BELTHANGADY
Belthangady: ಅಂತ್ಯ ಸಂಸ್ಕಾರಕ್ಕೆ ಜಾಗದ ಕೊರತೆ-ಪಂಚಾಯತ್ ಎದುರು ಶವವಿಟ್ಟು ಪ್ರತಿಭಟನೆ..!
ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ಸ್ಮಶಾನ ಇಲ್ಲದಿರುವುದರಿಂದ ಮೃತರ ಅಂತ್ಯ ಸಂಸ್ಕಾರಕ್ಕೆ ತೊಂದರೆಯಾಗುತ್ತಿದ್ದು, ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯತ್ ಎದುರು ಶವವಿಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ಸ್ಮಶಾನ ಇಲ್ಲದಿರುವುದರಿಂದ ಮೃತರ ಅಂತ್ಯ ಸಂಸ್ಕಾರಕ್ಕೆ ತೊಂದರೆಯಾಗುತ್ತಿದ್ದು, ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯತ್ ಎದುರು ಶವವಿಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಕಳೆದ ಹಲವಾರು ವರ್ಷಗಳಿಂದ ಸ್ಮಶಾನಕ್ಕಾಗಿ ಸ್ಥಳ ಮಂಜೂರುಗೊಳಿಸುವಂತೆ ಹಲವಾರು ಗ್ರಾಮ ಸಭೆಗಳಲ್ಲಿ ಬೇಡಿಕೆ ಇಟ್ಟರೂ ಯಾರು ಕೂಡ ಗ್ರಾಮಸ್ಥರ ಮನವಿಗೆ ಸ್ಪಂದನೆ ಸಿಗುತ್ತಿಲ್ಲ ಎಂದು ನೆರಿಯದಲ್ಲಿ ಪ್ರತಿಭಟನೆ ನಡೆಸಿದರು.
ಜು.14 ರಂದು ಜನತಾ ಕಾಲನಿ ನಿವಾಸಿಯೊಬ್ಬರು ಮೃತಪಟ್ಟಿದ್ದು ಅವರ ಮೃತದೇಹವನ್ನು ಪಂಚಾಯತ್ ಎದುರು ಇಟ್ಟು ಪ್ರತಿಭಟನೆ ನಡೆಸಿದ್ದಾರೆ.
ಒಂದು ವೇಳೆ ಸ್ಪಂದನೆ ಸಿಗದಿದ್ದಲ್ಲಿ ಅವರ ಅಂತ್ಯ ಸಂಸ್ಕಾರವನ್ನು ನೆರಿಯ ಗ್ರಾಮ ಪಂಚಾಯತ್ ಎದುರೇ ಮಾಡುತ್ತೇವೆ ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ.
ಮೃತರ ಮನೆಗೆ ಗ್ರಾಮ ಪಂಚಾಯತ್ ಅಧ್ಯಕ್ಷರು, ಅಧಿಕಾರಿಗಳು ಬಂದು ಗ್ರಾಮಸ್ಥರ ಮನವೊಲಿಸಿದ್ದಾರೆ.
ಇಷ್ಟು ವರ್ಷ ಬೇಡಿಕೆ ಈಡೇರಿಲ್ಲ, ಸ್ಮಶಾನ ಆಗುವ ತನಕ ಪಂಚಾಯತ್ ಗೆ ಬೀಗ ಹಾಕಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ಸ್ಥಳಕ್ಕೆ ತಹಶೀಲ್ದಾರ್ ಭೇಟಿ ನೀಡಿದ್ದಾರೆ.
ನಮಗೆ ಜಾಗ ಇವತ್ತೇ ನಿಗದಿ ಪಡಿಸಬೇಕು ಒಂದು ವೇಳೆ ಇವತ್ತೂ ಕೂಡ ನಮ್ಮ ಬೇಡಿಕೆ ಈಡೇರದಿದ್ದಲ್ಲಿ ಪಂಚಾಯತ್ ಎದುರು ಅಂತ್ಯ ಸಂಸ್ಕಾರವನ್ನು ನೆರವೇರಿಸುತ್ತೇವೆ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಬಳಿಕ ತಹಶೀಲ್ದಾರ್ ಅವರು ಸ್ಮಶಾನಕ್ಕೆ ಸ್ಥಳ ನಿಗದಿ ಪಡಿಸಿದ ಜಾಗವನ್ನು ಪರಿಶೀಲನೆ ನಡೆಸಿದರು.
ಈ ವೇಳೆ ತಹಶೀಲ್ದಾರ್ ಸೇರಿದಂತೆ ಅಧಿಕಾರಿಗಳು ಪಂಚಾಯತ್ ಬಳಿ ಇರುವ ಜಾಗವನ್ನು ಅಂತ್ಯ ಸಂಸ್ಕಾರಕ್ಕೆ ಮೀಸಲಿರಿಸಿದರು.
