Connect with us

  BELTHANGADY

  ಬೆಳ್ತಂಗಡಿ : ಅಕ್ರಮ ಜಾನುವಾರು ಸಾಗಾಟ- 6 ದನ, 2 ಕರು ಸಹಿತ ಮೂರು ಪಿಕಪ್ ವಶ..!

  Published

  on

  ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ಪಿಕಪ್ ವಾಹನದಲ್ಲಿ ಅಹಿಂಸಾತ್ಮಕವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿದ್ದಾರೆ. 

  ಬೆಳ್ತಂಗಡಿ : ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ಪಿಕಪ್ ವಾಹನದಲ್ಲಿ ಅಹಿಂಸಾತ್ಮಕವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿದ್ದಾರೆ.

  ಮೂರು ಪಿಕಪ್  ಸಹಿತ 8 ಜಾನುವಾರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು ಈ  ಸಂಬಂಧ ನಾಲ್ವರನ್ನು  ಬಂಧಿಸಿದ್ದಾರೆ.

  ಚೆನ್ನಕೇಶವ (33 ವ)ಮರವಳಲು ಕಸಬಾ ಹೋಬಳಿ, ಅರಕಲಗೂಡು ಹಾಸನದ ಅರಕಲಗೂಡಿನ ಮರವಳಲು ಕಸಬಾ ಹೋಬಳಿಯ ಚೆನ್ನ ಕೇಶವ, ಬೆಳ್ತಂಗಡಿ  ನಾವೂರು ಒಳಗದ್ಡೆಯ ಪುಷ್ಪರಾಜ್ , ಮೋರ್ತಾಜೆ ಮನೆಯ ಪ್ರಮೋದ್ ಸಾಲ್ಯಾನ್,  ಹೊಳೆ ನರಸೀಪುರ ಹಳೇಕೋಟೆ ಹೋಬಳಿ ಸಂದೀಪ್ ಹಿರೇಬೆಳಗುಳಿ ಬಂಧಿತ ಆರೋಪಿಗಳಾಗಿದ್ದಾರೆ.

  ಧಮ೯ಸ್ಥಳ ಠಾಣೆಯ ಎಸ್.ಐ ಅನಿಲಕುಮಾರ್‌ ತಂಡದವರು ಬುಧವಾರ  ಖಚಿತ ಮಾಹಿತಿಯಂತೆ ಧರ್ಮಸ್ಥಳ ಗ್ರಾಮದ ಕನ್ಯಾಡಿ ರಾಮ ಮಂದಿರದ ಬಳಿ ಸಿಬ್ಬಂದಿರವರುಗಳೊಂದಿಗೆ ವಾಹನ ತಪಾಸಣೆ ಮಾಡುತ್ತಿದ್ದ ಸಮಯ ರಾತ್ರಿ 8.45 ಗಂಟೆಗೆ ಉಜಿರೆ ಕಡೆಯಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಮೂರು ಪಿಕಪ್ ವಾಹನಗಳಾದ ಕೆಎ-21ಬಿ-7389 ಕೆಎ-70-0312 ಮತ್ತು ಕೆಎ670209 ನೇ ನೋಂದಣಿ ಸಂಖ್ಯೆಯ ವಾಹನಗಳನ್ನು ನಿಲ್ಲಿಸಿ ತಪಾಸಣೆ ನಡೆಸಿದಾಗ ಅಕ್ರಮವಾಗಿ ಜಾನುವಾರು ಸಾಗಾಟದ ಪ್ರಕರಣ ಬೆಳಕಿಗೆ ಬಂದಿತ್ತು.

  ವಾಹನದಲ್ಲಿ 6 ದನ, 2 ಗಂಡು ಕರುಗಳು ಸೇರಿ ಒಟ್ಟು 8 ಜಾನುವಾರುಗಳನ್ನು ಹಿಂಸಾತ್ಮಕವಾಗಿ ತುಂಬಿಸಿ ಸಾಗಾಟ ಮಾಡುತ್ತಿರುವುದು ಕಂಡು ಬಂದಿತ್ತು.

