Home ಗಲ್ಫ್‌ ವಾರ್ತೆ ಬೆಳ್ತಂಗಡಿಯ ನಾವೂರು ನಿವಾಸಿ ಸೌದಿ ಅರೇಬಿಯಾದಲ್ಲಿ ಕೊರೊನಾಗೆ ವೈರಸ್ ಗೆ ಬಲಿ...

ಬೆಳ್ತಂಗಡಿಯ ನಾವೂರು ನಿವಾಸಿ ಸೌದಿ ಅರೇಬಿಯಾದಲ್ಲಿ ಕೊರೊನಾಗೆ ವೈರಸ್ ಗೆ ಬಲಿ…

ಬೆಳ್ತಂಗಡಿಯ ನಾವೂರು ನಿವಾಸಿ ಸೌದಿ ಅರೇಬಿಯಾದಲ್ಲಿ ಕೊರೊನಾಗೆ ವೈರಸ್ ಗೆ ಬಲಿ…

ಬೆಳ್ತಂಗಡಿ: ಸೌದಿ ಅರೇಬಿಯಾದ ಜಿಝಾನ್ ಎಂಬಲ್ಲಿನ ಪೆಟ್ರೋಫ್ಯಾಕ್‌ ಕಂಪನಿಯೊಂದರಲ್ಲಿ ಕೆಲಸದಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ನಿವಾಸಿಯೊಬ್ಬರು ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ.

ಬೆಳ್ತಂಗಡಿಯ ನಾವೂರು ಗ್ರಾಮದ ಕೇಳ್ತಾಜೆ ನಿವಾಸಿಯೊಬ್ಬರು ಕೋವಿಡ್ 19 ಮತ್ತು ಶಾಸಕೋಶದ ತೊಂದರೆಯಿಂದಾಗಿ ಸಾವನ್ನಪ್ಪಿದ್ದಾರೆ.

ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಸೌದಿ ಅರೇಬಿಯಾದ “ಅಲ್ ಹಯಾ” ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ಅವರ ಕುಟುಂಬ ವರ್ಗಕ್ಕೆ ಮಾಹಿತಿ ಬಂದಿದೆ.

ಇನ್ನು ಅವರ ಅಂತ್ಯಸಂಸ್ಕಾರದ ವಿಧಿ ವಿಧಾನಗಳು ಸೌದಿ ಅರೇಬಿಯಾದಲ್ಲೇ ನಡೆಯಲಿದೆ.

ಅಲ್ಲೇ ಆಸುಪಾಸಿನಲ್ಲಿ ಕೆಲಸದಲ್ಲಿರುವ ಅನಿವಾಸಿ ಭಾರತೀಯರು, ಪರಿಚಿತರು ಅಂತ್ಯಸಂಸ್ಕಾರಕ್ಕೆ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಇಂಡಿಯನ್ ಸೋಷಿಯಲ್ ಫೋರಂ, ಐಎಸ್‌ಎಫ್ ಕರ್ನಾಟಕ ಚಾಪ್ಟರ್ ಬೈಶ್ ಸಂಘಟನೆ ಸಂತಾಪ ಸೂಚಿಸಿದ್ದು, ಅಗತ್ಯ ನೆರವು ನೀಡುತ್ತಿದೆ.

RECENT NEWS

9 ವರ್ಷಗಳ ಅನಂತಪದ್ಮನಾಭ ಸ್ವಾಮಿ ದೇಗುಲ ವಿವಾದ ಇತ್ಯರ್ಥ ಮಾಡಿದ ಸುಪ್ರೀಂ ಕೋರ್ಟ್..!

9 ವರ್ಷಗಳ ಅನಂತಪದ್ಮನಾಭ ಸ್ವಾಮಿ ದೇಗುಲ ವಿವಾದ ಇತ್ಯರ್ಥ ಮಾಡಿದ ಸುಪ್ರೀಂ ಕೋರ್ಟ್..! ನವದೆಹಲಿ : ಕೇರಳದ ತಿರುವನಂತಪುರದಲ್ಲಿರುವ ಪ್ರಸಿದ್ಧ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಆಡಳಿತ ಮತ್ತು ಪೂಜೆ ನಡೆಸುವ ಅಧಿಕಾರವನ್ನು ರಾಜಮನೆತನಕ್ಕೆ ವಹಿಸಿ...

ದ.ಕ‌ ಜಿಲ್ಲೆಯಲ್ಲಿ ಅರ್ಧಶತಕ ದಾಖಲಿಸಿದ ಕೊರೊನಾ ಸಾವಿನ ಸಂಖ್ಯೆ: ಇಂದು ಕೂಡ ಸ್ಪೋಟ 131 ಪ್ರಕರಣ ಪತ್ತೆ..!

ದ.ಕ‌ ಜಿಲ್ಲೆಯಲ್ಲಿ ಅರ್ಧಶತಕ ದಾಖಲಿಸಿದ ಕೊರೊನಾ ಸಾವಿನ ಸಂಖ್ಯೆ: ಇಂದು ಕೂಡ ಸ್ಪೋಟ 131 ಪ್ರಕರಣ ಪತ್ತೆ..! ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ ನಾಲ್ವರು ಸಾವನ್ನಪ್ಪಿದ್ದಾರೆ. ಈ ಮೂಲಕ ಕೊರೊನಾ...

ನಾಳೆ ಮಂಗಳವಾರ 11:30ಕ್ಕೆ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ..!

ನಾಳೆ ಮಂಗಳವಾರ 11:30ಕ್ಕೆ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ..! ಬೆಂಗಳೂರು : ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ  ನಾಳೆ ಮಂಗಳವಾರ  ಪ್ರಕಟವಾಗಲಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್...

ಉಡುಪಿ ಜಿಲ್ಲೆಗೆ ಸದ್ಯಕ್ಕೆ ಲಾಕ್ಡೌನ್ ಅಗತ್ಯವಿಲ್ಲ – ರಘುಪತಿ ಭಟ್

ಉಡುಪಿ : ಉಡುಪಿ ಜಿಲ್ಲೆ ಸದ್ಯಕ್ಕೆ ಲಾಕ್ಡೌನ್ ಅಗತ್ಯವಿಲ್ಲ ಅಂತ ಶಾಸಕ ರಘುಪತಿ ಭಟ್ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ಜನಜೀವನ ಈಗಷ್ಟೇ ಚೇತರಿಸಿಕೊಳ್ಳುತ್ತಿದೆ. ಮತ್ತೆ ಲಾಕ್ಡೌನ್ ಮಾಡಿದರೆ ಆರ್ಥಿಕತೆಯ ಮೇಲೆ ಭಾರಿ ಹೊಡೆತ ಬೀಳಲಿದೆ....
error: Content is protected !!