Connect with us

LATEST NEWS

ಮದುವೆಯಾಗಲು ನಿರಾಕರಿಸಿದ ಪ್ರೇಯಸಿ ಮೇಲೆ ಅತ್ಯಾಚಾರ, ಕೊಲೆ ಮಾಡಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ..!

Published

on

ಪ್ರೀತಿ ನಿರಾಕರಿಸಿ ಬೇರೊಬ್ಬ ಯುವಕನ ಜತೆ ಮದುವೆಯಾಗಲು ಮುಂದಾಗಿದ್ದ ಪ್ರೇಯಸಿ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಉಸಿರು ಗಟ್ಟಿಸಿ ಕೊಲೆ ಮಾಡಿದ ಪ್ರಿಯಕರನೊಬ್ಬ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನ ವಿಲ್ಸನ್‌ಗಾರ್ಡನ್‌ನಲ್ಲಿ  ನಡೆದಿದೆ.

ಬೆಂಗಳೂರು : ಪ್ರೀತಿ ನಿರಾಕರಿಸಿ ಬೇರೊಬ್ಬ ಯುವಕನ ಜತೆ ಮದುವೆಯಾಗಲು ಮುಂದಾಗಿದ್ದ ಪ್ರೇಯಸಿ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಉಸಿರು ಗಟ್ಟಿಸಿ ಕೊಲೆ ಮಾಡಿದ ಪ್ರಿಯಕರನೊಬ್ಬ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನ ವಿಲ್ಸನ್‌ಗಾರ್ಡನ್‌ನಲ್ಲಿ  ನಡೆದಿದೆ.

ವಿಲ್ಸನ್‌ಗಾರ್ಡನ್‌ ವಿನಾಯಕನಗರ ನಿವಾಸಿ 23 ವರ್ಷ ಪ್ರಾಯದ ಶಾಲಿನಿ ಕೊಲೆಯಾದ ಯುವತಿ. ಕೃತ್ಯ ಎಸಗಿದ ಆಕೆಯ ಪ್ರಿಯಕರ, ಕೆ.ಪಿ.ಅಗ್ರಹಾರ ನಿವಾಸಿ ಮನೋಜ್‌ ಆತ್ಮಹತ್ಯೆಗೆ ಯತ್ನಿಸಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಆತ ಪ್ರಾಣಾಪಾಯದಿಂದ ಪಾರಾಗಿದ್ದು, ಚೇತರಿಸಿಕೊಂಡ ಬಳಿಕ ಬಂಧಿಸಲಾಗುವುದು ಎಂದು  ಪೊಲೀಸರು ತಿಳಿಸಿದ್ದಾರೆ.

9ನೇ ತರಗತಿ ವ್ಯಾಸಂಗ ಮಾಡಿದ್ದ ಶಾಲಿನಿ ಮತ್ತು ಆರೋಪಿ ಮನೋಜ್‌ ಈ ಹಿಂದೆ ಪ್ರತ್ಯೇಕ ಮೆಡಿಕಲ್‌ ಏಜೆನ್ಸಿಗಳಲ್ಲಿ ಕೆಲಸ ಮಾಡುತ್ತಿದ್ದರು.

ಆಗ ಮನೋಜ್‌, ಶಾಲಿನಿಗೆ ಪ್ರೇಮ ನಿವೇದನೆ ಮಾಡಿ ಕೊಂಡಿದ್ದ. ಆದರೆ, ಆಕೆ ನಿರಾಕರಿಸಿದ್ದಳು.

ಬಳಿಕ ಆತ ಕೆಲಸ ಬಿಟ್ಟು ರಸ್ತೆ ಕಾಮಗಾರಿ ನಿರ್ವಹಿಸುವ ಗುತ್ತಿಗೆದಾರರ ಜತೆ ಕೆಲಸ ಮಾಡುತ್ತಿದ್ದ.

ಈ ವೇಳೆ ಫೇಸ್‌ಬುಕ್‌ ಮೂಲಕ ಮತ್ತೆ ಇಬ್ಬರು ಪರಿಚಯವಾಗಿದ್ದು, ಬಳಿಕ ಇಬ್ಬರು ಆಗಾಗ ಭೇಟಿಯಾಗುತ್ತಿದ್ದರು.

