BELTHANGADY
ಪಾಳು ಬಿದ್ದ ಮನೆಯಲ್ಲಿದ್ದ ಒಂಟಿ ವೃದ್ಧೆಗೆ ಆಶ್ರಯ ಕಲ್ಪಿಸಿದ ಬೆಳ್ತಂಗಡಿ ಶಾಸಕ
ಬೆಳ್ತಂಗಡಿ: ಇಲ್ಲಿನ ಅಂಡಿಂಜೆ ಗ್ರಾಮದ ನಡ್ತಿಕಲ್ ಮಠದ ಬಳಿ ಹಲವು ತಿಂಗಳಿಂದ ಪಾಳು ಬಿದ್ದ ಮನೆಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧೆ ಲೀಲಾ ಎಂಬವರಿಗೆ ಆಶ್ರಯ ಕಲ್ಪಿಸಿಕೊಡುವುದರ ಮೂಲಕ ಶಾಸಕ ಹರೀಶ್ ಪೂಂಜಾ ಅವರು ಮಾನವೀಯತೆ ಮೆರೆದಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧೆ ಏನೂ ತಿನ್ನದೇ ಅಂಗಳದ ಕಸದ ರಾಶಿಯಲ್ಲಿ ಬಿದ್ದಿದ್ದರು. ವೃದ್ಧೆಯನ್ನು ಅವರ ನೆರೆಮನೆ ನಿವಾಸಿ ಮರಿಯಾ ಕೊಡ್ರೆರೋ ಆರೈಕೆ ಮಾಡುತ್ತಿದ್ದರು.
ಇವರು ಅಜ್ಜಿಯ ಸ್ಥಿತಿಯ ಬಗ್ಗೆ ರಾಜಶೇಖರ್ ಅಂಡಿಂಜೆ ಇವರ ಗಮನಕ್ಕೆ ತಂದಿದ್ದಾರೆ. ರಾಜಶೇಖರ್ ಅವರು ಸ್ಥಳಕ್ಕೆ ಭೇಟಿ ನೀಡಿ ಹಿಂದು ಯುವಶಕ್ತಿ ಅಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯ ಸದಸ್ಯರಿಗೆ ತಿಳಿಸಿದರು.
ಬಳಿಕ ಸದಸ್ಯರು ಶಾಸಕರು ಮತ್ತು ಅನಾಥರ ರಕ್ಷಕರಾದ ಹೊನ್ನಯ ಕಾಟಿಪಳ್ಳ ಅವರನ್ನು ಸಂಪರ್ಕಿಸಿ, ತುರ್ತಾಗಿ ಗುಂಡೂರಿಯಲ್ಲಿ ಕಾರ್ಯಾಚರಿಸುವ ಶ್ರೀಗುರುಚೈತನ್ಯ ಸೇವಾಶ್ರಮದಲ್ಲಿ ಆಶ್ರಯ ಕಲ್ಪಿಸಿದರು ಅಲ್ಲದೇ ವೃದ್ಧೆಗೆ ಸೇವಾಶ್ರಮದಲ್ಲಿ ಅಗತ್ಯದ ಸೇವೆಗೆ ಅನುಕೂಲತೆ ಸಹಕರಿಸುವುದಾಗಿ ಭರವಸೆ ನೀಡಿದರು.
ಮರಿಯಾ ಕೊಡ್ರೆರೂ, ಪೊಲೀಸ್ ದೇವರಾಜ್,ಪಂಚಾಯತ್ ಸದಸ್ಯ ನಿತಿನ್ ಎಂ. ಸ್ಟಾನಿ ಕೊಡ್ರೆರೋ, ಶೀನ ಅಚಾರಿ, ಗಣೇಶ್ ಶೆಣೈ, ದೇವದಾಸ ಸಾಲ್ಯಾನ್ ಆಲಡ್ಕ, ಮತ್ತಿತ್ತರು ಈ ವೃದ್ಧೆಯನ್ನು ಸೇವಾಶ್ರಮಕ್ಕೆ ಸಾಗಿಸುವಲ್ಲಿ ಸಹಕರಿಸಿದರು.
ವೃದ್ಧೆಯ ಬಂಧು ಬಳಗದವರು ಇದ್ದಲ್ಲಿ ವೇಣೂರು ಪೊಲೀಸ್ ಠಾಣೆಯಲ್ಲಿ ಸಂಪರ್ಕಿಸಬೇಕಾಗಿ ಶ್ರೀಗುರುಚೈತನ್ಯ ಸೇವಾ ಪ್ರತಿಷ್ಟಾನ ಮನವಿ ಮಾಡಿದೆ.
