LATEST NEWS
Bengaluru : ಜ್ಯೂಸ್, ನೀರಿನಲ್ಲಿ ಬೆರೆಸಿ ಕುಡಿದರೆ ಏರುತ್ತೆ ನಶೆ- ಹೊಸ ಡ್ರಗ್ಸ್ ಜಾಲ ಭೇದಿಸಿದ ಪೊಲೀಸರು..!
ಜ್ಯೂಸ್, ನೀರಿನಲ್ಲಿ ಬೆರೆಸಿ ಕುಡಿದರೆ ನಶೆ ಏರುವ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಡ್ರಗ್ಸ್ ಜಾಲದ ಸದಸ್ಯನೋರ್ವನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು : ಮಾದಕಲೋಕದಲ್ಲಿ ನೂತನ ಶೈಲಿಯ ಡ್ರಗ್ಸ್ ಜಾಲದ ಹಿಂದೆ ಬಿದ್ದಿದ್ದ ಬೆಂಗಳೂರು ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ.
ಜ್ಯೂಸ್ ಮಾದರಿಯಲ್ಲಿ ರೆಡಿ ಆಗ್ತಿರುವ ಜ್ಯೂಸ್, ನೀರಿನಲ್ಲಿ ಬೆರೆಸಿ ಕುಡಿದರೆ ಕಿಕ್ಕೇರಿಸುವ ಡ್ರಗ್ಸ್ ಜಾಲದ ಸದಸ್ಯನೋರ್ವ ವಿವಿಪುರ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ರಾಜಸ್ಥಾನ ಮೂಲದ ಗುನಾಂ ಸಿಂಗ್ ಬಂಧಿತ ಆರೋಪಿಯಾಗಿದ್ದಾನೆ.
ಖಚಿತ ಮಾಹಿತಿ ಮೇರೆಗೆ ಆರೋಪಿಯ ಗೋದಾಮಿನ ಮೇಲೆ ದಾಳಿ ನಡೆಸಿದ ಪೊಲೀಸರು 55 ಕೆಜಿ ತೂಕದ 60 ಲಕ್ಷದ ಮೌಲ್ಯದ ಮಾದಕ ವಸ್ತುವನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ಚುರುಕುಗೊಳಿಸಿದ್ದಾರೆ.
ಈ ಮಾದಕ ಪದಾರ್ಥ ಒಂದು ಅಫೀಮು ಸಸ್ಯ. ಇದನ್ನು ಹೆಚ್ಚಾಗಿ ರಾಜಸ್ಥಾನದಲ್ಲಿ ಬೆಳೆಯಲಾಗುತ್ತದೆ.
ಇದರಿಂದ ಅಫೀಮು ತಯಾರು ಮಾಡಿ ಲಕ್ಷ ಲಕ್ಷ ಬೆಲೆಗೆ ಮಾರಾಟ ಮಾಡಲಾಗುತ್ತದೆ.
ಡ್ರಗ್ಸ್ ಅನ್ನು ದೇಶದ ವಿವಿಧ ರಾಜ್ಯಗಳಿಗೆ ಸರಬರಾಜು ಮಾಡಿ ಕೋಟಿ ಕೋಟಿ ವ್ಯವಹಾರ ನಡೆಸಲಾಗುತ್ತದೆ.
ಮೊದಲಿಗೆ ತೋಟದಲ್ಲಿ ಅಫೀಮು ಗಿಡ ಬೆಳೆಸಲಾಗುತ್ತೆ. ಅದೇ ಗಿಡ ದೊಡ್ಡದಾದ ಬಳಿಕ ಗಿಡದಲ್ಲಿ ಬಿಡೋ ಕಾಯಿಯನ್ನು ಬ್ಲೇಡ್ನಿಂದ ಕೆರೆದು ಅದರಿಂದ ಬರುವ ಹಾಲನ್ನ ಸಂಗ್ರಹ ಮಾಡಲಾಗುತ್ತೆ.
ಅದೇ ಅಫೀಮು. ಅದೇ ಡ್ರಗ್ಸ್ ಅನ್ನ ಅಧಿಕ ಬೆಲೆಗೆ ಮಾರಾಟ ಮಾಡಲಾಗುತ್ತೆ.
