Friday, March 31, 2023

ಬೆಂಗಳೂರು: ಕಾರಿನ ಮೇಲೆ ನಿಯಂತ್ರಣ ತಪ್ಪಿ ಬಿದ್ದ ರೆಡಿಮಿಕ್ಸ್ ಟ್ರಕ್ : ತಾಯಿ ಮಗಳ ದುರ್ಮರಣ.!

ಬೆಂಗಳೂರು ಬನ್ನೇರುಘಟ್ಟ ಸಮೀಪದ ಬ್ಯಾಲಮರದ ದೊಡ್ಡಿ ಬಳಿ ನಿಯಂತ್ರಣ ತಪ್ಪಿ ಕಾಂಕ್ರಿಟ್ ಮಿಕ್ಸರ್ ಲಾರಿಯೊಂದು ಕಾರಿ ಮೇಲೆ ಉರುಳಿ ಬಿದ್ದಿದ್ದು ಕಾರಿನಲ್ಲಿದ್ದ ತಾಯಿ ಮಗಳು ಮೃತಪಟ್ಟಿದ್ದಾರೆ.

ಬೆಂಗಳೂರು : ಕಾಂಕ್ರಿಟ್ ರೆಡಿ ಮಿಕ್ಸ್ ಲಾರಿಯೊಂದು ಕಾರಿ ಮೇಲೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ತಾಯಿ ಮಗಳು ದಾರುಣವಾಗಿ ಮೃತಪಟ್ಟ ಘಟನೆ ಬೆಂಗಳೂರಿನ ಬನ್ನೇರುಘಟ್ಟ ಸಮೀಪದ ಬ್ಯಾಲಮರದ ದೊಡ್ಡಿ ಬಳಿ ಸಂಭವಿಸಿದೆ.

ಐಟಿ ಉದ್ಯೋಗಿ 47 ವರ್ಷದ ಗಾಯಿತ್ರಿ ಕುಮಾರ್ ಹಾಗೂ 16 ವರ್ಷದ ಸಮತಾ ಕುಮಾರ್  ಮೃತ ದುರ್ದೈವಿಗಳಾಗಿದ್ದಾರೆ.   ಮಗಳನ್ನು ಶಾಲೆಗೆ ಬಿಡಲು ಕಾರಿನಲ್ಲಿ ಬರುತ್ತಿದ್ದಾಗ ತಿರುವಿನಲ್ಲಿ ಅತಿವೇಗವಾಗಿ ಬಂದ ಕಾಂಕ್ರಿಟ್ ಲಾರಿ ನಿಯಂತ್ರಣ ತಪ್ಪಿ ಕಾರಿನ ಮೇಲೆ  ಉರುಳಿ ಬಿದ್ದಿದೆ.

ಮೃತ ಗಾಯಿತ್ರಿ ಕುಮಾರ್ ತರಳು ನಿವಾಸಿ ಸುನೀಲ್ ಕುಮಾರ್ ಎಂಬುವರ ಪತ್ನಿಯಾಗಿದ್ದು ದಂಪತಿ 20 ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಿದ್ದರು.

ನಾಲ್ಕು ಕ್ರೇನ್, ಒಂದು ಜೆಸಿಬಿ ಬಳಸಿ ಕಾಂಕ್ರಿಟ್ ಲಾರಿಯನ್ನು ತೆರವು ಮಾಡಲಾಗಿದ್ದು, ಸಂಚಾರಿ ಪೊಲೀಸರು ಟ್ರಕ್ ಚಾಲಕನನ್ನು ವಶಕ್ಕೆ ಪಡೆದು ಪ್ರಕರಣ ದಾಖಲು ಮಾಡಿದ್ದಾರೆ.

LEAVE A REPLY

Please enter your comment!
Please enter your name here

Hot Topics