Friday, June 2, 2023

ಬೆಳ್ತಂಗಡಿ : ಅಪ್ರಾಪ್ತೆಯನ್ನು ಕೆಡಿಸಿದ್ದ ಕಾಮುಕ ಬಾಬಿಗೆ 20 ವರ್ಷ ಸಜೆ..!

ಬೆಳ್ತಂಗಡಿ :  ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಸತತ ಅತ್ಯಾಚಾರ ಎಸಗಿದ ಪ್ರಕರಣದ ಕಾಮುಕ ಆರೋಪಿಗೆ ಮಂಗಳೂರು ನ್ಯಾಯಾಲಯವು 20 ವರ್ಷ ಕಠಿಣ ಸಜೆ ಹಾಗೂ 50 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.

ಆರೋಪಿ ಬಾಬಿ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರದಲ್ಲಿ ಈ ಅತ್ಯಾಚಾರ ಪ್ರಕರಣ ನಡೆದಿತ್ತು.

ಕಡಿರುದ್ಯಾವರ ಗ್ರಾಮದ ಎರ್ಮಾಳಪಳ್ಕೆ ನಿವಾಸಿ 48 ವರ್ಷದ ಬಾಬಿ ಎಂಬಾತ ಅಪ್ರಾಪ್ತೆಯ ಅತ್ಯಾಚಾರ ಎಸಗಿ ಶಿಕ್ಷೆಗೆ ಒಳಗಾದ ಆರೋಪಿಯಾಗಿದ್ದಾನೆ.

ಈತ 2021ರ ಡಿಸೆಂಬರ್ ನಿಂದ 2022 ರ ಫೆಬ್ರವರಿಯವರೆಗೆ ತನ್ನ ಪರಿಚಯದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಹಲವಾರು ಬಾರಿ ಅತ್ಯಾಚಾರ ಎಸಗಿದ್ದಾನೆ.

ಈ ಬಗ್ಗೆ ಬಾಲಕಿ 2022 ರ ಮಾರ್ಚ್ 3 ರಂದು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬೆಳ್ತಂಗಡಿ ವೃತ್ತ ನಿರೀಕ್ಷಕ ಶಿವಕುಮಾರ್ ನೇತೃತ್ವದಲ್ಲಿ ಪೊಲೀಸರು ಪ್ರಕರಣದ ತನಿಖೆ ನಡೆಸಿ ಆರೋಪಿ ಬಾಬಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಇದೀಗ ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ಬಾಬಿ ವಿರುದ್ಧದ ಆರೋಪ ಸಾಬೀತಾಗಿದ್ದು, ನ್ಯಾಯಾಲಯವು ಜನವರಿ 24 ರಂದು ಆರೋಪಿಗೆ 20 ವರ್ಷಗಳ ಕಾರಾಗೃಹ ಹಾಗೂ 5೦ ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.

LEAVE A REPLY

Please enter your comment!
Please enter your name here

Hot Topics