ಬೆಳ್ತಂಗಡಿ: ಚಾರ್ಮಾಡಿ ರಸ್ತೆಯಲ್ಲಿ ಸಂಚಾರಕ್ಕೆ ಅವಕಾಶ ಇಲ್ಲದಿದ್ದರೂ ಕ್ಯಾರೆ ಎನ್ನದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅದೇ ರಸ್ತೆಯಲ್ಲಿ ಸಾಗಿ ಜಿಲ್ಲಾಡಳಿತ ಆದೇಶ ಉಲ್ಲಂಘಿಸಿದ್ದಾರೆ.
ಸಂಜೆ 7 ರಿಂದ ಬೆಳಗ್ಗೆ 6ಗಂಟೆ ವರೆಗೆ ಚಾರ್ಮಾಡಿಯಲ್ಲಿ ಸಂಚಾರ ನಿಷೇಧ ವಿಧಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಆದೇಶ ಹೊರಡಿಸಲಾಗಿದೆ. ಆದರೆ ನಿನ್ನೆ ಬೆಂಗಳೂರು ಕಡೆಗೆ ತೆರಳುತ್ತಿದ್ದ ಶಾಸಕರ ವಾಹನವನ್ನು ತಡರಾತ್ರಿ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ತಡೆ ಹಿಡಿದಿದ್ದಾರೆ. ಈ ವೇಳೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಫೋನಾಯಿಸಿ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಅದೇ ರಸ್ತೆಯಿಂದ ತೆರಳಿದ್ದಾರೆ.
ಸದ್ಯ ಈ ರಸ್ತೆಯಲ್ಲಿ ಭೂಕುಸಿತ ಉಂಟಾಗಿದ್ದು, ಪ್ರಯಾಣಿಕರ ಹಿತದೃಷ್ಟಿಯಿಂದ ರಸ್ತೆ ಸಂಚಾರ ಬಂದ್ ಮಾಡಲಾಗಿದೆ. ಆದರೂ ಜನಪ್ರತಿನಿಧಿಯೊಬ್ಬರು ಅಧಿಕಾರಿಗಳ ಮಾತಿಗೆ ಕಿವಿಗೊಡದೆ ತೆರಳಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.