Connect with us

    LATEST NEWS

    ಪೊಲೀಸ್‌ ಸಿಬಂದಿಯ ಸ್ಕೂಟರನ್ನೇ ಕದ್ದು ಹರಾಜು ಹಾಕಿದ ಪೊಲೀಸರು..!

    Published

    on

    ನಾಲ್ವರು ಪೊಲೀಸರ ನಡುವೆ ಒಂದು ಸ್ಕೂಟರ್ ವಿವಾದ ಸೃಷ್ಟಿಸಿದೆ. ಇಲ್ಲಿ ಪೊಲೀಸರೇ ಮತ್ತೋರ್ವ ಪೊಲೀಸರಿಗೆ ಅನ್ಯಾಯ ಎಸಗಿದ್ದಾರೆ.

    ಬೆಂಗಳೂರು: ಪೊಲೀಸರು ಅಂದರೆ ಸಮಾಜದಲ್ಲಿ ಗೌರವದ ಸ್ಥಾನವಿದೆ. ಅವರು ಕಾನೂನು ಪಾಲಕರು, ನ್ಯಾಯ ಒದಗಿಸುತ್ತಾರೆ, ಕಷ್ಟ ಬಂದಾಗ ನೆರವಾಗುತ್ತಾರೆ ಎಂಬಿತ್ಯಾದಿ ಭಾವನೆ ಜನರಲ್ಲಿದೆ.

    ಅದಕ್ಕೆ ತಕ್ಕಂತೆ ನ್ಯಾಯ ಒದಗಿಸಿ ಜನರ ವಿಶ್ವಾಸಕ್ಕೆ ಪಾತ್ರರಾದ ಪೊಲೀಸರು ನಮ್ಮ ನಡುವೆ ಸಾಕಷ್ಟು ಮಂದಿ ಇದ್ದಾರೆ.

    ಆದರೆ ಇದಕ್ಕೆ ವ್ಯತಿರಿಕ್ತವಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಾಲ್ವರು ಪೊಲೀಸರ ನಡುವೆ ಒಂದು ಸ್ಕೂಟರ್ ವಿವಾದ ಸೃಷ್ಟಿಸಿದೆ. ಇಲ್ಲಿ ಪೊಲೀಸರೇ ಮತ್ತೋರ್ವ ಪೊಲೀಸರಿಗೆ ಅನ್ಯಾಯ ಎಸಗಿದ್ದಾರೆ.

    ಕಳೆದು ಹೋದ ಸ್ಕೂಟರ್ ಪತ್ತೆಯೇ ಆಗಿಲ್ಲ ಎಂದು ಸುಳ್ಳು ಹೇಳಿದ್ದಲ್ಲದೆ ಅದನ್ನು ಹರಾಜಿನಲ್ಲಿ ಮತ್ತೋರ್ವ ಸಿಬಂದಿಯ ಪತ್ನಿಗೆ 4000 ರೂಪಾಯಿಗೆ ಮಾರಾಟ ಮಾಡಿದ್ದಾರೆ. 3 ವರ್ಷಗಳ ಹಿಂದೆ ನಡೆದ ಕಳವು ಪ್ರಕರಣ ಇದೀಗ ಸರಕಾರ ಸಂಚಾರ ನಿಯಮ ಉಲ್ಲಂಘನೆಯ ದಂಡದಲ್ಲಿ ಶೇ.50 ರಿಯಾಯತಿ ಘೋಷಿಸಿದ ಹಿನ್ನೆಲೆಯಲ್ಲಿ ಬೆಳಕಿಗೆ ಬಂದಿದೆ.

    ಹಾಗಾದರೆ ಏನಿದು ಘಟನೆ… ಈ ಸ್ಟೋರಿ ನೋಡಿ..
    ಕಸ್ಟಮ್ಸ್ ಮತ್ತು ಸೆಂಟ್ರಲ್ ಎಕ್ಸೈಸ್‍ ಕಾನ್‍ಸ್ಟೆಬಲ್ ಆಗಿದ್ದ ಎ. ನಾಗರಾಜು ಅವರ ಗಿಯರ್‌ ಲೆಸ್‌ ಸ್ಕೂಟರ್ 2020 ಆಗಸ್ಟ್‌ 12 ರಂದು ಬೆಂಗಳೂರಿನ ಕೆಮ್ಮಗೊಂಡನಹಳ್ಳಿಯಲ್ಲಿರುವ ಅವರ ನಿವಾಸದ ಆವರಣದಿಂದ ಕಳವಾಗಿತ್ತು.

