Connect with us

    LATEST NEWS

    ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್​​ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆ

    Published

    on

    ಮಂಗಳೂರು/ಬೆಂಗಳೂರು : ಪಿಎಸ್ ಐ ಪರಶುರಾಮ್ ಸಾ*ವು ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಇದೇ ಸಂದರ್ಭದಲ್ಲಿ ಮತ್ತೊಬ್ಬ ಪೊಲೀಸ್ ಅಧಿಕಾರಿ ಜೀವಾಂ*ತ್ಯಗೊಳಿಸಿದ್ದಾರೆ. ಸಿಸಿಬಿಯ ಆರ್ಥಿಕ ಅಪರಾಧ ಪತ್ತೆದಳ ವಿಭಾಗದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಆಗಿದ್ದ ತಿಮ್ಮೇಗೌಡ ನೇ*ಣಿಗೆ ಶರಣಾಗಿದ್ದಾರೆ. ರಾಮನಗರ ಜಿಲ್ಲೆಯ ನಿರ್ಜನ ಪ್ರದೇಶದಲ್ಲಿ ಅವರ ಶ*ವ ಪತ್ತೆಯಾಗಿದೆ.


    ರಾಮನಗರ ಎಸ್ ಪಿ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲಿಸಿದ್ದಾರೆ. ಸ್ಥಳದಲ್ಲಿ ಮರಣ ಪತ್ರ(death note) ಸಿಕ್ಕಿಲ್ಲ ಎಂದು ತಿಳಿದು ಬಂದಿದೆ.  ತಿಮ್ಮೇಗೌಡ ಸುಮಾರು 20 ವರ್ಷಗಳಿಂದ ಪೊಲೀಸ್‌ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಬೆಂಗಳೂರು, ರಾಮನಗರ ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ಒಂದು ತಿಂಗಳ ಹಿಂದೆಯಷ್ಟೇ ತಿಮ್ಮೇಗೌಡ ಅವರು ಸಿಸಿಬಿಗೆ ವರ್ಗಾವಣೆಗೊಂಡಿದ್ದರು.

    ಇದನ್ನೂ ಓದಿ : ದುರಂ*ತಕ್ಕೆ ಸಾಕ್ಷಿಯಾಯಿತೇ ‘ಚಾಲಿಯಾರ್’!: ನದಿಯಲ್ಲಿ ತೇಲಿ ಬರುತ್ತಿವೆ ಶ*ವಗಳು
    ಲೋಕಾಯುಕ್ತದಲ್ಲಿದ್ದ ತಿಮ್ಮೇಗೌಡ ಅವರ ವಿರುದ್ಧ ಇತ್ತೀಚೆಗೆ ಪ್ರಕರಣವೊಂದು ದಾಖಲಾಗಿತ್ತು. ಅತ್ತಿಬೆಲೆಯಲ್ಲಿ ಕೆಲಸ ಮಾಡುತ್ತಿದ್ದಾಗ ತಿಮ್ಮೇಗೌಡ ಅವರು ಅಮಾನತುಗೊಂಡಿದ್ದರು. ಇದರಿಂದ ಮನನೊಂದು ಆತ್ಮಹ*ತ್ಯೆ ಮಾಡಿಕೊಂಡಿಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದ್ದು, ಬಳಿಕ ಸಾ*ವಿಗೆ ಕಾರಣ ತಿಳಿದು ಬರಲಿದೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ಹಳಿಗಳ ಮೇಲೆ ಸಿಮೆಂಟ್ ಬ್ಲಾಕ್ ಗಳನ್ನು ಇಟ್ಟ ಕಿಡಿಗೇಡಿಗಳು: ತಪ್ಪಿದ ರೈಲು ದುರಂತ

    Published

    on

    ಅಜ್ಮೀರ್: ರಾಜಸ್ಥಾನದ ಅಜ್ಮೀರ್ ಜಿಲ್ಲೆಯಲ್ಲಿ ಸರಕು ಸಾಗಣೆ ಕಾರಿಡಾರ್ ನ ಹಳಿಗಳ ಮೇಲೆ ಎರಡು ಸಿಮೆಂಟ್ ಬ್ಲಾಕ್ ಗಳನ್ನು ಇಡುವ ಮೂಲಕ ಸರಕು ರೈಲನ್ನು ಹಳಿ ತಪ್ಪಿಸುವ ಘಟನೆ ನಡೆದಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

