Baindooru
ಹೊಸ ಟ್ರೆಂಡ್‌ನ ಪ್ಯಾಂಟ್ ಧರಿಸಿದ ಯುವಕ; ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Published
2 weeks agoon
By
NEWS DESK2ಬೆಳ್ತಂಗಡಿ: ಯುವಕನೊಬ್ಬತನ್ನ ವಿನೂತನ ಶೈಲಿಯ ಜೀನ್ಸ್ ಪ್ಯಾಂಟ್ ಧರಿಸಿ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಗೆ ಬಂದಾಗ ಮೂವರು ಸೇರಿ ಆತನನ್ನು ತಡೆದು ಎರಡು ಕೈಗಳನ್ನು ಲಾಕ್ ಮಾಡಿ ಪ್ಯಾಂಟ್ ಗೆ ಗೋಣಿಚೀಲದ ಸೂಜಿಯಿಂದ ಹೊಲಿದು ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರಿಂದ ನೋಂದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನ.22ರ ಶುಕ್ರವಾರ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಪಣಕಜೆ ನಿವಾಸಿ ಮುಹಮ್ಮದ್ ಹಾಯಿಫ್ ಎಂಬವರ ಪುತ್ರ ಶಾಹಿಲ್(21) ಆತ್ಮಹತ್ಯೆಗೆ ಯತ್ನಿಸಿದ ಯುವಕ.
ಈತನ ವಿಡಿಯೋ ವೈರಲ್ ಆಗುತ್ತಲೇ, ತನ್ನ ಸ್ನೇಹಿತರು ಯುವಕನಿಗೆ ವಿಡಿಯೋ ಕಳುಹಿಸಿದ್ದಾರೆ. ಇದರಿಂದ ಮನನೊಂದ ಸಂಜೆ ವೇಳೆಗೆ ಆತ್ಮಹತ್ಯೆಗೆ ಯತ್ನಿಸಿ ಜೀವಣ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾನೆ ಎಂದು ತಿಳಿದು ಬಂದಿದೆ.
ನವೀನ ಮಾದರಿಯ ಜೀನ್ಸ್ ಪ್ಯಾಂಟ್ ಹರಿದ ರೀತಿಯಲ್ಲಿತ್ತು. ಅದನ್ನು ಧರಿಸಿ ನ.21 ರಂದು ಮಧ್ಯಾಹ್ನ ಬೆಳ್ತಂಗಡಿ ನಗರದಲ್ಲಿರುವ ಸಂತೆಕಟ್ಟೆ ಮಾರುಕಟ್ಟೆಗೆ ಬಂದಿದ್ದ. ಮಾರುಕಟ್ಟೆಯಲ್ಲಿದ್ದ ಪಡ್ಡೆ ಹುಡುಗರ ತಂಡವೊಂದು ಆತನನ್ನು ಸಾರ್ವಜನಿಕವಾಗಿ ಎರಡು ಕೈಗಳನ್ನು ಹಿಂದಕ್ಕೆ ಹಿಡಿದು ಬಲವಂತದಿಂದ ಹಿಡಿದಿಟ್ಟು ಆತನ ಪ್ಯಾಂಟನ್ನು ಗೋಣಿ ಹೊಲಿಯುವ ಸೂಜಿಯಿಂದ ಹೊಲಿದು ಜತೆಗೆ ಮೊಬೈಲ್‌ನಲ್ಲಿ ವೀಡಿಯೊ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿ ಹರಿಯಬಿಟ್ಟಿದ್ದರು.
ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಪುತ್ರಬೈಲು ನಿವಾಸಿ ಶಬಿರ್, ಅನೀಶ್ ಪಣಕಜೆ, ಲಾಯಿಲ ಗ್ರಾಮದ ಆದರ್ಶ ನಗರದ ನಿವಾಸಿ ಸಲೀಂ ಎಂಬವರು ಸೇರಿ ಈ ದುಷ್ಕ್ರತ್ಯ ನಡೆಸಿದ್ದಾರೆ ಎನ್ನಲಾಗಿದೆ.
