Connect with us

    ಪೆಟ್ರೋಲ್​ ಬಂಕ್​ನಲ್ಲಿ ನಡುರಾತ್ರಿ ಹೊತ್ತಿ ಉರಿದ ಬಸ್ ತಪ್ಪಿದ ಭಾರೀ ಅನಾಹುತ

    Published

    on

    ಪೆಟ್ರೋಲ್​ ಬಂಕ್​ನಲ್ಲಿ ನಡುರಾತ್ರಿ ಹೊತ್ತಿ ಉರಿದ ಬಸ್ ತಪ್ಪಿದ ಭಾರೀ ಅನಾಹುತ

    ಬೆಂಗಳೂರು : ಏಕಾಏಕಿ ಬೆಂಕಿ ಹತ್ತಿಕೊಂಡ ಪರಿಣಾಮ ಖಾಸಾಗಿ ಬಸ್ಸೊಂದು ಹೊತ್ತು ಉರಿದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ನಡೆದಿದೆ.

    ನಗರದ ಮಡಿವಾಳದ ಭಾರತ್ ಪೆಟ್ರೋಲ್ ಬಂಕ್​ಗೆ ಡೀಸೆಲ್ ಹಾಕಿಸಿಕೊಳ್ಳಲು ಬಂದಿದ್ದ ಚಾಲಕ ಬಸ್​​ ಸ್ಟಾರ್ಟ್​ ಮಾಡುತ್ತಿದ್ದಂತೆ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

    ಪರಿಣಾಮ ಬಸ್‌ ಕ್ಷಣಾರ್ಧದಲ್ಲಿ ಹೊತ್ತಿ ಉರಿದಿದೆ. ಪ್ರಯಾಣಿಕರೆಲ್ಲರೂ ಆತುರಾತುರವಾಗಿ ಕೆಳಗೆ ಇಳಿದ ಪರಿಣಾಮ ಯಾವುದೇ ಅನಾಹುತ ಸಂಭವಿಸಿಲ್ಲ.
    ಘಟನೆಯ ವಿವರ : 34 ಜನರು ಪ್ರಯಾಣಿಸುತ್ತಿದ್ದ ಎಂಎಸ್​ಎಸ್​ ಎಂಬ ಖಾಸಗಿ ಬಸ್​ ಬೆಂಗಳೂರಿನಿಂದ ಕೊಯಮತ್ತೂರಿಗೆ ಹೊರಟಿತ್ತು. ನಿನ್ನೆ ರಾತ್ರಿ 11 ಗಂಟೆಗೆ ಮಡಿವಾಳದ ಭಾರತ್ ಪೆಟ್ರೋಲ್ ಬಂಕ್​ಗೆ ಡೀಸೆಲ್ ಹಾಕಿಸಿಕೊಳ್ಳಲು ಬಂದಿದ್ದ ಚಾಲಕ ಬಸ್​​ ಸ್ಟಾರ್ಟ್​ ಮಾಡುತ್ತಿದ್ದಂತೆ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಬಸ್ ಚಾಲಕ ಎಲ್ಲ ಪ್ರಯಾಣಿಕರಿಗೂ ಇಳಿಯುವಂತೆ ಸೂಚನೆ ನೀಡಿದ್ದಾರೆ.ಬೆಂಕಿ ಹೊತ್ತಿಕೊಂಡಿರುವ ವಿಷಯ ತಿಳಿಯುತ್ತಿದ್ದಂತೆ ಬಸ್​ನಲ್ಲಿದ್ದ ಎಲ್ಲರೂ ಆತುರಾತುರವಾಗಿ ಬಸ್​ನಿಂದ ಕೆಳಗೆ ಇಳಿದಿದ್ದಾರೆ. ಬಸ್​ನಲ್ಲಿ ಒಟ್ಟು 34 ಪ್ರಯಾಣಿಕರಿದ್ದರು.ಪ್ರಯಾಣಿಕರೆಲ್ಲರೂ ಬಸ್​ನಿಂದ ಇಳಿಯುತ್ತಿದ್ದಂತೆ ಬಸ್ ಜೋರಾಗಿ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Click to comment

