Connect with us

    BELTHANGADY

    ಬೆಳ್ತಂಗಡಿ : ಖಾತೆ ಬದಲಾವಣೆಗೆ 20 ಸಾವಿರದ ಬೇಡಿಕೆ – ಲಂಚ ಸ್ವೀಕರಿಸುತ್ತಿದ್ದ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪಿಡಿಓ..!

    Published

    on

    ಕಳೆದ ಆರು ವರ್ಷಗಳಿಂದ ಖಾತೆ ಬದಲಾವಣೆಗೆ ಅರ್ಜಿದಾರನ್ನು ಸತಾಯಿಸುತ್ತಿದ್ದ ಪಿಡಿಓ ಲಂಚ ಪಡೆಯುತ್ತಿದ್ದಾಗ ರೆಡ್‌ ಹ್ಯಾಂಡಾಗಿ ಲೋಕಾಯಯಕ್ತ ಬಲೆಗೆ ಬಿದ್ದಿದ್ದಾರೆ.
    ಬೆಳ್ತಂಗಡಿ : ಕಳೆದ ಆರು ವರ್ಷಗಳಿಂದ ಖಾತೆ ಬದಲಾವಣೆಗೆ ಅರ್ಜಿದಾರನ್ನು ಸತಾಯಿಸುತ್ತಿದ್ದ ಪಿಡಿಓ ಲಂಚ ಪಡೆಯುತ್ತಿದ್ದಾಗ ರೆಡ್‌ ಹ್ಯಾಂಡಾಗಿ ಲೋಕಾಯಯಕ್ತ ಬಲೆಗೆ ಬಿದ್ದಿದ್ದಾರೆ.
    ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೌಕ್ರಾಡಿ ಗ್ರಾಮ ಪಂಚಾಯತ್ ಪಿಡಿಓ ಮಹೇಶ್ ಜಿ. ಎನ್. ಲೋಕಾಯುಕ್ತದ ಬಲೆಗೆ ಬಿದ್ದ ಆರೋಪಿಯಾಗಿದ್ದಾನೆ.
    ಪಿಡಿಓ ಮಹೇಶ್ ಅರ್ಜಿದಾರರಿಂದ ಖಾತೆ ಬದಲಾವಣೆಗೆ 20 ಸಾವಿರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಅರ್ಜಿದಾರರು ನೊಂದು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
    ಇಂದು ಲಂಚದ 20 ಸಾವಿರ ರೂಪಾಯಿ ಹಣ ಅರ್ಜಿದಾರರಿಂದ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಆರೋಪಿಯನ್ನು ರೆಡ್‌ ಹ್ಯಾಂಡಾಗಿ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

    ದಕ್ಷಿಣ ಕನ್ನಡ ಲೋಕಾಯುಕ್ತ ಎಸ್ಪಿ ಸೈಮನ್ , ಡಿವೈಎಸ್ಪಿ ಚೆಲುವರಾಜ್ , ಡಿವೈಎಸ್ಪಿ ಕಲಾವತಿ , ಇನ್ಸ್‌ಪೆಕ್ಟರ್ ಅಮಾನುಲ್ಲಾ ,ಇನ್ಸ್‌ಪೆಕ್ಟರ್ ವಿನಯಕ ಬಿಲ್ಲವ, ನೇತೃತ್ವದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

    BELTHANGADY

    ಅಂತರಾಷ್ಟ್ರೀಯ ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ

    Published

    on

    ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ಸಿದ್ದಾರ್ಥ್ ಎಂ.ಸಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ಫ್ಲಾಯ್ಡ್ ಮಿಸ್ಕಿತ್ ರಾಷ್ಟ್ರಮಟ್ಟದ ಟಾರ್ಗೆಟ್ ಬಾಲ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ನೇಪಾಳದ ಕಠ್ಮಂಡುವಿನಲ್ಲಿ ಜುಲೈ 8 ರಿಂದ ಜರುಗಿದ ಅಂತರಾಷ್ಟ್ರೀಯ ಮಟ್ಟದ ದಕ್ಷಿಣ ಏಷ್ಯಾ ಟಾರ್ಗೆಟ್ ಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

