ಬಂಗಾಳಕೊಲ್ಲಿಯಲ್ಲಿ ಮೋಚಾ ಚಂಡಮಾರುತದ ಪ್ರಭಾವ ರಾಜ್ಯದ ಮೇಲೂ ಬೀರಿದ್ದು, ಇದರಿಂದ ಈಗಾಗಲೇ ಹಲವು ಜಿಲ್ಲೆಗಲ್ಲಿ ಸೈಕ್ಲೋನ್ ಭೀತಿಯೂ ಎದುರಾಗಿತ್ತು.
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮೋಚಾ ಚಂಡಮಾರುತದ ಪ್ರಭಾವ ರಾಜ್ಯದ ಮೇಲೂ ಬೀರಿದ್ದು, ಇದರಿಂದ ಈಗಾಗಲೇ ಹಲವು ಜಿಲ್ಲೆಗಲ್ಲಿ ಸೈಕ್ಲೋನ್ ಭೀತಿಯೂ ಎದುರಾಗಿತ್ತು.
ಆದರೆ ಇದೀಗ ಹವಾಮಾನ ವರದಿ ಪ್ರಕಾರ ಈ ಚಂಡಮಾರುತದ ಎಫೆಕ್ಟ್ ಇನ್ನೂ ರಾಜ್ಯದ ಮೇಲೆ ಕಡಿಮೆ ಆಗಲಿದೆ.
ಹಾಗೆಯೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಕೂಡ (ಮೇ 11) ಮಳೆ ಬೀಳುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಕಳೆದ ಎರಡು ದಿನಗಳಿಂದ ರಾಜ್ಯದ ಕೆಲವು ಕಡೆಗಳಲ್ಲಿ ಭಾರಿ ಮಳೆ ಆಗುತ್ತಿದ್ದು, ಇದರಿಂದ ಸಾಕಷ್ಟು ಅನಾಹುತಗಳೇ ಸಂಭವಿಸಿವೆ.
ಕೆಲವೆಡೆ ಗಾಳಿ ಮಳೆಗೆ ಮರಗಳು ರಸ್ತೆಗೆ ಉರುಳಿದರೆ, ಇನ್ನು ಕೆಲವೆಡೆ ಮನೆ ಮಠಗಳನ್ನು ಕಳೆದುಕೊಂಡ ಘಟನೆಗಳು ಸಹ ನಡೆದಿವೆ.
ಹಾಗೆಯೆ ಇಂದಿನಿಂದ ಹಲವೆಡೆ 48 ಗಂಟೆಗಳ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅದರಲ್ಲೂ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ.
ರಾಜ್ಯದ ವಿವಿಧೆಡೆ ಮೇ 14ರವರೆಗೆ ಅಲ್ಲಲ್ಲಿ ಅನಿರೀಕ್ಷಿತ ಮಳೆ ಸುರಿಯುವ ಎಚ್ಚರಿಕೆಯ ಸಂದೇಶವನ್ನು ಕೂಡ ನೀಡಿದೆ.
ಮತ್ತೊಂದೆಡೆ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎನ್ನುವ ಮಾಹಿತಿಯನ್ನು ನೀಡಿದೆ.
ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದ್ದು, ಇಲ್ಲಿನ ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಹಾಗೆಯೆ ನಿನ್ನೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೆಲವು ಕಡೆ ಗುಡುಗು, ಮಿಂಚು ಸಹಿತ ಭಾರಿ ಮಳೆ ಆಗಿದ್ದು, ಇಂದು ಸಹ ಇಲ್ಲಿ ಮಳೆ ಮುಂದುವರೆಯುವ ಸಾಧ್ಯತೆಯಿದೆ.
ಇನ್ನು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಮುನ್ಸೂಚನೆ ಇದೆ