Connect with us

    bangalore

    ಬೆಂಗಳೂರು: ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆಶಿ ಪ್ರಮಾಣ ವಚನ

    Published

    on

    ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ 2ನೇ ಬಾರಿಗೆ ಸಿದ್ದರಾಮಯ್ಯ ಅವರು ಹಾಗೂ ಮೊದಲ ಬಾರಿಗೆ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು.

    ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ 2ನೇ ಬಾರಿಗೆ ಸಿದ್ದರಾಮಯ್ಯ ಅವರು ಹಾಗೂ ಮೊದಲ ಬಾರಿಗೆ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು.

    ಮಧ್ಯಾಹ್ನ 12.30ಕ್ಕೆ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಪದಗ್ರಹಣ ಸಮಾರಂಭ ಆರಂಭಗೊಂಡಿದ್ದು, ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

    ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​​ ಸೇರಿದಂತೆ 10 ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸಿದರು.

    ಇವರಲ್ಲಿ ಇಂದು 8 ಶಾಸಕರು ಮಾತ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

    ಎಂ.ಬಿ. ಪಾಟೀಲ್, ಡಾ.ಜಿ.ಪರಮೇಶ್ವರ್, ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್​ ಪ್ರಮಾಣವಚನ ಸ್ವೀಕರಿಸಿದರು.

    ಪದಗ್ರಹಣ ಸಮಾರಂಭದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಸೇರಿದಂತೆ ಎನ್​ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಸಹಿತ ಹಲವು ಮಂದಿ ಗಣ್ಯಾತಿಗಣ್ಯರು ಉಪಸ್ಥಿತರಿದ್ದರು.

    bangalore

    ವರದಕ್ಷಿಣೆ ಕಿರುಕುಳ; ನೇ*ಣಿಗೆ ಶರಣಾದ ಟೆಕ್ಕಿ

    Published

    on

    ಮಂಗಳೂರು/ಬೆಂಗಳೂರು : ವರದಕ್ಷಿಣೆ ಕಿರುಕುಳದಿಂದ ಬೇಸತ್ತ ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಗಂಗಮ್ಮನ ಗುಡಿಯಲ್ಲಿ ನಡೆದಿದೆ. ಪೂಜಾ (22) ಜೀವಾಂತ್ಯಗೊಳಿಸಿದ ವಿವಾಹಿತೆ. ಪೂಜಾ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ.

    ಕಳೆದ ಎರಡು ವರ್ಷಗಳ ಹಿಂದೆ ಸುನೀಲ್ ಎಂಬಾತನನ್ನು ಪೂಜಾ ಮದುವೆಯಾಗಿದ್ದರು. ಮದುವೆಯಾದ ಬಳಿಕ ವರದಕ್ಷಿಣೆಗಾಗಿ ಪತಿ ಪೀಡಿಸುತ್ತಿದ್ದ. ಇದರಿಂದ ಮನನೊಂದು ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ.

    ಇದನ್ನೂ ಓದಿ : ಸೀಲ್ಡ್​ ತಂಪು ಪಾನೀಯ ಬಾಟಲ್ ಒಳಗಿತ್ತು ಜೇಡರ ಹುಳ!
    ಮಗಳ ಸಾವಿಗೆ ಪತಿ ಸುನೀಲ್ ಹಾಗೂ ಮೈದುನ ಅನಿಲ್ ಕಾರಣ ಎಂದು ಪೂಜಾ ಪೋಷಕರು ಆರೋಪಿಸಿದ್ದಾರೆ. ಈ ಬಗ್ಗೆ ಗಂಗಮ್ಮನಗುಜಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    bangalore

    ಈ ಪುಣ್ಯಕ್ಷೇತ್ರಕ್ಕೆ ಹೋಗಲು ರಾಜ್ಯ ಸರ್ಕಾರದಿಂದ ಸಹಾಯಧನ ಸಿಗಲಿದೆ..!

