ಬೆಂಗಳೂರು : ಇಂದಿನ ಯುಗದಲ್ಲಿ, ಆಹಾರ ವಿತರಣಾ ಅಪ್ಲಿಕೇಶನ್‌ಗಳು ನಾವು ತಿನ್ನುವ ವಿಧಾನವನ್ನು ಸಂಪೂರ್ಣವಾಗಿ ಬದಲಾಯಿಸಿವೆ. ವಾಹನ ದಟ್ಟಣೆ ತಪ್ಪಿಸಿ ಹೊರಗೆ ಹೋಗುವಾಗ ಜನರು ಮನೆಯಲ್ಲಿ ಕುಳಿತು ರುಚಿಕರವಾದ ಆಹಾರ ಸೇವಿಸುತ್ತಿದ್ದಾರೆ. Zomato ಮತ್ತು Swiggy ನಂತಹ ಕಂಪನಿಗಳು ಸಮಯವನ್ನು ಉಳಿಸುವಾಗ ಪ್ರತಿ ಬಜೆಟ್ ಮತ್ತು ರುಚಿಗೆ ಟನ್ ಆಯ್ಕೆಗಳನ್ನು ನೀಡುತ್ತವೆ, ಅವುಗಳು ಆರಾಮದಾಯಕ ವಾತಾವರಣದಲ್ಲಿ ಆಹಾರವನ್ನು ನೀಡುತ್ತವೆ.
ಆಹಾರ ವಿತರಣಾ ಅಪ್ಲಿಕೇಶನ್‌ಗಳು ಪ್ರತಿ ವಯಸ್ಸಿನ ಮತ್ತು ವರ್ಗದವರಲ್ಲಿ ಜನಪ್ರಿಯವಾಗಿವೆ, ಏಕೆಂದರೆ ಇಂದಿನ ವೇಗದ ಜೀವನದಲ್ಲಿ ಹೊರಗೆ ಹೋಗುವ ಅಗತ್ಯವಿಲ್ಲ ಅಥವಾ ಅಡುಗೆಮನೆಯಲ್ಲಿ ಗಂಟೆಗಟ್ಟಲೆ ಕಳೆಯಬೇಕಾಗಿಲ್ಲ. ಜನರು ರೆಸ್ಟೋರೆಂಟ್‌ಗಳಿಗೆ ಹೋಗುವ ಬದಲು ಆನ್‌ಲೈನ್ ಫುಡ್ ಡೆಲಿವರಿಯನ್ನು ಆಯ್ಕೆ ಮಾಡಲು ಇದು ಕಾರಣವಾಗಿದೆ, ಈ ಪ್ರವೃತ್ತಿಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು, ಬೆಂಗಳೂರಿನ ಆಹಾರ ಪ್ರಿಯರೊಬ್ಬರು 2024 ರಲ್ಲಿ 5,13,733 ರೂ ಮೌಲ್ಯದ ಆಹಾರವನ್ನು ಆರ್ಡರ್ ಮಾಡಿದ್ದಾರೆ.
ಒಂದು ವರ್ಷದಲ್ಲಿ 5 ಲಕ್ಷ ಆಹಾರ
ಭಾರತದಲ್ಲಿ ಆಹಾರಪ್ರೇಮಿಗಳ ಕೊರತೆಯಿಲ್ಲ, ಮತ್ತು ಅದಕ್ಕಾಗಿಯೇ ಸ್ವಿಗ್ಗಿ ಮತ್ತು ಜೊಮಾಟೊದಂತಹ ಆಹಾರ ವಿತರಣಾ ಕಂಪನಿಗಳು ಇತ್ತೀಚಿನ ದಿನಗಳಲ್ಲಿ ಅಭೂತಪೂರ್ವ ಯಶಸ್ಸನ್ನು ಸಾಧಿಸುತ್ತಿವೆ. 2024 ರಲ್ಲಿ 5,13,733 ರೂ ಮೌಲ್ಯದ ಆಹಾರವನ್ನು ಆರ್ಡರ್ ಮಾಡಿದ ಬೆಂಗಳೂರಿನ ಆಹಾರ ಪ್ರಿಯರೊಬ್ಬರು ಇದಕ್ಕೆ ಉತ್ತಮ ಉದಾಹರಣೆಯನ್ನು ಪ್ರಸ್ತುತಪಡಿಸಿದ್ದಾರೆ. ಝೊಮಾಟೊ ವಾರ್ಷಿಕ ವರದಿಯಲ್ಲಿ ಇದು ಬಹಿರಂಗವಾಗಿದ್ದು, ಈ ಗ್ರಾಹಕರು ಇಡೀ ವರ್ಷದಲ್ಲಿ ಆಹಾರಕ್ಕಾಗಿ ಮಾತ್ರ ಇಷ್ಟು ದೊಡ್ಡ ಮೊತ್ತವನ್ನು ಖರ್ಚು ಮಾಡಿದ್ದಾರೆ ಎಂದು ಬಹಿರಂಗಪಡಿಸಿದೆ.