    Leave a Reply

    Your email address will not be published. Required fields are marked *

    International news

    ಕಝಕಿಸ್ತಾನ ವಿಮಾನ ದುರಂತ: ಅಝರ್ ಬೈಜಾನ್ ಅಧ್ಯಕ್ಷರಿಗೆ ಕ್ಷಮೆಯಾಚಿಸಿದ ಪುಟಿನ್

    Published

    on

    ಮಂಗಳೂರು/ಮಾಸ್ಕೋ: ಬಾಕುವಿನಿಂದ ಗ್ರೋಝ್ನಿಗೆ ತೆರಳುತ್ತಿದ್ದ 60 ಕ್ಕೂ ಅಧಿಕ ಪ್ರಯಾಣಿಕರಿದ್ದ ಅಝರ್ ಬೈಜಾನ್ ಏರ್ ಲೈನ್ಸ್ ಗೆ ಸೇರಿದ ವಿಮಾನವು ಕಝಾಕಿಸ್ತಾನದ ಅಕ್ಟೌದಲ್ಲಿ ಪತನಗೊಂಡಿತ್ತು.

    ಕಝಾಕಿಸ್ತಾನದಲ್ಲಿ ಸಂಭವಿಸಿದ ವಿಮಾನ ದುರಂತ ಸಂದರ್ಭದಲ್ಲಿ ಉಕ್ರೇನ್ ಡ್ರೋನ್ ಗಳ ವಿರುದ್ದ ರಷ್ಯಾದ ವಾಯುಸೇನೆ ಕಾರ್ಯಾಚರಣೆ ನಡೆಸುತ್ತಿತ್ತು. ದಕ್ಷಿಣ ರಷ್ಯಾದಿಂದ ಡ್ರೋನ್ ಗಳನ್ನು ಹಾರಿಸಿದ ಬಳಿಕ ಕಝಕಿಸ್ತಾನ್ ನ ಅಕ್ಟೌ ನಗರದ ಬಳಿ ಅಜರ್ಬೈಜಾನ್ ನ J2-8243 ವಿಮಾನ ಪತನಗೊಂಡಿತು. 60ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದ ಈ ವಿಮಾನದಲ್ಲಿ 38 ಮಂದಿ ಸಾ*ವನ್ನಪ್ಪಿದ್ದು, ಉಳಿದು 29 ಮಂದಿ ಗಾಯಗೊಂಡಿದ್ದರು.

    ಇದೀಗ ಈ ದುರಂತಕ್ಕೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕ್ಷಮೆ ಕೋರಿದ್ದಾರೆ. ಅಝರ್ ಬೈಜಾನ್ ಅಧ್ಯಕ್ಷ ಇಲ್ ಹ್ಯಾಮ್ ಅಲಿಯೆವ್ ಅವರಿಗೆ ಶನಿವಾರ ಕರೆ ಮಾಡಿದ ಪುಟಿನ್ ಕ್ಷಮೆ ಯಾಚಿಸಿದ್ದಾರೆ ಎಂದು ವರದಿಯಾಗಿದೆ.

    ಇದನ್ನೂ ಓದಿ: ಕಜಕಿಸ್ತಾನದಲ್ಲಿ ಭೀಕರ ವಿಮಾನ ಅಪಘಾತ; ಕನಿಷ್ಠ 67 ಮಂದಿ ಸಾ*ವು !