BELTHANGADY
ಅಂತರಾಷ್ಟ್ರೀಯ ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ಸಿದ್ದಾರ್ಥ್ ಎಂ.ಸಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ಫ್ಲಾಯ್ಡ್ ಮಿಸ್ಕಿತ್ ರಾಷ್ಟ್ರಮಟ್ಟದ ಟಾರ್ಗೆಟ್ ಬಾಲ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ನೇಪಾಳದ ಕಠ್ಮಂಡುವಿನಲ್ಲಿ ಜುಲೈ 8 ರಿಂದ ಜರುಗಿದ ಅಂತರಾಷ್ಟ್ರೀಯ ಮಟ್ಟದ ದಕ್ಷಿಣ ಏಷ್ಯಾ ಟಾರ್ಗೆಟ್ ಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.
ಫ್ಲಾಯ್ಡ್ ಮಿಸ್ಕಿತ್ ಮಡಂತ್ಯಾರು ನಿವಾಸಿ ಬೇಬಿ ಡಯಾನ ಮಿಸ್ಕಿತ್ ಹಾಗೂ ಕ್ಲೌಡಿ ಫ್ರಾನ್ಸಿಸ್ ಮಿಸ್ಕಿತ್ ದಂಪತಿಗಳ ಪುತ್ರರಾಗಿದ್ದು, ಸಿದ್ಧಾರ್ಥ್ ಎಂ.ಸಿ ಮಂಗಳೂರಿನ ಕಪಿತಾನಿಯೊ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಮಮಿತಾ ಹಾಗೂ ಬಿ.ಸಿ.ರೋಡ್ ನ ನ್ಯಾಯವಾದಿ ಪಿ.ಚೆನ್ನಪ್ಪ ಸಾಲಿಯಾನ್ ದಂಪತಿಗಳ ಪುತ್ರರಾಗಿದ್ದಾರೆ.
ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ರಾಘವೇಂದ್ರ ವಿಟ್ಲ ತರಬೇತಿ ನೀಡಿರುತ್ತಾರೆ.
BELTHANGADY
ಬೆಳ್ತಂಗಡಿ: ವಿದ್ಯುತ್ ತಗುಲಿ ಯುವಕ ಮೃ*ತ್ಯು
ಉಪ್ಪಿನಂಗಡಿ: ಮನೆಯಲ್ಲಿ ವಿದ್ಯುತ್ ಇಲ್ಲವೆಂದು ವಿದ್ಯುತ್ ಪರಿವರ್ತಕದ ಬಳಿ ಫ್ಯೂಸ್ ಹಾಕಲು ತೆರಳಿದ ಯುವಕನೋರ್ವ ವಿದ್ಯುತ್ ಆಘಾ*ತಕ್ಕೆ ಬ*ಲಿಯಾದ ಘಟನೆ ಜು.15ರಂದು ಇಳಂತಿಲ ಗ್ರಾಮದ ಗೋಳಿತ್ತಡಿ ಎಂಬಲ್ಲಿ ನಡೆದಿದೆ.
ಹರೀಶ (32) ಮೃ*ತ ಯುವಕ. ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದ ಈತ ಉತ್ತಮ ಕಬಡ್ಡಿ ಆಟಗಾರನೂ ಆಗಿದ್ದು, ತನ್ನ ಮನೆಗೆ ವಿದ್ಯುತ್ ಬರುತ್ತಿಲ್ಲವೆಂದು ವಿದ್ಯುತ್ ಪ್ರವಹಿಸಿ ಈತ ಮೃ*ತಪಟ್ಟಿದ್ದಾರೆ.
BELTHANGADY
ವಿಧಾನಸಭಾ ಅಧಿವೇಶನ: ಫಝಲ್ ಕೋಯಮ್ಮ ತಂಙಳ್, ನಿರೂಪಕಿ ಅಪರ್ಣಾ ಸಹಿತ ಅಗಲಿದ ಗಣ್ಯರಿಗೆ ಸಂತಾಪ
ಬೆಂಗಳೂರು: ವಿಧಾನ ಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ಇಂದು ಪೂರ್ವಾಹ್ನ 11 ಗಂಟೆಗೆ ಆರಂಭಗೊಂಡಿತು.
ಸದನ ಆರಂಭಗೊಳ್ಳುತ್ತಿದ್ದಂತೆ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ಸಂತಾಪ ಸೂಚಿಸುವ ನಿರ್ಣಯವನ್ನು ಮಂಡಿಸಿ, ಅಗಲಿದ ಗಣ್ಯರ ಕೊಡುಗೆಗಳನ್ನು ಸ್ಮರಿಸಿದರು.
ಅಗಲಿದ ಗಣ್ಯರಾದ ಧಾರ್ಮಿಕ ಮುಖಂಡ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ (ಕೂರತ್ ತಂಙಳ್), ನಿರೂಪಕಿ ಅಪರ್ಣಾ, ಸಾಹಿತಿ ಕಮಲಾ ಹಂಪನಾ, ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರಿಗೆ ಸದನಗಳ ಸದಸ್ಯರು ಸಂತಾಪ ಅರ್ಪಿಸಿದರು.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