2024 ರಲ್ಲಿ Zomato ಮೂಲಕ 1 ಕೋಟಿಗೂ ಹೆಚ್ಚು ಆರ್ಡರ್ ಮಾಡಲಾಗಿದೆ.ಅಲ್ಲಿ ಕುಟುಂಬ ಮತ್ತು ಸ್ನೇಹಿತರು ಒಟ್ಟಾಗಿ ರುಚಿಯನ್ನು ಆಚರಿಸಿದರು. ಫಾದರ್ಸ್ ಡೇ ದಿನ (6 ಡಿಸೆಂಬರ್) ಕಂಪನಿಯ ಅತ್ಯಂತ ಜನನಿಬಿಡ ದಿನವೆಂದು ಸಾಬೀತಾಯಿತು, 84,866 ಜನರು ತಮ್ಮ ತಂದೆಯೊಂದಿಗೆ ಮಧ್ಯಾಹ್ನ ಮತ್ತು ರಾತ್ರಿಯ ಊಟವನ್ನು ಆನಂದಿಸಿದ್ದಾರೆ. ಅದೇ ಸಮಯದಲ್ಲಿ, ದೆಹಲಿಯ ಜನರು 195 ಕೋಟಿ ರೂಪಾಯಿಗಳನ್ನು ಉಳಿಸುವ ಮೂಲಕ ಬಜೆಟ್ ಸ್ನೇಹಿ ಆಹಾರದ ವಿಷಯದಲ್ಲಿ ಗೆದ್ದರು. ಇದರ ನಂತರ ಬೆಂಗಳೂರು ಮತ್ತು ಮುಂಬೈ.
ಮಂಗಳೂರು/ಬೀಜಿಂಗ್ : ಚೀನಾದಲ್ಲಿ ಕೊರೊನಾ ವೈರಸ್ ಮಾದರಿಯ ಹೂಮನ್ ಮೆಟಾಪ್ ನ್ಯುಮೋ (HMPV) ಸೋಂಕು ಹರಡಿ ಭಾರೀ ಆತಂಕ ಸೃಷ್ಟಿಸಿದೆ.
ಈ ಹಿಂದೆ ಚೀನಾದಲ್ಲಿ ಜನ್ಮ ತಾಳಿದ್ದ ಕೊರೊನಾ ವೈರಸ್ ಮಹಾಮಾರಿ ಇಡೀ ಜಗತ್ತನ್ನು ಆವರಿಸಿ, ಲಾಕ್ ಡೌನ್ ಪರಿಸ್ಥಿತಿಗೆ ದೂಡಿತ್ತು. ವೈರಲ್ ಸೋಂಕಿಗೆ ಲೆಕ್ಕವಿಲ್ಲದಷ್ಟು ಜನ ಜೀವವನ್ನು ಕಳೆದುಕೊಂಡರು. ಅಂದು ಜನರನ್ನು ಕಾಡಿದ್ದ ಕೋವಿಡ್ ಈಗ ಐದು ವರ್ಷಗಳ ನಂತರ ಮತ್ತೊಂದು ರೂಪದಲ್ಲಿ ಚೀನಾದಲ್ಲಿ ಪತ್ತೆಯಾಗಿರುವುದು ಸದ್ಯ ಜಗತ್ತನ್ನು ಭಾರೀ ಆತಂಕಕ್ಕೆ ದೂಡಿದೆ.