ಈ ಸಂದರ್ಭದಲ್ಲಿ ಮನೋಜ್‌ ಮತ್ತೂಮ್ಮೆ ಶಾಲಿನಿಗೆ ಪ್ರೇಮ ನಿವೇದಿಸಿದ್ದಾನೆ. ಆಕೆ ಕೂಡಾ ಒಪ್ಪಿಕೊಂಡು ಕಳೆದೊಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು.

ಈ ನಡುವೆ ಶಾಲಿನಿಗೆ ಆಕೆಯ ಪೋಷಕರು ಸಂಬಂಧಿ ಯುವಕನ ಜತೆ ಮದುವೆ ಮಾಡಲು ಮುಂದಾಗಿದ್ದು, ಸೋಮವಾರ ಮತ್ತು ಮಂಗಳವಾರ ಕೆಲ ಶುಭ ಕಾರ್ಯಗಳನ್ನು ಏರ್ಪಡಿಸಿದ್ದರು.

ಮಂಗಳವಾರ ಸಂಜೆ ಪೋಷಕರು, ಸಂಬಂಧಿಕರು, ಶಾಲಿನಿ ಮನೆ ಸಮೀಪದ ಸಂಬಂಧಿ ಮನೆಯಲ್ಲಿದ್ದರು.

ಇದೇ ವೇಳೆ ಪ್ರೇಯಸಿ ಮತ್ತೂಂದು ಮದುವೆ ಆಗುತ್ತಿದ್ದಾಳೆ ಎಂಬ ವಿಚಾರ ತಿಳಿದ ಮನೋಜ್‌, ಸಂಜೆ 7 ಗಂಟೆ ಸುಮಾರಿಗೆ ವಿನಾಯಕ ನಗರದ ಶಾಲಿನಿ ಮನೆ ಬಳಿ ಬಂದಿದ್ದಾನೆ.

ಆರೋಪಿ ಮನೋಜ್

ಮನೆಯಲ್ಲಿ ಯಾರು ಇಲ್ಲದನ್ನು ಖಚಿತ ಪಡಿಸಿಕೊಂಡು ಆಕೆ ಜತೆ ಮದುವೆ ವಿಚಾರವಾಗಿ ಜಗಳಾಡಿದ್ದಾನೆ.

ಆಕೆ ಪೋಷಕರ ತೀರ್ಮಾನವೇ ಅಂತಿಮ ಎಂದಿದ್ದಾಳೆ. ಆಕೆಯ ಮಾತಿನಿಂದ ಆಕ್ರೋಶಗೊಂಡ ಆರೋಪಿ, ಆಕೆ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ ಬಳಿಕ ತಲೆ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆಗೈದಿದ್ದಾನೆ.

ಬಳಿಕ ಕೆ.ಪಿ.ಅಗ್ರಹಾರದಲ್ಲಿರುವ ಆತನ ಮನೆಗೆ ಹೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಅದನ್ನು ಗಮನಿಸಿದ ಮನೆಯವರು ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮತ್ತೂಂದೆಡೆ ರಾತ್ರಿ 10 ಗಂಟೆ ಸುಮಾರಿಗೆ ಪೋಷಕರು ಮನೆಗೆ ಬಂದಾಗ ಶಾಲಿನಿ ಹತ್ಯೆ ಬೆಳಕಿಗೆ ಬಂದಿದೆ.

ಈ ಸಂಬಂಧ ವಿಲ್ಸನ್‌ಗಾರ್ಡನ್‌ ಪೊಲೀಸ್‌ ಠಾಣೆಯಲ್ಲಿ ಕೊಲೆ, ಅತ್ಯಾಚಾರ ಪ್ರಕರಣ ಹಾಗೂ ಕೆ.ಪಿ.ಅಗ್ರಹಾರ ಠಾಣೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಬಗ್ಗೆ ಮನೋಜ್‌ ವಿರುದ್ಧ ಪ್ರಕರಣ ದಾಖಲಾಗಿದೆ.

