BELTHANGADY
Belthangady: ವಿವಾಹಿತ ಮಹಿಳೆಯ ಶವ ಬಾವಿಯಲ್ಲಿ ಪತ್ತೆ -ಪತಿಯ ಮೇಲೆ ಅನುಮಾನ..!
ಬೆಳ್ತಂಗಡಿ: ವಿವಾಹಿತ ಮಹಿಳೆಯ ಮೃತದೇಹ ಮನೆ ಸಮೀಪದ ಬಾವಿಯಲ್ಲಿ ಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕು ಬೆಳಾಲು ಗ್ರಾಮದ ಮಾಚಾರಿನ ಕೆಂಚನೊಟ್ಟು ಎಂಬಲ್ಲಿ ನಡೆದಿದ್ದು, ಈ ಬಗ್ಗೆ ಅನೇಕ ಅನುಮಾನಗಳು ಹುಟ್ಟಿಕೊಂಡ ಹಿನ್ನೆಲೆಯಲ್ಲಿ ಮಹಿಳೆಯ ಪತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಬೆಳಾಲು ಗ್ರಾಮದ ಮಾಚಾರು ಕೆಂಪನೊಟ್ಟು ನಿವಾಸಿ ಶಶಿಕಲಾ (27) ಮೃತಪಟ್ಟವರು. ಶಶಿಕಲಾ ಪತಿ ಸುಧಾಕರ ನಾಯ್ಕ (30).
ಮೃತ ಶಶಿಕಲಾ ಮತ್ತು ಪತಿ ಸುಧಾಕರ್ ನಾಯ್ಕ ಸಂಬಂಧಿಕರಾಗಿದ್ದು, ಪರಸ್ಪರ ಪ್ರೀತಿಸಿ 7 ವರ್ಷಗಳ ಹಿಂದೆ ಮದುವೆಯಾಗಿದ್ದರು. ಪತಿ ಸುಧಾಕರ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದು, ಇಬ್ಬರೂ ಮಾಚಾರು ಕೆಂಪನೊಟ್ಟು ತೋಟದ ಮನೆಯಲ್ಲಿ ವಾಸಿಸುತ್ತಿದ್ದರು. ದಂಪತಿಗೆ 6 ವರ್ಷದ ಪುತ್ರಿ ಇದ್ದು, ಆಕೆ ಅಜ್ಜಿ ಮನೆಗೆ ತೆರಳಿದ್ದಳು. ಗುರುವಾರ ರಾತ್ರಿ ಪತಿ, ಪತ್ನಿ ಮಾತ್ರ ಮನೆಯಲ್ಲಿದ್ದರು. ಶುಕ್ರವಾರ ಬೆಳಗ್ಗೆ ಪತಿ ಸುಧಾಕರ ರಬ್ಬರ್ ಟ್ಯಾಪಿಂಗ್ ಮಾಡಲು ಹೋಗಿ ಬೇಗ ಮನೆಗೆ ಹಿಂದಿರುಗಿದ್ದ. ಈ ವೇಳೆ ಶಶಿಕಲಾ ಅವರ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದೆ ಎಂದು ಆತ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
ಸ್ಥಳಕ್ಕೆ ಬಂಟ್ವಾಳ ಡಿ.ವೈ.ಎಸ್.ಪಿ. ಪ್ರತಾಪ್ ಸಿಂಗ್ ತೋರಟ್, ಬೆಳ್ತಂಗಡಿ ವೃತ್ತನಿರೀಕ್ಷಕ ನಾಗೇಶ್ ಕದ್ರಿ ಮತ್ತು ಇತರ ಅಧಿಕಾರಿ ಹಾಗೂ ಸಿಬಂದಿ ಆಗಮಿಸಿದ್ದರು. ಮೃತದೇಹವನ್ನು ಸ್ಥಳೀಯ ಶೌರ್ಯ ವಿಪತ್ತು ನಿರ್ವಹಣ ಘಟಕದವರ ಸಹಕಾರದಿಂದ ಬಾವಿಯಿಂದ ಮೇಲಕ್ಕೆತ್ತಲಾಯಿತು. ವಿಧಿವಿಜ್ಞಾನ ತಂಡ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದು, ಬಳಿಕ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಎಂದು ಕಂಡು ಬಂದಿದ್ದರೂ, ಸ್ಥಳದಲ್ಲಿ ಬಾವಿಗೆ ಹೋಗುವ ಹಾದಿಯಲ್ಲಿ ಎಳೆದೊಯ್ದಂತೆ ಗುರುತುಗಳು ಕಂಡು ಬಂದಿವೆ. ಅಲ್ಲದೆ ಇವರಿಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿದ್ದು, ಶುಕ್ರವಾರ ಆಕೆಯ ಸಾವಿನ ಮೊದಲು ಪತಿ, ಪತ್ನಿ ಮಧ್ಯೆ ಮಾತಿನ ಚಕಮಕಿ ನಡೆದಿರುವ ಬಗ್ಗೆ ಮಾಹಿತಿ ಲಭಿಸಿದೆ. ಹಾಗಾಗಿ ಇದೊಂದು ಕೊಲೆ ಪ್ರಕರಣ ಆಗಿರ ಬಹುದಂಬ ಅನುಮಾನ ವ್ಯಕ್ತವಾಗಿದ್ದರಿಂದ ಪತಿ ಸುಧಾಕರ ನಾಯ್ಕನನ್ನು ಧರ್ಮ ಸ್ಥಳ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
BELTHANGADY
ದ.ಕ ದಲ್ಲಿ ಭಾರಿ ಮಳೆ: ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿದ್ದ ಅಂಗಡಿಗಳಿಗೆ ಹಾನಿ..!!
