ಬೆಂಗಳೂರು: ಬೆಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ಕಮಲ್ ಪಂತ್ ಅವರನ್ನು ವರ್ಗಾವಣೆ ಮಾಡಲಾಗಿದ್ದು ಬೆಂಗಳೂರು ನಗರದ ನೂತನ ಪೊಲೀಸ್ ಕಮಿಶನರ್ ಆಗಿ ಪ್ರತಾಪ್ ರೆಡ್ಡಿ ಅವರು ನೇಮಕಗೊಂಡಿದ್ದಾರೆ.
ಕಮಲ್ ಪಂತ್ ಅವರನ್ನು ನೇಮಕಾತಿ ವಿಭಾಗದ ಡಿಜಿಪಿಯಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಪ್ರತಾಪ್ ರೆಡ್ಡಿ ಅವರು ಬೆಂಗಳೂರು ಪೊಲೀಸ್ ಆಯುಕ್ತರಾಗಿ ನೇಮಕವಾಗಿದ್ದಾರೆ.
ಬೆಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ಕಮಲ್‌ಪಂತ್ ನೇಮಕಾತಿ ವಿಭಾಗದ ಡಿಜಿಪಿ ಆಗಿ ವರ್ಗಾವಣೆ ಹೊಂದಿದ್ದು, ಪ್ರತಾಪ್ ರೆಡ್ಡಿ ಅವರನ್ನು ಬೆಂಗಳೂರು ಪೊಲೀಸ್ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.
ಮೈಸೂರು ಗ್ಯಾಂಗ್ ರೇಪ್ ಪ್ರಕರಣದ ತನಿಖಾಧಿಕಾರಿ ಆಗಿದ್ದ ಪ್ರತಾಪ್ ರೆಡ್ಡಿ ಅವರು ತಮ್ಮ ನಿರ್ಧಾರಗಳಿಂದಲೇ ಹೆಸರುವಾಸಿಯಾಗಿದ್ದಾರೆ.
ಇದೀಗ ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ನೇಮಕಗೊಂಡಿದ್ದು ಏನೆಲ್ಲ ಬದಲಾವಣೆ ತರಲಿದ್ದಾರೆ ಕಾದುನೋಡಬೇಕಿದೆ.