    ತಲಾ 70 ಕೆ.ಜಿ ತೂಕದ ಸಿಮೆಂಟ್ ಬ್ಲಾಕ್ ಗಳಿಗೆ ಗೂಡ್ಸ್ ರೈಲು ಡಿಕ್ಕಿ ಹೊಡೆದಿದೆ. ಆದರೆ, ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ ಎಂದು ಅವರು ಹೇಳಿದ್ದಾರೆ. ‘ಭಾನುವಾರ ಕೆಲವು ದುರ್ಷ್ಕಮಿಗಳು ಸರಕು ಸಾಗಣೆ ಕಾರಿಡಾರ್ನ ಹಳಿಗಳ ಮೇಲೆ ಎರಡು ಸಿಮೆಂಟ್ ಬ್ಲಾಕ್ ಗಳನ್ನು ಇಟ್ಟಿದ್ದಾರೆ. ಗೂಡ್ಸ್ ರೈಲು ಅದಕ್ಕೆ ಡಿಕ್ಕಿ ಹೊಡೆದಿದೆ’ ಎಂದು ವಾಯುವ್ಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಕಾನ್ಪುರದಲ್ಲಿ ಭಾನುವಾರ ಕಾಳಿಂದಿ ಎಕ್ಸ್ ಪ್ರೆಸ್ ರೈಲನ್ನು ಹಳಿ ತಪ್ಪಿಸುವ ಯತ್ನವನ್ನು ಕಿಡಿಗೇಡಿಗಳು ನಡೆಸಿದ್ದರು. ಹಳಿ ಮೇಲೆ ಸಿಲಿಂಡರ್, ಪೆಟ್ರೋಲ್ ತುಂಬಿದ ಬಾಟಲಿಗಳು, ಗನ್ ಪೌಡರ್ ಸೇರಿದಂತೆ ಅಪಾಯಕಾರಿ ವಸ್ತುಗಳನ್ನು ಇರಿ ರೈಲು ಸಿಲಿಂಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಅದು ಸ್ಫೋಟಗೊಂಡಿತ್ತು. ಆದರೆ ರೈಲಿಗಾಗಲಿ ಅಥವಾ ಪ್ರಯಾಣಿಕರಿಗಾಗಲಿ ಯಾವುದೇ ರೀತಿಯ ಸಮಸ್ಯೆಯಾಗಿರಲಿಲ್ಲ.

    ಲೊಕೊ ಪೈಲಟ್ ತುರ್ತು ಬ್ರೇಕ್ ಹಾಕಿದ್ದರಿಂದ ರೈಲು ಹಳಿಯಲ್ಲಿ ಅಡಚಣೆ ಉಂಟಾದ ಕಾರಣ ತಕ್ಷಣ ರೈಲ್ವೆ ಸಂರಕ್ಷಣಾ ಪಡೆಗೆ ಎಚ್ಚರಿಕೆ ನೀಡಿ ಸಂಪೂರ್ಣ ತಪಾಸಣೆ ನಡೆಸಿದ ನಂತರ ದೊಡ್ಡ ರೈಲು ಅಪಘಾತವನ್ನು ತಪ್ಪಿಸಲಾಯಿತು.

    Continue Reading

    FILM

    ನಟ ದರ್ಶನ್ ಮನವಿ ಪುರಸ್ಕರಿಸಿದ ಹೈಕೋರ್ಟ್; ಮಾಧ್ಯಮಗಳಿಗೆ ನಿರ್ಬಂಧ

    Published

    on

    ಮಂಗಳೂರು/ಬೆಂಗಳೂರು: ರೇಣುಕಾಸ್ವಾಮಿ ಕೊ*ಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಎಲ್ಲ 17 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ನ್ನು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಅದರಲ್ಲಿರುವ ಅಂಶಗಳ ಬಗ್ಗೆ ಈಗಾಗಲೇ ಸಾಕಷ್ಟು ವರದಿಗಳು ಮಾಧ್ಯಮಗಳಲ್ಲಿ, ಸೋಷಿಯಲ್ ಮೀಡಿಯಾಗಳಲ್ಲಿ ಬಿತ್ತರವಾಗುತ್ತಿತ್ತು.

