ಬೆಳ್ತಂಗಡಿಯ ಬಂದಾರು-ಕುಪ್ಪೆಟ್ಟಿ ರಸ್ತೆ ಬನಾರಿ ಎಂಬಲ್ಲಿ ಪಿಕಪ್ ವಾಹನವೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿದ್ದು, ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಜು.9ರಂದು ನಡೆದಿದೆ.
ಬೆಳ್ತಂಗಡಿ: ಬೆಳ್ತಂಗಡಿಯ ಬಂದಾರು-ಕುಪ್ಪೆಟ್ಟಿ ರಸ್ತೆ ಬನಾರಿ ಎಂಬಲ್ಲಿ ಪಿಕಪ್ ವಾಹನವೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿದ್ದು, ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಜು.9ರಂದು ನಡೆದಿದೆ.
ಮೃತರನ್ನು ಶುಂಠಿಪಲಿಕೆ ನಿವಾಸಿ ಅಬೂಬಕರ್ ಎಂದು ಗುರುತಿಸಲಾಗಿದೆ.
ಮೃತರ ಪತ್ನಿ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಅಪಘಾತದ ಪರಿಣಾಮ ದ್ವಿಚಕ್ರ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.
ಚಿಕಿತ್ಸೆ ಫಲಕಾರಿಯಾಗದೆ ನ. 26 ರಂದು ನಿ*ಧನ ಹೊಂದಿದ್ದಾರೆ. ಆ*ತ್ಮಹತ್ಯೆಗೆ ಸೂಕ್ತ ಕಾರಣವೇನೆಂದು ತಿಳಿದು ಬಾರದ ಹಿನ್ನಲೆ, ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಭಗವಾನ್ ಮಂಜುನಾಥ ಸ್ವಾಮಿಯ ದಿವ್ಯ ಸನ್ನಿಧಿಯಲ್ಲಿ ಕಾರ್ತಿಕ ಮಾಸದ ಶುಭ ಸಂದರ್ಭದಲ್ಲಿ ಲಕ್ಷ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಉಜಿರ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಿಂದ ಧರ್ಮಸ್ಥಳದವರೆಗೆ 12ನೇ ವರ್ಷದ ಪಾದಯಾತ್ರೆ ನ.26ರಂದು ಜರುಗಿತು. ತಾಲೂಕಿನ 81 ಗ್ರಾಮಗಳಿಂದ ಸುಮಾರು ಹತ್ತು ಸಾವಿರಕ್ಕೂ ಮಿಕ್ಕಿ ಸಂಖ್ಯೆಯಲ್ಲಿ ಭಕ್ತರು ಪಾದಯಾತ್ರೆಯಲ್ಲಿ ಭಾಗವಹಿಸಿದರು.
ಉಜಿರೆ ದೇವಸ್ಥಾನದ ವಠಾರದಲ್ಲಿ ಮಧ್ಯಾಹ್ನ ಶ್ರೀ ಭಗವಾನ್ ಶಿರಡಿಸಾಯಿ ಸತ್ಯಸಾಯಿ ಸೇವಾ ಕ್ಷೇತ್ರ ಹಳಕೋಟೆ ಬೆಳ್ತಂಗಡಿ ಇವರಿಂದ ಭಜನಾ ಸಂಕೀರ್ತನೆ ನಡೆಯಿತು. ಬಳಿಕ ಉಜಿರೆ ದೇವಸ್ಥಾನದ ಧ್ವಜಸ್ತಂಭದ ಬಳಿ ಶ್ರೀ ಜನಾರ್ಧನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡುವೆಟ್ನಾಯ ಅವರು ದೀಪ ಪುಜ್ವಲಿಸಿ ಪಾದಯಾತ್ರೆಗೆ ಚಾಲನೆ ನೀಡಿದರು.
ಶ್ರೀ ಮಂಜುನಾಥ ಸ್ವಾಮಿಯ ಭಾವಚಿತ್ರವುಳ್ಳ ಟ್ಯಾಬ್, ವಿವಿಧ ಯಕ್ಷಗಾನ ವೇಷ ಭೂಷಣಗಳು, ಭಜನಾ ತಂಡಗಳು, ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರು, ವಿಪತ್ತು ನಿರ್ವಹಣಾ ತಂಡ, ವಿವಿಧ ಸಂಘ ಸಂಸ್ಥೆಯವರು ಪಾದಯಾತ್ರೆಯಲ್ಲಿ ಶಿಸ್ತಿನಿಂದ ಭಾಗವಹಿಸಿದರು. ಚೆಂಡೆ, ವಾದ್ಯ, ಸಮವಸ್ತ್ರಧಾರಿ ಭಕ್ತರು, ಯಕ್ಷಗಾನ ವೇಷಧಾರಿಗಳು, ಭಜನಾ ತಂಡಗಳ ಕುಣಿತ ಭಜನೆ ಪಾದಯಾತ್ರೆಯಲ್ಲಿ ವಿಶೇಷ ಆಕರ್ಷಣೆಯಾಗಿತ್ತು.
ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಜನಜಾಗೃತಿ ವೇದಿಕೆ ಸ್ಮಾಪಕಾಧ್ಯಕ್ಷ ವಸಂತ ಸಾಲ್ಯಾನ್, ಯು.ಸಿ ಪೌಲೋಸ್, ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್, ನಿಕಟಪೂರ್ವ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಹೆಚ್ ಮಂಜುನಾಥ್, ಉಜಿರ ಲಕ್ಷ್ಮೀ ಗ್ರೂಪ್ ಮಾಲಕ ಮೋಹನ್ ಕುಮಾರ್, ಲಯನ್ಸ್ ಕ್ಲಬ್ ಪೂರಣ್ ವರ್ಮ, ಮಾಜಿ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ಸಿರಿಗ್ರಾಮೋದ್ಯೋಗ ಸಂಸ್ಥೆಯ ನಿರ್ದೇಶಕ ಕೆ.ಎನ್.ಜನಾರ್ದನ್, ನ್ಯಾಯವಾದಿ ಧನಂಜಯ್ ರಾವ್, ಅಖಿಲ ಕರ್ನಾಟಕ ಜಾಗೃತಿ ವೇದಿಕೆ ಅಧ್ಯಕ್ಷ ಕಾಸಿಂ ಮಲ್ಲಿಗೆ ಮನ, ಮಾಜಿ ಅಧ್ಯಕ್ಷ, ತಿಮ್ಮಪ್ಪ ಗೌಡ ಬೆಳಾಲು, ಡಿ.ಎ ರಹಿಮಾನ್, ಉದ್ಯಮಿ ಮೋಹನ ಶೆಟ್ಟಿಗಾರ್, ರಾಘವೇಂದ್ರ ನಾಯಕ್, ಕೊರಗಪ್ಪ ಗೌಡ ಚಾರ್ಮಾಡಿ, ಸೀತಾರಾಮ ಬೆಳಾಲ್, ರವೀಂದ್ರ ಶೆಟ್ಟಿ, ಬಳಂಜ, ಡಾ. ಶ್ರೀಧರ ಭಟ್, ರವಿ ಚಕ್ಕಿತ್ತಾಯ, ವಡಿವೇಲು ಗುರುವಾಯನಕೆರೆ, ಮಮತಾ ಶೆಟ್ಟಿ, ಅಡೂರು ವೆಂಕಟ್ರಾವ್, ಜಯಂತಿ ಪಾಲೇದು, ಗಣೇಶ್ ಗೌಡ,, ಪುಭಾಕರ ಪೂಸಂದೋಡಿ ವರ್ತಕರ ಸಂಘದ ಅಧ್ಯಕ್ಷ ಅರವಿಂದ ಕಾರಂತ್, ಬೂದಪ್ಪ ಗೌಡ, . ಉದ್ಯಮಿ ರಾಘವೇಂದ್ರ ಬೈಪಾಡಿತ್ತಾಯ, ವಿವೇಕ್ ವಿನ್ಸೆಂಟ್ ಪಾಯಿಸ್, ಮಮತಾ ಎಂ. ಶೆಟ್ಟಿ,, ಶ್ಯಾಮ್ ಸುಂದರ್ ನಡ, ಶಶಿಧರ ಕಲ್ಮಂಜ, ಅರುಣ್ ಕುಮಾರ್, ಡಾ. ಬಿ.ಎ ಕುಮಾರ ಹಗ್ಗ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ| ಶ್ರೀನಾಥ್, ನ್ಯಾಯವಾದಿ ಧನಂಜಯ್ ರಾವ್, ಅಡೂರು ವೆಂಕಟ್ರಾವ್,, ತಿಮ್ಮಪ್ಪ ಗೌಡ ಬೆಳಾಲು, ಪುಷ್ಪರಾಜ ಹೆಗ್ಡೆ ಮಡಂತ್ಯಾರು, ಉಜಿರ ಗ್ರಾ.ಪಂ ಅಧ್ಯಕ್ಷ ಮಾಜಿ ಅಧ್ಯಕ್ಷ ಪುಷ್ಪಾವತಿ ಆರ್ ಶೆಟ್ಟಿ, ವಿಠಲ ಶೆಟ್ಟಿ, ಲಾಯಿಲ, ಶಂಕರ ಹೇಡ, ಯೋಗೀಶ್ ಕುಮಾರ್ ನಡಕ್ಕರ, ಗಿರೀಶ್ ವೇಣೂರು, ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷರುಗಳಾದ ಡಿ.ಎ ರಹಿಮಾನ್, ತಿಮ್ಮಪ್ಪ ಗೌಡ, ಕಿಶೋರ್ ಹಗ್ಡೆ, ಪುಷ್ಪರಾಜ ಹಗ್ಡೆ ಮಡಂತ್ಯಾರು, ರತ್ನವರ್ಮ ಬುಣು, ಪ್ರಶಾಂತ ಪಾರಂಕಿ, ದುಗೇಗೌಡ, ತಾಲೂಕು ಯೋಜನಾಧಿಕಾರಿಗಳು, ತಾಲೂಕಿನ ಗಣ್ಯರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ೧೫ ವಲಯ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಒಕ್ಕೂಟಗಳ ಪದಾಧಿಕಾರಿಗಳು, ಜ್ಞಾನವಿಕಾಸ ಕೇಂದ್ರದ ಸದಸ್ಯರು, ನಾಗರಿಕರು, ಹಗಡೆ ಅಭಿಮಾನಿಗಳು ಮರವಣಿಗೆಯ ಜೊತ ಸಾಗಿದರು.
ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಭಗವಾನ್ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಸಂಭ್ರಮವು ಇಂದಿನಿಂದ ಆರಂಭಗೊಳ್ಳಲಿದೆ. ಬೆಳಿಗ್ಗೆ 10.30 ಗಂಟೆಗೆ ಎಸ್ ಪಿ ಯತೀಶ್ ಎನ್. ಧರ್ಮಸ್ಥಳ ಪ್ರೌಢಶಾಲಾ ವಠಾರದಲ್ಲಿ ರಾಜ್ಯಮಟ್ಟದ ವಸ್ತು ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ.
ಧರ್ಮಸ್ಥಳದಲ್ಲಿ ನ. 26ರಂದು ಹೊಸ ಕಟ್ಟೆ ಉತ್ಸವ, 27ರಂದು ಕೆರೆಕಟ್ಟೆ ಉತ್ಸವ, 28ರಂದು ಲಲಿತೋದ್ಯಾನ ಉತ್ಸವ, 29ರಂದು ಕಂಚಿ ಮಾರುಕಟ್ಟೆ ಉತ್ಸವ, 30ರಂದು ಗೌರಿ ಮಾರುಕಟ್ಟೆ ಉತ್ಸವ (ಲಕ್ಷದೀಪೋತ್ಸವ) ನಡೆಯಲಿದೆ.
ಡಿ.1ರಂದು ಸಂಜೆ 6.30ಕ್ಕೆ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣಪೂಜೆ ನಡೆಯಲಿದೆ. ನ. 28 ರಂದು ಅಮೃತವರ್ಷಿಣಿ ಸಭಾಭವನದಲ್ಲಿ ಸಂಜೆ 5:30 ರಿಂದ ನಾಗಸ್ವರ ವಾದನ, 7 ಗಂಟೆಯಿಂದ ಸಾತ್ವಿಕ ಸಂಗೀತ, ನೃತ್ಯಾರ್ಚನೆ, ನೃತ್ಯ ರೂಪಕ ಇತ್ಯಾದಿ ಕಾರ್ಯಕ್ರಮಗಳು ಜರುಗಲಿವೆ.
