DAKSHINA KANNADA
Belthangady: ಧರ್ಮಸ್ಥಳ ವಿರುದ್ಧ ಅಪಪ್ರಚಾರ, ಹೆಗ್ಗಡೆ ನಿಂದನೆಗೆ ಖಂಡನೆ-ಬೃಹತ್ ಪ್ರತಿಭಟನೆ..!
ಧರ್ಮಸ್ಥಳ ಕ್ಷೇತ್ರ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ. ವಿರೇಂದ್ರ ಹೆಗ್ಗಡೆಯವರ ವಿರುದ್ಧ ಅಪಪ್ರಚಾರ, ಅವಹೇಳನಕಾರಿ ಹೇಳಿಕೆ ಖಂಡಿಸಿ ಅಖಿಲ ಕರ್ನಾಟಕ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಭಕ್ತವೃಂದದಿಂದ ಉಜಿರೆಯಲ್ಲಿ ಬೃಹತ್ ಸಮಾವೇಶ ಮತ್ತು ಹಕ್ಕೊತ್ತಾಯ ನಡೆಯಿತು.
ಬೆಳ್ತಂಗಡಿ: ಧರ್ಮಸ್ಥಳ ಕ್ಷೇತ್ರ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ. ವಿರೇಂದ್ರ ಹೆಗ್ಗಡೆಯವರ ವಿರುದ್ಧ ಅಪಪ್ರಚಾರ, ಅವಹೇಳನಕಾರಿ ಹೇಳಿಕೆ ಖಂಡಿಸಿ ಅಖಿಲ ಕರ್ನಾಟಕ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಭಕ್ತವೃಂದದಿಂದ ಉಜಿರೆಯಲ್ಲಿ ಬೃಹತ್ ಸಮಾವೇಶ ಮತ್ತು ಹಕ್ಕೊತ್ತಾಯ ನಡೆಯಿತು.
ಜನಾರ್ದನ ಸ್ವಾಮಿ ದೇವಸ್ಥಾನದಿಂದ ಎಸ್‌ಡಿಎಂ ಕಾಲೇಜಿನವರೆಗೆ ಬೃಹತ್ ಮೆರವಣಿಗೆ ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಡಾ. ಎಲ್ ಎಚ್ ಮಂಜುನಾಥ್ ಮಾತನಾಡಿ, ಸುಳ್ಳಿನ ಗೋಪುರದ ಮೇಲೆ ನಿಂತರೆ ಸತ್ಯ ಕಾಣೋದಿಲ್ಲ.
ಸೌಜನ್ಯ ಕುಟುಂಬಿಕರಲ್ಲಿ ನಾನು ಮನವಿ ಮಾಡುವುದು ಇಷ್ಟೇ, ಸುಳ್ಳಿನಿಂದ ಹೊರಬಂದು ನೋಡಿ. ನಿಮಗೆ ಸತ್ಯ ಕಾಣುತ್ತದೆ.
ಸತ್ಯವನ್ನು ಕಾಣುವ ಪ್ರಯತ್ನ ಮಾಡಿ. 2012ರಿಂದ ಕೆಲವರು ಧರ್ಮಸ್ಥಳದ ವಿರುದ್ಧ ಭಾರೀ ಪ್ರತಿಭಟನೆ ನಡೆಸಿಕೊಂಡು ಬಂದಿದ್ದಾರೆ.
ಈಗ ಸಮಾಜ ಸೇವೆಯಲ್ಲಿರುವ ಮತ್ತು ಧಾರ್ಮಿಕ ಕ್ಷೇತ್ರಕ್ಕೆ ಅವಮಾನ ಮಾಡುವ ಕಾರ್ಯ ನಡೆದಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಮಾತನಾಡಿ, ಭಾರತ ದೇಶದಲ್ಲಿ ಯಾವಾಗಲೂ ಸತ್ಯಕ್ಕೆ ಜಯವಿದೆ.
ಧರ್ಮಸ್ಥಳ ಪವಿತ್ರ ಆಗಿದೆ. ಖಾವಂದರು ಪರಿಶುದ್ಧವಾಗಿದ್ದಾರೆ ಎಂದರು.
