Connect with us

bangalore

ಬೆಂಗಳೂರು: ಹೃದಯಾಘಾತದಿಂದ ಕೊನೆಯುಸಿರೆಳೆದ ಖ್ಯಾತ ನೇತ್ರ ತಜ್ಞ ಡಾ. ಭುಜಂಗ ಶೆಟ್ಟಿ

Published

on

ಖ್ಯಾತ ನೇತ್ರ ತಜ್ಞ, ನಾರಾಯಣ ನೇತ್ರಾಯಲಯದ ಅಧ್ಯಕ್ಷ ಡಾ. ಭುಜಂಗ ಶೆಟ್ಟಿ ಅವರು ಬೆಂಗಳೂರಿನ ಯಶವಂತಪುರದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾಗಿದ್ದಾರೆ.

ಬೆಂಗಳೂರು: ಖ್ಯಾತ ನೇತ್ರ ತಜ್ಞ, ನಾರಾಯಣ ನೇತ್ರಾಯಲಯದ ಅಧ್ಯಕ್ಷ ಡಾ. ಭುಜಂಗ ಶೆಟ್ಟಿ ಅವರು ಬೆಂಗಳೂರಿನ ಯಶವಂತಪುರದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾಗಿದ್ದಾರೆ.

ಅವರಿಗೆ 69 ವರ್ಷ ವಯಸ್ಸಾಗಿತ್ತು. ನಿನ್ನೆ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಮನೆಗೆ ವಾಪಸ್ಸಾಗಿದ್ದ ಡಾ. ಭುಜಂಗ ಶೆಟ್ಟಿ ಅವರಿಗೆ ಸಂಜೆಯ ವೇಳೆ ತೀವ್ರ ಹೃದಯಾಘಾತ ಉಂಟಾಗಿತ್ತು.

ಕೂಡಲೇ ಮನೆ ಮಂದಿ ಅವರನ್ನು ಚಿಕಿತ್ಸೆಗಾಗಿ ಯಶವಂತಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತ ಪಟ್ಟರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಭುಜಂಗ ಶೆಟ್ಟಿ ಅವರು 1978 ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಮಾಡಿದ್ದರು.

1982 ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನ ಮಿಂಟೋ ಆಪ್ತಾಲ್ಮಿಕ್ ಆಸ್ಪತ್ರೆಯಲ್ಲಿ ನೇತ್ರ ಚಿಕಿತ್ಸಾ ಶಾಸ್ತ್ರದಲ್ಲಿ ರೆಸಿಡೆನ್ಸಿ ತರಬೇತಿ ಪಡೆದಿದ್ದರು.

80ರ ದಶಕದಲ್ಲಿ ಸಣ್ಣ ಕ್ಲಿನಿಕ್‌ನಲ್ಲಿ ನೇತ್ರ ಚಿಕಿಯ್ಸಾಲಯವನ್ನು ಪ್ರಾರಂಭಿಸಿದ ಡಾ. ಭುಜಂಗ ಶೆಟ್ಟಿ ನಾರಾಯಣ ನೇತ್ರಾಯಲದ ಅಧ್ಯಕ್ಷರಾಗಿದ್ದರು.

ಭುಜಂಗ ಶೆಟ್ಟಿ ನಾರಾಯಣ ನೇತ್ರಾಲಯದಲ್ಲಿ ವಿವಿಧ ಉಪವಿಭಾಗಗಳ ಅಭಿವೃದ್ಧಿಯನ್ನು ಸಕ್ರಿಯವಾಗಿ ಪ್ರೋತ್ಸಾಹಿಸಿದ್ದಾರೆ ಮತ್ತು ನಾರಾಯಣ ನೇತ್ರಾಲಯವನ್ನು ಕರ್ನಾಟಕದ ಅತಿದೊಡ್ಡ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಾಗಿ ಪರಿವರ್ತಿಸಲು ಕಾರಣರಾಗಿದ್ದರು.

ಕಣ್ಣಿನ ಪೊರೆ ಮತ್ತು ಫಾಕೋಎಮಲ್ಸಿಫಿಕೇಶನ್ ಶಸ್ತ್ರಚಿಕಿತ್ಸೆಯಲ್ಲಿ ನೈಪುಣ್ಯತೆ ಹೊಂದಿದ್ದರು.

Click to comment

Leave a Reply

Your email address will not be published. Required fields are marked *

bangalore

ರಾಜ್ಯದ ಎಂಟು ಜಿಲ್ಲೆಗಳಲ್ಲಿ ಮಳೆಯಾಗಲಿದೆ: ಹವಾಮಾನ ಇಲಾಖೆ ಮುನ್ಸೂಚನೆ

Published

on

ಬೆಂಗಳೂರು : ಬಿಸಿಲಿನ ಉರಿಗೆ ಜನರು ಬೆಂದು ಹೋಗಿದ್ದಾರೆ. ವರುಣ ಕೃಪೆ ತೋರಯ್ಯ ಎಂದು ಬೇಡಿಕೊಳ್ಳುತ್ತಿದ್ದಾರೆ. ಈ ನಡುವೆ ಅಲ್ಲಲ್ಲಿ ಮಳೆಯಾಗಿದ್ರೂ ಸೂರ್ಯ ತಾಪವೇನೂ ಕಮ್ಮಿಯಾಗಿಲ್ಲ. ಇದೀಗ 8 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

heavy rain
ಎಲ್ಲೆಲ್ಲಿ ಮಳೆ ?
ರಾಜ್ಯದ ಜನತೆ ಮಳೆರಾಯನಿಗಾಗಿ ಕಾಯುತ್ತಿದ್ದಾರೆ. ಹವಾಮಾನ ಇಲಾಖೆ ಕೆಲವು ಜಿಲ್ಲೆಗಳಿಗೆ ಶುಭ ಸುದ್ದಿ ನೀಡಿದೆ. ಏಪ್ರಿಲ್ 24ರಂದು ಬಾಗಲಕೋಟೆ, ಬೆಳಗಾವಿ, ಬೀದರ್, ಮೈಸೂರು, ಕೊಡಗು, ಹಾಸನ ