Connect with us

BELTHANGADY

ಬೆಳ್ತಂಗಡಿ: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ- ಹಲ್ಲೆ, ಕೊಲೆ ಪ್ರಕರಣದ ಬಗ್ಗೆ ಸಂತ್ರಸ್ತೆಯ ಪೋಷಕರು ಏನಂತಾರೆ..?

Published

on

ಬೆಳ್ತಂಗಡಿ: ತಾಲೂಕಿನ ಇಂದಬೆಟ್ಟು ಗ್ರಾಮದಲ್ಲಿ ನಡೆದ ಹಲ್ಲೆ, ಕೊಲೆ, ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣದ ಬಗ್ಗೆ ಲೈಂಗಿಕ ಕಿರುಕುಳಕ್ಕೊಳಗಾದ ಬಾಲಕಿಯ ತಂದೆ ಪ್ರತಿಕ್ರಿಯೆ ನೀಡಿದ್ದು, ನಾರಾಯಣ ನಾಯ್ಕ್ ನನ್ನ ಮಗಳಿಗೆ ಕಿರುಕುಳ ನೀಡಿದ್ದು ಹೌದು.

ಜೊತೆಗೆ ಈ ಗಲಾಟೆಯಲ್ಲಿ ಮೃತಪಟ್ಟ ಜಾರಪ್ಪ ನಾಯ್ಕ್‌ ಮೇಲೆ ಯಾರೂ ಹಲ್ಲೆ ನಡೆಸಿಲ್ಲ ಬದಲಾಗಿ ಅವರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.

ಆರೋಪಿ ನಾರಾಯಣ ನಾಯ್ಕ್‌

ಈ ಬಗ್ಗೆ ವೀಡಿಯೋ ಸ್ಪಷ್ಟನೆ ನೀಡಿದ ಅಪ್ರಾಪ್ತ ಬಾಲಕಿಯ ತಂದೆ, ನನ್ನ ಮನೆಯ ಸಮೀಪವಿದ್ದ ನಾರಾಯಣ ನಾಯ್ಕ್‌ ಗೆಣಸು ಕೊಡುತ್ತೇನೆಂದು ಆಗಾಗ ನನ್ನ ಮಗಳನ್ನು ಮನೆಗೆ ಕರೆಯುತ್ತಿದ್ದನು.

ಕೆಲ ದಿನಗಳ ಹಿಂದೆ ಅಳುತ್ತಾ ಮನೆಗೆ ಬಂದಾಗ ಆಕೆ ತಾಯಿ ಬಳಿ ಲೈಂಗಿಕ ದೌರ್ಜನ್ಯದ ಬಗ್ಗೆ ಹೇಳಿಕೊಂಡಿದ್ದಳು.

ಈ ಬಗ್ಗೆ ಆತನ ಪತ್ನಿ ಮತ್ತು ಕುಟುಂಬಸ್ಥರಿಗೆ ತಿಳಿಸಿದಾಗ ಇನ್ನು ಮುಂದೆ ಆ ರೀತಿ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದ್ದರು. ಕಳೆದ ಶುಕ್ರವಾರವೂ ನಾರಾಯಣ ನಾಯ್ಕ್‌ ಗೆಣಸು ಕೊಡುತ್ತೇನೆಂದು ಮತ್ತೆ ಕರೆದಿದ್ದಾರೆ.

ಈ ವಿಚಾರ ಊರಿನವರಿಗೆ ತಿಳಿದು ನನ್ನ ಕೆಲ ಸ್ನೇಹಿತರು ದಾರಿ ಮಧ್ಯೆ ನಿಲ್ಲಿಸಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಿಯಾ ಎಂದು ಕೇಳಿದಾಗ ಹೌದು ಎಂದು ತನ್ನ ತಪ್ಪು ಒಪ್ಪಿಕೊಂಡಿದ್ದನು.

ಆಗ ಆತನಿಗೆ ಅಲ್ಲಿ ಸೇರಿದ್ದ ಕೆಲವರು ಥಳಿಸಿದರು. ಜೊತೆಗೆ ಲೈಂಗಿಕ ಕಿರುಕುಳ ನೀಡಿದವನ ವಿರುದ್ಧ ದೂರು ನೀಡಲು ಮುಂದಾದಾಗ ಮಗುವಿನ ಭವಿಷ್ಯದ ದೃಷ್ಟಿಯಿಂದ ದೂರು ನೀಡದಂತೆ ಊರಿನ ಹಿರಿಯರು ಸಲಹೆ ನೀಡಿದ್ದರು.

ಘಟನೆಯ ವಿಷಯ ತಿಳಿದು ಸ್ಥಳಕ್ಕೆ ಬಂದ ಜಾರಪ್ಪ ನಾಯ್ಕ್‌ ಸ್ಥಳಕ್ಕೆ ಬಂದು ಒಂದು ನಿಮಿಷದಲ್ಲೇ ಕುಸಿದು ಬಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲಾ ಯಿತು. ಇತ್ತ ಲೈಂಗಿಕ ಕಿರುಕುಳದ ಬಗ್ಗೆ ನಾವು ದೂರು ದಾಖಲಿಸಲು ಠಾಣೆಗೆ ತೆರಳಿದೆವು.

 ಮೃತ ಜಾರಪ್ಪ ನಾಯ್ಕ್‌

ಆಗ ಸಂಜೆ 6 ಗಂಟೆಯಾದುದರಿಂದ ಪೊಲೀಸರು ದೂರು ಸ್ವೀಕರಿಸಿಲ್ಲ. ಆ ನಂತರ ಮನೆಗೆ ಬಂದಾಗ ಜಾರಪ್ಪ ನಾಯ್ಕ್‌ ಮೃತಪಟ್ಟ ಬಗ್ಗೆ ಮಾಹಿತಿ ದೊರಕಿತು. ಜೊತೆ ಅವರಿಗೆ ಹಲ್ಲೆಗೈದ ಕಾರಣ ನಮ್ಮ ಮೇಲೆ ಕೇಸ್‌ ದಾಖಲಾಯಿತು ಎಂಬ ಸುದ್ದಿ ಬಂದಿತು.

ವಾಸ್ತವದಲ್ಲಿ ನಾವು ಅವರಿಗೆ ಹಲ್ಲೆಯೇ ನಡೆಸಿಲ್ಲ ಎಂದರು. ಇದೇ ವೇಳೆ ನನ್ನ ಮಗಳಿಗೆ ನ್ಯಾಯ ದೊರಕಿಸಬೇಕು ಜೊತೆಗೆ ಅಮಾಯಕರ ಮೇಲೆ ದಾಖಲಿಸಿದ ಕೇಸ್‌ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಬೆಳ್ತಂಗಡಿಯಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಇಬ್ಬರ ಮೇಲೆ ತಂಡದಿಂದ ಹಲ್ಲೆ: ಓರ್ವ ಸಾವು-ನಾಲ್ವರ ವಿರುದ್ಧ ಎಫ್‌ಐಆರ್‌

ಬೆಳ್ತಂಗಡಿ: ಇಂದಬೆಟ್ಟು ಕೊಲೆ ಪ್ರಕರಣ-ಓರ್ವನ ವಿರುದ್ಧ ಪೋಕ್ಸೋ ದಾಖಲು

Click to comment

Leave a Reply

Your email address will not be published. Required fields are marked *

BELTHANGADY

ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

Published

on

ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್‌ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.

chitha

ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?

ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Continue Reading

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

BELTHANGADY

ಬೆಳ್ತಂಗಡಿ: ಕೆರೆಗೆ ಬಿದ್ದು ಕಾಡುಕೋಣ ಸಾ*ವು.. ಸಾರ್ವಜನಿಕರಿಂದ ಅಂತ್ಯಸಂಸ್ಕಾರ

Published

on

ಬೆಳ್ತಂಗಡಿ: ಇಲ್ಲಿನ ಬೆಳಾಲು ಗ್ರಾಮಕ್ಕೆ ಸಂಬಂಧಪಟ್ಟಂತೆ ಕೊಯ್ಯೂರು ರಸ್ತೆಯ ಬದ್ಯಾರು ಎಂಬಲ್ಲಿ ಹೆಚ್ ಪದ್ಮ‌ಗೌಡ ಎಂಬವರ ತೋಟದ ಕೆರೆಯಲ್ಲಿ ಬೃಹತ್ ಗಾತ್ರದ ಕಾಡುಕೋಣದ ಮೃತ*ದೇಹ ಪತ್ತೆಯಾಗಿದೆ.

bison

ಮುಂದೆ ನೋಡಿ..; ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಕೆಎಸ್ ಈಶ್ವರಪ್ಪ ಬಿಜೆಪಿ ಪಕ್ಷದಿಂದ ಉಚ್ಛಾಟನೆ..!

ಈ ಕೆರೆಗೆ ಸುತ್ತ ಕಾಂಕ್ರೀಟ್ ರಿಂಗ್ ಅಳವಡಿಸಿದ್ದು ನೀರು ಕುಡಿಯಲು ಬಂದ ಕಾಡುಕೋಣ ಮೂರ್ನಾಲ್ಕು ದಿನಗಳ ಹಿಂದೆಯೇ ಬಿದ್ದು ಸಾವನ್ನಪ್ಪಿರುವ ಸಾಧ್ಯತೆ ಇದೆ. ಹೆಚ್ಚೂ ಕಮ್ಮಿ 10 ಕ್ವಿಂಟಾಲ್ ತೂಕ ಹೊಂದಿರಬಹುದೆಂದು ಅಂದಾಜಿಸಲಾಗಿದ್ದು, ಕೊಳೆತು ವಾಸನೆ ಬೀರುತ್ತಿತ್ತು. ಶೌರ್ಯ ವಿಪತ್ತು ತಂಡಕ್ಕೆ ಬಂದ ಮಾಹಿತಿಯಂತೆ ಉಜಿರೆ- ಬೆಳಾಲು ಘಟಕದ ಸಂಯೋಜಕ ಸುಲೈಮಾನ್ ಬೆಳಾಲು, ಮುಳುಗು ಪರಿಣತ ಹರೀಶ ಕೂಡುಗೆ, ಮುಹಮ್ಮದ್ ಶರೀಫ್ ಬೆಳಾಲು, ಅವಿನಾಶ್ ಭಿಡೆ ಅರಸಿಮನಕ್ಕಿ, ರವೀಂದ್ರ ಉಜಿರೆ, ಸುರೇಂದ್ರ ಉಜಿರೆ, ಅನಿಲ್ ಚಾರ್ಮಾಡಿ, ಶೌರ್ಯ ಘಟಕದ ಮಾಸ್ಟರ್ ಪ್ರಕಾಶ್ ಧರ್ಮಸ್ಥಳ, ನಳಿನ್ ಕುಮಾರ್ ಧರ್ಮಸ್ಥಳ ಮೊದಲಾದವರು ಸಾರ್ವಜನಿಕರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿ ಕಾಡುಕೋಣದ ಕಳೇಬರವನ್ನು ಮೇಲೆತ್ತಿದ್ದಾರೆ. ಬಳಿಕ ಪಶುವೈದ್ಯಾಧಿಕಾರಿ ಮರಣೋತ್ತರ ಪರೀಕ್ಷೆ ಪ್ರಕ್ರೀಯೆ ನಡೆಸಿದ್ದು, ತೋಟದಲ್ಲೇ ಹೊಂಡ ತೋಡಿ ಅಂತ್ಯಸಂಸ್ಕಾರ ನಡೆಸಲಾಗಿದೆ.

Continue Reading

LATEST NEWS

Trending