Connect with us

bangalore

ಬೆಂಗಳೂರು: ಯಲಹಂಕದ ಕೆಎಂಎಫ್ ಮದರ್ ಡೈರಿಗೆ ಅಮಿತ್ ಶಾ ಭೇಟಿ

Published

on

ಬೆಂಗಳೂರು: ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಗೃಹ ಹಾಗೂ ಸಹಕಾರಿ ಸಚಿವರಾಗಿರುವ ಅಮಿತ್ ಶಾ ಅವರು ಇಂದು ಯಲಹಂಕದಲ್ಲಿರುವ ಕೆಎಂಎಫ್ ಮದರ್ ಡೈರಿಗೆ ಭೇಟಿ ನೀಡಿದರು.


ಈ ಸಂದರ್ಭ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕೂಡ ಉಪಸ್ಥಿತರಿದ್ದು ಡೈರಿಯ ಹಾಲಿನ ಪುಡಿ ಘಟಕದ ಕಾರ್ಯವೈಖರಿಯನ್ನು ವೀಕ್ಷಣೆ ಮಾಡಿದರು.

ಸಹಕಾರ ಸಚಿವ ಎಸ್ ಟಿ ಸೋಮಶೇಖರ್ , ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಶಾಸಕ ಎಸ್ ಆರ್ ವಿಶ್ವನಾಥ್ ಸೇರಿದಂತೆ ಇತರೆ ಮುಖಂಡರು ಉಪಸ್ಥಿತರಿದ್ದರು.


ಶಾ ಭೇಟಿ ಹಿನ್ನಲೆಯಲ್ಲಿ ಮದರ್ ಡೈರಿ ಬಳಿ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಅಕ್ಕಪಕ್ಕದ ಅಂಗಡಿಗಳ ಬಳಿ ಪಾರ್ಕಿಂಗ್ ವಾಹನಗಳನ್ನು ಪೋಲೀಸ್ ಸಿಬ್ಬಂದಿಗಳು ತೆರವು ಮಾಡಿದ್ದರು.

bangalore

ಶೋಭಾ ಕರಂದ್ಲಾಜೆ ಕಾರಿಗೆ ಸಿಕ್ಕಿ ಯುವಕನ ದುರ್ಮ*ರಣ..!

Published

on

ಬೆಂಗಳೂರು : ಬಿರುಸಿನ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ಶೋಭಾ ಕರಂದ್ಲಾಜೆ ಅವರ ಕಾರಿಗೆ ಡಿಕ್ಕಿ ಹೊಡೆದು ಬೈಕ್ ಸವಾರನೊಬ್ಬ ಅಸು ನೀಗಿದ್ದಾನೆ.

ಟಿಸಿ ಪಾಳ್ಯ ನಿವಾಸಿ ಪ್ರಕಾಶ್( 35 ) ಎಂಬವರು ಅಸುನೀಗಿದ ದುರ್ದೈವಿ. ಬೆಂಗಳೂರಿನ ಕೆ.ಆರ್.ಪುರಂ ಸಮೀಪ ಈ ಅಪ*ಘಾತ ಸಂಭವಿಸಿದ್ದು, ಕೆ.ಆರ್‌.ಪುರಂ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ.  ದೇವಸಂದ್ರ ವಿನಾಯಕ ದೇವಸ್ಥಾನ ಬಳಿ ಕಾರು ನಿಲ್ಲಿಸಿದ ಕಾರಿನಿಂದ ಸಡನ್ ಆಗಿ ಬಾಗಿಲು ತೆರೆದು ಈ ದುರ್ಘಟನೆ ನಡೆದಿದೆ. ಕಾರಿನ ಡೋರ್ ತೆಗೆದಾಗ ಹಿಂಬಂದಿಯಿಂದ ಬಂದಿದ್ದ ಬೈಕ್‌ ಸವಾರ ಕಾರಿನ ಡೋರ್‌ಗೆ ತಾಗಿ ಕೆಳಗೆ ಬಿದ್ದಿದ್ದಾನೆ.

 

ತಲೆಗೆ ಗಂ*ಭೀರ ಗಾಯಗೊಂಡಿದ್ದ ಬೈಕ್ ಸವಾರ ಪ್ರಕಾಶ್ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಪ್ರಕಾಶ್ ಇಹಲೋಕ ತ್ಯಜಿಸಿದ್ದಾರೆ.

