Monday, May 23, 2022

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಆಡಿ ಕ್ಯೂ3: ಸ್ಥಳದಲ್ಲೇ 7 ಸಾವು, CCTVಯಲ್ಲಿ ಭೀಕರ ದೃಶ್ಯ ದಾಖಲು

ಬೆಂಗಳೂರು: ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ತಮಿಳುನಾಡಿನ ಹೊಸೂರು ಶಾಸಕ ವೈ ಪ್ರಕಾಶ್ ಅವರ ಪುತ್ರ, ಸೊಸೆ ಸಹಿತ ಏಳು ಮಂದಿ ಮೃತಪಟ್ಟಿರುವ ದುರ್ಘಟನೆ ತಡರಾತ್ರಿ ನಡೆದಿದೆ.


ಹೊಸೂರು ಶಾಸಕ ವೈ.ಪ್ರಕಾಶ್ ಅವರ ಪುತ್ರ ಕರುಣಾಸಾಗರ್, ಸೊಸೆ ಬಿಂದೂ(28), ಕೇರಳ ಮೂಲದ ಅಕ್ಷಯ್ ಗೋಯಲ್, ಇಶಿತಾ(21), ಧನುಷಾ(21), ಹುಬ್ಬಳ್ಳಿಯ ರೋಹಿತ್ ಹಾಗೂ ಹರ್ಯಾಣ ಮೂಲದ ಉತ್ಸವ್ ಮೃತಪಟ್ಟವರು ಎಂದು ಪೊಲೀಸರು ತಿಳಿಸಿದ್ದಾರೆ.
ತಡರಾತ್ರಿ ರಾತ್ರಿ 1:30ರ ಸುಮಾರಿಗೆ ಕೋರಮಂಗಲದ ಮಂಗಳ ಕಲ್ಯಾಣ ಮಂಟಪದ ಬಳಿ ಈ ಭೀಕರ ದುರಂತ ಸಂಭವಿಸಿದೆ.

ಚಾಲಕನ ನಿಯಂತ್ರಣ ತಪ್ಪಿದ ಐಷಾರಾಮಿ ಆಡಿ ಕ್ಯೂ3 ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಮಹಿಳೆಯರು ನಾಲ್ವರು ಪುರುಷರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಸಂಚಾರ ವಿಭಾಗದ ಜಂಟಿ ಆಯುಕ್ತ ಡಾ.ಬಿ.ಆರ್.ರವಿಕಾಂತೇಗೌಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ತಡರಾತ್ರಿ 1:45ರಿಂದ 2 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದೆ.

ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ 7 ಜನರೂ ಮೃತಪಟ್ಟಿದ್ದಾರೆ. 6 ಜನರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಆಸ್ಪತ್ರೆಗೆ ದಾಖಲಿಸಿದ ವೇಳೆ ಕೊನೆಯುಸಿರೆಳೆದಿದ್ದಾರೆ ಎಂದರು.
ಮೇಲ್ನೋಟಕ್ಕೆ ಅಪಘಾತಕ್ಕೆ ಅತಿ ವೇಗವೇ ಕಾರಣ.

ನಿರ್ಲಕ್ಷ್ಯ, ವೇಗದ ಚಾಲನೆಯಿಂದ ಅಪಘಾತ ಸಂಭವಿಸಿದೆ.

ಇನ್ನೂ ಕಾರಿನಲ್ಲಿದ್ದವರು ಎಲ್ಲಿಂದ ಬರುತ್ತಿದ್ದರು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

ಮದ್ಯ ಸೇವನೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ ಎಂದು ಹೇಳಿದರು.
ಕಾರಿನ ಮುಂದಿನ ಸೀಟ್‌ನಲ್ಲಿ ಮೂವರು ಕುಳಿತಿದ್ದರು ಹಾಗೂ ಹಿಂಬದಿ ಸೀಟ್‌ನಲ್ಲಿ ನಾಲ್ವರು ಕುಳಿತಿದ್ದರು.

ಕಾರಿನಲ್ಲಿದ್ದ 7 ಜನರಲ್ಲಿ ಯಾರೂ ಸೀಟ್ ಬೆಲ್ಟ್ ಹಾಕಿರಲಿಲ್ಲ. ಇದರಿಂದ ಕಾರಿನಲ್ಲಿದ್ದ ಏರ್‌ಬ್ಯಾಗ್ ಸಹ ತೆರೆದಿಲ್ಲ ಎಂದರು.

ಈ ಸಂಬಂಧ ಆಡುಗೋಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics

ಭಾರತ ಸೇರಿದಂತೆ 15 ದೇಶಗಳಿಗೆ ಪ್ರಯಾಣ ನಿರ್ಬಂಧ ಹೇರಿದ ಸೌದಿ ಅರೇಬಿಯಾ

ಜೆದ್ದಾ: ಸೌದಿ ಅರೇಬಿಯಾದಲ್ಲಿ ಕಳೆದ ಕೆಲವು ವಾರಗಳಿಂದ ಕೋವಿಡ್ ಸೋಂಕು ಮತ್ತೆ ಏರಿಕೆ ಕಂಡುಬಂದಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ದೇಶದ ನಾಗರಿಕರು ಭಾರತ ಸೇರಿದಂತೆ ಹದಿನಾರು ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದೆ.ಲೆಬನಾನ್, ಸಿರಿಯಾ, ಟರ್ಕಿ,...

ಬಂಟ್ವಾಳ: ಅಡ್ಡಾದಿಡ್ಡಿ ಕಾರು ಚಾಲನೆ-ಚಾಲಕನನ್ನು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು

ಬಂಟ್ವಾಳ: ಮಹಿಳೆಯರನ್ನು ಕಾರಿನಲ್ಲಿ ಕರೆದುಕೊಂಡು ಹೋಗುವ ಸಂದರ್ಭ ಚಾಲಕ ಅಡ್ಡಾದಿಡ್ಡಿ ಚಲಾಯಿಸಿದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರು ಬೊಬ್ಬೆ ಹಾಕಿದ್ದರಿಂದ ಕಾರು ನಿಲ್ಲಿಸಿ ಚಾಲಕನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಬಂಟ್ವಾಳ ತಾಲೂಕಿನ ಸಾಲೆತ್ತೂರು ಸಮೀಪ...

ಆಟೋ ರಿಕ್ಷಾ- ಪಿಕಪ್ ಢಿಕ್ಕಿ: ಓರ್ವನಿಗೆ ಗಾಯ

ಬಂಟ್ವಾಳ: ಆಟೋ ರಿಕ್ಷಾ ಮತ್ತು ಪಿಕಪ್ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಕನ್ಯಾನ ಎಂಬಲ್ಲಿ ನಿನ್ನೆ ನಡೆದಿದೆ.ಅಪಘಾತದಿಂದಾಗಿ ಆಟೋ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು...