Home ಪ್ರಮುಖ ಸುದ್ದಿ ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ : ನಟೋರಿಯಸ್ ತ್ರಿಮೂರ್ತಿಗಳ ಬಂಧನ- 5.5 ಲಕ್ಷದ ಸೊತ್ತು ವಶ..!

ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ : ನಟೋರಿಯಸ್ ತ್ರಿಮೂರ್ತಿಗಳ ಬಂಧನ- 5.5 ಲಕ್ಷದ ಸೊತ್ತು ವಶ..!

ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ :ನಟೋರಿಯಸ್ ತ್ರಿಮೂರ್ತಿಗಳ ಬಂಧನ- 5.5 ಲಕ್ಷದ ಸೊತ್ತು ವಶ..!

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆ ಮನೆ ಲೂಟಿ ಮಾಡುತ್ತಿದ್ದ ನಟೋರಿಯಸ್‌ ಕಳ್ಳರ ಜಾಲವನ್ನು ಬೆಳ್ತಂಗಡಿ ಸರ್ಕಲ್‌ ಇನ್ಸ್‌ಪೆಕ್ಟರ್‌ ಅವರ ವಿಶೇಷ ತಂಡ ಭೇದಿಸಿದೆ.

ಈ ಸಂಬಂಧ ಮೂವರು ಅರೋಪಿಗಳನ್ನು ಬಂಧಿಸಿದ್ದು ಬಂಧಿತರಿಂದ ಚಿನ್ನ- ಬೆಳ್ಳಿ ಆಭರಣ, ವಾಹನ ಇತರ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಪೊಟ್ಟುಕೆರೆ ಎಂಬಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಮಾರುತಿ 800 ಕಾರನ್ನು ನಿಲ್ಲಿಸಿ ತಪಾಸಣೆ ನಡೆಸಿದಾಗ ಈ ಕೃತ್ಯ ಬಯಲಾಗಿದೆ.

ಆರೋಪಿಗಳಾದ ಮುಂಡಾಜೆಯ ಸತೀಶ ಆಲಿಯಾಸ್ ಸ್ಕಾರ್ಪಿಯೋ ಸತೀಶ, ಪುತ್ತೂರಿ ಆರ್ಯಾಪು ಗ್ರಾಮದ ರವಿ ಆಲಿಯಾಸ್ ಪುಟ್ಟು ರವಿ ಆಲಿಯಾಸ್‌ ಜೀತು, ಮತ್ತು ಮಂಗಳೂರು ಕುಡುಪು ಗ್ರಾಮದ ಹರೀಶ್ ಪೂಜಾರಿ ಎಂಬವರನ್ನು ಬಂಧಿಸಲಾಗಿದೆ.

ಆಪಾದಿತರುಗಳಿಂದ ಒಟ್ಟು 115 ಗ್ರಾಂ ತೂಕದ ಚಿನ್ನಾಭರಣಗಳು, ಒಟ್ಟು 61 ಗ್ರಾಂ ಬೆಳ್ಳಿಯ ಆಭರಣಗಳು, ಲ್ಯಾಪ್ ಟ್ಯಾಪ್ ಮತ್ತು ಮೊಬೈಲ್ ವಶಪಡಿಸಲಾಗಿದೆ.

ಆರೋಪಿಗಳು ಕೃತ್ಯಕ್ಕೆ ಉಪಯೋಗಿಸಿದ ಎರಡು ಮೊಟಾರು ಸೈಕಲ್ ಗಳು, ಒಂದು ಮಾರುತಿ 800 ಕಾರು ನಾಲ್ಕು ಮೊಬೈಲ್ ಗಳನ್ನು ವಶಪಡಿಕೊಳ್ಳಲಾಗಿದೆ.

ವಶಪಡಿಸಲಾದ ವಸ್ತುಗಳ ಒಟ್ಟು ಮೌಲ್ಯ ರೂಪಾಯಿ 5,50,000 ಎಂದು ಅಂದಾಜಿಲಾಗಿದೆ.

ಇವರ ಮೇಲೆ ವೇಣೂರು ಪೊಲೀಸ್ ಠಾಣೆ ಮತ್ತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ವಿವಿಧ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

- Advertisment -

RECENT NEWS

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ ಬಂಟ್ವಾಳ : ಲಾಕ್ ಡೌನ್ ಹೆಸರಿನಲ್ಲಿ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ...

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!?

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!? ಮಂಗಳೂರು : ಕೇರಳ ಗಡಿ ತೆರವಿನಿಂದ ಮಂಗಳೂರಿಗರಿಗೆ ಮತ್ತೆ ಆತಂಕ ಶುರುವಾಗಿದೆ. ಕಾಸರಗೋಡಿನಿಂದ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯಲ್ಲಿ...

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್ ನವದೆಹಲಿ : ಇನ್ನು ಮುಂದೆ ಕೊರೋನಾ ಸೋಂಕಿಗೆ ಸಂಬಂಧಿಸಿದ ಪರೀಕ್ಷೆಗಳು ಸಂಪೂರ್ಣ ಉಚಿತ. ಹೀಗೆಂತಾ ಸರ್ವೋಚ್ಚಾ ನ್ಯಾಯಾಲಯದ ಮಹತ್ವದ...

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..! ಬಂಟ್ವಾಳ : ಲಾಕ್ ಡೌನ್ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳರ ಕೈಚಳ ಮುಂದುವರೆದಿದೆ.ಬಂಟ್ವಾಳದ ಚರ್ಚ್ ಒಂದಕ್ಕೆ ನುಗ್ಗಿದ...