ವಿಡಿಯೋ ಮಾಡಿ ಟ್ರೋಲ್ ಮಾಡಿದರಿಂದ ಮಾನಸಿಕವಾಗಿ ನೊಂದ ಶಾಹಿಲ್ ನ.21 ರಂದು ಸಂಜೆ ಮನೆಯಲ್ಲಿ ಯಾವುದೋ ವಿಷ ಪದಾರ್ಥ ಸೇವಿಸಿ ಆತ್ಮಹತ್ಯಗೆ ಯತ್ನಿಸಿದ್ದು, ತಕ್ಷಣ ಮನೆಯವರು ಚಿಕಿತ್ಸೆಗಾಗಿ ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದ್ದಾರೆ. ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈ ಘಟಣೆ ಬಗ್ಗೆ ಸಾರ್ವಜನಿಕರು ಈ ಮೂವರನ್ನು ಪುಂಡರ ವಿರುದ್ಧ ಕಠಿನ ಕ್ರಮಕೈಗೊಳ್ಳಲು ಪೊಲೀಸ್ ಇಲಾಖೆಗೆ ಮನವಿ ಮಾಡಿದ್ದಾರೆ.
Baindooru
3ಕ್ಕೆ 3 ಸೋಲು.. ಮನೆಯಲ್ಲಿನ TV ಒಡೆದು ಹಾಕಿದ ಬಿಜೆಪಿ ನಿಷ್ಠಾವಂತ ಕಾರ್ಯಕರ್ತ
Published
2 weeks agoon
23/11/2024By
NEWS DESK2ವಿಜಯಪುರ: ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದೆ. 3ಕ್ಕೆ 3 ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದು, ಕೈ ನಾಯಕರ ಆತ್ಮವಿಶ್ವಾಸ ಹೆಚ್ಚಾಗಿದೆ. ಮೂರು ಉಪಚುನಾವಣೆ ಗೆದ್ದ ಕಾಂಗ್ರೆಸ್ ನಾಯಕರು ವಿಜಯೋತ್ಸವದಲ್ಲಿ ಬ್ಯುಸಿಯಾಗಿದ್ದಾರೆ.
ಕಾಂಗ್ರೆಸ್ ಗೆಲುವಿನ ಅಲೆಯಲ್ಲಿ ತೇಲುತ್ತಿದ್ದರೆ ಬಿಜೆಪಿ ನಾಯಕರಿಗೆ ಬಹಳ ದೊಡ್ಡ ನಿರಾಸೆಯಾಗಿದೆ. ಬಿಜೆಪಿ ನಾಯಕರು ನಿರೀಕ್ಷೆ ಮಾಡದ ತೀರ್ಪನ್ನು ಮೂರು ವಿಧಾನಸಭಾ ಕ್ಷೇತ್ರದ ಮತದಾರರು ನೀಡಿದ್ದು ಆತ್ಮಾವಲೋಕನ ಮಾಡಿಕೊಳ್ಳುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಸೋಲು ನಿಷ್ಠಾವಂತ ಕಾರ್ಯಕರ್ತರಿಗೆ ತೀವ್ರ ಬೇಸರಕ್ಕೆ ಕಾರಣವಾಗಿದೆ.
ಬೈಎಲೆಕ್ಷನ್ ಫಲಿತಾಂಶ ಹೊರ ಬೀಳುತ್ತಿದ್ದಂತೆ ಬಿಜೆಪಿ ನಿಷ್ಠಾವಂತ ಕಾರ್ಯಕರ್ತ ಮನೆಯಲ್ಲಿನ ಟಿವಿ ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋಲ್ಹಾರ ಪಟ್ಟಣದ ವೀರಭದ್ರಪ್ಪ ಬಾಗಿ ಎಂಬುವವರು ಇಂದು ಬೆಳಗ್ಗೆಯಿಂದ ಉಪಚುನಾವಣಾ ಫಲಿತಾಂಶವನ್ನು ಟಿವಿಯಲ್ಲಿ ನೋಡುತ್ತಾ ಇದ್ದರು. 3ಕ್ಕೆ 3 ಕ್ಷೇತ್ರದಲ್ಲಿ ಬಿಜೆಪಿ ಸೋಲುತ್ತಿದ್ದಂತೆ ಟಿವಿ ಒಡೆದು ರಾಜ್ಯ ಬಿಜೆಪಿ ನಾಯಕರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ನಾಯಕರ ಒಗ್ಗಟ್ಟಿನ ಕೊರತೆಯಿಂದ ಉಪಚುನಾವಣೆಯಲ್ಲಿ ಪಕ್ಷಕ್ಕೆ ಹೀನಾಯ ಸೋಲಾಗಿದೆ. ಬಿಜೆಪಿ ವರಿಷ್ಠರು ಮೊದಲು ಬಿಜೆಪಿ ನಾಯಕರು, ಮುಖಂಡರ ಸಭೆ ಕರೆಯಬೇಕು. ಬಿಜೆಪಿ ನಾಯಕರ ನಡುವಿನ ಒಡಕಿನಿಂದ ಕಾರ್ಯಕರ್ತರು ಹಾಳಾಗುವ ಪರಿಸ್ಥಿತಿ ಬಂದಿದೆ ಎಂದು ವೀರಭದ್ರಪ್ಪ ಬಾಗಿ ಆಗ್ರಹಿಸಿದ್ದಾರೆ.