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

LATEST NEWS

ವಧು ಕೇಳಿದ ಆ ಒಂದು ಪ್ರಶ್ನೆ; ತಬ್ಬಿಬ್ಬಾದ ವರ..ಮದುವೆ ಕ್ಯಾನ್ಸಲ್!

Published

on

ಮಂಗಳೂರು : ಇತ್ತೀಚಿನ ದಿನಗಳಲ್ಲಿ ಮದುವೆ ಎಂಬುದರ ಸಂಭ್ರಮ ಹೇಳತೀರದು. ಅದ್ದೂರಿತನವೇ ಮೇಲುಗೈ ಸಾಧಿಸುತ್ತೆ. ಈ ನಡುವೆ ಮದುವೆ ಮುರಿದು ಬೀಳುವ ಘಟನೆಯೂ ಹೆಚ್ಚುತ್ತಲಿದೆ. ಕ್ಷುಲ್ಲಕ ಕಾರಣ ಇರಬಹುದು ಅಥವಾ ಇನ್ಯಾವುದೇ ಕಾರಣ ಇರಬಹುದು ಮದುವೆ ಮುರಿದು ಬೀಳುತ್ತಿದೆ.


ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡು ಅನ್ನೋ ಗಾದೆ ಮಾತಿದೆ. ಅಂತೆಯೇ ಇಲ್ಲಿ ವರ ಸುಳ್ಳು ಹೇಳಿದ್ದಾನೆ. ಹಾಗಂತ ಮದುವೆ ಆಗಿಲ್ಲ. ಬದಲಿಗೆ ಸಿಕ್ಕಿ ಬಿದ್ದಿದ್ದಾನೆ. ವಧು ಕೇಳಿದ ಆ ಒಂದು ಪ್ರಶ್ನೆಯಿಂದ ಮದುವೆ ಮುರಿದು ಬಿದ್ದಿದೆ.

ಸುಳ್ಳು ಹೇಳಿ ತಗ್ಲಾಕ್ಕೊಂಡ!

ಸುಳ್ಳು ಹೇಳಿ ಮದುವೆಯಾಗಲು ಹೊರಟಿದ್ದ ವರನ ಅಸಲಿ ವಿಚಾರ ಗೊತ್ತಾಗಿದೆ. ಹೀಗಾಗಿ ಯುವತಿ ಮದುವೆ ನಿರಾಕರಿಸಿದ್ದಾಳೆ. ಅಂದಹಾಗೆ ಈ ಘಟನೆ ನಡೆದಿರೋದು ಉತ್ತರ ಪ್ರದೇಶದ ಪನ್ವಾರಿನಲ್ಲಿ. ಓದು, ಬರಹ ಏನೊಂದು ಬರದ ಅನಕ್ಷರಸ್ಥನೊಬ್ಬ ತಾನು ದೊಡ್ಡ ಸರ್ಕಾರಿ ಅಧಿಕಾರಿ ಎಂದು ಮದುವೆಯಾಗಲು ಹೊರಟಿದ್ದ.

ಆದರೆ, ಈ ಸತ್ಯ ಮದುವೆ ಮನೆಯಲ್ಲೇ ಬಯಲಾಗಿದೆ. ಸಂಶಯಗೊಂಡ ವಧು ವರನ ಬಳಿ, ಎರಡರ ಮಗ್ಗಿ ಹೇಳಲು ತಿಳಿಸಿದ್ದಾಳೆ. ಆಗ ಆತ ತಡವರಿಸಿದ್ದಾರೆ. ಹಾಗಾಗಿ, ಯುವತಿಗೆ ಸತ್ಯಾಂಶ ಗೊತ್ತಾಗಿದೆ. ಎರಡರ ಮಗ್ಗಿ ಬೇಸಿಕ್ ಗಣಿತವೂ ಗೊತ್ತಿಲ್ಲ, ನೀನು ಅಧಿಕಾರಿಯಾಗಲು ಹೇಗೆ ಸಾಧ್ಯ? ಎಂದು ಮದುವೆ ಮುರಿದುಕೊಂಡಿದ್ದಾಳೆ.

