಕ್ ಲತೀಫ್ ಈ ಹಿಂದೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಹಣಕಾಸು ಸದಸ್ಯರಾಗಿದ್ದರು.

    ಶೇಕ್ ಲತೀಫ್ ಅವರು  ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ವಿಭಾಗದ ಸಹಾಯಕ ನಿಯಂತ್ರಣ ಅಧಿಕಾರಿಯಾಗಿದ್ದ ಶೇಕ್ ಲತೀಫ್ ಪದವಿಪೂರ್ವ ಶಿಕ್ಷಣ ಇಲಾಖಾ ಲೆಕ್ಕಾಧಿಕಾರಿಯಾಗಿ, ದ.ಕ. ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿಯಾಗಿ, ಕರ್ನಾಟಕ ರಾಜ್ಯ ಹಜ್ ಸಮಿತಿಯ ಕಾರ್ಯನಿರ್ವಹಣಾಧಿಕಾರಿಯಾಗಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮುಖ್ಯ ಹಣಕಾಸು ಅಧಿಕಾರಿಯಾಗಿ, ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಆರ್ಥಿಕ ಸಲಹೆಗಾರರಾಗಿ, ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಪ್ರದಾನ ವ್ಯವಸ್ಥಾಪಕರಾಗಿ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು.

     

     

    BELTHANGADY

    ಅಂತರಾಷ್ಟ್ರೀಯ ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ

    Published

    on

    ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ಸಿದ್ದಾರ್ಥ್ ಎಂ.ಸಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ಫ್ಲಾಯ್ಡ್ ಮಿಸ್ಕಿತ್ ರಾಷ್ಟ್ರಮಟ್ಟದ ಟಾರ್ಗೆಟ್ ಬಾಲ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ನೇಪಾಳದ ಕಠ್ಮಂಡುವಿನಲ್ಲಿ ಜುಲೈ 8 ರಿಂದ ಜರುಗಿದ ಅಂತರಾಷ್ಟ್ರೀಯ ಮಟ್ಟದ ದಕ್ಷಿಣ ಏಷ್ಯಾ ಟಾರ್ಗೆಟ್ ಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

    ಫ್ಲಾಯ್ಡ್ ಮಿಸ್ಕಿತ್ ಮಡಂತ್ಯಾರು ನಿವಾಸಿ ಬೇಬಿ ಡಯಾನ ಮಿಸ್ಕಿತ್ ಹಾಗೂ ಕ್ಲೌಡಿ ಫ್ರಾನ್ಸಿಸ್ ಮಿಸ್ಕಿತ್ ದಂಪತಿಗಳ ಪುತ್ರರಾಗಿದ್ದು, ಸಿದ್ಧಾರ್ಥ್ ಎಂ.ಸಿ ಮಂಗಳೂರಿನ ಕಪಿತಾನಿಯೊ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಮಮಿತಾ ಹಾಗೂ ಬಿ.ಸಿ.ರೋಡ್ ನ ನ್ಯಾಯವಾದಿ ಪಿ.ಚೆನ್ನಪ್ಪ ಸಾಲಿಯಾನ್ ದಂಪತಿಗಳ ಪುತ್ರರಾಗಿದ್ದಾರೆ.

    ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ರಾಘವೇಂದ್ರ ವಿಟ್ಲ ತರಬೇತಿ ನೀಡಿರುತ್ತಾರೆ.

    Continue Reading

    BELTHANGADY

    ಬೆಳ್ತಂಗಡಿ: ವಿದ್ಯುತ್‌ ತಗುಲಿ ಯುವಕ ಮೃ*ತ್ಯು

    Published

    on

    ಉಪ್ಪಿನಂಗಡಿ: ಮನೆಯಲ್ಲಿ ವಿದ್ಯುತ್ ಇಲ್ಲವೆಂದು ವಿದ್ಯುತ್ ಪರಿವರ್ತಕದ ಬಳಿ ಫ್ಯೂಸ್ ಹಾಕಲು ತೆರಳಿದ ಯುವಕನೋರ್ವ ವಿದ್ಯುತ್ ಆಘಾ*ತಕ್ಕೆ ಬ*ಲಿಯಾದ ಘಟನೆ ಜು.15ರಂದು ಇಳಂತಿಲ ಗ್ರಾಮದ ಗೋಳಿತ್ತಡಿ ಎಂಬಲ್ಲಿ ನಡೆದಿದೆ.

    ಹರೀಶ (32) ಮೃ*ತ ಯುವಕ. ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದ ಈತ ಉತ್ತಮ ಕಬಡ್ಡಿ ಆಟಗಾರನೂ ಆಗಿದ್ದು, ತನ್ನ ಮನೆಗೆ ವಿದ್ಯುತ್ ಬರುತ್ತಿಲ್ಲವೆಂದು ವಿದ್ಯುತ್ ಪ್ರವಹಿಸಿ ಈತ ಮೃ*ತಪಟ್ಟಿದ್ದಾರೆ.

    Continue Reading

    BELTHANGADY

    ವಿಧಾನಸಭಾ ಅಧಿವೇಶನ: ಫಝಲ್ ಕೋಯಮ್ಮ ತಂಙಳ್, ನಿರೂಪಕಿ ಅಪರ್ಣಾ ಸಹಿತ ಅಗಲಿದ ಗಣ್ಯರಿಗೆ ಸಂತಾಪ

    Published

    on

    ಬೆಂಗಳೂರು: ವಿಧಾನ ಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ಇಂದು ಪೂರ್ವಾಹ್ನ 11 ಗಂಟೆಗೆ ಆರಂಭಗೊಂಡಿತು.

    ಸದನ ಆರಂಭಗೊಳ್ಳುತ್ತಿದ್ದಂತೆ ಸಭಾಧ್ಯಕ್ಷರಾದ ಯು.ಟಿ.ಖಾದರ್‌ ಅವರು ಸಂತಾಪ ಸೂಚಿಸುವ ನಿರ್ಣಯವನ್ನು ಮಂಡಿಸಿ, ಅಗಲಿದ ಗಣ್ಯರ ಕೊಡುಗೆಗಳನ್ನು ಸ್ಮರಿಸಿದರು.

    ಅಗಲಿದ ಗಣ್ಯರಾದ ಧಾರ್ಮಿಕ ಮುಖಂಡ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ (ಕೂರತ್ ತಂಙಳ್), ನಿರೂಪಕಿ ಅಪರ್ಣಾ, ಸಾಹಿತಿ ಕಮಲಾ ಹಂಪನಾ, ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರಿಗೆ ಸದನಗಳ ಸದಸ್ಯರು ಸಂತಾಪ ಅರ್ಪಿಸಿದರು.

    Continue Reading

    LATEST NEWS

    Trending