    ಫ್ಲಾಯ್ಡ್ ಮಿಸ್ಕಿತ್ ಮಡಂತ್ಯಾರು ನಿವಾಸಿ ಬೇಬಿ ಡಯಾನ ಮಿಸ್ಕಿತ್ ಹಾಗೂ ಕ್ಲೌಡಿ ಫ್ರಾನ್ಸಿಸ್ ಮಿಸ್ಕಿತ್ ದಂಪತಿಗಳ ಪುತ್ರರಾಗಿದ್ದು, ಸಿದ್ಧಾರ್ಥ್ ಎಂ.ಸಿ ಮಂಗಳೂರಿನ ಕಪಿತಾನಿಯೊ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಮಮಿತಾ ಹಾಗೂ ಬಿ.ಸಿ.ರೋಡ್ ನ ನ್ಯಾಯವಾದಿ ಪಿ.ಚೆನ್ನಪ್ಪ ಸಾಲಿಯಾನ್ ದಂಪತಿಗಳ ಪುತ್ರರಾಗಿದ್ದಾರೆ.

    ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ರಾಘವೇಂದ್ರ ವಿಟ್ಲ ತರಬೇತಿ ನೀಡಿರುತ್ತಾರೆ.

    Continue Reading

    BELTHANGADY

    ಬೆಳ್ತಂಗಡಿ: ವಿದ್ಯುತ್‌ ತಗುಲಿ ಯುವಕ ಮೃ*ತ್ಯು

    Published

    on

    ಉಪ್ಪಿನಂಗಡಿ: ಮನೆಯಲ್ಲಿ ವಿದ್ಯುತ್ ಇಲ್ಲವೆಂದು ವಿದ್ಯುತ್ ಪರಿವರ್ತಕದ ಬಳಿ ಫ್ಯೂಸ್ ಹಾಕಲು ತೆರಳಿದ ಯುವಕನೋರ್ವ ವಿದ್ಯುತ್ ಆಘಾ*ತಕ್ಕೆ ಬ*ಲಿಯಾದ ಘಟನೆ ಜು.15ರಂದು ಇಳಂತಿಲ ಗ್ರಾಮದ ಗೋಳಿತ್ತಡಿ ಎಂಬಲ್ಲಿ ನಡೆದಿದೆ.

    ಹರೀಶ (32) ಮೃ*ತ ಯುವಕ. ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದ ಈತ ಉತ್ತಮ ಕಬಡ್ಡಿ ಆಟಗಾರನೂ ಆಗಿದ್ದು, ತನ್ನ ಮನೆಗೆ ವಿದ್ಯುತ್ ಬರುತ್ತಿಲ್ಲವೆಂದು ವಿದ್ಯುತ್ ಪ್ರವಹಿಸಿ ಈತ ಮೃ*ತಪಟ್ಟಿದ್ದಾರೆ.

    Continue Reading

    BELTHANGADY

    ವಿಧಾನಸಭಾ ಅಧಿವೇಶನ: ಫಝಲ್ ಕೋಯಮ್ಮ ತಂಙಳ್, ನಿರೂಪಕಿ ಅಪರ್ಣಾ ಸಹಿತ ಅಗಲಿದ ಗಣ್ಯರಿಗೆ ಸಂತಾಪ

    Published

    on

    ಬೆಂಗಳೂರು: ವಿಧಾನ ಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ಇಂದು ಪೂರ್ವಾಹ್ನ 11 ಗಂಟೆಗೆ ಆರಂಭಗೊಂಡಿತು.

    ಸದನ ಆರಂಭಗೊಳ್ಳುತ್ತಿದ್ದಂತೆ ಸಭಾಧ್ಯಕ್ಷರಾದ ಯು.ಟಿ.ಖಾದರ್‌ ಅವರು ಸಂತಾಪ ಸೂಚಿಸುವ ನಿರ್ಣಯವನ್ನು ಮಂಡಿಸಿ, ಅಗಲಿದ ಗಣ್ಯರ ಕೊಡುಗೆಗಳನ್ನು ಸ್ಮರಿಸಿದರು.

    ಅಗಲಿದ ಗಣ್ಯರಾದ ಧಾರ್ಮಿಕ ಮುಖಂಡ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ (ಕೂರತ್ ತಂಙಳ್), ನಿರೂಪಕಿ ಅಪರ್ಣಾ, ಸಾಹಿತಿ ಕಮಲಾ ಹಂಪನಾ, ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರಿಗೆ ಸದನಗಳ ಸದಸ್ಯರು ಸಂತಾಪ ಅರ್ಪಿಸಿದರು.

    Continue Reading

    LATEST NEWS

    Trending