ಮಾಜಿ ಮಂತ್ರಿ ಅಭಯಚಂದ್ರ ಜೈನ್ ಮಾತನಾಡಿ, ಯಾರು ಕೊಂದವರ ಜೊತೆ ಸೇರಿ ಪ್ರತಿಭಟನೆ ನಡೆಸುತ್ತಿದ್ದಾರೋ ಅವರೇ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದರು.
ಪ್ರತಿಭಟನೆ ಸಭೆ ಬಳಿಕ ಉಜಿರೆ ದೇವಸ್ಥಾನದಿಂದ ಉಜಿರೆ ಎಸ್‌ಡಿಎಂ ಕಾಲೇಜಿನವರೆಗೆ ಪ್ರತಿಭಟನಾ ಜಾಥಾ ನಡೆಯಿತು.
ಸೌಜನ್ಯ ಪ್ರಕರಣವನ್ನು ಸರಿಯಾಗಿ ತನಿಖೆ ಮಾಡಿ ನ್ಯಾಯಕ್ಕಾಗಿ ಒತ್ತಾಯ ಮಾಡ ಬೇಕೆಂದು ಶಾಸಕ ಹರೀಶ್ ಪೂಂಜಾ ಮನವಿ ಮಾಡಿದರು.
ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ, ಅಜಿಲ ಸೀಮೆಯ ಅರಸ ಡಾ. ಪದ್ಮಪ್ರಸಾದ್ ಅಜಿಲ, ಮಾಜಿ ಮಂತ್ರಿ ವಿನಯಕುಮಾರ್ ಸೊರಕೆ ಮೊದಲಾದವರಿದ್ದರು.
ಸಮಾವೇಶ ನಡೆಯುತ್ತಿದ್ದ ಸಂದರ್ಭ ಅಲ್ಲಿಗೆ ಸೌಜನ್ಯ ತಾಯಿ ಕುಸುಮಾವತಿ ಕೂಡಾ ಆಗಮಿಸಿದ್ದಾರೆ.
ಆದರೆ ಈ ಸಂದರ್ಭ ಅವರು ವೇದಿಕೆ ಏರಲು ಪ್ರಯತ್ನಿಸಿದ್ದು, ಅವರನ್ನು ವೇದಿಕೆ ಏರಲು ಪೊಲೀಸರು ಬಿಡದೇ ಇದ್ದಾಗ ಸ್ವಲ್ಪ ಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಯಿತು.
ಬಳಿಕ ಜಸ್ಟೀಸ್ ಫಾರ್ ಸೌಜನ್ಯ ಎಂಬ ಭಿತ್ತಿಪತ್ರ ಹಿಡಿದ ಕುಸುಮಾವತಿ ಅವರನ್ನು ಪೊಲೀಸರು ಕಳುಹಿಸಿಕೊಟ್ಟರು.
DAKSHINA KANNADA
ಕಿನ್ನಿಗೋಳಿಯಲ್ಲಿ ಮುಸ್ಲಿಂ ಯುವಕನ ಮೇಲೆ ದೈವ ಆವೇಶ- ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂತು ಮಹತ್ವದ ಸತ್ಯ..!
ಕಿನ್ನಿಗೋಳಿ: ಒರಿಸ್ಸಾ ಮೂಲದ ಮುಸ್ಲಿಂ ಯುವಕನು ಪೆರ್ಮುದೆಯಲ್ಲಿನ ಚಾಮುಂಡಿ ದೈವಸ್ಥಾನದ ಕೆಲಸ ನಿರ್ವಹಿಸುವ ಸಂದರ್ಭ ಏಕಾಏಕಿ ಈತನಿಗೆ ದೈವ ಆವೇಶವಾದ ಘಟನೆ ಮಂಗಳೂರಿನ ಕಿನ್ನಿಗೋಳಿಯಲ್ಲಿ ನಡೆದಿದೆ.