ಇದನ್ನೂ ಓದಿ : ಬೇಸಿಗೆಯ ಬಿಸಿ ತಡೆಯಲಾರದೆ 14 ಲಕ್ಷ ವೆಚ್ಚದಲ್ಲಿ ಕೂಲ್ ಹೋಮ್ ನಿರ್ಮಾಣ ಮಾಡಿದ ಯುವ ಇಂಜಿನಿಯರ್

Continue Reading

bangalore

ಮೆಡಿಕಲ್ ಕಾಲೇಜಿನ 47 ವಿದ್ಯಾರ್ಥಿನಿಯರು ದಿಢೀರ್ ಅಸ್ವ*ಸ್ಥ..!! ಆಸ್ಪತ್ರೆ ದಾಖಲು

Published

on

ಬೆಂಗಳೂರು:  47 ವಿದ್ಯಾರ್ಥಿನಿಯರು ಅಸ್ವ*ಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೆಂಗಳೂರಿನ ಹಾಸ್ಟೆಲ್‌ನಲ್ಲಿ ನಡೆದಿದೆ. ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ(BMCRI) ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವ*ಸ್ಥಗೊಂಡಿದ್ದು ಕೂಡಲೇ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

medical college of bangalore

ವಾಂತಿ-ಭೇದಿಯಿಂದ ತೀವ್ರ ಅಸ್ವಸ್ಥಗೊಂಡಿದ್ದು, 28 ವಿದ್ಯಾರ್ಥಿನಿಯರಿಗೆ ಟ್ರಾಮಾ ಕೇರ್ ಸೆಂಟರ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಐವರಿಗೆ ಹೆಚ್​​ ಬ್ಲಾಕ್ ಹಾಗೂ ನಾಲ್ವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ.  ಅಸ್ವಸ್ಥಗೊಂಡ ವಿದ್ಯಾರ್ಥಿಗಳಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಸದ್ಯ ವಿದ್ಯಾರ್ಥಿಗಳು ಆರೋಗ್ಯದಲ್ಲಿ ಚೇತರಿಸಿಕೊಂಡಿದ್ದಾರೆ. ಅಷ್ಟಕ್ಕೂ ವಿದ್ಯಾರ್ಥಿನಿಯರು ಅಸ್ವ*ಸ್ಥಗೊಳ್ಳಲು ಕಾರಣವೇನು ಎಂಬುದರ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಬಿಎಂಸಿಆರ್‌ಐ ಮುಖ್ಯಸ್ಥ ಮತ್ತು ನಿರ್ದೇಶಕ ಡಾ.ರಮೇಶ್‌ ಕೃಷ್ಣ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಕಾಲರ ಭೀತಿ ಶುರುವಾಗಿದ್ದು, ಈ ಮಧ್ಯೆ ಹಾಸ್ಟೆಲ್ ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಅಸ್ವಸ್ಥಗೊಂಡಿರುವುದು ಆತಂಕಕ್ಕೆ ಎಡೆ ಮಾಡಿದೆ.

ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವುದಕ್ಕೆ ನೈಜ ಕಾರಣವೇನು ಅನ್ನೋದು ತನಿಖೆ ಬಳಿಕವಷ್ಟೇ ತಿಳಿಯಬೇಕಿದೆ.

Continue Reading

bangalore

ಧಗಧಗನೇ ಹೊ*ತ್ತಿ ಉ*ರಿದ ಖಾಸಗಿ ಕಂಪನಿಯ ಕಟ್ಟಡ!

Published

on

ಬೆಂಗಳೂರು : ಶುಕ್ರವಾರ ಮಧ್ಯಾಹ್ನ 1:50ರ ಸುಮಾರಿಗೆ ಬೆಂಗಳೂರಿನ ಆರ್‌.ಟಿ ನಗರದ 80 ಅಡಿ ರಸ್ತೆಯಲ್ಲಿರುವ ಮಿರಾಕಲ್ ಡ್ರಿಂಕ್ಸ್ ಕಟ್ಟಡದ ಕೆಳ ಮಹಡಿಯಲ್ಲಿ ಬೆಂ*ಕಿ ಅವಘ*ಡ ಸಂಭವಿಸಿದೆ.

ಕೂಡಲೇ ಘಟನಾ ಸ್ಥಳಕ್ಕೆ ಎರಡು ಅ*ಗ್ನಿಶಾಮಕ ವಾಹನ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದೆ. ಬೆಂಕಿ ಅವಘ*ಡ ಸಂಭವಿಸಿದಾಗ ಕೆಲ ಉದ್ಯೋಗಿಗಳು ಕಟ್ಟಡದಲ್ಲಿ ಸಿಲುಕಿದ್ದರು. ಕೂಡಲೇ ಸ್ಥಳಕ್ಕೆ ಮೂರು ಅಗ್ನಿಶಾಮಕ ವಾಹನಗಳು, RT ನಗರ ಪೊಲೀಸರು ದೌಡಾಯಿಸಿ ರಕ್ಷಣಾ ಕಾರ್ಯ ಆರಂಭಿಸಿದರು.

ಅ*ಗ್ನಿಶಾಮಕ ಸಿಬ್ಬಂದಿ ಬೆಂಕಿ ಆರಿಸುವಲ್ಲಿ ಯಶಸ್ವಿಯಾಗಿದ್ದು, ಸದ್ಯ ಯಾರಿಗೂ ಪ್ರಾಣಾಪಾಯವಿಲ್ಲ. ಲಕ್ಷಾಂತರ ಮೌಲ್ಯದ ಆಯುರ್ವೇದಿಕ್ ಮೆಡಿಸಿನ್ ಅ*ಗ್ನಿಗೆ ಆ*ಹುತಿಯಾಗಿದೆ. ಅ*ಗ್ನಿ ಅ*ನಾಹುತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

Continue Reading

LATEST NEWS

Trending