    ದುರಂತದಲ್ಲಿ ಪ್ರಾಣ ಕಳೆದುಕೊಂಡ ಕುಟುಂಬಗಳಿಗೆ ನನ್ನ ಆಳವಾದ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳುವಂತೆ ಹಾರೈಸುತ್ತೇನೆ ಎಂದು ಕ್ರೆಮ್ಲಿನ್ ವರದಿ ಮಾಡಿದೆ.
    ಇದರೊಂದಿಗೆ ಅಝರ್ ಬೈಜಾನ್ ನ ವಿಮಾನವನ್ನು ರಷ್ಯನ್ ಪಡೆಗಳು ಹೊಡೆದುದುರುಳಿಸಿರುವುದನ್ನು ಪುಟಿನ್ ಅವರು ಪರೋಕ್ಷವಾಗಿ ಒಪ್ಪಿಕೊಂಡಂತಾಗಿದೆಯೆಂದು ವಿದೇಶಿ ಮಾಧ್ಯಮಗಳು ಬಣ್ಣಿಸಿವೆ.
    ರಷ್ಯಾದ ವಾಯುರಕ್ಷಣಾ ವ್ಯವಸ್ಥೆಯು ಅಝರ್ ಬೈಜಾನ್ ವಿಮಾನದ ಪತನಕ್ಕೆ ಕಾರಣವಾಗಿದೆಯೆಂದು ವೈಮಾನಿಕ ತಜ್ಞರು ಹೇಳಿದ್ದಾರೆ.

    ಕಝಕಿಸ್ತಾನದ ಗ್ರೋಝ್ನಿಯಲ್ಲಿ ಉಕ್ರೇನ್ ಡ್ರೋನ್ ದಾಳಿ ನಡೆಸಿದ್ದರಿಂದ ರಷ್ಯಾದ ವಾಯುರಕ್ಷಣಾ ವ್ಯವಸ್ಥೆಗಳು ಪ್ರತಿದಾಳಿ ನಡೆಸಿರುವುದಾಗಿ ರಷ್ಯಾವು ಶನಿವಾರ ಅಧಿಕೃತ ಹೇಳಿಕೆಯೊಂದರಲ್ಲಿ ತಿಳಿಸಿದೆ. ಆದರೆ ಇದು ವಿಮಾನದ ಪತನಕ್ಕೆ ಕಾರಣವಾಗಿದೆಯೆಂದು ಹೇಳಿಕೊಂಡಿರಲಿಲ್ಲ.

     

     

     

     

    Continue Reading

    LATEST NEWS

    ಜಗತ್ತಿನಲ್ಲಿಯೇ ಅತ್ಯಂತ ದುಬಾರಿ ವಾಚ್ ಇದು; ಇದರ ಬೆಲೆ ಕೇಳಿದ್ರೆ ತಲೆ ತಿರುಗೋದು ಗ್ಯಾರಂಟಿ..!

    Published

    on

    ಸಮಯ ಅನ್ನೋದು ಬೆಲೆ ಕಟ್ಟಲಾಗದ್ದು. ಆದ್ರೆ ಅದೇ ಸಮಯವನ್ನು ತಿಳಿಸುವ ವಾಚ್​ಗೆ ಲಕ್ಷ ಲಕ್ಷ ಕೋಟಿ ಕೋಟಿ ಬೆಲೆಯಿದೆ. ಅಂಬಾನಿಯ ಅಂಟಿಲಿಯಾ ಬಂಗಲೆಯಲ್ಲಿರುವ ಕಾರ್​ಗಳ ಮೌಲ್ಯದ ವಾಚ್​ಗಳು ಕೂಡ ಬಜಾರ್​ನಲ್ಲಿ ಬಂದಿವೆ.ವಾಚ್​ಗಳು ಈಗ ಕೇವಲ ಟೈಮ್​ಪೀಸ್​ ಆಗಿ ಉಳಿದಕೊಂಡಿಲ್ಲ. ಐಷಾರಾಮಿತನದ ಗುರುತಾಗಿ ಉಳಿದಕೊಂಡಿವೆ. ಹೀಗಾಗಿಯೇ ಎಲಾನ್ ಮಸ್ಕ್​, ಮಾರ್ಕ್​ ಜುಕರ್ ಬರ್ಗ್​ ಇವರು ಸಂದರ್ಶನದಲ್ಲಿ, ವಿಡಿಯೋದಲ್ಲಿ ಕಾಣಿಸಿಕೊಂಡಾಗ ಅವರು ಒಂದು ವೇಳೆ ವಾಚ್ ಧರಿಸಿದ್ದರೆ ಆ ವಾಚ್​ನ ಬ್ರ್ಯಾಂಡ್ ಯಾವುದು, ಅದರ ಬೆಲೆ ಎಷ್ಟು ಇವೆಲ್ಲ ಮಾತುಗಳು ಮುನ್ನೆಲೆಗೆ ಬರುತ್ತವೆ. ಈಗ ಅದೇ ರೀತಿ ವಿಶ್ವದ ಅತ್ಯಂತ ದುಬಾರಿ ವಾಚ್​​ನ ಬಗ್ಗೆ ಸೋಷಿಯಲ್ ಮೀಡಿಯಾಗಳಲ್ಲಿ ಚರ್ಚೆಗಳು ಆಗುತ್ತಿವೆ.