ಕಳೆದ ಎರಡು ತಿಂಗಳ ಹಿಂದೆ ದೈವಸ್ಥಾನಕ್ಕೆ ಸಂಬಂಧಪಟ್ಟ ತಡೆಗೋಡೆ ನಿರ್ಮಿಸುವ ಸಂದರ್ಭ ಒರಿಸ್ಸಾ ಮೂಲದ ಯುವಕನ ಮೈಯಲ್ಲಿ ದೈವ ಅವೇಷ ಬಂದಿದ್ದು, ಪ್ರಶ್ನಾ ಚಿಂತನೆಯಲ್ಲಿ ಕಂಡುಕೊಂಡಾಗ ಇದು ಜಿಲ್ಲೆಯ ಪ್ರತಿಷ್ಟಿತ ಕಂಪನಿಯಾದ ಎಂ.ಆರ್.ಪಿ.ಎಲ್ ನಿಂದ ಬಂದ ಸಮಸ್ಯೆ ಎಂದು ಕಂಡು ಬಂದಿದೆ.
ಕಳೆದ ಮೂರು ದಶಕಗಳ ಹಿಂದೆ, ಪ್ರತಿಷ್ಠಿತ ಎಂ.ಆರ್,ಪಿ,ಎಲ್ ಕಂಪನಿಗಾಗಿ ಜಮೀನು ಭೂಸ್ವಾಧೀನಗೊಂಡಿದ್ದು, ಆ ಸಂದರ್ಭ ಅಲ್ಲಿದ್ದ ಪಿಲಿಚಾಮುಂಡಿ ದೈವಸ್ಥಾನ ಹಾಗೂ ಕೊಡಮಣಿತ್ತಾಯ ದೈವಸ್ಥಾನ ಪುನರ್ವಸತಿ ಪ್ರದೇಶದಲ್ಲಿನ ಅಂದರೆ ಪೆರ್ಮುದೆ ಸೋಮನಾಥ ಧಾಮಕ್ಕೆ ಸ್ಥಳಾಂತರಗೊಂಡು ಕಾಲ ಕಾಲಕ್ಕೆ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿತ್ತು.
ಪೆರ್ಮುದೆ ಗ್ರಾಮಕ್ಕೆ ಸಂಬಂಧಿಸಿ ದೈವಗಳ ನಾಲ್ಕು ಗಡು ಇದ್ದು, ಪ್ರಸುತ್ತ ಕಾಯರ್ ಕಟ್ಟೆ ಎಂಬುದು ಕುತ್ತೆತ್ತೂರು ಗ್ರಾಮದ ಪೆರ್ಮುದೆ ಗಡುವಾಗಿದೆ.
ಈ ಗಡು ಸ್ಥಳದಲ್ಲಿ ನಡೆಯುತ್ತಿದ್ದ ದೈವಾರಾಧನೆ ಪ್ರಕ್ರಿಯೆಗಳು ಕಳೆದ 18 ವರ್ಷಗಳಿಂದ ಸ್ಥಗಿತಗೊಂಡಿದೆ.
ಭೂಸ್ವಾಧೀನಗೊಂಡ ಮತ್ತು ಎಂ ಆರ್ ಪಿ ಎಲ್ ಗೆ ಹತ್ತಿರವಾದ ಕಾರಣ ಇಲ್ಲಿ ನೇಮ ನಡೆಸಲು ಆಸಾದ್ಯವಾಗಿತ್ತು.
ಇಲ್ಲಿನ ಬೌಗೋಳಿಕ ಸ್ಥಿತಿಗತಿಗಳೂ ಇದಕ್ಕೆ ಪ್ರಮುಖ ಕಾರಣವಾಗಿತ್ತು.
ನೇಮ ಸ್ಥಗಿತಗೊಂಡ ನಂತರದ ಕಾಲದಲ್ಲಿ ಗ್ರಾಮ ವ್ಯಾಪ್ತಿಯಲ್ಲಿ ಮತ್ತು ಕಂಪನಿ ವ್ಯಾಪ್ತಿಯಲ್ಲಿ ದೋಷ ದೃಷ್ಟಾಂತ ಕಂಡು ಬರಲು ಪ್ರಾರಂಭವಾಯಿತು.
ಪಿಲಿಚಂಡಿ ದೈವಸ್ಥಾನದ ವಾರ್ಷಿಕ ನೇಮೋತ್ಸವ ಸಂದರ್ಭ ಕಾಯರ್ ಕಟ್ಟೆ ಗಡು ಸ್ಥಳದಲ್ಲಿ ನಡೆಯುತ್ತಿದ್ದ ಕಾರ್ಯಗಳು ಯಥಾ ಪ್ರಕಾರ ಮುಂದುವರಿದರೆ ಮಾತ್ರ ದೋಷಗಳಿಗೆ ಪರಿಹಾರ ಎಂಬ ದೈವದ ನುಡಿಯಾಯಿತ್ತು.
