Thursday, March 23, 2023

ಬೆಳ್ತಂಗಡಿ ಆಟೋ ಚಾಲಕನ ನಿರ್ಲಕ್ಷ್ಯಕ್ಕೆ ಒಂದು ವರ್ಷದ ಮಗು ಮೃತ್ಯು..!

ಆಟೋ ರಿಕ್ಷಾವೊಂದು ಸೇತುವೆ ಡಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾದಲ್ಲಿದ್ದ ಒಂದು ವರ್ಷದ ಗಂಡು ಮಗು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮಾಲಾಡಿಯಲ್ಲಿ ನಡೆದಿದೆ.

ಬೆಳ್ತಂಗಡಿ : ಆಟೋ ರಿಕ್ಷಾವೊಂದು ಸೇತುವೆ ಡಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾದಲ್ಲಿದ್ದ ಒಂದು ವರ್ಷದ ಗಂಡು ಮಗು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮಾಲಾಡಿಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮದ ಬನಂತಾಡಿ ಸಮೀಪ ಆಟೋ ರಿಕ್ಷಾವೊಂದು ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಕಾರ್ಕಳ ತಾಲೂಕಿನ ನಿಟ್ಟೆ ನಿವಾಸಿಯಾದ ಸಂತೋಷ್ ಮತ್ತು ಗೀತಾ ದಂಪತಿಗಳ ಒಂದು ವರ್ಷ ಎರಡು ತಿಂಗಳ ಗಂಡು ಮಗು ಅತರ್ವ ಸಾವನ್ನಪ್ಪಿದ್ದು ರಿಕ್ಷಾದಲ್ಲಿದ್ದ ಇತರರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ಸಾವನ್ನಪ್ಪಿದ ಮಗುವಿನ ತಾಯಿ ಗೀತಾ ತನ್ನ ತಾಯಿ ಮನೆ ಬೆಳ್ತಂಗಡಿ ತಾಲೂಕಿನ ಪಡಂಗಡಿ ನಿವಾಸಿಯಾಗಿದ್ದು, ಜ.30 ರಂದು ಗೀತಾ ಅವರ ತಂಗಿ ಮನೆಯಾದ ಶಂಬೂರು ಎಂಬಲ್ಲಿಗೆ ಹೋಗಿ ವಾಪಾಸ್ ಬರುವಾದ ಈ ದುರಂತ ಸಂಭವಿಸಿದೆ.

ತಾಯಿ ರತ್ನಾ ಜೊತೆ ಗೀತಾ ಮತ್ತು ಮಗು ಅತರ್ವ ಜೊತೆ ತಾಯಿ ರತ್ನಾ ಮನೆಗೆ ಶಂಬೂರಿನ ದಯಾನಂದ ಎಂಬವರ ಆಟೋ ರಿಕ್ಷಾದಲ್ಲಿ 11 ಗಂಟೆ ಸುಮಾರಿಗೆ ಬರುತ್ತಿದ್ದಾಗ ಸೇತುವೆಗೆ ಡಿಕ್ಕಿ ಹೊಡೆದಿದೆ.

ಇದರ ಪರಿಣಾಮ ಮಗು ಅತರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು ತಕ್ಷಣ ಮಂಗಳೂರು ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಿಸದೆ ಸಂಜೆ ಮಗು ಸಾವನ್ನಪ್ಪಿದೆ.

ಆಟೋ ಚಾಲಕನ ನಿರ್ಲಕ್ಷ್ಯತನದ ಚಾಲನೆಯಿಂದ ಮಗು ಸಾವಿಗೆ ಕಾರಣವಾಗಿರುವ ಬಗ್ಗೆ ಆಟೋ ಚಾಲಕ  ದಯಾನಂದ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics

40 ವರ್ಷಗಳಿಂದ ಅದೇ ಪೊಳ್ಳು ಭರವಸೆ : ಚುನಾವಣಾ ಬಹಿಷ್ಕಾರಕ್ಕೆ ಮುಂದಾದ ಸುಳ್ಯ ಅರಮನೆಗಾಯದ ಜನತೆ..!

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಈ ಗ್ರಾಮದ ಜನ ಕಳೆದ 40 ವರ್ಷಗಳಿಂದ ಬಿದಿರಿನ ತೂಗು ಸೇತುವೆಯ ಮುಖಾಂತರ ಜೀವ ಭಯದಲ್ಲಿ ಜೀವನ ನಡೆಸುತಿದ್ದಾರೆ.ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ...

ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜಿನೈಕ್ಯ..!

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆವರು ಜಿನೈಕ್ಯರಾಗಿದ್ದಾರೆ.ಹಾಸನ : ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ...

ಉಡುಪಿ : ಕಳವಾದ 74 ಲಕ್ಷ ರೂಪಾಯಿ ಸೊತ್ತುಗಳು ಮರಳಿ ಮಾಲಕರಿಗೆ ಹಸ್ತಾಂತರಿಸಿದ ಪೊಲೀಸರು.!

ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳ್ಳತನ ,ದರೋಡೆ ಮತ್ತಿತರ ಕಾರಣಗಳಿಂದ ಸುತ್ತುಗಳನ್ನು ಕಳೆದುಕೊಂಡವರಿಗೆ ಅವರ ಚಿನ್ನಾಭರಣ ಸೊತ್ತು ಮತ್ತು ನಗದನ್ನು ಹಸ್ತಾಂತರಿಸಲಾಯಿತು.ಉಡುಪಿ : ಉಡುಪಿ ಜಿಲ್ಲೆಯ ವಿವಿಧ ಪೊಲೀಸ್...