    ಈ ಬಗ್ಗೆ ನಾಗರಾಜು 2020 ನವೆಂಬರ್ 8 ರಂದು ಗಂಗಮ್ಮನಗುಡಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಆದರೆ ನಾಗರಾಜು ದೂರು ನೀಡುವ ಮೊದಲೇ ಅಂದರೆ ನವೆಂಬರ್‌ 4 ರಂದೇ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸ್ಕೂಟರ್ ಅನ್ನು ಹರಾಜು ಮಾಡಲಾಗುತ್ತದೆ.

    ಆಶಾ ರವಿ ಎಂಬ ಮಹಿಳೆ 4,000 ರೂಪಾಯಿಗೆ ಬಿಡ್ ಮಾಡಿ ಸ್ಕೂಟರ್ ಪಡೆಯುತ್ತಾರೆ. ಆಕೆ ಬೇರೆ ಯಾರೂ ಅಲ್ಲ, ಬ್ಯಾಡರಹಳ್ಳಿಯಲ್ಲಿ ಆಗ ಹೆಡ್ ಕಾನ್‍ಸ್ಟೆಬಲ್ ಆಗಿದ್ದ ರವಿ ಅವರ ಪತ್ನಿ. ರಾಜೀವ್ ಎನ್ನುವವರು ಆಗ ಪೊಲೀಸ್ ಇನ್‍ಸ್ಪೆಕ್ಟರ್ ಆಗಿದ್ದರು.

    2021ರ ಮಾರ್ಚ್‍ನಲ್ಲಿ ಗಂಗಮ್ಮನಗುಡಿ ಪೊಲೀಸರು ನಾಗರಾಜು ಅವರ ಸ್ಕೂಟರ್ ಪತ್ತೆಯಾಗಿಲ್ಲ ಎಂದು ಹೇಳಿ ಪ್ರಕರಣವನ್ನು ಕ್ಲೋಸ್‌ ಮಾಡಿದ್ದರು.

    ಇತ್ತೀಚೆಗೆ ಸರಕಾರ ಸಂಚಾರ ನಿಯಮ ಉಲ್ಲಂಘನೆ ದಂಡದಲ್ಲಿ ಶೇ.50 ರಿಯಾಯತಿ ಘೋಷಿಸಿತ್ತು. ಸ್ಕೂಟರ್ ಮಾಲಕ ನಾಗರಾಜು ಅವರು ಕುತೂಹಲದಿಂದ ತನ್ನ ಕಳವಾಗಿದ್ದ ಸ್ಕೂಟರಿನ ನೋಂದಣಿ ಸಂಖ್ಯೆಯನ್ನು ನಮೂದಿಸಿದಾಗ ಅವರಿಗೆ ಅಚ್ಚರಿ ಕಾದಿತ್ತು.

    ಕಳವಾಗಿದ್ದ ತನ್ನ ಸ್ಕೂಟರ್‌ ವಿರುದ್ಧ ಇತ್ತೀಚೆಗೆ ದಾಖಲಾಗಿದ್ದ ಸಂಚಾರ ಉಲ್ಲಂಘನೆ ಪ್ರಕರಣ ಅವರ ಗಮನಕ್ಕೆ ಬಂದಿದೆ. ಮಹಿಳೆಯೊಬ್ಬರು ಹೆಲ್ಮೆಟ್ ಇಲ್ಲದೆ ಈ ಸ್ಕೂಟರ್‌ ಚಲಾಯಿಸಿದ ಬಗ್ಗೆ ಕೇಸ್ ಬಿದ್ದಿತ್ತು.

    ನಾಗರಾಜು ಕೂಡಲೇ ಮಹಿಳೆಯ ವಿಳಾಸ ಪತ್ತೆ ಹಚ್ಚಿದಾಗ ಆಕೆ ಹೆಡ್ ಕಾನ್‍ಸ್ಟೆಬಲ್ ರವಿಯ ಪತ್ನಿ ಎಂದು ತಿಳಿದು ಬಂತು.

    ಕೂಡಲೇ ಅವರು ರವಿ ಮತ್ತು ರಾಜೀವ್ ಅವರಿಂದ ವಿವರಣೆ ಕೋರಿದರು. ಈ ಸಂದರ್ಭದಲ್ಲಿ ನಾಗಾರಾಜು, ರವಿ ಮತ್ತು ರಾಜೀವ್ ನಡುವೆ ತೀವ್ರ ವಾಗ್ವಾದ ನಡೆಯಿತು, ಆದರೆ ನಾಗರಾಜು ಯಾವುದೇ ದೂರು ದಾಖಲಿಸಲಿಲ್ಲ.

