bangalore
ಬೆಂಗಳೂರು: ವಿನಯ್ ಗುರೂಜಿ ಹೆಸ್ರಲ್ಲಿ ನಕಲಿ ಫೇಸ್ಬುಕ್ ಅಕೌಂಟ್-ವಂಚನೆಗೆ ಯತ್ನಿಸಿದ ಸೈಬರ್ ಕಳ್ಳರು..!
ರಾಜ್ಯದಲ್ಲಿ ಎಗ್ಗಿಲ್ಲದೇ ಸೈಬರ್ ಕಳ್ಳರ ಹಾವಳಿ ಹೆಚ್ಚಾಗಿದ್ದು, ಪ್ರಸಿದ್ದಿ ಪಡೆದ ವ್ಯಕ್ತಿಗಳನ್ನೆ ಟಾರ್ಗೇಟ್ ಮಾಡಿ ಸಾಮಾಜಿಕ ತಾಣಗಳ ಮೂಲಕ ಮೆಸೇಜ್ ಕಳುಹಿಸಿ ಕನ್ನ ಹಾಕಲು ಮುಂದಾಗಿರುವುದು ಬೆಳಕಿಗೆ ಬಂದಿದೆ.
ಬೆಂಗಳೂರು: ರಾಜ್ಯದಲ್ಲಿ ಎಗ್ಗಿಲ್ಲದೇ ಸೈಬರ್ ಕಳ್ಳರ ಹಾವಳಿ ಹೆಚ್ಚಾಗಿದ್ದು, ಪ್ರಸಿದ್ದಿ ಪಡೆದ ವ್ಯಕ್ತಿಗಳನ್ನೆ ಟಾರ್ಗೇಟ್ ಮಾಡಿ ಸಾಮಾಜಿಕ ತಾಣಗಳ ಮೂಲಕ ಮೆಸೇಜ್ ಕಳುಹಿಸಿ ಕನ್ನ ಹಾಕಲು ಮುಂದಾಗಿರುವುದು ಬೆಳಕಿಗೆ ಬಂದಿದೆ.
ಅದರಲ್ಲೂ ಅವಧೂತ ವಿನಯ್ ಗುರೂಜಿ ಹೆಸ್ರಲ್ಲಿ ನಕಲಿ ಫೇಸ್ಬುಕ್ ಅಕೌಂಟ್ ಸೃಷ್ಟಿಸಿ ವಂಚನೆ ನಡೆಸಲು ಯತ್ನಿಸಿದ್ದಾರೆ ಎಂದು ವರದಿ ಬಹಿರಂಗವಾಗಿದೆ.
ವಿಜಯನಗರ ಎಸ್ಪಿ ಹರಿಬಾಬು ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಅಕೌಂಟ್ ತೆರೆದು ಹಣಕ್ಕೆ ಬೇಡಿಕೆ ಇಡಲಾಗುತ್ತಿದೆ.
ಕೇಸ್ ದಾಖಲಾಗುತ್ತಿದ್ದ ಬೆನ್ನಲ್ಲೆ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
ವಿನಯ್ ಗುರೂಜಿ ಹೆಸರಿನಲ್ಲಿ ನಕಲಿ ಫೇಸ್ಬುಕ್ ಅಕೌಂಟ್ ಸೃಷ್ಟಿಸಿ, 45 ದಿನ ನಿಮಗೆ ಗಂಡಾಂತರ ಇದೆ.
ಕಾಳ ಸರ್ಪ ದೋಷವಿದೆ ನಿಮಗೆ ಎಂದು ಸುಳ್ಳು ಮೆಸೇಜ್ ಕಳಿಸಿ, ಭಯ ಹುಟ್ಟಿಸಿ ಹಣಕ್ಕೆ ಬೇಡಿಕೆ ಇಡಲಾಗಿದೆ ಎಂದು ಆಶ್ರಮದ ಸಿಬ್ಬಂದಿ ಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
bangalore
ಈ ಬಾರಿ ಬಿಗ್ ಬಾಸ್ ಗೆಲ್ಲೋದು ನಾನೆ…ಎಂದು ಪಟ್ಟು ಹಿಡಿದ ಸ್ಪರ್ಧಿ ಯಾರು ಗೊತ್ತಾ..?
Bigboss: ಬಿಗ್ ಬಾಸ್ ಮುಕ್ತಾಯಕ್ಕೆ ಇನ್ನು ಅರ್ಧ ಜರ್ನಿ ಬಾಕಿ ಇದೆ. ಆದರೆ ಇದೀಗ ಬಿಗ್ ಬಾಸ್ ಸ್ಪರ್ಧಿಗಳ ಫೈಟ್ ಜೋರಾಗಿದ್ದು, ಈ ಬಾರಿ ಬಿಗ್ ಬಾಸ್ ಗೆಲ್ಲೋದು ನಾವೇ ಎಂದು ಪಟ್ಟು ಹಿಡಿದ ಸ್ಫರ್ಧಿಗಳು ಗೆಲ್ಲುತ್ತಾರೋ ಅನ್ನೋದು ಕಾದು ನೋಡಬೇಕಿದೆ.
ಈ ವಾರ ದೊಡ್ಮನೆಯಲ್ಲಿ ವಿನಯ್ ಆರ್ಭಟ ಜೋರಾಗಿತ್ತು. ಜೊತೆಗೆ ಟೀಮ್ ನಲ್ಲಿ ಕಿತ್ತಾಟ ನಡೆದರೂ ವಿನಯ್ ಮಾತ್ರ ತಲೆಕೆಡಿಸದೆ ಈ ಬಾರಿ ಬಿಗ್ ಬಾಸ್ ಟೈಟಲ್ ನಾನೇ ಗೆಲ್ಲೋದು ಎಂದು ಹೇಳಿಕೊಂಡಿದ್ದಾರೆ.
ಈಗಾಗಲೇ ಬಿಗ್ ಬಾಸ್ ಜರ್ನಿ ಅರ್ಧ ಮುಗಿದಿದ್ದು, ಇನ್ನು ಅರ್ಧ ಬಾಕಿ ಇದೆ. ಹಾಗಾಗಿ ಇದರಲ್ಲಿ ಯಾರು ಗೆಲ್ಲೋತ್ತಾರೋ ಅನ್ನೊ ಪ್ರಶ್ನೆ ಮತ್ತೇ ಕಾಡಿದೆ. ವಾರದಿಂದ ವಾರಕ್ಕೆ ಎಲಿಮಿನೇಟ್ ಸ್ಪರ್ಧಿಗಳು ಎಲಿಮಿನೇಟ್ ಆಗುತ್ತಿದ್ದರೆ. ಇತ್ತ ವಿನಯ್ ಯಾರನ್ನೂ ಲೆಕ್ಕಿಸದೇ ತಾವೇ ಈ ಬಾರಿ ಫಿನಾಲೆ ಮೆಟ್ಟಿಲೇರಬೇಕು ಎಂದಾಗ ಸ್ನೇಹಿತ್ ಬೆಂಬಲ ವ್ಯಕ್ತ ಪಡಿಸಿದ್ದಾರೆ. ಹಾಗಗಿ ವಿನಯ್ ಗೆ ಮತ್ತಷ್ಟು ಧೈರ್ಯ ಬಂದಿದೆ. ಬಿಗ್ ಬಾಸ್ ಮನೆಯಲ್ಲಿ ನಮ್ರತಾ, ಸ್ನೇಹಿತ್ ಮತ್ತು ವಿನಯ್ ಅವರದ್ದು ಒಂದು ಗುಂಪು. ಈ ಮೂವರು ಒಬ್ಬರನ್ನೊಬ್ಬರು ಬಿಟ್ಟು ಕೊಡದೇ ಆಟವಾಡುತ್ತಾ ಬಂದಿದ್ದಾರೆ. ಆದರೆ ಕ್ಯಾಪ್ಟನ್ಸಿ ಟಾಸ್ಕ್ ನಲ್ಲಿ ವಿನಯ್ ವಿರುದ್ಧ ನಮ್ರತಾ ಮತ ಚಲಾಯಿಸಿದ್ದಾರೆ. ಹಾಗಾಗಿ ನಮ್ರತಾ ಇವರ ಗುಂಪಿನಿಂದ ಹೊರ ನಡೆದಿದ್ದಾರೆ.
ಆ ಬಳಿಕ ವಿನಯ್ ಹಾಗೂ ಸ್ನೇಹಿತ್ ಬಿಗ್ ಬಾಸ್ ಗೆಲುವಿನ ಬಗ್ಗೆ ಮಾತನಾಡಿಕೊಂಡಿದ್ದಾರೆ. ಈ ಬಾರಿ ಫಿನಾಲೆ ವೇದಿಕೆಯ ಮೇಲೆ ನಾವೇ ಇರಬೇಕು ಅಂತಾರೆ ಸ್ನೇಹಿತ್. ನಾವೇ ಇರಬೇಕು. ಆದರೆ, ನಾನೇ ವಿನ್ ಆಗಬೇಕು ಎಂದು ವಿನಯ್ ನುಡಿಯುತ್ತಾರೆ. ಅದಕ್ಕೆ ಸ್ನೇಹಿತ್ ಖುಷಿಯಿಂದಲೇ, ನಿಜಕ್ಕೂ ಇದಕ್ಕಿಂತ ಸಂತೋಷ ಏನಿದೆ ಎನ್ನುತ್ತಾರೆ.