ರುದ್ರಭೂಮಿಗೆ ಅಲ್ಲೆ ಮಾಡುವಂತೆ ಸೂಚಿಸಿದಾಗ ಗ್ರಾಮಸ್ಥರೆಲ್ಲ ಪ್ರತಿಭಟನೆಯನ್ನು ಹಿಂಪಡೆದು ಅದೇ ಜಾಗದಲ್ಲಿ ಸಂಜೀವ ಗೌಡ ಅವರ ಅಂತ್ಯ ಸಂಸ್ಕಾರವನ್ನು ನೆರವೇರಿಸಲು ವ್ಯವಸ್ಥೆ ಮಾಡಿದರು.
ಇದೀಗ ತಾರಕಕ್ಕೇರಿದ ನೆರಿಯ ಸ್ಮಶಾನದ ಪ್ರತಿಭಟನೆ ಸುಖಾಂತ್ಯಗೊಂಡಿದೆ.
BELTHANGADY
ಗುರುವಾಯನಕೆರೆ – ಹೊಂಡ ತಪ್ಪಿಸಲು ಹೋಗಿ ಕಾರುಗಳು ಜ*ಖಂ
ಗುರುವಾಯನಕೆರೆ: ಇಂದು (ಅ.12) ಮುಂಜಾನೆ ಎರಡು ಕಾರುಗಳ ನಡೆವೆ ಭೀಕರ ಅ*ಪಘಾತವು ಗುರುವಾಯನಕೆರೆ ಶಕ್ತಿನಗರದಲ್ಲಿ ಸಂಭವಿಸಿದೆ.
ಗುರುವಾಯನಕೆರೆಯಿಂದ ಹೆಬ್ರಿ ಕಡೆಗೆ ಹೋಗುವ ಸ್ಕೋಡಾ ಕಾರು ಮತ್ತು ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಐ20 ಕಾರಿನ ನಡೆವೆ ಅ*ಪಘಾತ ಸಂಭವಿಸಿದೆ.
ಐ 20 ಕಾರು ಚಾಲಕ ರಸ್ತೆಯ ಹೊಂಡ ತಪ್ಪಿಸಲು ಹೋಗಿ ಈ ದುರ್ಘಟನೆ ನಡೆದಿದೆ ಎಂಬುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಉಪ್ಪಿನಂಗಡಿ| ಪ್ರಪಾತಕ್ಕೆ ಉರುಳಿದ ಖಾಸಗಿ ಬಸ್: ಚಾಲಕ ಮೃ*ತ್ಯು
ಎರಡೂ ಕಾರು ಉಲ್ಟಾ ಬಿದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿಲ್ಲ ಎಂಬುವುದು ತಿಳಿದು ಬಂದಿದೆ. ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BELTHANGADY
ಭಾರೀ ಮಳೆಯಿಂದ ಚಾರ್ಮಾಡಿ ಘಾಟ್‌ನಲ್ಲಿ ಸಾಲು ಸಾಲು ಗುಡ್ಡ ಕುಸಿತ; ಫುಲ್ ಟ್ರಾಫಿಕ್ ಜಾಮ್
ಚಿಕ್ಕಮಗಳೂರು: ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಪರಿಣಾಮವಾಗಿ ಚಾರ್ಮಡಿ ಘಾಟ್‌ನಲ್ಲಿ ಸಾಲು ಸಾಲು ಗುಡ್ಡ ಕುಸಿತವಾಗಿದೆ. ಧಾರಾಕಾರ ಮಳೆಯಿಂದ ನೀರು ರಸ್ತೆಯಲ್ಲಿ ನದಿಯಂತೆ ಹರಿಯುತ್ತಿದ್ದು, ಹೀಗಾಗಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ವಾಹನಗಳು ಹಿಂದಕ್ಕೂ ಹೋಗದೇ, ಮುಂದಕ್ಕೆ ಹೋಗದೆ ಮಧ್ಯವೇ ಪರದಾಡುವಂತಾಗಿದೆ.
ಬೆಳ್ತಂಗಡಿ ತಾಲೂಕಿನ ಸುತ್ತಮುತ್ತ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕಕ್ಕಿಂಜೆ, ಚಾರ್ಮಾಡಿ ಘಾಟ್ ರಸ್ತೆ ಸಂಪೂರ್ಣ ಜಲಮಯವಾಗಿದೆ. ನೆರಿಯಾ, ಪುಲ್ಲಾಜೆ ಸೇತುವೆಗಳು ಮುಳುಗಡೆಯಗಿದೆ.
ಚಾರ್ಮಾಡಿಯ 3ನೇ ತಿರುವಿನಲ್ಲಿ ರಸ್ತೆ ಮೇಲೆ ನೀರು ನದಿಯಂತೆ ಹರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
BELTHANGADY
ಬೆಳ್ತಂಗಡಿ: ಸಹಾಯದ ಹೆಸರಲ್ಲಿ ಅಪರಿಚಿತರಿಂದ ವಂಚನೆ
ಬೆಳ್ತಂಗಡಿ: ಸಹಾಯ ಮಾಡುವ ಹೆಸರು ಹೇಳಿ ಬ್ಯಾಂಕ್ ಖಾತೆಯಿಂದ ಇನ್ಯಾಯತರ್ಪು ಗ್ರಾಮದ ಜಾರಿಗೆಬೈಲು ನಿವಾಸಿ ಅಬೂಬಕ್ಕರ್ (71) ಅವರ ಹಣ ಎಗರಿಸಿದ ಘಟನೆ ಬೆಳ್ತಂಗಡಿ ಗೇರಕಟ್ಟೆ ಕೆನರಾ ಬ್ಯಾಂಕ್‌ನ ಎಟಿಎಂ ಕೇಂದ್ರದಲ್ಲಿ ನಡೆದಿದೆ.