ನಂತರ ಆ ಕಾಯಿಯನ್ನು ಕತ್ತರಿಸಿ ತರುವ ಆರೋಪಿಗಳು ಅದನ್ನ ಚೆನ್ನಾಗಿ ಒಣಗಿಸಿ ಪುಡಿ ಮಾಡಿ ಅದನ್ನ ಎರಡು ದಿನಗಳ ಕಾಲ ನೀರಿನಲ್ಲಿ ಹಾಕಿ ನೆನೆಸುತ್ತಾರೆ.
ನಂತರ ಅದರ ಪುಡಿಯನ್ನ ಬಟ್ಟೆಯಲ್ಲಿ ಸೋಸಿ ಬಾಟಲ್ನಲ್ಲಿ ಶೇಖರಿಸಲಾಗುತ್ತೆ.
ನಂತರ ಆ ಬಾಟಲ್ ನೀರನ್ನು ಸಾಮಾನ್ಯ ನೀರಿನ ಜೊತೆಗೆ ಬೆರೆಸಿ ಪಾರ್ಟಿಗಳಲ್ಲಿ ಬಳಸುತ್ತಾರೆ.
100 ಲೀಟರ್ ಸಾಮಾನ್ಯ ನೀರಿನ ಜೊತೆಗೆ ಒಂದು ಲೀಟರ್ ಈ ಮಾದಕ ದ್ರಾವಣವನ್ನು ಬೆರೆಸಲಾಗುತ್ತೆ.
ಈ ನೀರು ಹೆಚ್ಚಾಗಿ ಘಾಟು ಇರೋದರಿಂದ ವಿವಿಧ ಕಂಪನಿಗಳ ಜ್ಯೂಸ್ ನೊಳಗೆ ಬೆರೆಸಿ ಕೊಡುತ್ತಿದ್ದರು.
ಹೀಗೆ ಬೆಂಗಳೂರಿನ ವಿವಿ ಪುರಂನಲ್ಲಿ ಶೇಖರಣೆ ಮಾಡಲಾಗಿದ್ದ ಗೋಡೌನ್ ಮೇಲೆ ದಾಳಿ ಮಾಡಿದ ವಿವಿ ಪುರಂ ಪೊಲೀಸರು ಅರೋಪಿಯನ್ನು ಹೆಡೆಮುರಿ ಕಟ್ಟಿದ್ದಾರೆ.
DAKSHINA KANNADA
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಅಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್ ಆಯ್ಕೆ
ಮಂಗಳೂರು: ಮಂಗಳೂರು ಸೊಬೆಸ್ಟಿಯನ್ ಹಾಲ್ ನಲ್ಲಿ ನಡೆದ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಪದಾಧಿಕಾರಿಗಳ ಚುನಾವಣಾ ಪ್ರಕ್ರಿಯೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯನ್ನೊಳಗೊಂಡ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್ ಆಯ್ಕೆಯಾಗಿದ್ದಾರೆ.
ಸಂಚಾಲಕರಾಗಿ ಕರುಣಾಕರ್ ಕಾನಂಗಿ ಮಂಗಳೂರು, ಪ್ರಧಾನ ಕಾರ್ಯದರ್ಶಿಯಾಗಿ ದಯಾನಂದ ಬಂಟ್ವಾಳ, ಕೋಶಾಧಿಕಾರಿಯಾಗಿ ನವೀನ್ ರೈ ಪಂಜಳ, ಉಪಾಧ್ಯಕ್ಷರಾಗಿ ರಮೇಶ್ ಕಲಾ ಶ್ರೀ ಮಂಗಳೂರು, ಜಯಕರ್ ಸುವರ್ಣ ಉಡುಪಿ, ಜೊತೆ ಕಾರ್ಯದರ್ಶಿ ಹರೀಶ್ ಪಿ ಕೋಟ್ಯಾನ್ ಮುಲ್ಕಿ, ಹೆರಿಕ್ ಡಿಸೋಜ ಬ್ರಹ್ಮಾವರ, ಸಂಘಟನಾ ಕಾರ್ಯದರ್ಶಿ ಕೃಷ್ಣರಾವ್ ಕಾಪು, ರಮೇಶ್ ಹೊಸಬೆಟ್ಟು ಸುರತ್ಕಲ್, ಛಾಯಾ ಕಾರ್ಯದರ್ಶಿ ರವಿ ಕೋಟ್ಯಾನ್ ಮೂಡಬಿದ್ರಿ, ಕ್ರೀಡಾ ಕಾರ್ಯದರ್ಶಿ ರಂಜಿತ್ ಕುಂದಾಪುರ, ಭಾರದ್ವಾಜ್ ಬೆಳ್ತಂಗಡಿ, ಸಾಂಸ್ಕೃತಿಕ ಕಾರ್ಯದರ್ಶಿ ಚಿದಾನಂದ್ ಉಳ್ಳಾಲ ಮಾಧ್ಯಮ ಕಾರ್ಯದರ್ಶಿ ಹರೀಶ್ ರಾವ್ ಆಯ್ಕೆಯಾಗಿದ್ದಾರೆ.