ಈ ಪ್ರಕರಣದ ಬಗ್ಗೆ ಗ್ರಾಮಸ್ಥರು ಸಮಾಲೋಚನೆ ನಡೆಸಿ ದೈವ ಸಾನಿದ್ಯಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸುವ ಮೂಲಕ ದೈವದ ನುಡಿಯ ಬಗ್ಗೆ ಸಂಕಲ್ಪ ಮಾಡಲಾಯಿತು.
ದೈವಾರಧನೆಯಲ್ಲಿ ಮೂಲ ಸ್ವರೂಪ ಕಳೆದುಕೊಂಡ ಕಾರಣದಿಂದಾಗಿ ಎಂ.ಆರ್.ಪಿ.ಎಲ್ ಸಹಿತ ಇತರ ಕೈಗಾರಿಕೆಗಳಿಗೂ ಕೂಡ ಹಲವು ದೋಷ ಕಂಡುಬಂದಿದ್ದು, ಪರಿಹಾರ ಪ್ರಾಯಶ್ಚಿತಕ್ಕಾಗಿ ಕಂಪನಿಯವರು ಕಂಪನಿ ಒಳಗೆ ಚಾಮುಂಡಿ ದೇವಸ್ಥಾನ ನಿರ್ಮಿಸಿ ಅರ್ಚಕರನ್ನು ನೇಮಿಸಿ ತ್ರಿಕಾಲ ಪೂಜೆ ಮಾಡಲಾಗುತ್ತಿದೆ.
ಕಂಪನಿಗಾಗಿ ಭೂಸ್ವಾಧೀನಗೊಂಡ ಕಾರಣ ಈ ಅವ್ಯವಸ್ಥೆಗಳು ಎದುರಾಗಿರುವುದರಿಂದ, ನೇಮೋತ್ಸವಕ್ಕೆ ಸೂಕ್ತವಾಗುವ ರೀತಿಯಲ್ಲಿ ಸ್ಥಳವನ್ನು ಜೀರ್ಣೋದ್ದಾರಗೊಳಿಸುವ ಕಾರ್ಯದಲ್ಲಿ ಕಂಪನಿಯೇ ಮೇಲುಸ್ತುವಾರಿ ವಹಿಸಬೇಕು ಅಲ್ಲದೆ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕೆಂಬುದು ಗ್ರಾಮಸ್ಥರ ಬೇಡಿಕೆಯಾಗಿದ್ದು, ಕಂಪನಿಯ ನಿಯಮ ನಿಬಂಧನೆಗಳಿಗೆ ಬದ್ದರಾಗಿ ನೇಮೋತ್ಸವ ನಡೆಸಲಾಗುವುದು ಎಂಬುದು ಗ್ರಾಮಸ್ಥರ ಅಭಿಪ್ರಾಯ.
ಒಟ್ಟಿನಲ್ಲಿ ಈ ಪ್ರಕರಣಕ್ಕೆ ಸಾಕಷ್ಟು ಮಹತ್ವ ಬಂದಿದ್ದು ಕಂಪನಿ ಹೇಗೆ ಪ್ರತಿಕ್ರಿಯೆ ನೀಡುತ್ತದೆ ಎಂಬುದು ಕಾದು ನೋಡಬೇಕಾಗಿದೆ.
DAKSHINA KANNADA
Mangaluru: ಎಂಡೋ ಪೀಡಿತರಿಗೆ 1 ಕೋ.ರೂ. ನೆರವು ನೀಡಿದ ಎಂ.ಆರ್.ಪಿ.ಎಲ್. ಸಂಸ್ಥೆ
ಮಂಗಳೂರು: ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋ ಕೆಮಿಕಲ್ಸ್ ಲಿಮಿಟೆಡ್- ಎಂ.ಆರ್.ಪಿ.ಎಲ್. ಸಂಸ್ಥೆಯು ದಕ್ಷಿಣ ಕನ್ನಡ ಜಿಲ್ಲೆಯ ಎಂಡೋ ಸಲ್ಫಾನ್ ಪೀಡಿತ ರೋಗಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಒಂದು ಕೋಟಿ ರೂಪಾಯಿ ಸಹಾಯ ಧನ ನೀಡಲು ಮುಂದಾಗಿದೆ.