ಧರ್ಮಸ್ಥಳ: ಧರ್ಮಸ್ಥಳದಲ್ಲಿ 3ನೇ ದಿನದ ಲಕ್ಷ ದೀಪೋತ್ಸವದ ವೈಭವ ಒಂದು ಕಡೆಯಾದರೆ, ಇನ್ನೊಂದೆಡೆ ಗುಡುಗು ಸಹಿತ ಬಾರಿ ಮಳೆ ಅವಾಂತರ ತಂದಿದೆ.
ಕೆಲವು ಅಂಗಡಿಗಳಿಗೆ ಬಹಳ ಹಾನಿ ಆಗಿದೆ. ಮಳೆ ಅಂಗಡಿ ಮಾಲೀಕರಿಗೆ ನಷ್ಟವನ್ನುಂಟು ಮಾಡಿದೆ. ಮಳೆಗೆ ಅಂಗಡಿಯೊಳಗಿದ್ದ ಕೆಲವು ವಸ್ತುಗಳು ಮಳೆಗೆ ಕೊಚ್ಚಿಕೊಂಡು ಹೋಗಿದೆ.
ಧರ್ಮಸ್ಥಳ ಶಾಲಾ ಮೈದಾನದಲ್ಲಿ ನಡೆಯುತ್ತಿದ್ದ ವಸ್ತು ಪ್ರದರ್ಶನಕ್ಕೆ ಬಹಳ ಸಮಸ್ಯೆ ಆಗಿದೆ. ಸಭಾಂಗಣದ ಬಳಿ ಹಾಕಿದ್ದ ಕುರ್ಚಿಗಳು ಒದ್ದೆಯಾಗಿದೆ.
BELTHANGADY
ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಪದಾಧಿಕಾರಿಗಳ ಆಯ್ಕೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ವೇದಿಕೆ ಬೆಳ್ತಂಗಡಿ ಇದರ 2023-25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ವಾಣಿ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.
ಅಧ್ಯಕ್ಷರಾಗಿ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಸುರೇಶ್ ಕೌಡಂಗೆ, ಕೋಶಾಧಿಕಾರಿಯಾಗಿ ರಂಜಿತ್ ಕಳೆಂಜ, ಜೊತೆ ಕಾರ್ಯದರ್ಶಿಯಾಗಿ ತೀಕ್ಷಿತ್ ಕೆ.ಕಲ್ಬೆಟ್ಟು ದಿಡುಪೆ, ಉಪಾಧ್ಯಕ್ಷರುಗಳಾಗಿ ನಿತಿನ್ ಕಲ್ಮಂಜ ಮತ್ತು ಪ್ರಶಾಂತ್ ಅಂತರ ಕಡಿರುದ್ಯಾವರ, ಸಂಘಟನಾ ಕಾರ್ಯದರ್ಶಿಯಾಗಿ ಪ್ರಮೋದ್ ದಿಡುಪೆ, ಕಾನೂನು ಸಲಹೆಗಾರರಾಗಿ ನವೀನ್ ಬಿ.ಕೆ.ಕಲ್ಮಂಜ, ಯಶವಂತ್ ಬನಂದೂರು ಮತ್ತು ಜಯಾನಂದ ಗೌಡ ಬೆಳ್ತಂಗಡಿ ಆಯ್ಕೆಯಾದರು.
ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಯಶವಂತ ಗೌಡ ಪುದುವೆಟ್ಟು, ಮಂಜುನಾಥ ಗೌಡ ಚಾರ್ಮಾಡಿ, ವಿಕ್ರಮ್ ಧರ್ಮಸ್ಥಳ, ಸತೀಶ್ ಬೆಳಾಲು, ಪ್ರಸಾದ್ ಅಡಿಮಾರ್ ಚಾರ್ಮಾಡಿ, ಹೇಮಂತ್ ಕಳಿಯ, ದಿನೇಶ್ ದೇಂತ್ಯಾರು ಕೊಯ್ಯೂರು, ಪ್ರದೀಪ್ ನಾಗಾಜೆ ನಾವೂರು, ಭರತ್ ಗೌಡ ಪುದುವೆಟ್ಟು, ನಿತೇಶ್ ಬೆಳ್ತಂಗಡಿ, ಅಕ್ಷಯ್ ಕುಮಾರ್ ಮಾಚಾರ್, ಕರುಣಾಕರ ಗೌಡ ಉಜಿರೆ, ಗಿರೀಶ್ ನಿಡ್ಲೆ ಮತ್ತು ಕಿಶಾನ್ ಗೌಡ ಸವಣಾಲು ಇವರನ್ನು ಆಯ್ಕೆ ಮಾಡಲಾಯಿತು. ಈ ಸಂಧರ್ಭದಲ್ಲಿ ತಾಲೂಕು ಸಂಘದ ನಿಕಟ ಪೂರ್ವ ಕಾರ್ಯದರ್ಶಿ ಮೋಹನ್ ಗೌಡ ಕೊಯ್ಯೂರು ಉಪಸ್ಥಿತರಿದ್ದರು. ಯಶವಂತ್ ಬನಂದೂರು ಸ್ವಾಗತಿಸಿದರು.ಕಾರ್ಯದರ್ಶಿ ಸುರೇಶ್ ಕೌಡಂಗೆ ವಂದಿಸಿದರು.
BELTHANGADY
ಖೋಟ ನೋಟು ಪ್ರಕರಣ: 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ..!
ಧರ್ಮಸ್ಥಳ: ಖೋಟ ನೋಟು ಪ್ರಕರಣದಲ್ಲಿ ಕಳೆದ ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮೋಹನ ಕುಮಾರ್ ಎಂಬಾತನನ್ನು ಬೆಂಗಳೂರು ಗೊಲ್ಲಹಳ್ಳಿ ಬಸ್ಸು ತಂಗುದಾಣದ ಬಳಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿರುವ ಘಟನೆ ನಡೆದಿದೆ.
ಖೋಟಾ ನೋಟು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಸುಮಾರು 4 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಂಡಿದ್ದ ಆರೋಪಿ ಕೆಂಪೆರಾಜ್ ಎಂಬಾತನನ್ನು ಚಿಕ್ಕನಾಯಕನಹಳ್ಳಿ ತಾಲೂಕು ಮುಳಬಾಗಿಲು ಬಸ್ಸು ತಂಗುದಾಣದ ಬಳಿಯಿಂದ ಧರ್ಮಸ್ಥಳ ಠಾಣಾ ಪಿ.ಎಸ್.ಐ ಸಮರ್ಥ ಆರ್ ಗಾಣಿಗೇರ್, ಹೆಚ್ ಸಿ 607 ರಾಜೇಶ್ ಎನ್, ಪಿ.ಸಿ 2406 ವಿನಯ ಕುಮಾರ್ ರವರುಗಳ ತಂಡ ವಶಕ್ಕೆ ಪಡೆದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದೆ.
- FILM5 days ago
ರಾತ್ರಿ 12.30ಕ್ಕೆ ಆಡಿಷನ್..2.30ಕ್ಕೆ ಆಯ್ಕೆ-ಬೃಂದಾವನ ಸೀರಿಯಲ್ ಹೀರೋ ಕ್ಲಾರಿಟಿ
- FILM4 days ago
ನಮೃತಾ ಗೌಡ ಆವಾಜ್ ಗೆ ಸಂಗೀತಾ ಕಣ್ಣೀರು
- bengaluru7 days ago
Film: ಕಾಂತಾರ ಖ್ಯಾತಿಯ ಸಪ್ತಮಿ ಗೌಡ ಟಾಲಿವುಡ್ ಗೆ ಎಂಟ್ರಿ
- bengaluru5 days ago
ಹೈಕೋರ್ಟ್ ಕಲಾಪವನ್ನೂ ಬಿಡದ ಸೈಬರ್ ಹ್ಯಾಕರ್ಸ್-ವಿಡಿಯೋ ಕಾನ್ಫರೆನ್ಸ್ ಆ್ಯಪ್ನಲ್ಲಿ ಅಶ್ಲೀಲ ದೃಶ್ಯ ಅಪ್ಲೋಡ್