ಭಾರತೀಯ ಆರೋಗ್ಯ ಸಂಸ್ಥೆ ಮಾಹಿತಿ
ಕೋವಿಡ್ ನ ರೀತಿಯಲ್ಲಿ ಪತ್ತೆಯಾಗಿರುವ ಈ ವೈರಸ್ ನ ಹೆಸರು ಹ್ಯೂಮನ್ ಮೆಟಾಪ್ ನ್ಯುಮೋ ವೈರಸ್ (HMPV) ಎಂದು ಹೇಳಲಾಗಿದೆ. ಈ ಖಾಯಿಲೆ ಕೋವಿಡ್ ನಷ್ಟೇ ಮಾರಕ ಎನ್ನಲಾಗಿದ್ದು, ಈಗಾಗಲೇ ಹಲವರು ಜೀವವನ್ನು ಕಳೆದುಕೊಳ್ಳುತ್ತಿದ್ದಾರೆ ಹಾಗೂ ಚೀನಾದ ಆಸ್ಪತ್ರೆಗಳಲ್ಲಿ ಹಾಸಿಗೆಯು ಸಿಗದಷ್ಟು ರೋಗಿಗಳು ಆವರಿಸಿಕೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ. ಈ ಕುರಿತು ಭಾರತೀಯ ಆರೋಗ್ಯ ಸಂಸ್ಥೆ ಮಾಹಿತಿ ಹಂಚಿಕೊಂಡಿದ್ದು, ಯಾರೂ ಸಹ ಆತಂಕ, ಭಯ ಪಡುವ ಅಗತ್ಯವಿಲ್ಲ ಎಂದು ತಿಳಿಸಿದೆ.
ಈ ಬಗ್ಗೆ ಮಾತನಾಡಿದ ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯದ (DGHS) ಡಾ. ಅತುಲ್ ಗೋಯೆಲ್, ‘ಎಚ್ಚರಿಕೆಯ ಅಗತ್ಯವಿಲ್ಲ, ಅಲಾರಂ ಬೇಕಿಲ್ಲ. ಚೀನಾದಲ್ಲಿ HMPV ನಿಗೂಢ ವೈರಸ್ ಶೀತವನ್ನು ಉಂಟುಮಾಡುವ ಇತರೆ ಉಸಿರಾಟದ ವೈರಸ್ ನಂತೆ. ಇದು ಶೀತ-ಕೆಮ್ಮು ರೋಗ ಲಕ್ಷಣಗಳನ್ನು ತೋರಿಸುತ್ತದೆ. ಇದಕ್ಕೆ ತೀರ ಭಯ ಪಡುವ ಅಗತ್ಯವಿಲ್ಲ’ ಎಂದು ತಿಳಿಸಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯದ ಅಡಿಯಲ್ಲಿ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (NCDC), ಅಂತರಾಷ್ಟ್ರೀಯ ಏಜೆನ್ಸಿಗಳೊಂದಿಗೆ ಸಂಪರ್ಕದಲ್ಲಿದೆ. ನಾವು ಇಲ್ಲಿನ ಪರಿಸ್ಥಿಯನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸುತ್ತೇವೆ. ಮಾಹಿತಿಯನ್ನು ಆಗಾಗ್ಗೆ ಅಪ್ಡೇಟ್ ಮಾಡುತ್ತಿರುತ್ತೇವೆ ಮತ್ತು ಅದಕ್ಕೆ ಅನುಗುಣವಾಗಿ ನವೀಕರಿಸುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.
HMPV ವೈರಸ್ ಲಕ್ಷಣಗಳು ಏನು ?