ಈ ಚುನಾವಣಾ ಪ್ರಕ್ರಿಯೆಯನ್ನು ಎಸ್ ಕೆಪಿಎ ಯ ನಿಕಟ ಪೂರ್ವ ಜಿಲ್ಲಾಧ್ಯಕ್ಷ ಆನಂದ್ ಬಂಟ್ವಾಳ್ ಅವರು ನಡೆಸಿಕೊಟ್ಟರು.
DAKSHINA KANNADA
ಮಾದಕ ವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನ-ಇಬ್ಬರು ಅರೆಸ್ಟ್..!
ಉಳ್ಳಾಲ: ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಯನ್ನು ಮಾರಾಟ ನಡೆಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಹೊರವಲಯದ ಉಳ್ಳಾಲ ಸಮೀಪದ ಸಿಗ್ರೌಂಡ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಸ್ತಿಕಟ್ಟೆ ಆಝಾದನಗರದ ಫಝಲ್ ಮತ್ತು ಮುಕ್ಕಚ್ಚೇರಿ ಕಡಪ್ಪುರ ದ ಸಮೀರ್ ಎಂಬವರನ್ನು ಬಂಧಿಸಲಾಗಿದೆ.
ಈ ಇಬ್ಬರು ಉಳ್ಳಾಲ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ 14ಗ್ರಾಂ ಎಂಡಿಎಂಎ ಮಾರಾಟ ಮಾಡಲು ಯತ್ನಿಸುವ ಸಂದರ್ಭ ಮಾಹಿತಿ ಪಡೆದ ಉಳ್ಳಾಲ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಆರೋಪಿಗಳನ್ನು ಬಂಧಿಸಿ, 14 ಗ್ರಾಂ ಎಂಡಿಎಂಎ ಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕಳೆದ ಎರಡು ದಿನಗಳ ಹಿಂದಷ್ಟೇ ದೇರಳಕಟ್ಟೆ ಯೆನೆಪೋಯ ಆಸ್ಪತ್ರೆ ಬಳಿಯಿಂದ ಓರ್ವ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದರು.
ಕಾರ್ಯಾಚರಣೆಯಲ್ಲಿ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ, ಪಿಎಸ್ಐ ಶೀತಲ್ ಹಾಗೂ ಸಿಬ್ಬಂದಿಗಳಾದ ರಂಜಿತ್, ಅಕ್ಬರ್, ಅಶೋಕ್, ಮಂಜು, ವೆಂಕಟೇಶ್ ಭಾಗವಹಿಸಿದ್ದರು.
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.
bangalore
‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಬಿ ರಿಲೀಸ್ ಡೇಟ್ ಚೇಂಜ್…!
ರಕ್ಷಿತ್ ಶೆಟ್ಟಿ ನಟನೆಯ ಸಪ್ತ ಸಾಗರದಾಚೆ ಎಲ್ಲೋ ಸಿನೆಮಾದ ಸೈಡ್ ಬಿ ಅಕ್ಟೋಬರ್ 20ರ ಬದಲಿಗೆ ಅಕ್ಟೋಬರ್ 27ರಂದು ರಿಲೀಸ್ ಆಗಲಿದೆ.
ರಕ್ಷಿತ್ ಶೆಟ್ಟಿ ನಟಿಸಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ತೆಲುಗಿನಲ್ಲೂ ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿದ್ದು ಚಿತ್ರತಂಡ ಮೊದಲೇ ಘೋಷಿಸಿದಂತೆ ಅಕ್ಟೋಬರ್ 20ಕ್ಕೆ ಬಿಡುಗಡೆ ಆಗಬೇಕಿತ್ತು.