  ವಾಹನದಲ್ಲಿದ್ದ ಚೆನ್ನಕೇಶವ ಎಂಬಾತನನ್ನು ಪೊಲೀಸರು ವಿಚಾರಿಸಿದಾಗ ಮಾರಾಟ ಮಾಡುವ ಉದ್ದೇಶದಿಂದ ವಾಹನದಲ್ಲಿ ಹಿಂಸಾತ್ಮಕವಾಗಿ ತುಂಬಿಸಿ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

  ವಾಹನ ಸಹಿತ ಜಾನುವಾರುಗಳನ್ನು ಸ್ವಾಧೀನಪಡಿಸಿಕೊಂಡ ಪೊಲೀಸರು ನಾಲ್ವರು ಆಪಾದಿತರುಗಳನ್ನು ತಮ್ಮವಶಕ್ಕೆ ಪಡೆದುಕೊಂಡಿದ್ದಾರೆ.

  ಸ್ವಾಧೀನಪಡಿಸಿಕೊಂಡ ಜಾನುವಾರುಗಳ ಅಂದಾಜು ಮೌಲ್ಯ ರೂ. 65 ಸಾವಿರ ಹಾಗೂ ವಾಹನದ ಅಂದಾಜು ಮೌಲ್ಯ ರೂ.7 ಲಕ್ಷ ಒಟ್ಟು ಸ್ವಾಧೀನ ಪಡಿಸಿಕೊಂಡ ಸೊತ್ತುಗಳ ಅಂದಾಜು ಮೌಲ್ಯ ರೂ 7.65 ಲಕ್ಷ ಎಂದು ಅಂದಾಜಿಸಲಾಗಿದೆ.

  ಧರ್ಮಸ್ಥಳ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

  BELTHANGADY

  ಚಾರ್ಮಾಡಿ ಫಾಲ್ಸ್ ಬಳಿ ಚೆಲ್ಲಾಟವಾಡುತ್ತಿದ್ದ ಯುವಕರ ಬಟ್ಟೆ ಎತ್ತಾಕಿಕೊಂಡು ಬಂದ ಪೊಲೀಸ್

  Published

  on

  ಮೂಡಿಗೆರೆ: ನಿಷೇಧಿತ ಪ್ರೆದೇಶ ಎಂದು ಘೋಷಿಸಿದ್ದ ಜಲಪಾತದಲ್ಲಿ ಮೋಜು ಮಸ್ತಿಯಲ್ಲಿ ನಿರತರಾಗಿದ್ದ ಯುವಕರನ್ನು ಪೊಲೀಸರು ಚಡ್ಡಿಯಲ್ಲಿ ಓಡಿಸಿದ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಫಾಲ್ಸ್ ಬಳಿ ನಡೆದಿದೆ.

  ನಿಷೇಧಿತ ಪ್ರದೇಶದಲ್ಲಿ ಬಂಡೆ ಹತ್ತಿ ಹುಚ್ಚಾಟ ತೋರುತ್ತಿದ್ದ ಪ್ರವಾಸಿಗರಿಗೆ ಬಿಸಿ ಮುಟ್ಟಿಸಿದ ಬಣಕಲ್ ಗಸ್ತು ಪೊಲೀಸರು ಯುವಕರ ಬಟ್ಟೆಗಳನ್ನು ತಂದು ಗಸ್ತು ವಾಹನಕ್ಕೆ ತುಂಬಿ ಶಾಕ್ ನೀಡಿದ್ದಾರೆ. ಪೊಲೀಸರ ಹಿಂದೆ ಚಡ್ಡಿಯಲ್ಲೇ ಓಡಿ ಬಂದ ಯುವಕರು ಪ್ಲೀಸ್ ಸರ್, ಇನ್ನೊಂದ್ ಸಲ ಹೀಗೆ ಮಾಡುವುದಿಲ್ಲ, ದಯವಿಟ್ಟು ಬಟ್ಟೆ ಕೊಡಿ ಎಂದು ಅಂಗಲಾಚಿದ್ದಾರೆ.