ಕೆಮ್ಮು, ಜ್ವರ, ಮೂಗು ಕಟ್ಟುವುದು, ಶೀತ ಈ ವೈರಸ್ ನ ಸಾಮಾನ್ಯ ಲಕ್ಷಣಗಳಾಗಿವೆ. HMPV ವೈರಸ್ ತಡೆಗಟ್ಟಲು ಯಾವುದೇ ಲಸಿಕೆ ಲಭ್ಯವಿಲ್ಲ. ಜನದಟ್ಟಣೆ ಇರುವ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ, ಆಗಾಗ್ಗೆ ಕೈ ತೊಳೆಯುವುದಾಗಿದೆ. ಜೊತೆಗೆ ಸ್ವಚ್ಚತೆಯನ್ನು ಕಾಪಾಡಿಕೊಳ್ಳಬೇಕು. ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದಾಗಿದೆ.
ಮಂಗಳುರು/ಛತ್ತೀಸ್‌ಗಢ : ಭ್ರಷ್ಟಾಚಾರದ ಕುರಿತು ವರದಿ ಮಾಡಿದ ಕೆಲವೇ ದಿನಗಳಲ್ಲಿ ಸ್ವತಂತ್ರ ಪತ್ರಕರ್ತ ಮುಖೇಶ್ ಚಂದ್ರಕರ್ ಸೆಪ್ಟಿಕ್ ಟ್ಯಾಂಕ್ ನಲ್ಲಿ ಮೃ*ತಪಟ್ಟ ಸ್ಥಿತಿಯಲ್ಲಿ ಪ*ತ್ತೆಯಾದ ಘಟನೆ ಛತ್ತೀಸ್‌ಗಢದ ಬಿಜಾಪುರದಲ್ಲಿ ನಡೆದಿದೆ.
ಬಸ್ತಾರ್ ಎಂಬ ಪ್ರದೇಶದಲ್ಲಿ ಮಾವೋವಾದಿ ಸಂಘರ್ಷದ ಕುರಿತು ವರದಿ ಮಾಡಿ ಮನ್ನಣೆ ಗಳಿಸಿದ್ದ ಪತ್ರಕರ್ತ ಮುಖೇಶ್ ಚಂದ್ರಕರ್ ಹೆದ್ದಾರಿ ಯೋಜನೆಯಲ್ಲಿನ ಹಗರಣದ ಕುರಿತು ಇತ್ತೀಚೆಗೆ ವರದಿ ಮಾಡಿದ್ದರು. ಹೆದ್ದಾರಿ ಯೋಜನೆಯಲ್ಲಿನ ಹಗರಣವನ್ನು ಬಹಿರಂಗಪಡಿಸಿದ್ದಕ್ಕಾಗಿ ಅವರಿಗೆ ಬೆದರಿಕೆ ಕರೆ ಬಂದಿತ್ತು ಎಂದು ಮೃ*ತ ಪತ್ರಕರ್ತನ ಕುಟುಂಬವು ಆರೋಪಿಸಿದೆ. ಜ.1ರಂದು ಮನೆಯಿಂದ ತೆರಳಿದ್ದ ಮುಖೇಶ್ ಬಳಿಕ ಯಾರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ, ಮೊಬೈಲ್ ಸಹ ಫೋನ್ ಸ್ವಿಚ್ ಆಫ್ ಆಗಿತ್ತು. ಈ ಕುರಿತು ಮುಖೇಶ್ ಸಹೋದರ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಮುಖೇಶ್ ನಾಪತ್ತೆ ಹಿನ್ನೆಲೆ ಪೊಲೀಸರು ಮೊಬೈಲ್ ಲೊಕೇಶನ್ ಪರಿಶೀಲಿಸಿದಾಗ ಗುತ್ತಿಗೆದಾರ ಸುರೇಶ್ ಚಂದ್ರಕರ್ ಅವರ ಮನೆಯ ಅಂಗಳದಲ್ಲಿ ಕೊನೆಯ ಬಾರಿಗೆ ಅವರ ಮೊಬೈಲ್ ನೆಟ್ ವರ್ಕ್ ತೋರಿಸಿತ್ತು. ಸ್ಥಳಕ್ಕೆ ತೆರಳಿ ಹೆಚ್ಚಿನ ಪರಿಶೀಲನೆ ನಡೆಸಿದಾಗ ಪೊಲೀಸರಿಗೆ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಮುಖೇಶ್‌ನ ಮೃ*ತದೇಹ ಪತ್ತೆಯಾಗಿತ್ತು. ಶ*ವವು ಊದಿಕೊಂಡಿದ್ದು, ತಲೆ ಮತ್ತು ಬೆನ್ನಿನ ಮೇಲೆ ಗಾ*ಯಗಳು ಕಂಡು ಬಂದಿದೆ. ಮುಖೇಶ್ ಧರಿಸಿದ್ದ ಬಟ್ಟೆಯಿಂದ ಮೃ*ತದೇಹ ಅವರದ್ದೇ ಎಂದು ಗುರುತಿಸಲಾಗಿದೆ.