ಈ ಕುರಿತಂತೆ ಆಶಯ ಪತ್ರವನ್ನು ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಎಂ.ಆರ್.ಪಿ.ಎಲ್. ಕಂಪೆನಿಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ಶ್ಯಾಮ್ ಪ್ರಸಾದ್ ಕಾಮತ್ ಮುಂಡ್ಕೂರು ಅವರು ಅವರಿಗೆ ಹಸ್ತಾಂತರಿಸಿದರು.
ಎಂ.ಆರ್.ಪಿ.ಎಲ್. ಸಂಸ್ಥೆಯು ತನ್ನ ಸಿ.ಎಸ್.ಆರ್. ನಿಧಿಯಿಂದ ಒಂದು ಕೋಟಿ ರೂಪಾಯಿ ನೆರವನ್ನು ಜಿಲ್ಲೆಯ ಅರೋಗ್ಯ ಇಲಾಖೆಗೆ ನೀಡಲಿದ್ದು, ಈ ಮೊತ್ತವನ್ನು ವಿಟ್ಲ, ಸುಳ್ಯ, ಬೆಳ್ತಂಗಡಿ, ಪುತ್ತೂರು, ಮತ್ತು ಮೂಡುಬಿದಿರೆ ತಾಲೂಕುಗಳಲ್ಲಿರುವ ಎಂಡೋ ಪೀಡಿತರ ಪುನರ್ವಸತಿ ಕೇಂದ್ರಗಳಿಗೆ ವೈದ್ಯಕೀಯ ವ್ಯವಸ್ಥೆಗಳಿಗಾಗಿ ಬಳಸಿಕೊಳ್ಳಲು ಉದ್ದೇಶಿಸಲಾಗಿದೆ.
ಪ್ರಮುಖವಾಗಿ ನಾಲ್ಕು ಸಂಚಾರಿ ವೈದ್ಯಕೀಯ ವಾಹನಗಳು, ಫಿಸಿಯೋಥೆರಪಿ ಉಪಕರಣಗಳು, ಹಾಸಿಗೆ ಹಿಡಿದ ರೋಗಿಗಳನ್ನು ಪುನರ್ವಸತಿ ಕೇಂದ್ರಗಳಿಗೆ ಕರೆದೊಯ್ಯಲು ಮತ್ತು ವಾಪಸ್ ಕರೆತರಲು 2 ವಾಹನ ಖರೀದಿಸಲು, ಕೊಯಿಲ ಮತ್ತು ಕೊಕ್ಕಡಗಳಲ್ಲಿ ಇರುವ ಪುನರ್ವಸತಿ ಕೇಂದ್ರಗಳಿಗೆ ಎರಡು ಡೀಸೆಲ್ ಜನರೇಟರ್ ಕೊಂಡುಕೊಳ್ಳಲು ಇದನ್ನು ವಿನಿಯೋಗಿಲಾಗುತ್ತದೆ.
ಆಶಯ ಪತ್ರವನ್ನು ಸ್ವೀಕರಿಸಿದ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ತಿಮ್ಮಯ್ಯ ಅವರು ನೆರವು ನೀಡಲು ಮುಂದಾಗಿರುವ ಎಂ.ಆರ್.ಪಿ.ಎಲ್. ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿದರು.