ಆದ್ರೆ ಅಕ್ಟೋಬರ್ 20ಕ್ಕೆ ಸಪ್ತ ಸಾಗರದಾಚೆ ಸಿನೆಮಾ ರಿಲೀಸ್ ಆಗುತ್ತಿಲ್ಲ.
ಸೈಡ್ ಬಿ ಪಾರ್ಟ್ ನೋಡಲು ಅಭಿಮಾನಿಗಳು ತುದಿಗಾಲಲ್ಲಿ ನಿಂತು ಕಾಯುತ್ತಿದ್ದರು. ಭಾರೀ ಬಜೆಟ್ ಚಿತ್ರಗಳು, ಸ್ಟಾರ್ ನಟರ ಚಿತ್ರಗಳು, ಪರಭಾಷೆಯ ಚಿತ್ರಗಳ ಹಾವಳಿಯಿಂದಾಗಿ ಚಿತ್ರ ಬಿಡುಗಡೆಯ ದಿನಾಂಕ ಬದಲಾಗಿದೆ.
ಹೀಗಾಗಿ ಚಿತ್ರತಂಡ ಅಕ್ಟೋಬರ್ 27ಕ್ಕೆ ಪಾರ್ಟ್ ಬಿ ರಿಲೀಸ್ ಮಾಡುವ ಘೋಷಣೆಯನ್ನು ಮಾಡಿದೆ.
ಹೌದು ..ಅಕ್ಟೋಬರ್ 20ರ ಬದಲಿಗೆ ಅಕ್ಟೋಬರ್ 27ರಂದು ‘ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ’ ರಿಲೀಸ್ ಆಗಲಿದೆ.
ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್ ನಟನೆಯ ‘ಸಪ್ತಸಾಗರದಾಚೆ ಎಲ್ಲೋ’ ತೆಲುಗು ನೆಲದಲ್ಲೂ ಸದ್ದು ಮಾಡಿದೆ. ಸ್ಯಾಂಡಲ್‌ವುಡ್‌ನಲ್ಲಿ ಕಮಾಲ್ ಮಾಡಿದ ಈ ಸಿನಿಮಾ, ಈಗ ತೆಲುಗಿನಲ್ಲೂ ಅತ್ಯುತ್ತಮ ಪ್ರತಿಕ್ರಿಯೆನ್ನು ಕಂಡಿದೆ.
ಹೇಮಂತ್ ನಿರ್ದೇಶಿಸಿದ ದೃಶ್ಯ ಕಾವ್ಯಕ್ಕೆ ಕನ್ನಡಿಗರು ಫಿದಾ ಆಗಿದ್ದಾರೆ. ಮನು- ಪ್ರಿಯಾ ಜೋಡಿಯ ಪ್ರೇಮ್ ಕಹಾನಿ ನೋಡಿ ಪ್ರೇಕ್ಷಕರು ಚಪ್ಪಾಳೆ ತಟ್ಟಿದ್ದಾರೆ.
ಫೈನಲಿ ಜನ ಕಾತುರದಿಂದ ಕಾಯುತ್ತಿರುವ ಸಪ್ತ ಸಾಗರದಾಚೆ ಸಿನೆಮಾದ ಪಾರ್ಟ್ ಬಿ ಅಕ್ಟೋಬರ್ 27ರಂದು ಅದ್ದೂರಿಯಾಗಿ ಬಿಡುಗಡೆಗೆ ಸಿದ್ದವಾಗಿದೆ.
- FILM7 days ago
Film: ಹಂದಿ ಮಾಂಸ ಸೇವಿಸಿದ ಟಿಕ್ಟಾಕ್ ಸ್ಟಾರ್ಗೆ 2 ವರ್ಷ ಜೈಲು ಶಿಕ್ಷೆ..!
- bangalore6 days ago
ಹುಡುಗಿ ಚೇಂಜ್ ಆದ್ರೂ ಡ್ರೆಸ್ ಚೇಂಜ್ ಆಗಿಲ್ಲ ಅಲ್ವಾ ಶೆಟ್ರೇ?
- bengaluru5 days ago
ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ..!
- DAKSHINA KANNADA5 days ago
ಮುಂದಿನ ವರ್ಷದಿಂದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ 3 ಬೋರ್ಡ್ ಎಕ್ಸಾಮ್- ಮಧು ಬಂಗಾರಪ್ಪ