Saturday, November 27, 2021

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮೀಟರ್ ಬಡ್ಡಿ ದಂಧೆ ಫೈನಾನ್ಷಿಯರ್ ಮನೆ ಮೇಲೆ ಸಿಸಿಬಿ ದಾಳಿ:

 

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮೀಟರ್ ಬಡ್ಡಿ ದಂಧೆ ಫೈನಾನ್ಷಿಯರ್ ಮನೆ ಮೇಲೆ ಸಿಸಿಬಿ ದಾಳಿ:

ಬೆಂಗಳೂರು: ಮೀಟರ್ ಬಡ್ಡಿ ವ್ಯವಹಾರ ನಡೆಸುತ್ತಿದ್ದ ಹಾಗೂ ಬಡ್ಡಿ ಪಾವತಿಸದ ಸಾರ್ವಜನಿಕರಿಗೆ ಜೀವ ಬೆದರಿಕೆಯೊಡ್ಡುತ್ತಿದ್ದ ಆರೋಪದಡಿ ನಾಗರಾಜ್ ಶೆಟ್ಟಿ  ಎಂಬುವರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಶೆಟ್ಟಿ’ಮಲ್ಲೇಶ್ವರ ನಿವಾಸಿ ನಾಗರಾಜ್, ‘ಬಾಲಾಜಿ ಫೈನಾನ್ಸ್’ ಹೆಸರಿನಲ್ಲಿ ಕಚೇರಿ ಇಟ್ಟುಕೊಂಡಿದ್ದರು. ಮಲ್ಲೇಶ್ವರ ಹಾಗೂ ವೈಯಾಲಿಕಾವಲ್ ಸುತ್ತಮುತ್ತಲಿನ ವ್ಯಾಪಾರಿಗಳಿಗೆ ಬಡ್ಡಿಗೆ ಸಾಲ ಕೊಡುತ್ತಿದ್ದರು.ಶೆಟ್ಟಿ ವಿರುದ್ಧ ಇತ್ತೀಚೆಗೆ ದೂರು ಬಂದಿತ್ತು. ಅದರ ತನಿಖೆ ಕೈಗೊಂಡ ವಿಶೇಷ ತಂಡ, ಆರೋಪಿಯನ್ನು ಬಂಧಿಸಿದೆ’  ‘ನ್ಯಾಯಾಲಯದ ಶೋಧನಾ ವಾರೆಂಟ್ ಪಡೆದು ನಾಗರಾಜ್ ಮನೆ ಮೇಲೂ ದಾಳಿ ಮಾಡಲಾಯಿತು.₹ 22 ಲಕ್ಷ ನಗದು, 164 ಚೆಕ್‌ಗಳು, 84 ಡಿ.ಡಿ.ಗಳು ಹಾಗೂ ಲಕ್ಷಾಂತರ ಮೌಲ್ಯದ ಆಸ್ತಿ ಪತ್ರಗಳು ಪತ್ತೆಯಾಗಿವೆ’ ‘ಹಲವು ವರ್ಷಗಳಿಂದ ಮೀಟರ್ ಬಡ್ಡಿ ವ್ಯವಹಾರ ನಡೆಸುತ್ತಿದ್ದ ನಾಗರಾಜ್, ಶ್ಯೂರಿಟಿ ಇಟ್ಟುಕೊಂಡು ಸಾಲ ಕೊಡುತ್ತಿದ್ದರು.

ಸಾರ್ವಜನಿಕರಿಂದ ಶೇ 6ರಿಂದ ಶೇ 10ರಷ್ಟು ಬಡ್ಡಿ ವಸೂಲಿ ಮಾಡುತ್ತಿದ್ದರು. ಅಸಲು ಹಾಗೂ ನಿಗದಿತ ಬಡ್ಡಿ ಪಾವತಿ ಮಾಡಿದರೂ ಮತ್ತಷ್ಟು ಬಡ್ಡಿ ಪಾವತಿಸುವಂತೆ ಬೆದರಿಸುತ್ತಿದ್ದರು’  ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.‘ಮಲ್ಲೇಶ್ವರ ಬಟ್ಟೆ ವ್ಯಾಪಾರಿ ಸುನೀಲ್‌ಕುಮಾರ್ ಎಂಬುವರು 2017ರಲ್ಲಿ ನಾಗರಾಜ್ ಶೆಟ್ಟಿ ಬಳಿ ₹ 5 ಲಕ್ಷ ಸಾಲ ಪಡೆದಿದ್ದರು. ನಿಗದಿತ ಸಮಯಕ್ಕೆ ಅದನ್ನು ಮರು ಪಾವತಿ ಮಾಡಿದ್ದರು. ಅಷ್ಟಾದರೂ ಆರೋಪಿ, ಮತ್ತಷ್ಟು ಹಣ ನೀಡುವಂತೆ ಪೀಡಿಸಲಾರಂಭಿಸಿದ್ದರು.

ಬೇಸತ್ತ ಸುನೀಲ್‌, ವೈಯಾಲಿಕಾವಲ್ ಠಾಣೆಗೆ ದೂರು ನೀಡಿದ್ದರು. ಅದರ ತನಿಖೆಯನ್ನು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರು ಸಿಸಿಬಿಗೆ ವರ್ಗಾಯಿಸಿದ್ದರು’ ಈ ತನಿಖೆಯ ಜಾಡು ಹಿಡಿದು ಸಿಸಿಬಿ ಪೊಲೀಸರು ನಾಗರಾಜ ಶೆಟ್ಟಿಯನ್ನು ಬಂಧಿಸಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...