ಇದನ್ನೂ ಓದಿ : ಮತ್ತೆ ಬಾಯ್‌ ಫ್ರೆಂಡ್ ಬದಲಾಯಿಸಿದ ಶೃತಿ ಹಾಸನ್..!

ಇಷ್ಟಾದರೂ ಬಿಡದ ಕುಟುಂಬದವರು ವಧುವಿನ ಮನವೊಲಿಸುವ ಯತ್ನ ಮಾಡಿದ್ದಾರೆ. ಆದರೆ, ವಧು ಮಾತ್ರ ಇದಕ್ಕೆ ಒಪ್ಪಿಲ್ಲ. ಹೀಗಾಗಿ ವರದಕ್ಷಿಣೆಯನ್ನು ಹಿಂದಿರುಗಿಸಿದ್ದಾರೆ. ಪರಸ್ಪರ ನೀಡಿದ ಉಡುಗೊರೆ, ಆಭರಣಗಳನ್ನು ಹಿಂದಿರುಗಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

 

Continue Reading

LATEST NEWS

ಮತಗಟ್ಟೆಯನ್ನೇ ಧ್ವಂಸ ಮಾಡಿದ ಗ್ರಾಮಸ್ಥರು!

Published

on

ಚಾಮರಾಜನಗರ : ಲೋಕಸಭಾ ಚುನಾವಣೆಗೆ ನಡೆಯುತ್ತಿರುವ ಮತದಾನ ರಾಜ್ಯದೆಲ್ಲಡೆ ಸುಸೂತ್ರವಾಗಿಯೇ ನಡೆದಿದೆ. ಆದರೆ ಚಾಮರಾಜನಗರದಲ್ಲಿ ಮಾತ್ರ ಜನರು ಮತಗಟ್ಟೆಯನ್ನೇ ಪುಡಿ ಮಾಡಿ ಚುನಾವಣೆಯನ್ನು ಬಹಿಷ್ಕಾರ ಮಾಡಿದ್ದಾರೆ. ಚಾಮರಾಜನಗರದ ಲೋಕಸಭಾ ಕ್ಷೇತ್ರದ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಐದು ಗ್ರಾಮಗಳಲ್ಲಿ ಮತದಾನ ಬಹಿಷ್ಕಾರ ಮಾಡಲಾಗಿತ್ತು. ಈ ವೇಳೆ ಇಂಡಿಗನತ್ತ ಎಂಬ ಗ್ರಾಮದಲ್ಲಿ ಮತಗಟ್ಟೆಯನ್ನು ಗ್ರಾಮಸ್ಥರು ಧ್ವಂಸ ಮಾಡಿದ್ದಾರೆ.


ಚುನಾವಣೆ ಬಹಿಷ್ಕಾರಿಸಿದ್ದ 5 ಗ್ರಾಮ :

ಮೂಲ ಸೌಕರ್ಯದಿಂದ ವಂಚಿತರಾಗಿದ್ದ ಈ ಗ್ರಾಮದ ಜನರು ತಮ್ಮ ಹಕ್ಕಿಗಾಗಿ ಹಲವು ಹೋರಾಟ ನಡೆಸಿದ್ದರು. ಆದರೆ, ಚುನಾವಣೆಯಲ್ಲಿ ಆಶ್ವಾಸನೆ ನೀಡಿ ಹೋಗುವ ಜನ ಪ್ರತಿನಿಧಿಗಳು ಬಳಿಕ ಇತ್ತ ಸುಳಿಯುತ್ತಿರಲಿಲ್ಲ. ಹೀಗಾಗಿ ಐದು ಗ್ರಾಮಗಳ ಜನರು ಈ ಬಾರಿ ಮತ ಕೇಳಲು ಬರಬೇಡಿ, ನಾವು ಮತದಾನ ಮಾಡೋದಿಲ್ಲ ಎಂದಿದ್ದರು.