Baindooru
ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: KSRTC ಬಸ್ಸಿನಲ್ಲಿ ‘UPI’ ಮೂಲಕ ಟಿಕೆಟ್ ಖರೀದಿಸಲು ಅವಕಾಶ
Published
2 weeks agoon
23/11/2024By
NEWS DESK2ಬೆಂಗಳೂರು : ಇಷ್ಟು ದಿನ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಜನರು ನಗದು ಹಣ ನೀಡಿ ಟಿಕೆಟ್ ಪಡೆಯುತ್ತಿದ್ದರು. ಈ ವೇಳೆ ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವೆ ಚಿಲ್ಲರೆ ವಿಷಯವಾಗಿ ಗಲಾಟೆ ನಡೆಯುತ್ತಿತ್ತು. ಆದರೆ ಇದೀಗ ಪ್ರಯಾಣಿಕರ ಬೇಡಿಕೆಯಂತೆ ಕೆಎಸ್ಆರ್ಟಿಸಿಯು ಇನ್ನು ಮುಂದೆ ಬಸ್ಗಳಲ್ಲಿ ಯುಪಿಐ ಮೂಲಕ ಹಣ ಪೇ ಮಾಡಿ ಟಿಕೆಟ್ ಪಡೆದುಕೊಳ್ಳುವ ಅವಕಾಶವನ್ನು ಕಲ್ಪಿಸಿದೆ.
ಹೌದು ಪ್ರಯಾಣಿಕರ ಬಹುದಿನಗಳ ಬೇಡಿಕೆಯಂತೆ ಇದೀಗ KSRTC ಸಂಸ್ಥೆಯು ಒಂದು ಹೆಜ್ಜೆ ಮುಂದೆ ಹೋಗಿ, ದುಡ್ಡು ಕೊಟ್ಟು ಚಿಲ್ಲರೆ ವಿಚಾರವಾಗಿ ಕಂಡಕ್ಟರ್ ಜೊತೆಗೆ ಸಣ್ಣಪುಟ್ಟ ಕಿರಿಕ್ ಆಗುತ್ತಿದ್ದವು. ಆದರೆ ಇದೀಗ ಆ ಚಿಂತೆ ಬಿಟ್ಟುಬಿಡಿ. ಡೈನಮಿಕ್ ಕ್ಯೂಆರ್ ಕೋಡ್ ಮೂಲಕ ಹಣ ಪಾವತಿ ಮಾಡಬಹುದಾಗಿದೆ. ರಾಜ್ಯದ 8800 ಬಸ್ಗಳಲ್ಲಿ ಯುಪಿಐ ಮೂಲಕ ಹಣ ಪಾವತಿಸಬಹುದಾಗಿದೆ
ಆನ್ಲೈನ್ ಹಣ ಸಂದಾಯ ಮಾಡುವ ಆಪ್ ಗಳಾದ ಗೂಗಲ್ ಪೇ, ಫೋನ್ ಪೇ, ಪೇಟಿಎಂ ಹಾಗೂ ಭೀಮ್ ಆಪ್ ಮೂಲಕ ಹಣ ಪಾವತಿಸಬಹುದಾಗಿದೆ. ಮುಂದಿನ ದಿನಗಳಲ್ಲಿ ಎಟಿಎಂ ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್ ಗಳಲ್ಲೂ ಹಣ ಸ್ವೀಕರಿಸಲಾಗುತ್ತದೆ ಎಂದು ಕರ್ನಾಟಕ ರಸ್ತೆ ಸಾರಿಗೆ ನಿಗಮವು ಪ್ರಕಟಣೆಯಲ್ಲಿ ತಿಳಿಸಿದೆ.