ಅ.2 ರಂದು ಮಧ್ಯಾಹ್ನ 12 ಗಂಟೆಗೆ ಹಣ ಡ್ರಾ ಮಾಡುತ್ತಿರುವಾಗ ಒಳ ಪ್ರವೇಶಿಸಿದ ಅಪರಿಚಿತರಿಬ್ಬರು ಹಿಂದಿಯಲ್ಲಿ ಮಾತಾಡಿ ಸಹಾಯಕ್ಕೆ ಬಂದಿದ್ದರು. ಅಬಾಬಕ್ಕರ್ ಸಹಾಯದ ಅಗತ್ಯ ಇಲ್ಲ ಎಂದು ಹೇಳಿದರೂ, ಒಳಗಡೆಯೇ ನಿಂತಿದ್ದರು. ಮಧ್ಯಾಹ್ನ 12 ಗಂಟೆಗೆ ಹಣ ತೆಗೆದು ಎಟಿಎಂ ಕೇಂದ್ರದಿಂದ ಕಾರ್ಡ್ ಸಹಿತ ಹೊರಗೆ ಹೋಗಿದ್ದರು. ನಂತರ ಅ.4 ರಂದು ಅಳಿಯ ಹಾಗೂ ಮಗ ಹಾಕಿದ ಹಣವನ್ನು ಡ್ರಾ ಮಾಡಲು ಎಟಿಎಂ ಕೇಂದ್ರಕ್ಕೆ ಹೋದಾಗ ಕಾರ್ಡ್ ರೀಡ್ ಆಗಲಿಲ್ಲ.
ಅನುಮಾನದಿಂದ ಬ್ಯಾಂಕ್‌ಗೆ ಹೋಗಿ ವಿಚಾರಿಸಿದಾಗ ಎಟಿಎಂ ಕಾರ್ಡ್ ಬದಲಾಗಿದೆ ಎಂದು ತಿಳಿಸಿದ್ದು, ನಂತರ ಬ್ಯಾಲೆನ್ಸ್ ಚೆಕ್ ಮಾಡಿದಾಗ ಖಾತೆಯಲ್ಲಿದ್ದ 49,200 ರೂ. ಅನ್ನು ವಂಚಿಸಿರುವುದು ಗೊತ್ತಾಯಿತು.
ಅ.2 ರಂದು ಎಟಿಎಂ ಕೇಂದ್ರದಲ್ಲಿದ್ದ ಅಪರಿಚಿತ ಇಬ್ಬರು ವ್ಯಕ್ತಿಗಳು ಬೇರೆ ಬೇರೆ ಎಟಿಎಂ ಕೇಂದ್ರದಲ್ಲಿ ತೆಗೆದು ಕಳವು ಮಾಡಿದ್ದು, ಈ ಬಗ್ಗೆ ವಂಚಿಸಿ ಕಳವು ಮಾಡಿದ ಅಪರಿಚಿತ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಭಾವಚಿತ್ರದಲ್ಲಿರುವ ಅಪರಿಚಿತ ವ್ಯಕ್ತಿಗಳನ್ನು ಪತ್ತೆ ಮಾಡಲು ಸಹಕರಿಸಿ, ಪತ್ತೆಯಾದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಈ ಮೂಲಕ ಕೋರಲಾಗುತ್ತಿದೆ.
ಸಂಪರ್ಕಿಸಬೇಕಾದ ಸಂಖ್ಯೆ: 08256-232093
- FILM5 days ago
ಎರಡನೇ ಮದುವೆಯಾಗುತ್ತಿರುವ ಬಿಗ್ಬಾಸ್ ಕಂಟೆಸ್ಟೆಂಟ್
- LATEST NEWS5 days ago
ನ.8 ಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ ನಿವೃತ್ತಿ..! 15 ದಿನದಲ್ಲಿ 8 ಪ್ರಮುಖ ತೀರ್ಪು ಸಾಧ್ಯತೆ..!
- DAKSHINA KANNADA7 days ago
ಮಂಗಳೂರು : ರಾತ್ರಿ ಹೊತ್ತಲ್ಲಿ ಯುವಕನ ಬೆತ್ತಲೆ ಓಡಾಟ; ಭಯದಲ್ಲಿ ಹಾಸ್ಟೆಲ್ ವಿದ್ಯಾರ್ಥಿನಿಯರು
- BIG BOSS7 days ago
ಇದೇ ಕಾರಣಕ್ಕೆ ಮೊದಲ ವಾರವೇ ಯಮುನಾ ಶ್ರೀ ನಿಧಿ ಬಿಗ್ಬಾಸ್ ಮನೆಯಿಂದ ಔಟ್ ಆದದ್ದು..!