    Published

    on

    ಬೆಂಗಳೂರು : ಕರ್ನಾಟಕ ರಾಜ್ಯದಿಂದ ಕೈಲಾಸ ಮಾನಸ ಸರೋವರ ಹಾಘೂ ಚಾರ್‌ಧಾಮ್‌ ಯಾತ್ರಿಗಳಿಗೆ ಅನುದಾನ ನೀಡುವ ಕುರಿತು ಮುಜರಾಯಿ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಮಾನಸ ಸರೋವರ ಯಾತ್ರಿಗಳಿಗೆ ರೂ.30 ಸಾವಿರ, ಚಾರ್‌ಧಾಮ್‌ ಯಾತ್ರಿಗಳಿಗೆ ರೂ.20 ಸಾವಿರ , ಹಾಗೂ ಈಗಾಗಲೇ ಕಾಶಿ ಯಾತ್ರೆ ಕೈಗೊಂಡ 30 ಸಾವಿರ ಯಾತ್ರಿಗಳಿಗೆ ತಲಾ ರೂ.5 ಸಾವಿರ ಸಹಾಯಧನ ನೀಡಲಾಗುತ್ತದೆ.
    ಕೇವಲ ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳು ಮಾತ್ರ ಈ ಸಹಾಯಧನ ಪಡೆಯಲು ಅರ್ಹರಾಗಿದ್ದಾರೆ. ಈಗಾಗಲೇ ಈ ತೀರ್ಥ ಕ್ಷೇತ್ರಗಳಿಗೆ ಹೋಗಿ ಬಂದಿರುವವರು ಸಹಾಯಧನವನ್ನು ಪಡೆಯಲು ಅರ್ಹರಾಗಿದ್ದಾರೆ. ಇದಕ್ಕಾಗಿ ರೂ.25 ಪಾವತಿಸಿ ಸಂಬಂಧಿಸಿದ ವೆಬ್‌ಸೈಟ್ ಅಥವಾ ಮೊಬೈಲ್ ಆಪ್ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದಾಗಿದೆ.

    ಚಾರ್‌ಧಾಮ್ ಯಾತ್ರೆಯ ಮಾರ್ಗಸೂಚಿಗಳು

    • ಕರ್ನಾಟಕದ ಖಾಯಂ ನಿವಾಸಿಯಾಗಿದ್ದು, ಚುನಾವಣಾ ಗುರುತಿನ ಚೀಟಿ ಹಾಗೂ ಆಧಾರ್ ಕಾರ್ಡ್ ಅನ್ನು ಅಪ್‌ಲೋಡ್ ಮಾಡುವುದು.
    • 45 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ಮಾತ್ರ ಈ ಯೋಜನೆಯಡಿ ಸಹಾಯಧನವನ್ನು ಪಡೆಯಲು ಅರ್ಹರಾಗಿರುತ್ತಾರೆ. ಇದಕ್ಕೆ ವಯಸ್ಸಿಗೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ಅಪ್‌ಲೋಡ್ ಮಾಡಬೇಕು.
    • ಯಾತ್ರಾರ್ಥಿಗಳು ಸಹಾಯಧನವನ್ನು ಒಂದು ಬಾರಿ ಪಡೆದ ನಂತರದಲ್ಲಿ ಅದೇ ವ್ಯಕ್ತಿಗೆ ಮತ್ತೊಮ್ಮೆ ಅನುದಾನ ನೀಡಲಾಗುವುದಿಲ್ಲ.

    ಕಾಶಿ ಯಾತ್ರೆಯ ಮಾರ್ಗಸೂಚಿಗಳು

    • ಕರ್ನಾಟಕ ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳು ಆಯಾ ಆರ್ಥಿಕ ವರ್ಷದ ಮೊದಲ ದಿನಕ್ಕೆ ಅನ್ವಯಿಸುವಂತೆ ಏಪ್ರಿಲ್ 1ಕ್ಕೆ 18 ವರ್ಷಗಳ ಮೇಲ್ಪಟ್ಟವರಾಗಿರತಕ್ಕದ್ದು.
    • 18 ವಯಸ್ಸಿನ ಕೆಳಗಿನವರ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. 18 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ವಯಸ್ಸಿಗೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ಹಾಜರುಪಡಿಸಬೇಕು.

     

    ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಮಾರ್ಗಸೂಚಿಯನ್ನು ಇಲಾಖೆಯ ಅಧಿಕೃತ ವೆಬ್​ಸೈಟ್​ನಲ್ಲಿ ಪ್ರಕಟಿಸಲಾಗುತ್ತದೆ

    Continue Reading

    bangalore

    ಗೋಬಿ ಮಂಚೂರಿ ಆಯ್ತು..! ಈಗ ಚಿಕನ್‌ ಕಬಾಬ್‌, ಫಿಶ್‌ ಫುಡ್‌ ಮೇಲೆ ಕಣ್ಣು…!

    Published

    on

    ಮಂಗಳೂರು : ಫಿಶ್ ಸೇರಿದಂತೆ ಚಿಕನ್ ಕಬಾಬ್ ಆಹಾರದಲ್ಲಿ ಕೃತಕ ಬಣ್ಣ ಬೆರಸುವುದನ್ನ ನಿಷೇಧಿಸಿ ಆಹಾರ ಸುರಕ್ಷತಾ ಇಲಾಖೆ ಆದೇಶ ಹೊರಡಿಸಿದೆ. ಕೆಲವು ಆಹಾರಗಳಲ್ಲಿ ಕೃತಕ ಬಣ್ಣದ ಬಳಕೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಈ ಹಿಂದೆ ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿಗಳಲ್ಲಿ ಕೃತಕ ಬಣ್ಣಗಳ ಬಳಕೆಯನ್ನ ನಿಷೇಧಿಸಲಾಗಿತ್ತು.


    ಇದೀಗ ಆರೋಗ್ಯ ಸಚಿವರ ಸೂಚನೆಯಂತೆ ಪರಿಶೀಲನೆ ನಡೆಸಿದ ಅಧಿಕಾರಿಗಳು ಚಿಕನ್ ಕಬಾಬ್ ಮತ್ತು ಫಿಶ್ ಫುಡ್ ನಲ್ಲಿ ಕಲರಿಂಗ್ ಇರುವುದು ಪತ್ತೆಯಾಗಿದೆ. ಕೃತಕ ಬಣ್ಣ ಬೆರಸುವಿಕೆಯಿಂದಾಗಿ ಚಿಕನ್ ಕಬಾಬ್ ಕಳಪೆಯಾಗಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದು ಕಂಡುಬಂದಿದೆ. ಈ ಹಿನ್ನಲೆಯಲ್ಲಿ ಹಿನ್ನೆಲೆಯಲ್ಲಿ ಚಿಕನ್ ಕಬಾಬ್, ಫಿಶ್ ಆಹಾರಗಳಲ್ಲಿ ಕೃತಕ ಬಣ್ಣ ಬೆರಸುವಿಕೆಯನ್ನ ನಿಷೇಧಿಸಿ ಆಹಾರ ಸುರಕ್ಷತಾ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಕಾನೂನು ಉಲ್ಲಂಘಿಸಿದ್ರೆ 7 ವರ್ಷದಿಂದ ಜೀವಾವಧಿ ಶಿಕ್ಷೆ ಹಾಗೂ 10 ಲಕ್ಷ ವರೆಗಿನ ದಂಡ ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗುವುದು ಎಂದು ಎಚ್ಚರಿಸಲಾಗಿದೆ.

    ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ 39 ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ಪರೀಕ್ಷಿಸಲಾಗಿದೆ. 08 ಕಬಾಬ್‌ನ ಮಾದರಿಗಳು ಕೃತಕ ಬಣ್ಣದಿಂದ ಕೂಡಿರುವುದರಿಂದ ಅಸುರಕ್ಷಿತ ಎಂದು ವಿಶ್ಲೇಷಣಾ ವರದಿಗಳಲ್ಲಿ ಕಂಡುಬಂದಿದೆ.

    Continue Reading

    LATEST NEWS

    Trending