    ಸುಪ್ರೀಮ್ ಲಕ್ಸುರಿ ಗುರುತಾಗಿ, ಐಷಾರಾಮಿತನದ ಕಟ್ಟ ಕಡೆಯ ಎತ್ತರವಾಗಿ ಗುರುತಿಸಿಕೊಂಡಿದೆ ಹ್ಯಾಲುಸಿನೇಷನ್ ಎಂಬ ಈ ಡೈಮಂಡ್ ವಾಚ್. ಈ ವಾಚ್​ನ ಬೆಲೆ ಕೇಳಿದ್ರೆ ಎಂತವರ ತಲೆಯೂ ಕೂಡ ಒಮ್ಮೆ ಗಿರ್‌ ಅನ್ನದೇ ಇರಲ್ಲ. ಈ ವಾಚ್​ನ ಬೆಲೆ ಬರೋಬ್ಬರಿ 500 ಮಿಲಿಯನ್ ಡಾಲರ್​, ಅಂದ್ರೆ ಭಾರತೀಯ ರೂಪಾಯಿಗಳಲ್ಲಿ 466 ಕೋಟಿ ರೂಪಾಯಿ ಎಂದರೆ ನೀವು ನಂಬಲೇಬೇಕು.

    ಇದನ್ನು ಅಪ್ಪಟ ವಜ್ರಗಳ ಹರುಳಿನಿಂದಲೇ ತಯಾರಿಸಲಾಗಿದೆ. ಲಾರೆನ್ಸ್ ಗ್ರಾಫ್​ ಎಂಬ ಉದ್ಯಮಿ 2014ರಲ್ಲಿ ಈ ಒಂದು ಬಾಸಲ್​ವರ್ಲ್ಡ್​​ಗೆ ಕಾಲಿಟ್ಟಿದ್ದರು. ವಿಶೇಷವಾದದ್ದು ಹಾಗೆ ಅಷ್ಟೇ ಐಶಾರಾಮಿ ಹಾಗೂ ಆಕರ್ಷಕ ವಾಚ್ ಸಿದ್ಧಪಡಿಸುವ ಗುರಿ ಅವರದ್ದಿತ್ತು. ಹೀಗಾಗಿ ಹಲವು ಬಣ್ಣದ ವಜ್ರಗಳಿಂದ ಕೂಡಿದ 110 ಕ್ಯಾರೆಟ್​ನ ಈ ವಾಚ್​​ನ್ನು ಸಿದ್ಧಪಡಿಸಿದ್ದಾರೆ. ಈ ಹ್ಯಾಲುಸಿನೇಷನ್ ವಾಚ್​ ಜಗತ್ತಿನಲ್ಲಿ ಅತ್ಯಂತ ವಿರಳವಾದ ಹಾಗೂ ದುಬಾರಿಯಾದ ವಾಚ್​ನ ಪಟ್ಟಿಯಲ್ಲಿದೆ. ಹಲವು ಬಣ್ಣಗಳಲ್ಲಿ ಬರುವ ಈ ವಾಚ್ ತಿಳಿ ಗುಲಾಬಿ, ನೀಲಿ, ಹಸಿರು, ಆರೆಂಜ್​ ಹಾಗೂ ಹಳದಿ ಬಣ್ಣಗಳಲ್ಲಿ ಈ ವಾಚ್​ಗಳನ್ನು ಸಿದ್ಧಪಡಿಸಲಾಗಿದೆ.

