BELTHANGADY
Belthangady: ಸರಕಾರಿ ಬಸ್ ನಿಲ್ಲಿಸಿ ಗಲಾಟೆ – ಸಂಚಾರಕ್ಕೆ ಅಡ್ಡಿಪಡಿಸಿದ ಮೂವರು ಆರೋಪಿಗಳ ಬಂಧನ..!
ಚಾರ್ಮಾಡಿಯಲ್ಲಿ ಸರಕಾರಿ ಬಸ್ಸನ್ನು ತಡೆ ಹಿಡಿದು ಗಲಾಟೆ ಎಬ್ಬಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಬಸ್ ನಿರ್ವಾಹಕ ದೂರು ನೀಡಿದ ದೂರಿನಂತೆ ಮೂವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ: ವೇಗದೂತ ಬಸ್ ಅನ್ನು ನಿಗದಿತ ನಿಲುಗಡೆಯ ಹೊರತಾಗಿ ಸಿಕ್ಕ ಸಿಕ್ಕಲ್ಲಿ ನಿಲ್ಲಿಸಲು ಸಾಧ್ಯವಿಲ್ಲ ಎಂದಿದ್ದ ಬಸ್ ಕಂಡಕ್ಟರ್ ನನ್ನು ಬೆಂಬಲಿಸಿ, ಗಲಾಟೆ ಎಬ್ಬಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಬಸ್ ನಿರ್ವಾಹಕ ದೂರು ನೀಡಿದ ದೂರಿನಂತೆ ಮೂವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
ಚಾರ್ಮಾಡಿ ಗ್ರಾಮದ ಮುಹಮ್ಮದ್ ಶಬೀರ್(21), ಮುಹಮ್ಮದ್ ಮಹ್ರೂಫ್(22) ಹಾಗೂ ಮುಹಮ್ಮದ್ ಮುಬಶ್ಶಿರ್(23) ಬಂಧಿತ ಆರೋಪಿಗಳಾಗಿದ್ದಾರೆ.
ಶನಿವಾರ ಸಂಜೆ ಮಂಗಳೂರಿನಿಂದ ಮೂಡಿಗೆರೆಗೆ ತೆರಳುತ್ತಿದ್ದ ಮೂಡಿಗೆರೆ ಡಿಪೋದ ಬಸ್ಸಿಗೆ ಉಜಿರೆಯಲ್ಲಿ ಹತ್ತಿದ ಚಾರ್ಮಾಡಿ ಕಡೆಯ ವಿದ್ಯಾರ್ಥಿಗಳು ಬಾಗಿಲಲ್ಲಿ ನೇತಾಡುತ್ತಿದ್ದರೆನ್ನಲಾಗಿದೆ.
ಕೆ ಎಸ್ಆರ್ ಟಿಸಿಈ ವೇಳೆ ಬಸ್ ನಿರ್ವಾಹಕ ಶಿವ ಕುಮಾರ್ ವಿದ್ಯಾರ್ಥಿಗಳನ್ನು ಬಸ್ ಒಳಗೆ ಬನ್ನಿ ಅಥವಾ ಇಳಿದು ಹಿಂದಿನಿಂದ ಬರುವ ಬೇರೆ ಬಸ್ ನಲ್ಲಿ ಬನ್ನಿ ಎಂದು ಸೂಚಿಸಿದಾಗ ಮಾತಿಗೆ ಮಾತು ಬೆಳೆದು ಗಲಾಟೆ ಶುರುವಾಗಿತ್ತು.
ಈ ನಡುವೆ ಬಸ್ ನಿರ್ವಾಹಕ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಿ ಚಾರ್ಮಾಡಿ ಬಳಿ ಗುಂಪೊಂದು ಬಸ್ಸನ್ನು ತಡೆ ಹಿಡಿದಿದೆ.
ಈ ಬಗ್ಗೆ ನಿರ್ವಾಹಕ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದ ಮೂವರು ಆರೋಪಿಗಳನ್ನು ಜೂ. 18ರಂದು ಬಂಧಿಸಿದ್ದಾರೆ.
BELTHANGADY
ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು
ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು(59 ವ) ಅವರು ಹೃದಯಾಘಾತದಿಂದ ಮೇ.1ರಂದು ರಾತ್ರಿ ನಿಧನರಾಗಿದ್ದಾರೆ.
ಮುಂದೆ ಓದಿ..;ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ
ಕೋಟದಲ್ಲಿ ಮೇ.1ರಂದು ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಕುಕ್ಕಿತ್ತಾಯನ ವೇಷ ಹಾಕಿದ್ದರು. ಮೇಳದ ಬಳಿಕ ಚೌಕಿಯಲ್ಲಿ ಬಣ್ಣ ತೆಗೆಯುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.
ನಾರಾಯಣ ಮಯ್ಯು ಹಾಗೂ ಲಕ್ಷ್ಮೀ ದಂಪತಿ ಪುತ್ರನಾಗಿದ್ದು 1964ರಲ್ಲಿ ಪುತ್ತೂರಿನ ಸೇಡಿಯಾಪಿನಲ್ಲಿ ಜನಿಸಿದರು. ತನ್ನ 18 ನೇ ವಯಸ್ಸಿನಲ್ಲಿ ಯಕ್ಷಗಾನದಲ್ಲಿ ಬಣ್ಣ ಹಚ್ಚಲು ಆರಂಭಿಸಿದ ಇವರು ಸ್ತ್ರೀ ವೇಷ, ರಾಜ ವೇಷ, ಪುಂಡು ವೇಷಗಳಲ್ಲಿ ನಿಸ್ಸೀಮರಾಗಿದ್ದರು. ಇನ್ನು ಮಾಲಿನಿ, ಚಿತ್ರಾಂಗದೆ, ಮೋಹಿನಿ, ದಾಕ್ಷಾಯಿನಿ, ಪ್ರಮೀಳೆ, ಶ್ರೀ ದೇವಿ, ಸೀತೆ, ದೇವೆಂದ್ರ, ದುಶ್ಯಾಸನ ಮೊದಲಾದ ಪಾತ್ರಗಳ ಅಭಿನಯದಲ್ಲಿಯೂ ಸೈ ಎನಿಸಿಕೊಂಡಿದ್ದರು. ಮೃತರು ಆರೋಗ್ಯ ಸಹಾಯಕಿಯಾಗಿರುವ ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.
BELTHANGADY
ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ
ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.
ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?
ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
BANTWAL
ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.
ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.
- FILM7 days ago
ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ
- FILM7 days ago
ಮತ್ತೆ ಬಾಯ್ ಫ್ರೆಂಡ್ ಬದಲಾಯಿಸಿದ ಶೃತಿ ಹಾಸನ್..!
- FILM6 days ago
PHOTOS : ಗೀತಾ ‘ವಿಜಯ್’ ಅದ್ದೂರಿ ಮದುವೆ; ಮೆಚ್ಚುಗೆ ಪಡೆದ ಧನುಷ್ ಮಾಡಿದ ಆ ಒಂದು ಕಾರ್ಯ!
- LATEST NEWS7 days ago
ವಧು ಕೇಳಿದ ಆ ಒಂದು ಪ್ರಶ್ನೆ; ತಬ್ಬಿಬ್ಬಾದ ವರ..ಮದುವೆ ಕ್ಯಾನ್ಸಲ್!