ಚುನಾವಣೆ ಬಹಿಷ್ಕಾರ ಮಾಡಿದ್ದರೂ ಕಾನೂನು ರೀತಿಯಲ್ಲಿ ಗ್ರಾಮದಲ್ಲಿ ಮತಗಟ್ಟೆಯನ್ನು ತೆರೆಯಲಾಗಿತ್ತು. ಇಂಡಿಗನತ್ತ, ತೇಕಣೆ, ಮೆಂದಾರೆ ಈ ಗ್ರಾಮದಲ್ಲಿ ಯಾವೊಬ್ಬ ಗ್ರಾಮಸ್ಥರೂ ಮತದಾನ ಮಾಡಿಲ್ಲ. ಇನ್ನು ಪಡಸಲನತ್ತ ಗ್ರಾಮದಲ್ಲಿ 85 ಮತದಾರು ಇದ್ದು ಇಬ್ಬರು ಮತದಾನ ಮಾಡಿದ್ದಾಗಿ ಮಾಹಿತಿ ಲಭ್ಯವಾಗಿದೆ.

ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ತೆರೆಯುವುದಕ್ಕೆ ಗ್ರಾಮಸ್ಥರು ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದರು. ಆದಾಗ್ಯೂ, ಚುನಾವಣಾ ಆಯೋಗ ಇಲ್ಲಿ ಮತಗಟ್ಟೆ ತೆರೆದು ‘ಮತದಾನ ಮಾಡಲು ಬನ್ನಿ’ ಎಂದು ಜನರನ್ನು ಕರೆದಿದ್ದರು. ಆದ್ರೆ ರೊಚ್ಚಿಗೆದ್ದ ಜನರು ಮತದಾನ ಕೇಂದ್ರದ ಒಳಗೆ ನುಗ್ಗಿ ಇವಿಎಂ ಮೆಷಿನ್ ಸಹಿತ ಮೇಜು ಕುರ್ಚಿ ಎಲ್ಲವನ್ನೂ ಧ್ವಂಸ ಮಾಡಿದ್ದಾರೆ.

ಕನಿಷ್ಠ ಮೂಲಭೂತ ಸೌಕರ್ಯವಾದ ಕುಡಿಯುವ ನೀರು, ರಸ್ತೆ, ವಿದ್ಯುತ್, ಆರೋಗ್ಯ, ಶಿಕ್ಷಣ ಯಾವುದೂ ಇಲ್ಲದ ನಮ್ಮ ಗ್ರಾಮದ ಮತ ಯಾಕೆ ಬೇಕು? ಎಂದು ಜನ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ : ಸುಡುಬಿಸಿಲಿನಲ್ಲೂ ಮತದಾನ; ಇಹಲೋಕ ತ್ಯಜಿಸಿದ 6 ಮಂದಿ

ಪೊಲೀಸ್ ಲಾಠಿ ಚಾರ್ಜ್…ಕೆರಳಿದ ಗ್ರಾಮಸ್ಥರು!

ಜನರು ಮತಗಟ್ಟೆ ಧ್ವಂಸಕ್ಕೆ ಮುಂದಾಗುತ್ತಿದ್ದಂತೆ ಭದ್ರತೆಯಲ್ಲಿದ್ದ ಪೊಲೀಸರು ಲಾಠಿ ಚಾರ್ಚ್ ನಡೆಸಿದ್ದಾರೆ. ಈ ವೇಳೆ ಅಧಿಕಾರಿಗಳಿಗೆ ಹಾಗೂ ಪೊಲೀಸರಿಗೆ ಹಲ್ಲೆ ಮಾಡಿದ ಜನರು ಬಳಿಕ ಕಲ್ಲು ತೂರಾಟ ನಡೆಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸಾರ್ವಜನಿಕರು ಹಾಗೂ ಅಧಿಕಾರಿಗಳಿಗೆ ಗಾಯಗಳಾಗಿದೆ.

ಪೊಲೀಸರು ಮಹಿಳೆಯರು ಪುರುಷರು ಎಂದು ನೋಡದೆ ಎಲ್ಲರ ಮೇಲೂ ಲಾಠಿ ಚಾರ್ಚ್ ಮಾಡಿರುವುದು ಗ್ರಾಮಸ್ಥರನ್ನು ಕೆರಳಿಸಿದೆ. ಸದ್ಯಕ್ಕೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಮತದಾನ ಕೇಂದ್ರವನ್ನು ಬಂದ್ ಮಾಡಲಾಗಿದೆ.

Continue Reading

LATEST NEWS

Trending