    ನಾಜರಾಜು ಪ್ರಕರಣ ದಾಖಲಿಸದಿದ್ದರೂ ಈ ಘಟನೆ ನಡೆದ ಮರುದಿನ ಈ ಕುರಿತು ಸ್ಥಳೀಯ ದಿನಪತ್ರಿಕೆಯಲ್ಲಿ ಸುದ್ದಿ ಪ್ರಕಟವಾಯಿತು.

    ಅದನ್ನು ಓದಿದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಈ ಬಗ್ಗೆ ಸ್ವಯಂಪ್ರೇರಿತ ಕ್ರಮ ಕೈಗೊಂಡು, ಮೂವರನ್ನೂ ವಿಚಾರಣೆಗೆ ಒಳಪಡಿಸಿದರು.

    ಸ್ಕೂಟರ್‌ ಕದ್ದು ಹರಾಜಿಗೆ ಹಾಕಿದ ಆರೋಪದ ಮೇಲೆ ಇಬ್ಬರು ಪೊಲೀಸರನ್ನು ಅಮಾನತು ಶಿಕ್ಷೆಗೆ ಒಳಪಡಿಸ ಬೇಕೆಂಬ ಒತ್ತಾಯ ಕೇಳಿ ಬಂದಿದೆ.

    ಕದ್ದ ಸ್ಕೂಟರ್ ಅನ್ನು ನಿಗದಿತ ನಿಯಮಾವಳಿಗಳನ್ನು ಪಾಲಿಸದೆ ಹರಾಜು ಹಾಕಿ ನ್ಯಾಯಾಲಯಕ್ಕೆ ಸುಳ್ಳು ಹೇಳಿದ್ದ ಆರೋಪದ ಮೇಲೆ, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ರವಿ ಮತ್ತು ನೆಲಮಂಗಲ ಟೌನ್ ಪೊಲೀಸ್ ಇನ್ಸ್ ಪೆಕ್ಟರ್ ರಾಜೀವ್ ವಿರುದ್ಧ ಪೊಲೀಸರು ವಿಚಾರಣೆ ನಡೆಸಿದ್ದಾರೆ.

    ತನಿಖಾ ವರದಿಯು ಈಗ ನೃಪತುಂಗ ರಸ್ತೆಯ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರೀಕ್ಷಕರ ಕಚೇರಿಯಲ್ಲಿದೆ.

    ದ್ವಿಚಕ್ರ ವಾಹನವನ್ನು ಈಗ ಅದರ ನಿಜವಾದ ಮಾಲಕರಿಗೆ ಹಿಂತಿರುಗಿಸಲಾಗಿದೆ. ಪೊಲೀಸರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಮಾಲಕರು ಹೇಳಿದ್ದಾರೆ. ಹಾಗಾಗಿ ಪ್ರಕರಣವು ನ್ಯಾಯಾಲಯದ ಮೆಟ್ಟಲೇರುವ ಸಾಧ್ಯತೆ ಇದೆ.

    LATEST NEWS

    ನೀರಸ ಪ್ರದರ್ಶನ ಮುಂದುವರಿಸಿದ ಭಾರತ: ವಿವದಾತ್ಮಕ ತೀರ್ಪಿಗೆ ರಾಹುಲ್ ಬಲಿ !

    Published

    on

    ಮಂಗಳೂರು/ಆಸ್ಟ್ರೇಲಿಯಾ: ಪರ್ತ್ ನಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೊದಲ ಟೆಸ್ಟ್ ನಲ್ಲಿ ಪ್ರವಾಸಿ ಭಾರತ ತಂಡ ತನ್ನ ಬ್ಯಾಟಿಂಗ್ ವೈಫಲ್ಯ ಮುಂದುವರಿಸಿದೆ.


    ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಟೀಂ ಇಂಡಿಯಾ ಕೆ ಎಲ್ ರಾಹುಲ್, ರಿಷಭ್ ಪಂತ್, ನಿತೀಶ್ ಕುಮಾರ್ ರೆಡ್ಡಿ ಸ್ವಲ್ಪ ಹೊತ್ತು ಕ್ರೀಸ್ ನಲ್ಲಿ ನಿಂತಿದ್ದು ಬಿಟ್ಟರೆ, ಉಳಿದವರಿಂದ ನ್ಯೂಜಿಲೆಂಡ್ ವಿರುದ್ದದ ಪಂದ್ಯದಲ್ಲಿ ನೀಡಿದ್ದ ಅದೇ ನೀರಸ ಪ್ರದರ್ಶನ ಮುಂದುವರಿಯಿತು.
    ಬ್ಯಾಟಿಂಗ್ ಆರಂಭಿಸಿದ ಭಾರತಕ್ಕೆ ಆರಂಭದಲ್ಲೇ ಜೊತೆಯಾಟ ಮುಂದುವರಿಸಲು ಸಾಧ್ಯವಾಗಲಿಲ್ಲ. 5 ರನ್ ಅಷ್ಟೇ ಜೊತೆಯಾಟವಾಡಿದ ಯಶಸ್ವಿ ಜೈಸ್ವಾಲ್ ಮತ್ತು ಕೆ.ಎಲ್ ರಾಹುಲ್ ಜೋಡಿ, ಜೈಸ್ವಾಲ್ ಶೂನ್ಯಕ್ಕೆ ವಿಕೆಟ್ ಒಪ್ಪಿಸುವುದರ ಮೂಲಕ ಆರಂಭಿಕ ನಿರಾಸೆ ಮೂಡಿಸಿದರು. ನಂತರ ಬಂದ ದೇವದತ್ ಪಡಿಕ್ಕಲ್, ಜೋಶ್ ಹೇಜಲ್ ವುಡ್ ಮಾರಕ ದಾಳಿಗೆ ಖಾತೆ ತೆರೆಯಲು ಕೂಡ ಸಾಧ್ಯವಾಗದೇ ಪೆವಿಲಿಯನ್ ಗೆ ಮರಳಿದರು.

    ಇದನ್ನೂ ಓದಿ:ನ್ಯೂ ಇಯರ್ ನಶೆಗೆ ಸಿಸಿಬಿ ಬ್ರೇಕ್‌..! 6 ಕೋಟಿ ಮೌಲ್ಯದ ಡ್ರ*ಗ್ಸ್‌ ಜಪ್ತಿ..!
    ಅಪಾರ ನಿರೀಕ್ಷೆಗಳ ಸಾಗರವೇ ಹೊತ್ತು ಬ್ಯಾಟಿಂಗ್ ಗೆ ಇಳಿದಿದ್ದ ವಿರಾಟ್ ಕೊಹ್ಲಿ ಮತ್ತೆ ನಿರಾಸೆ ಮೂಡಿಸಿದ್ದಾರೆ, ಕೇವಲ 5 ರನ್ ಗಳಸಿ ಔಟಾದರು. ನಂತರ ಬಂದ ಪಂತ್ ಆಟ ಲಯಕ್ಕೆ ತಂದರಾದರೂ ಇವರಿಗೆ ಯಾರೂ ಕೂಡ ಜೋಡಿಯಾಗಿ ನಿಲ್ಲಲೇ ಇಲ್ಲ. ಧ್ರುವ್ ಜುರೆಲ್ 11 ರನ್ ಗಳಿಗೆ ಔಟಾದರೆ, ವಾಷಿಂಗ್ಟನ್ ಸುಂದರ್ ಕೂಡ ನಾಲ್ಕು ರನ್ ಗೆ ಸುಸ್ತಾದರು. ಆದರೆ 7 ನೇ ವಿಕೆಟ್ ಗೆ ಪಂತ್‌ ಮತ್ತು ನಿತೀಶ್ 48 ರನ್ ಗಳ ಜೊತೆಯಾಟ ನೀಡಿದರು.
    ನಂತರ ಬಂದ ಹರ್ಷಿತ್ ರಾಣಾ 7 ರನ್ ಗಳಿಸಿ ಔಟಾದರು. ಇನ್ನೂ ಬುಮ್ರಾ 8 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಈ ಮೂಲಕ ಭಾರತದ ಕಳಪೆ ಬ್ಯಾಟಿಂಗ್ ಪ್ರದರ್ಶನ ಮುಂದುವರಿಯಿತು.

    ಅಂಪೈರ್ ತೀರ್ಪು ವಿರುದ್ದ ರಾಹುಲ್ ಅಸಮಾಧಾನ:

    ಮಿಚೆಲ್ ಸ್ಟಾರ್ಕ್ ಎಸೆತವನ್ನು ರಾಹುಲ್ ಹೊಡೆಯಲು ಮುಂದಾದಾಗ, ಅದು ರಾಹುಲ್ ಅವರ ಬ್ಯಾಟ್ ನ ಸಮೀಪ ಹಾದು ಹೋಗಿ ವಿಕೆಟ್ ಕೀಪರ್ ಅಲೆಕ್ಸ್ ಕ್ಯಾರಿ ಕ್ಯಾಚ್ ಹಿಡಿದರು. ತಕ್ಷಣವೇ ಫೀಲ್ಡ್ ಅಂಪೈರ್ ಬಳಿ ಮನವಿ ಮಾಡಿದರು. ನಂತರ ಆಸೀಸ್ ತಂಡ ಥರ್ಡ್ ಅಂಪೈರ್ ಮೊರೆ ಹೋದರು. ಇದನ್ನು ಪುರಸ್ಕರಿಸಿದ ಮೂರನೇ ಅಂಪೈರ್ ರಾಹುಲ್ ಔಟ್ ಎಂದು ಘೋಷಿಸಿದರು.
    ಸ್ಟಾರ್ಕ್ ಎಸೆದ ಚೆಂಡು ರಾಹುಲ್ ಬ್ಯಾಟ್ ತಾಗಿದೆಯೇ ಅಥವಾ ಪ್ಯಾಡ್ ಗೆ ತಾಗಿದೆಯೇ ಎಂಬುದು ಸ್ಪಷ್ಟವಾಗಿರಲಿಲ್ಲ. ರೀಪ್ಲೇಯಲ್ಲಿ ವಿವಿಧ ಆಯಾಮಗಳಿಂದ ಪರಿಶೀಲಿಸಿದ ನಂತರ, ಸ್ನಿಕ್ಕೋಮೀಟರ್ ಏರಿಳಿತವನ್ನು ಆಧರಿಸಿ ರಾಹುಲ್ ಔಟ್ ಎಂದು ತೀರ್ಪು ನೀಡಲಾಯಿತು. ಇದರಿಂದ ರಾಹುಲ್ ಅಸಮಾಧಾನದಿಂದಲೇ ಹೊರ ನಡೆದರು.

    Continue Reading

    Baindooru

    ನ್ಯೂ ಇಯರ್ ನಶೆಗೆ ಸಿಸಿಬಿ ಬ್ರೇಕ್‌..! 6 ಕೋಟಿ ಮೌಲ್ಯದ ಡ್ರ*ಗ್ಸ್‌ ಜಪ್ತಿ..!

    Published

    on

    ಬೆಂಗಳೂರು : ಮಾದಕ ವಸ್ತು ಮಾರಾಟ, ಸಾಗಾಟ ಜಾಲದ ಮೇಲೆ ಕಣ್ಣಿಟ್ಟಿರುವ ಸಿಸಿಬಿ ಅಧಿಕಾರಿಗಳು ಬರೋಬ್ಬರಿ 6 ಕೋಟಿ ರೂ. ಮೌಲ್ಯದ ಮಾ*ದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಪ್ರತ್ಯೇಕ ಪ್ರಕರಣದಲ್ಲಿ ಬೆಂಗಳೂರು ಪೊಲೀಸರು ಹಾಗೂ ಸಿಸಿಬಿ  ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ  ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

    ಹೊಸ ವರ್ಷಕ್ಕೆ ಗಾಂ*ಜಾ ಸಪ್ಲೈ :
    ಹೊಸ ವರ್ಷಾಚರಣೆಯ ಸಲುವಾಗಿ ಕ್ವಿಂಟಾಲ್ ಗಟ್ಟಲೆ ಗಾಂ*ಜಾ ಸಪ್ಲೈ ಮಾಡುತ್ತಿದ್ದ ಆರೋಪಿಗಳನ್ನು ಬೆಂಗಳೂರಿನ ಗೋವಿಂದಪುರ ಠಾಣೆ ಪೊಲೀಸರು ಸೆರೆ ಹಿಡಿದಿದ್ದಾರೆ. ಪೆಡ್ಲರ್ ಅಚ್ಚು ಹಾಗೂ ಜಮೀರ್, ರೇಷ್ಮಾ ದಂಪತಿ ಬಂಧಿತರು. ಆರೋಪಿಗಳಿಂದ 3.25 ಕೋಟಿ ರೂಪಾಯಿ ಮೌಲ್ಯದ 318 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ.

    ಮೂವರು ಆರೋಪಿಗಳು ಒಡಿಶಾ ಮತ್ತು ಆಂಧ್ರದಲ್ಲಿ ಗಾಂ*ಜಾ ಸಂಗ್ರಹಿಸಿದ್ದರು. ಹೊಸ ವರ್ಷಾಚರಣೆ ವೇಳೆ ಬೆಂಗಳೂರು, ಕೇರಳದಲ್ಲಿ ಮಾರಾಟ ಮಾಡಲು ಯೋಜಿಸಿದ್ದರು. ಜಮೀರ್ ಮತ್ತು ರೇಷ್ಮಾ ದಂಪತಿ ಬೆಂಗಳೂರಿನಲ್ಲಿ, ಪೆಡ್ಲರ್ ಅಚ್ಚು ಕೇರಳದಲ್ಲಿ ಗಾಂ*ಜಾ ಮಾರಲು ನಿರ್ಧರಿಸಿದ್ದ ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ.

    ಬೆಂಗಳೂರು ಮತ್ತು ಕೇರಳಕ್ಕೆ ಸಾಗಿಸಲು ಆರೋಪಿಗಳು ಸೆಲ್ಫ್ ಡ್ರೈವಿಂಗ್ ಕಾರು ಬಾಡಿಗೆಗೆ ಪಡೆದಿದ್ದರು. ಬಳಿಕ ಬೆಡ್ ಶೀಟ್ ನಲ್ಲಿ ಗಾಂಜಾ ತುಂಬಿ ಕಾರಿನಲ್ಲಿ ಬೆಂಗಳೂರಿಗೆ ತರುತ್ತಿದ್ದರು . ಗಾಂಜಾ ತರುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಗೋವಿಂದಪುರ ಠಾಣೆ ಪೊಲೀಸರು ಹೆಚ್ ಬಿ ಆರ್ ಲೇಔಟ್ ಬಳಿ ಕಾರನ್ನು ಅಡ್ಡ ಹಾಕಿದ್ದಾರೆ. ಪೊಲೀಸರು ಪರಿಶೀಲನೆ ನಡೆಸುವಾಗ ಕಾರಿನಲ್ಲಿ 3 ಕೋಟಿ ರೂ. ಮೌಲ್ಯದ ಗಾಂ*ಜಾ ಪತ್ತೆಯಾಗಿದೆ. ಕೂಡಲೇ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಡ್ರಗ್ ಪೆಡ್ಲರ್ ಅಚ್ಚು ಕೇರಳ ಪೊಲೀಸರಿಗೆ ಬೇಕಾದ ಮೋಸ್ಟ್ ವಾಂಟೆಡ್  ಆರೋಪಿ ಎಂಬುದು ವಿಚಾರಣೆ ವೇಳೆ ತಿಳಿದು ಬಂದಿದ್ದು, ಆತನ ವಿರುದ್ಧ ಕೇರಳದ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ ಎಂದು ತಿಳಿದುಬಂದಿದೆ.

    ಇಬ್ಬರು ವಿದೇಶಿ ಡ್ರಗ್ ಪೆಡ್ಲರ್ಸ್ ಅರೆಸ್ಟ್ :

    ಬೆಂಗಳೂರಿನಲ್ಲಿ ವಿದೇಶಿ ಡ್ರ*ಗ್ ಪೆಡ್ಲರ್ ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.  ಬಂಧಿತರ ಬಳಿಯಿದ್ದ 3 ಕೋಟಿ ಮೌಲ್ಯದ ಸಿಂಥೆಟಿಕ್ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಡ್ರಗ್ಸ್ ಸಂಗ್ರಹಿಸಿಟ್ಟಿದ್ದ ಮನೆ ಮೇಲೆ ದಾ*ಳಿ ನಡೆಸಿದ ಸಿಸಿಬಿ ಅಧಿಕಾರಿಗಳು,  1 ಕೆಜಿ 520 ಗ್ರಾಂ ಎಂಡಿಎಂಎ ಕ್ರಿಸ್ಟಲ್, 202 ಗ್ರಾಂ ಕೊಕೇನ್, 12 ಗ್ರಾಂ ಎಂಡಿಎಂಎ ಎಕ್ಸೆಟೆಸಿ ಪಿಲ್ಸ್ ಗಳನ್ನು ವಶಕ್ಕೆ ಪಡೆದಿದ್ದಾರೆ.

    ಇದನ್ನೂ ಓದಿ : ಏನಾಶ್ಚರ್ಯ ? ಈ ಡಯಟ್​ನಿಂದ ಪತ್ನಿಯ 4ನೇ ಸ್ಟೇಜ್ ಸ್ತನ ಕ್ಯಾನ್ಸರ್ ಮಾಯ !!
    ಆರೋಪಿಗಳು ಮುಂಬೈನಿಂದ ಬೆಂಗಳೂರಿಗೆ ಡ್ರ*ಗ್ಸ್ ತರಿಸುತ್ತಿದ್ದರು. ಹೊಸ ವರ್ಷಾಚರಣೆಯಂದು ಬೆಂಗಳೂರಿನಲ್ಲಿ ಮಾರಲು ಸಜ್ಜಾಗಿದ್ದರು ಎಂದು ತಿಳಿದು ಬಂದಿದೆ. ಅಲ್ಲದೇ, ಈ ವಿದೇಶಿ ಪೆಡ್ಲರ್ ಗಳು ಮೆಡಿಕಲ್ ವೀಸಾದಡಿ ಭಾರತಕ್ಕೆ ಬಂದಿದ್ದರು ಎಂಬುದು ತನಿಖೆ ವೇಳೆ ಬಹಿರಂಗವಾಗಿದೆ.

    Continue Reading

    Baindooru

    ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!

    Published

    on

    ಫ್ರಿಜ್ಜಿನ್ನಲ್ಲಿರಿಸಿದ ಅಹಾರಗಳು ತಾಜಾತನವನ್ನು ಉಳಿಸಿಕೊಳ್ಳಲು ಕಾರಣವೆಂದರೆ ಶೀತಲೀಕರಣ. ಆದರೆ, ಈ ಪರಿ ಎಲ್ಲಾ ಬಗೆಯ ಅಹಾರಗಳಿಗೆ ಅನ್ವಯಿಸಲಾರದು. ಕೆಲವು ಫಲಗಳಂತೂ ಫ್ರಿಜ್ಜಿನಲ್ಲಿಟ್ಟರೇ ಸಾಕು, ಚೆನ್ನಾಗಿರುವ ಬದಲು ಹಾಳಾಗಲು ತೊಡಗುತ್ತವೆ. ಇಂದಿನ ಲೇಖನದಲ್ಲಿ ಈ ಗುಣವಿರುವ ಕೆಲವು ಫಲಗಳ ಬಗ್ಗೆ ವಿವರಿಸಲಾಗಿದೆ. ಇವನ್ನು ಫ್ರಿಜ್ಜಿನಲ್ಲಿಡುವ ಬದಲು ತಣ್ಣನೆಯ ಸ್ಥಳದಲ್ಲಿ ಗಾಳಿಯಾಡದಂತೆ ಶೇಖರಿಸಬೇಕು. ಈ ಫಲಗಳು ಯಾವುವು ಎಂಬುದನ್ನು ನೋಡೋಣ.

    ಬಾಳೆಹಣ್ಣು

    ಬಾಳೆಹಣ್ಣುಗಳನ್ನು ಎಂದಿಗೂ ಫ್ರಿಜ್ಜಿನಲ್ಲಿ ಸಂಗ್ರಹಿಸಬಾರದು. ಏಕೆಂದರೆ ಬಾಳೆಹಣ್ಣಿನ ತಾಪಮಾನ ಸಾಮಾನ್ಯ ತಾಪಮಾನಕ್ಕಿಂತ ಕಡಿಮೆಯಾದರೆ, ಇದರ ಸಿಪ್ಪೆ ಶೀಘ್ರವೇ ಕಪ್ಪಾಗುತ್ತದೆ ಹಾಗೂ ಸಿಪ್ಪೆಯ ಅಡಿಯಲ್ಲಿನ ತಿರುಳು ಕೂಡಾ ಕೊಳೆಯಲು ತೊಡಗುತ್ತದೆ.

     

    ಕಲ್ಲಂಗಡಿ

    ಬೇಸಿಗೆಯಲ್ಲಿ ಜನರು ಅತಿ ಹೆಚ್ಚಾಗಿ ಇಷ್ಟಪಡುವ ಫಲವಾದ ಕಲ್ಲಂಗಡಿಯನ್ನೂ ಫ್ರಿಜ್ಜಿನಲ್ಲಿ ಇರಿಸಬಾರದು. ಆದರೆ, ಸಾಮಾನ್ಯವಾಗಿ ಕಲ್ಲಗಂಡಿ ದೊಡ್ಡ ಗಾತ್ರದಲ್ಲಿದ್ದು ಇದನ್ನು ಕತ್ತರಿಸಿದಾಗ ದೊರಕುವ ಆಗಾಧ ಪ್ರಮಾಣವನ್ನು ಫ್ರಿಜ್ಜಿನಲ್ಲಿ ಸಂಗ್ರಹಿಸದೇ ಬೇರೆ ಮಾರ್ಗವಿಲ್ಲ. ಆದರೆ, ನಿಸರ್ಗಕ್ಕೆ ನಿಮ್ಮ ಈ ಅಗತ್ಯತೆಯ ಅರಿವಿಲ್ಲ. ಸೇಬನ್ನು ಕತ್ತರಿಸಿ ಕೊಂಚ ಹೊತ್ತು ಇರಿಸಿದಾಗ ಗಾಳಿಗೆ ತೆರೆದ ಭಾಗ ಕಪ್ಪಗಾಗುತ್ತದೆ. ಕಲ್ಲಂಗಡಿ ಹಣ್ಣಿನಲ್ಲಿಯೂ ಹೀಗೇ, ಗಾಳಿಗೆ ಒಡ್ಡಿದ ಭಾಗದ ಆಂಟಿ ಆಕ್ಸಿಡೆಂಟುಗಳು ರಾಸಾಯನಿಕ ಕ್ರಿಯೆಗೆ ಒಳಪಟ್ಟು ಶೀಘ್ರವೇ ಹುಳಿಯಾಗುತ್ತದೆ.

     

    ಸೇಬು

    ಸೇಬು ಹಣ್ಣುಗಳು 90% ತೇವಾಂಶವನ್ನು ಹೊಂದಿರುವ ಪರಿಸರದಲ್ಲಿ ಹೆಚ್ಚು ಹೊತ್ತು ಕೆಡದೇ ತಾಜಾತನವನ್ನುಉಳಿಸಿಕೊಳ್ಳುತ್ತವೆ. ಆದರೆ ನಮ್ಮ ರೆಫ್ರಿಜರೇಟರ್ ನೈಸರ್ಗಿಕ ಡಿಹೈಡ್ರೇಟರ್ ಅಥವಾ ತೇವಾಂಶ ಇರದ ಸ್ಥಳವಾಗಿದೆ. ಹಾಗಾಗಿ, ಫ್ರಿಜ್ಜಿನಲ್ಲಿಟ್ಟ ಸೇಬು ತೇವಾಂಶದ ಕೊರತೆಗೆ ಒಡ್ಡಿಕೊಳ್ಳುತ್ತವೆ. ಈ ಸ್ಥಿತಿಯಲ್ಲಿ ಸೇಬಿನಲ್ಲಿರುವ ಇಥೈಲೀನ್ ಹಾಗೂ ಇತರ ಕಿಣ್ವಗಳು ತಿರುಳನ್ನು ಅತಿ ಶೀಘ್ರವಾಗಿ ಹಣ್ಣಾಗಿಸುತ್ತವೆ ಹಾಗೂ ಕೊಳೆಯಲು ಪ್ರಾರಂಭಿಸುತ್ತದೆ.

    ಮಾವಿನ ಹಣ್ಣು

    ಮಾವಿನ ಹಣ್ಣನ್ನು ಫ್ರಿಜ್ಜಿನಲ್ಲಿ ಇರಿಸಿದರೆ ಇದರಲ್ಲಿರುವ ಆಂಟಿ ಆಕ್ಸಿಡೆಂಟುಗಳ ಪ್ರಮಾಣ ತಗ್ಗತೊಡಗುತ್ತದೆ. ಹಾಗಾಗಿ ಮಾವಿನ ಹಣ್ಣಿನ ಪೌಷ್ಟಿಕ ಮೌಲ್ಯಗಳು ಕಡಿಮೆಯಾಗುತ್ತವೆ. ಈ ಹಣ್ಣುಗಳನ್ನು ಫ್ರಿಜ್ಜಿನಲ್ಲಿರಿಸಿದರೆ ಮಾವಿನ ಹಣ್ಣು ವಿಷಕಾರಿ ಯಾಗ ಬಹುದು. ಬದಲಿಗೆ ಇನ್ನೂ ಕಾಯಿಯಾಗಿರುವ ಮಾವು ಗಳನ್ನು ತಂದು ಬೆಚ್ಚಗಿರುವ ಮತ್ತು ನೆರಳಿನ ಸ್ಥಳದಲ್ಲಿ ಇರಿಸಿ ಒಂದೆರಡು ದಿನಗಳ ಬಳಿಕ ಸ್ವಾಭಾವಿಕವಾಗಿ ಹಣ್ಣಾಗುವಂತೆ ಮಾಡಿ ಸೇವಿಸಿ​.

    ಲಿಚ್ಚಿ

    ಬೇಸಿಗೆಯಲ್ಲಿ ಸೇವಿಸಲು ರುಚಿಕರವಾದ ಚಿಕ್ಕ ಗೋಲಿಗ ಳಂತಿರುವ ಲಿಚ್ಚಿ ಹಣ್ಣುಗಳನ್ನು ಎಂದಿಗೂ ಫ್ರಿಜ್ಜಿನಲ್ಲಿ ಇರಿಸ ಬಾರದು. ಏಕೆಂದರೆ, ತಂಪಾದ ತಾಪಮಾನದಲ್ಲಿ ಇದರ ತಿರುಳು ಕೊಳೆಯಲು ಆರಂಭಿಸುತ್ತದೆ. ಆದರೆ, ಸಿಪ್ಪೆ ಮಾತ್ರ ಹಾಳಾಗದೇ ಹಾಗೇ ಉಳಿದಿರುತ್ತದೆ. ಫ್ರಿಜ್ಜಿ ನಿಂದ ತೆಗೆದು ನೋಡಿದ ಲಿಚ್ಚಿಯ ಸಿಪ್ಪೆ ಚೆನ್ನಾಗಿರು ವಂತೆಯೇ ಕಂಡುಬಂದರೂ ಒಳಗಿನ ತಿರುಳು ಕೊಳೆತಿರುತ್ತದೆ.

    Continue Reading

    LATEST NEWS

    Trending