Baindooru
ಜಾರ್ಖಂಡ್‌ನಲ್ಲಿ ಬಿಗ್ ಟ್ವಿಸ್ಟ್; ಜೆಎಂಎಂ ಮುನ್ನಡೆ – ಎನ್‌ಡಿಎ ಹಿಂದಿಕ್ಕಿದ ಇಂಡಿಯಾ ಒಕ್ಕೂಟ
Published
2 weeks agoon
23/11/2024By
NEWS DESK2ರಾಂಚಿ: ಜಾರ್ಖಂಡ್‌ನಲ್ಲಿ ಆಡಳಿತಾರೂಢ ಜೆಎಂಎಂ, ಕಾಂಗ್ರೆಸ್ ಮತ್ತು ಆರ್‌ಜೆಡಿ ಒಳಗೊಂಡ ‘ಇಂಡಿಯಾ’ ಮೈತ್ರಿಕೂಟ ವಿಧಾನಸಭಾ ಚುನಾವಣೆಯಲ್ಲಿ ಬಹುಮತದ ಗಡಿ ದಾಟಿದೆ.
ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಾರಂಭವಾದ ನಂತರ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿತು. ಆದರೆ, ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಜೆಎಂಎಂ ಮತ್ತೆ ಸರ್ಕಾರ ರಚಿಸುವ ವಿಶ್ವಾಸದಲ್ಲಿದೆ. ಬೆಳಗ್ಗೆ 10.30ಕ್ಕೆ ರಾಜ್ಯದ 81 ಸ್ಥಾನಗಳ ಪೈಕಿ 51ರಲ್ಲಿ ಇಂಡಿಯಾ ಮೈತ್ರಿಕೂಟ ಮುಂದಿದೆ. 28 ಕ್ಷೇತ್ರಗಳಲ್ಲಿ ಎನ್‌ಡಿಎ ಮುನ್ನಡೆ ಸಾಧಿಸಿದೆ.
ಜಾರ್ಖಂಡ್ ವಿಧಾನಸಭೆಗೆ ಬಹುಮತಕ್ಕೆ 41 ಸ್ಥಾನಗಳು ಅಗತ್ಯವಿದೆ. ರಾಜ್ಯಕ್ಕೆ ನ.13 ರಂದು ಮೊದಲ ಹಂತದ ಮತದಾನವು 43 ಕ್ಷೇತ್ರಗಳಿಗೆ ಹಾಗೂ ಎರಡನೇ ಹಂತದಲ್ಲಿ 38 ಸ್ಥಾನಗಳಿಗೆ ಮತದಾನ ನಡೆದಿತ್ತು.
ಮ್ಯಾಟ್ರಿಜ್ ಪ್ರಕಾರ, ಎನ್‌ಡಿಎ 42-47 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿತ್ತು. ಜೆಎಂಎಂ ನೇತೃತ್ವದ ಮೈತ್ರಿಕೂಟವು 25-30 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಳ್ಳಬಹುದು ಎಂದು ಸಮೀಕ್ಷೆಗಳು ಹೇಳಿತ್ತು. ಆದರೆ, ಬಹುಪಾಲು ಸಮೀಕ್ಷೆಗಳು ಉಲ್ಟ ಆದಂತಿದೆ. ಆದಾಗ್ಯೂ, ಆಕ್ಸಿಸ್ ಮೈ ಇಂಡಿಯಾ ಮತ್ತು ಪಿ ಮಾರ್ಕ್ ಸಮೀಕ್ಷೆ ಭಿನ್ನವಾಗಿತ್ತು. ಜೆಎಂಎಂ ನೇತೃತ್ವದ ಇಂಡಿಯಾ ಬ್ಲಾಕ್ 49-59 ಮತ್ತು ಎನ್‌ಡಿಎ ಮೈತ್ರಿಕೂಟ 37-47 ಸ್ಥಾನ ಪಡೆಯಬಹುದು ಎಂದು ಅಂದಾಜಿಸಿದ್ದವು. ಬಹುಪಾಲು ಇದು ನಿಜವಾದಂತೆ ಕಾಣುತ್ತಿದೆ.