ಈ ಮಾತು ಕೇಳಿಸಿಕೊಂಡ ಬಿಗ್ ಬಾಸ್ ನೋಡುಗರು, ನಮ್ರತಾಗಿಂತಾನೂ ಸ್ನೇಹಿತ್ ಸಖತ್ ಚಮಚಾ ಎಂದು ಕಾಮೆಂಟ್ ಮಾಡಿದ್ದಾರೆ. ಇದೀಗ ವಿನಯ್ ನ ಕನಸು ಈಡೇರುತ್ತಾ..? ಅವರೇ ಬಿಗ ಬಾಸ್ ವಿನ್ನರ್ ಆಗುತ್ತಾರ ಎಂದು ಕಾದು ನೋಡಬೇಕಿದೆ.
bangalore
ದೈವಕೋಲ ವೀಕ್ಷಣೆಗೆ ಟೂರ್ ಪ್ಯಾಕೇಜ್ – ತುಳುವರ ಧಾರ್ಮಿಕ ಭಾವನೆಗೆ ಪೆಟ್ಟು..!
ಬೆಂಗಳೂರು: ತುಳುನಾಡಿನ ದೈವರಾಧನೆಯನ್ನು ಇದೀಗ ಬೆಂಗಳೂರಿನ ಟೂರ್ ಪ್ಯಾಕೇಜ್ ಸಂಸ್ಥೆಯೊಂದು ವ್ಯವಹಾರ ಮಾಡಲು ಹೊರಟಿದೆ. ತುಳುನಡಿನ ಜನರ ನಂಬಿಕೆಯಿಂದ ದೈವರಾಧನೆ, ಭೂತಕೋಲಗಳನ್ನು ಉಳಿಸಿ ಬೆಳೆಸಿಕೊಂಡು ಬಂದರೆ ಇತ್ತ ಇದರ ಬ್ಯುಸಿನೆಸ್ ಶುರುವಾಗಿದೆ. ಇದರ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗತ್ತಿದ್ದು, ತುಳುನಾಡ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭೂತಕೋಲ ಎಂಬ ಪೋಸ್ಟರ್ ರೆಡಿ ಮಾಡಿ ಅದನ್ನು ಫೇಸ್ಬುಕ್, ಇನ್ಸ್ಟಾಗ್ರಾಮ್ ಗಳಲ್ಲಿ ಶೇರ್ ಮಾಡಿದ್ದಾರೆ. ಟ್ರಾವೆಲ್ ಸಂಸ್ಥೆಯೊಂದು 2024ರ ಫೆ. 10 ಹಾಗೂ 11ರಂದು ಎರಡು ದಿನದ ಟೂರ್ ಪ್ಯಾಕೇಜ್ ಅನ್ನು ಹಮ್ಮಿಕೊಂಡಿದೆ. ಅದರಲ್ಲಿ ನದಿ ಬೋಟಿಂಗ್, ಉಪ್ಪಿನಂಗಡಿ ಕಂಬಳ, ಬೊಳ್ಳಾಡಿ ಫಾರ್ಮ್ ಪಾರ್ಟಿ, ಬೊಳ್ಳಾಡಿ ಮನೆಯಲ್ಲಲಿ ಭೂತಕೋಲ, ಬೀರಮಲೆ ಬೆಟ್ಟ ಟ್ರಕ್ಕಿಂಗ್ ಇರಲಿದೆ ಎಂದು ಬರೆದುಕೊಂಡಿದ್ದಾರೆ. ಟೂರ್ ಪ್ಯಾಕೇಜ್ ನ ಮೊತ್ತ ಒಬ್ಬನಿಗೆ 2899 ರೂ. ಆಗಿರುತ್ತದೆ. ಅಲ್ಲದೆ ಆ ಪೋಸ್ಟರ್ ನಲ್ಲಿ ಬುಕ್ ಶೋ ನಲ್ಲಿ ಬುಕ್ ಮಾಡಿ ಎಂದು ಹಾಕಲಾಗಿದೆ. ಈಗಾಗಲೇ ಹಲವರು ಬುಕ್ ಮಾಡಿದರೆನ್ನಲಾಗಿದೆ. ಈ ಪೋಸ್ಟರ್ ನೋಡಿದ ಹಲವು ನೆಟ್ಟಿಗರು ಕಮೆಂಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದು, ನಮ್ಮ ತುಳುನಾಡಿನ ಭೂತರಾಧನೆ ಟೂರ್ ಪ್ಯಾಕೇಜ್ ಆಗಬಾರದು, ದೈವದ ಮೇಲೆ ಇರುವ ನಂಬಿಕೆಗೆ ಬೆಲೆ ಇಲ್ಲದಂತಾಗುತ್ತದೆ ಎಂದು ಕಮೆಂಟ್ ಮಾಡಿದ್ದಾರೆ.
bangalore
ಇವ್ರು ಯಾರಂತ ಗೊತ್ತಾಯ್ತ ಫ್ರೆಂಡ್ಸ್? ನ್ಯೂ ಕಪಲ್ಸ್ ಫಾರಿನ್ ಟ್ರಿಪ್ ಅಂತೆ..!