ಈ ಕೊಡುಗೆಯಿಂದ ಜಿಲ್ಲೆಯಲ್ಲಿರುವ 4 ಸಾವಿರಕ್ಕೂ ಅಧಿಕ ಎಂಡೋ ಸಲ್ಫಾನ್ ಪೀಡಿತರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಸಾಧ್ಯವಾಗಲಿದೆ ಎಂದು ಅಭಿಪ್ರಾಯ ಪಟ್ಟರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ತಿಮ್ಮಯ್ಯ, ಎಂಡೋ ಸಲ್ಫಾನ್ ಪೀಡಿತರ ಆರೋಗ್ಯ ವಿಭಾಗದ ನೋಡಲ್ ಅಧಿಕಾರಿ ಡಾ. ನವೀನ್ ಚಂದ್ರ ಕುಲಾಲ್, ಎಂ.ಆರ್.ಪಿ.ಎಲ್. ಚೀಫ್ ಜನರಲ್ ಮ್ಯಾನೇಜರ್ ಮನೋಜ್ ಕುಮಾರ್ ಎ., ಎಚ್ ಅರ್ ವಿಭಾಗದ ಜಿ.ಜಿ.ಎಂ. ಕೃಷ್ಣ ಹೆಗ್ಡೆ ಅವರು ಉಪಸ್ಥಿತರಿದ್ದರು.
DAKSHINA KANNADA
ಪುತ್ತೂರಿನ ಯುವಕ ಕೇರಳದಲ್ಲಿ ನೀರಿನಲ್ಲಿ ಮುಳುಗಿ ಸಾವು..!
ಪುತ್ತೂರು: ನೀರಿನಲ್ಲಿ ಮುಳುಗಿ ಪುತ್ತೂರಿನ ಯುವಕ ಕೇರಳದಲ್ಲಿ ಸಾವನ್ನಪ್ಪಿದ ಘಟನೆ ಕಣ್ಣೂರಿನ ಕಡಂಬೆರಿಯಲ್ಲಿ ನಡೆದಿದೆ.
ಪುತ್ತೂರಿನ ಹಿರೇಬಂಡಾಡಿಯ ನಿವಾಸಿ ಮಹಮ್ಮದ್ ಅಝೀಮ್ (21) ಮೃತ ಯುವಕ ಎಂದು ಗುರುತಿಸಲಾಗಿದೆ.
ಕಣ್ಣೂರಿನ ಕಡಂಬೆರಿಯಲ್ಲಿ ಈಜಲೆಂದು ತೆರಳಿದ್ದ ವೇಳೆ ಈ ದುರಂತ ನಡೆದಿದೆ.
ಪುತ್ತೂರಿನಿಂದ ಐವರು ಸ್ನೇಹಿತರು ಕೇರಳಕ್ಕೆ ಪ್ರವಾಸಕ್ಕೆ ತೆರಳಿದ್ದರು.
ಈ ವೇಳೆ ಈಜಲೆಂದು ನೀರಿಗಿಳಿದ ಮಹಮ್ಮದ್ ಅಝೀಮ್ ನೀರಿನ ಆಳ ತಿಳಿಯದೆ ಈಜಲು ಆಗದೆ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ.
ಮಹಮ್ಮದ್ ಅಝೀಮ್ ಗೆ ಸರಿಯಾಗಿ ಈಜು ಬಾರದೇ ಸಾವನ್ನಪ್ಪಿದ್ದರೆ, ಇನ್ನೊಬ್ಬನನ್ನು ಡಡಂಬೆರಿಯ ಸ್ಥಳೀಯ ನಿವಾಸಿಗಳು ರಕ್ಷಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
- bengaluru6 days ago
ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ..!
- DAKSHINA KANNADA5 days ago
2ನೇ ಮದುವೆಯಾದ ಕಿರುತೆರೆ ನಟಿ ಜ್ಯೋತಿ ರೈ …!
- DAKSHINA KANNADA6 days ago
ಮುಂದಿನ ವರ್ಷದಿಂದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ 3 ಬೋರ್ಡ್ ಎಕ್ಸಾಮ್- ಮಧು ಬಂಗಾರಪ್ಪ
- DAKSHINA KANNADA6 days ago
ಮಂಗಳೂರಿನ ಆಟೋಮ್ಯಾಟ್ರಿಕ್ಸ್ ಶೋ ರೂಮ್ ನಲ್ಲಿ ಟಾಟಾ ನೆಕ್ಸಾನ್, ಇ.ವಿ ಬಿಡುಗಡೆ
ARUN
05/08/2023 at 10:16 AM
SO CALLED INTELLIGENT PEOPLE WHO PROTEST HERE , GIVE THE ANSWER WHO KILLED HER AND RAPED HER ?????