    ಚಾರ್ಜ್ ಶೀಟ್ ನಲ್ಲಿರುವ ವರದಿಯನ್ನು ಪ್ರಕಟಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕೆಂದು ಕೋರಿ ನಟ ದರ್ಶನ್ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ ಆದೇಶವನ್ನು ಕಾಯ್ದಿರಿಸಿತ್ತು. ಇಂದು(ಸೆ.10) ಆದೇಶವನ್ನು ಪ್ರಕಟಿಸಿದ್ದು, ದರ್ಶನ್‌ ಮನವಿಯನ್ನು ಪುರಸ್ಕರಿಸಿ, ಅದನ್ನು ಮಾನ್ಯ ಮಾಡಿರುವ ನ್ಯಾಯಾಲಯ ಆರೋಪ ಪಟ್ಟಿಯ ಯಾವುದೇ ಮಾಹಿತಿಯನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ಆದೇಶಿಸಿದೆ.

    ಕಳೆದ ತಿಂಗಳು ಆಗಸ್ಟ್ 27 ರಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ, ದರ್ಶನ್ ಅವರಿಗೆ ಸಂಬಂಧಿಸಿದ ಖಾಸಗಿ ಚಿತ್ರಗಳನ್ನು ಮಾಧ್ಯಮಗಳಲ್ಲಿ ಪ್ರದರ್ಶಿಸದಂತೆ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿ ಪ್ರತಿಬಂಧಕಾಜ್ಞೆ ತಂದಿದ್ದರು.

    ಇದನ್ನೂ ಓದಿ :ಮಗುವನ್ನು ಕೊಂ*ದು ವಾಷಿಂಗ್ ಮೆಷಿನ್ ನಲ್ಲಿಟ್ಟ ಮಹಿಳೆ!

    ಈಗ ಅದೇ ಅರ್ಜಿಯನ್ನು ಉಲ್ಲೇಖಿಸಿ, ಆರೋಪ ಪಟ್ಟಿಯಲ್ಲಿರುವ ಮಾಹಿತಿ ಹಾಗೂ ಹರಿದಾಡುತ್ತಿರುವ ಕೆಲವು ಚಿತ್ರಗಳನ್ನು ಪ್ರದರ್ಶಿಸದಂತೆ ಸೂಚನೆ ನೀಡುವಂತೆ ಮನವಿ ಮಾಡಲಾಗಿತ್ತು. ಅದರಂತೆ ಹೈಕೋರ್ಟ್ ಏಕಸದಸ್ಯ ಪೀಠ ಮುಂದಿನ ವಿಚಾರಣೆಯವರೆಗೂ ಆರೋಪ ಪಟ್ಟಿಯಲ್ಲಿರುವ ಮಾಹಿತಿಯನ್ನು ಪ್ರಸಾರ ಮಾಡದಂತೆ ಸೂಚನೆ ನೀಡಿ ಆದೇಶ ಹೊರಡಿಸಿದೆ.

    Continue Reading

    LATEST NEWS

    CPI(M)ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಗಂಭೀರ..!

    Published

    on

    ನವ ದೆಹಲಿ : ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿಪಿಐ(ಎಂ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರ ಪರಿಸ್ಥಿತಿ ಗಂಭೀರವಾಗಿದೆ. ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ದಾಖಲಾಗಿರುವ ಯೆಚೂರಿ ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ. ಯೆಚೂರಿ ಅವರಿಗೆ 72 ವರ್ಷ ವಯಸ್ಸಾಗಿದ್ದು, ಅವರು ತೀವೃ ಉಸಿರಾಟದ ಸೋಂಕಿಗೆ ತುತ್ತಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿದೆ.

    ಹಲವು ತಜ್ಞ ವೈದ್ಯರ ತಂಡ ಯೆಚೂರಿ ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಅವರ ದೇಹಸ್ಥಿತಿಯ ಮೇಲೆ ನಿಗಾ ವಹಿಸಿದ್ದಾರೆ. ನ್ಯುಮೋನಿಯಾ ತರದ ಎದೆ ಸೊಂಕಿನ ಚಿಕಿತ್ಸೆಗಾಗಿ ಆಗಸ್ಟ್‌ 19 ರಂದು ಏಮ್ಸ್‌ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು.

    Continue Reading

    LATEST NEWS

    Trending