Film: ತೆಲುಗು ನಟ ನರೇಶ್ ಈಗಾಗಲೇ ಮೂರನೇ ಪತ್ನಿ ರಮ್ಯಾ ರಘುಪತಿಯವರಿಂದ ಡಿವೋರ್ಸ್ ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಆದ್ರೆ ರಮ್ಯಾ ಡಿವೋರ್ಸ್ ನೀಡಲು ಒಪ್ಪುತ್ತಿಲ್ಲ. ಹೀಗಿರುವಾಗಲೇ ಪವಿತ್ರಾ ಲೋಕೇಶ್ ಜೊತೆ ನರೇಶ್ ಸಹಜೀವನ ನಡೆಸುತ್ತಿದ್ದಾರೆ.
ಬಹುದಿನಗಳ ನಂತರ ನರೇಶ್ ಚಿತ್ರರಂಗದಲ್ಲಿ 50 ವರ್ಷ ಪೂರೈಸಿರುವ ಹಿನ್ನೆಲೆ ಸೋಶಿಯಲ್ ಮೀಡಿಯಾದಲ್ಲಿ ಎಮೋಷನಲ್ ಪೋಸ್ಟ್ ಮಾಡಿದ್ದಾರೆ. “ನಾನು ನನ್ನ ಜೀವನದಲ್ಲಿ ಸಂಕಷ್ಟದಲ್ಲಿದ್ದಾಗ, ಈ ಒಂದು ಹಾಡು ನನಗೆ ಸ್ಫೂರ್ತಿ ನೀಡಿತು. ಆ ಸಮಯದಲ್ಲಿ ನಾನು ನನ್ನ ಕರಿಯರ್ ಕಳೆದುಕೊಂಡೆ. ನಾನು ಆರ್ಥಿಕ ಸಮಸ್ಯೆ ಎದುರಿಸಿದೆ. ನನ್ನ ಆತ್ಮೀಯರು ನನ್ನನ್ನು ಅಗಲಿದ್ದರು. ಕ್ಷುಲ್ಲಕ ಪ್ರಕರಣದಲ್ಲಿ ಸಂಬಂಧಿಕರಿಂದ ಕಿರಿಕಿರಿ, ಜೋಕರ್‌ನಿಂದ ತೊಂದರೆ ಎದುರಾದರೂ ನನ್ನ ಬೆಂಬಲಕ್ಕೆ ನಿಂತಿದ್ದು ನನ್ನ ತಾಯಿ ಮತ್ತು ಸ್ನೇಹಿತ ವಿಜಯ್ ವಾಧ್ವಾ ಮಾತ್ರ.ಈಗ ಈ ರೀತಿ ಬದಲಾಗಿದ್ದೇನೆ. ಈ ಹಾಡು ನನಗೆ ಸ್ಫೂರ್ತಿ ನೀಡಿದ್ದು ಮಾತ್ರವಲ್ಲ. ಮತ್ತೆ ಬಲವಾಗಿ ಎದ್ದು ನಿಲ್ಲುವಂತೆ ಮಾಡಿದೆ. ಈಗಲೂ ಪ್ರೇರೇಪಿಸುತ್ತದೆ. ಈಗ ನಾನು ನನ್ನ ವೃತ್ತಿಜೀವನದ 50ನೇ ವರ್ಷದಲ್ಲಿದ್ದೇನೆ. ಈ ಮಹತ್ತರವಾದ ಮೈಲಿಗಲ್ಲನ್ನು ಸಾಧಿಸಲು ನನಗೆ ತುಂಬಾ ಸಹಾಯ ಮಾಡಿದ ಎಲ್ಲರಿಗೂ ನನ್ನ ಪ್ರಾಮಾಣಿಕ ಕೃತಜ್ಞತೆಯನ್ನು ವ್ಯಕ್ತಪಡಿಸಲು ನಾನು ಬಯಸುತ್ತೇನೆ” ಎಂದು ನರೇಶ್ ಇನ್‌ಸ್ಟಾಗ್ರಾಂ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.