    ಇನ್ನು ಅನೇಕ ವಿನ್ಯಾಸಗಳಲ್ಲಿಯೂ ಕೂಡ ಈ ವಾಚ್ ಲಭ್ಯವಿದೆ. ಹೃದಯದ ವಿನ್ಯಾಸ, ಪೇರಳೆ ವಿನ್ಯಾಸ ಹೀಗೆ ಒಟ್ಟು ನಾಲ್ಕು ವಿನ್ಯಾಸಗಳಲ್ಲಿ ಇದು ಲಭ್ಯವಿದೆ. ಯುನಿಕ್ ಆಗಿರುವ ಶೇಪ್ ಹಾಗೂ ಕಲರ್​ನಲ್ಲಿ ಲಭ್ಯವಿದ್ದು. ನಮ್ಮ ನಿಮ್ಮಂತವರ ಕೈಗೆ ನಿಲುಕದ ಎತ್ತರದಲ್ಲಿ ಇದೆ.

    Continue Reading

    LATEST NEWS

    ವಾಟರ್ ಹೀಟರ್ ನಿಂದ ಹೊಡೆದು ವ್ಯಕ್ತಿಯ ಬರ್ಬರ ಹತ್ಯೆ

    Published

    on

    ಬೆಂಗಳೂರು: ಸ್ನೇಹಿತನನ್ನೇ ವ್ಯಕ್ತಿಯೊಬ್ಬ ವಾಟರ್ ಹೀಟರ್ ನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಶ್ರೀನಿವಾಸಪುರದಲ್ಲಿ ನಡೆದಿದೆ.
    ನಾಗರಾಜ್ ಎಂಬಾತ ಶ್ರೀನಿವಾಸ್ ನನ್ನು ವಾಟರ್ ಹೀಟರ್ ನಿಂದ ಹೊಡೆದ ಕೊಲೆ ಮಾಡಿದ್ದಾನೆ.

    ಶ್ರೀನಿವಾಸ್ ಹಾಗೂ ನಾಗರಾಜ್ ಇಬ್ಬರು ಗಾರೆ ಕೆಲಸ ಮಾಡಿಕೊಂಡಿದ್ದರು. ಶ್ರೀನಿವಾಸ್ ಮದುವೆಯಾಗಿದ್ದರೂ ಪತ್ನಿಯನ್ನು ಬಿಟ್ಟು ಪ್ರತ್ಯೇಕವಾಗಿ ವಾಸವಾಗಿದ್ದ. ಕೊಲೆ ಆರೋಪಿ ನಾಗರಾಜ್ ಗೆ ಇನ್ನೂ ಮದುವೆಯಾಗಿರಲಿಲ್ಲ.ಇಬ್ಬರೂ ಶ್ರೀನಿವಾಸಪುರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

    ಶ್ರೀನಿವಾಸ್ ಹಾಗೂ ನಾಗರಾಜ್ ಜಗಳವಾಗಿದ್ದು, ಈ ವೇಳೆ ನಾಗರಾಜ್ ಕೋಪದ ಬರದಲ್ಲಿ ವಾಟರ್ ಹೀಟರ್ ನಿಂದ ಶ್ರೀನಿವಾಸ್ ಮೇಲೆ ಹಲ್ಲೆ ಮಾಡಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಶ್ರೀನಿವಾಸ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

    Continue Reading

    LATEST NEWS

    Trending