ಸರ್ವಧರ್ಮ ಸಮ್ಮೇಳನ
ಅಮೃತವರ್ಷಿಣಿ ಸಭಾಭವನದಲ್ಲಿ ನ. 29ರಂದು ಸಂಜೆ 5ಗಂಟೆಯಿಂದ ಸರ್ವ ಧರ್ಮ ಸಮ್ಮೇಳನದ 92ನೇ ಅಧಿವೇಶನ ನಡೆಯಲಿದ್ದು ರಾಜ್ಯ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಉದ್ಘಾಟಿಸುವರು. ಬೆಂಗಳೂರು ರಾಜರಾಜೇಶ್ವರಿ ನಗರದ ಶ್ರೀ ಕೈಲಾಸ ಆಶ್ರಮ ಮಹಾ ಸಂಸ್ಥಾನದ ಶ್ರೀ ಜಯೇಂದ್ರ ಪುರಿ ಮಹಾಸ್ವಾಮೀಜಿ ಅಧ್ಯಕ್ಷತೆ ವಹಿಸುವರು. ಸಂಶೋಧಕ ಡಾ. ಜಿ. ಬಿ. ಹರೀಶ, ಡಾಕ್ಟರ್ ಜೋಸೆಫ್ ಎನ್ ಎಂ, ಮೆಹತಾಬ ಇಬ್ರಾಹಿಂ ಸಾಬ ಕಾಗವಾಡ ಅವರಿಂದ ಉಪನ್ಯಾಸ ಬಳಿಕ ಭರತನಾಟ್ಯ ಕಾರ್ಯಕ್ರಮ ಇರಲಿದೆ.
ಸಾಹಿತ್ಯ ಸಮ್ಮೇಳನ
ನ. 30ರಂದು ಸಂಜೆ 5 ಗಂಟೆಗೆ ಅಮೃತವರ್ಷಿಣಿ ಸಭಾಭವನದಲ್ಲಿ ಸಾಹಿತ್ಯ ಸಮ್ಮೇಳನದ 92ನೇ ಅಧಿವೇಶನ ನಡೆಯಲಿದ್ದು, ಬೆಂಗಳೂರು ಬಹುಶ್ರುತ ವಿದ್ವಾಂಸ ಶತಾವಧಾನಿ ಡಾ.ರಾ. ಗಣೇಶ ಉದ್ಘಾಟಿಸುವರು. ಲೇಖಕ ಸಂಶೋಧಕ ಡಾ. ಪಾದೆಕಲ್ಲು ವಿಷ್ಣುಭಟ್ಟ ಅಧ್ಯಕ್ಷತೆ ವಹಿಸುವರು. ಬಳಿಕ ಡಾ. ಪ್ರಮೀಳಾ ಮಾಧವ, ಡಾ.ಬಿ.ವಿ. ವಸಂತ ಕುಮಾರ್ ಪ್ರೊ. ಮೊರಬದ ಮಲ್ಲಿಕಾರ್ಜುನ ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ರಾತ್ರಿ 8.30 ರಿಂದ ರಾಜೇಶ್ ಕೃಷ್ಣನ್ ಮತ್ತು ತಂಡದಿಂದ ಸಂಗೀತ ಕಾರ್ಯಕ್ರಮವಿದೆ. ಪ್ರತಿದಿನ ಸಂಜೆ 6:30 ರಿಂದ ರಾತ್ರಿ 11 ಗಂಟೆವರೆಗೆ ವಸ್ತು ಪ್ರದರ್ಶನ ಮಂಟಪ ಹಾಗೂ ಅಮೃತವರ್ಷಿಣಿ ವೇದಿಕೆಯಲ್ಲಿ ಸಾಂಸ್ಕೃತಿಕ, ಸಂಗೀತ ಹಬ್ಬ ನಡೆಯಲಿದೆ.