  ಆ ಬಳಿಕ ಪ್ರವಾಸಿ ಯುವಕರು ಬಟ್ಟೆ ಕೊಡುವಂತೆ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ. ಕೊನೆಗೆ ಪೊಲೀಸರು ಎಚ್ಚರಿಕೆ ಕೊಟ್ಬ ಬಳಿಕ ಬಟ್ಟೆಗಳನ್ನು ಕೊಟ್ಟು ಕಳುಹಿಸಿದ್ದಾರೆ.

  Continue Reading

  BELTHANGADY

  ಮಳೆ ಅಬ್ಬರ: ದಕ್ಷಿಣ ಕನ್ನಡ ಜಿಲ್ಲೆಯ ಈ ಪ್ರವಾಸಿ ತಾಣಗಳಿಗೆ ನೋ ಎಂಟ್ರಿ

  Published

  on

  ಮಂಗಳೂರು: ಕರಾವಳಿ ಸೇರಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕೆಲ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.

  ವನ್ಯಜೀವಿ ವಲಯದ ವ್ಯಾಪ್ತಿಗೆ ಬರುವ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ. ಬೆಟ್ಟಗಳು, ಜಲಪಾತಗಳ ಬಳಿ ತೆರಳದಂತೆ ಪ್ರವಾಸಿಗರಿಗೆ ಸೂಚನೆ ನೀಡಲಾಗಿದೆ.

  ಬೆಳ್ತಂಗಡಿ ತಾಲೂಕಿನ ಜಮಲಾಬಾದ್ (ಗಡಾಯಿಕಲ್ಲು) ಬೆಟ್ಟ, ಅರಿಶಿನಗುಂಡಿ, ಕೂಡ್ಲು, ಬರ್ಕಳ, ಹಿಡ್ಲುಮನೆ, ವನಕಬ್ಬಿ, ಬಂಡಾಜೆ ಫಾಲ್ಸ್ ಸೇರಿದಂತೆ ಕೆಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಬೆಳ್ತಂಗಡಿ ಆರ್​ಎಫ್​​ಒಗೆ ಕುದುರೆಮುಖ ಸಿಎಫ್ ಆದೇಶ ಹೊರಡಿಸಿದ್ದಾರೆ.

  Continue Reading

  BELTHANGADY

  ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾ*ವು..!

  Published

  on

  ಉಡುಪಿ: 10ನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಮೃತಪಟ್ಟ ಘಟನೆ ಉಡುಪಿಯ ಪಳ್ಳಿ ದಾದಬೆಟ್ಟು ಎಂಬಲ್ಲಿ ಬುಧವಾರ(ಜು.03) ಸಂಭವಿಸಿದೆ. ಪಳ್ಳಿ ದಾದಬೆಟ್ಟು ಜಯರಾಮ ಆಚಾರ್ಯ ಮತ್ತು ಚಂದ್ರಿಕಾ ಅವರ ಪುತ್ರಿ ಭಾಗ್ಯಶ್ರೀ (16) ಮೃತ ದುರ್ದೈವಿ.

  ಗೋಡೆ ಕುಸಿದು ಮಣ್ಣಿನಡಿಗೆ ಸಿಲುಕಿದ ಇಬ್ಬರು ಕಾರ್ಮಿಕರು..!

  ಈಕೆ ಮೂಡುಬೆಳ್ಳೆ ಸಂತ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿಯಾಗಿದ್ದಾಳೆ. ಬೆಳಿಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಕೆಯನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಈಕೆಗೆ ಹೃದಯ ಸಂಬಂಧಿ ಕಾಯಿಲೆ ಇತ್ತೆಂದು ತಿಳಿದುಬಂದಿದೆ. ಭಾಗ್ಯಶ್ರೀ ನಿಧನಕ್ಕೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಶಿಕ್ಷಕರು, ವಿದ್ಯಾರ್ಥಿ ವೃಂದದವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಗೌರವಾರ್ಥ ಶಾಲೆಗೆ ರಜೆ ನೀಡಲಾಗಿತ್ತು.

  Continue Reading

  LATEST NEWS

  Trending