Connect with us

    BELTHANGADY

    ಮಳೆ ಅಬ್ಬರ: ದಕ್ಷಿಣ ಕನ್ನಡ ಜಿಲ್ಲೆಯ ಈ ಪ್ರವಾಸಿ ತಾಣಗಳಿಗೆ ನೋ ಎಂಟ್ರಿ

    Published

    on

    ಮಂಗಳೂರು: ಕರಾವಳಿ ಸೇರಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕೆಲ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.

    ವನ್ಯಜೀವಿ ವಲಯದ ವ್ಯಾಪ್ತಿಗೆ ಬರುವ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ. ಬೆಟ್ಟಗಳು, ಜಲಪಾತಗಳ ಬಳಿ ತೆರಳದಂತೆ ಪ್ರವಾಸಿಗರಿಗೆ ಸೂಚನೆ ನೀಡಲಾಗಿದೆ.

    ಬೆಳ್ತಂಗಡಿ ತಾಲೂಕಿನ ಜಮಲಾಬಾದ್ (ಗಡಾಯಿಕಲ್ಲು) ಬೆಟ್ಟ, ಅರಿಶಿನಗುಂಡಿ, ಕೂಡ್ಲು, ಬರ್ಕಳ, ಹಿಡ್ಲುಮನೆ, ವನಕಬ್ಬಿ, ಬಂಡಾಜೆ ಫಾಲ್ಸ್ ಸೇರಿದಂತೆ ಕೆಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಬೆಳ್ತಂಗಡಿ ಆರ್​ಎಫ್​​ಒಗೆ ಕುದುರೆಮುಖ ಸಿಎಫ್ ಆದೇಶ ಹೊರಡಿಸಿದ್ದಾರೆ.

    BELTHANGADY

    ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾ*ವು..!

    Published

    on

    ಉಡುಪಿ: 10ನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಮೃತಪಟ್ಟ ಘಟನೆ ಉಡುಪಿಯ ಪಳ್ಳಿ ದಾದಬೆಟ್ಟು ಎಂಬಲ್ಲಿ ಬುಧವಾರ(ಜು.03) ಸಂಭವಿಸಿದೆ. ಪಳ್ಳಿ ದಾದಬೆಟ್ಟು ಜಯರಾಮ ಆಚಾರ್ಯ ಮತ್ತು ಚಂದ್ರಿಕಾ ಅವರ ಪುತ್ರಿ ಭಾಗ್ಯಶ್ರೀ (16) ಮೃತ ದುರ್ದೈವಿ.

    ಗೋಡೆ ಕುಸಿದು ಮಣ್ಣಿನಡಿಗೆ ಸಿಲುಕಿದ ಇಬ್ಬರು ಕಾರ್ಮಿಕರು..!

    ಈಕೆ ಮೂಡುಬೆಳ್ಳೆ ಸಂತ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿಯಾಗಿದ್ದಾಳೆ. ಬೆಳಿಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಕೆಯನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಈಕೆಗೆ ಹೃದಯ ಸಂಬಂಧಿ ಕಾಯಿಲೆ ಇತ್ತೆಂದು ತಿಳಿದುಬಂದಿದೆ. ಭಾಗ್ಯಶ್ರೀ ನಿಧನಕ್ಕೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಶಿಕ್ಷಕರು, ವಿದ್ಯಾರ್ಥಿ ವೃಂದದವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಗೌರವಾರ್ಥ ಶಾಲೆಗೆ ರಜೆ ನೀಡಲಾಗಿತ್ತು.

    Continue Reading

    BANTWAL

    ಮುಂದುವರಿದ ಮಳೆ; ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ

    Published

    on

    ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ಘೋಷಿಸಿದೆ. ಇನ್ನು ಮಳೆಯ ಕಾರಣ ಬಂಟ್ವಾಳ, ಬೆಳ್ತಂಗಡಿ ತಾಲೂಕಿನ ಎಲ್ಲ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

    ತೋಡು ಹಳ್ಳ ಕೈಸೇತುವೆಗಳನ್ನು ದಾಟಿ ಶಾಲೆಗೆ ಹಲವಾರು ವಿದ್ಯಾರ್ಥಿಗಳು ಬರುತ್ತಿರುವ ಕಾರಣ ಇಂದು ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ಆದೇಶಿಸಿದ್ದಾರೆ.

    ಇದನ್ನೂ ಓದಿ : ‘ಪೆಂಡ್ರೈವ್‌’ನಲ್ಲಿ ಬಿಗ್‌ಬಾಸ್‌ ತನಿಷಾ ಕುಪ್ಪಂಡ..!

    Continue Reading

    BELTHANGADY

    ಹಿರಿಯ ಸಾಹಿತಿ, ವಿಶ್ರಾಂತ ಪ್ರಧ್ಯಾಪಕ ಪ್ರೊ. ಎನ್.ಜಿ ಪಟವರ್ಧನ್ ಅಸ್ತಂಗತ

    Published

    on

    ಬೆಳ್ತಂಗಡಿ; ತಾಲೂಕಿನ ಹಿರಿಯ ಸಾಹಿತಿ, ಉಜಿರೆ ಎಸ್ ಡಿ ಎಂ ಕಾಲೇಜಿನ ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಪ್ರೊ. ಎನ್ ಜಿ ಪಟವರ್ಧನ್ ಅವರು ಅಲ್ಪ ಕಾಲದ ಅಸೌಖ್ಯದಿಂದಾಗಿ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಜು.1 ರಂದು ಕೊನೆಯುಸಿರೆಳೆದಿದ್ದಾರೆ.

    ಮುಂಡಾಜೆ ಗ್ರಾಮದ ಮೂಲಾರು ಎಂಬಲ್ಲಿ ಮೂಲ ಮನೆ ಹೊಂದಿದ್ದ‌ ಅವರು ಕಳೆದ ಅನೇಕ ವರ್ಷಗಳಿಂದ ಉಜಿರೆಯಲ್ಲಿ ನೆಲೆಸಿದ್ದರು.
    ಚಿತ್ಪಾವನ ಸಮಾಜದ ಹಿರಿಯರೂ ಆಗಿದ್ದ ಅವರು ಹಲವು ಕಥೆ, ಕವನ, ವಿಮರ್ಷೆ ರಚನಾಕರ್ತರಾಗಿದ್ದರು‌. ಅವರ ಹಲವು ಕೃತಿಗಳು ಸಾಹಿತ್ಯ ಲೋಕಕ್ಕೆ ಸಮರ್ಪಿತ ವಾಗಿತ್ತು.
    ಉತ್ತಮ ಶೋತೃ ಹಾಗೂ ಸಾಹಿತ್ಯ ವಿಷಯಾಸಕ್ತಿ ಹೊಂದಿದ್ದ ಅವರು ಹಲವಾರು ಯುವ ಬರಹಗಾರರ ಬರಹಗಳ ಬಗ್ಗೆ ವಿಮರ್ಷೆ ಬರೆದು ಆ ಮೂಲಕ ಅವರನ್ನು ಪ್ರೋತ್ಸಾಹಿಸುತ್ತಿದ್ದರು. ಬೆಳ್ತಂಗಡಿ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿದ್ದ ತಾಲೂಕು ಮಟ್ಟದ ಸಮ್ಮೇಳನದ ಅಧ್ಯಕ್ಷರೂ ಆಗಿದ್ದರು. ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ದೀರ್ಘ ವರ್ಷ ಅಂಕಣಗಳನ್ನೂ ಪ್ರಕಟಿಸುತ್ತಿದ್ದರು.

    Continue Reading

    LATEST NEWS

    Trending