ಮುಖೇಶ್ ‘ಬಸ್ತಾರ್ ಜಂಕ್ಷನ್ʼ ಎಂಬ ಯೂಟ್ಯೂಬ್ ಚಾನೆಲ್ ಮಾಡಿ 1.59 ಲಕ್ಷ ಚಂದಾದಾರರನ್ನು ಹೊಂದಿದ್ದರು. ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು/ಗದಗ : ಹೈಸ್ಕೂಲ್ ವಿದ್ಯಾರ್ಥಿಯೊಬ್ಬ ಚಲಾಯಿಸುತ್ತಿದ್ದ ಕಾರು ಅಪ*ಘಾತವಾಗಿ ಇಬ್ಬರು ಸಾ*ವನ್ನಪ್ಪಿರುವ ಘಟನೆ ಗದಗದ ಹುಲಕೋಟಿ ರೂರಲ್ ಇಂಜಿನಿಯರಿಂಗ್ ಕಾಲೇಜ್ ಬಳಿ ನಡೆದಿದೆ. ಮಹಮ್ಮದ್ ಮುಜಾವರ್(೧೬), ಸಂಜೀವ್ ಗಿರಡ್ಡಿ(೧೬) ಮೃ*ತ ವಿದ್ಯಾರ್ಥಿಗಳು. ಆಶಿಸ್ ಗುಂಡುರ್(೧೬) ಸೇರಿದಂತೆ ಮತ್ತೋರ್ವ ವಿದ್ಯಾರ್ಥಿಗೆ ಗಂ*ಭೀರ ಗಾ*ಯಗಳಾಗಿವೆ.
ಶಾಲಾ ವಾರ್ಷಿಕೋತ್ಸವ ಮುಗಿಸಿ ವಿದ್ಯಾರ್ಥಿಗಳು ಕಾರಿನಲ್ಲಿ ಹೊರಟಿದ್ದರು. ಅವರೆಲ್ಲಾ ೧೦ನೇ ತರಗತಿ ವಿದ್ಯಾರ್ಥಿಗಳಾಗಿದ್ದು, ಹುಲಕೋಟಿ ರಾಜೇಶ್ವರಿ ವಿದ್ಯಾನಿಕೇತನ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಅವರಲ್ಲೊಬ್ಬ ಕಾರು ಚಲಾಯಿಸುತ್ತಿದ್ದ. ಗ್ಯಾದರಿಂಗ್ ಡ್ಯಾನ್ಸ್ ಮುಗಿಸಿಕೊಂಡು ಜೋಶ್‌ನಲ್ಲಿ ವಿದ್ಯಾರ್ಥಿಗಳು ಹೊರಟಿದ್ದರು ಎನ್ನಲಾಗಿದೆ.
ಅತಿವೇಗದ ಚಾಲನೆಯಿಂದಾಗಿ ಕಾರು ಡಿವೈಡರ್‌ಗೆ ಡಿ*ಕ್ಕಿ ಹೊಡೆದು ಈ ದುರಂ*ತ ನಡೆಯಲು ಕಾರಣ ಎಂದು ತಿಳಿದುಬಂದಿದೆ. ಡಿ*ಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಗಾ*ಯಗೊಂಡಿರುವ ಓರ್ವ ವಿದ್ಯಾರ್ಥಿಯನ್ನುಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೋರ್ವನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಗದಗ ಗ್ರಾಮೀಣ ಪೊಲೀಸರು ಭೇಟಿ ನೀಡಿ, ಪರೀಶೀಲಿಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.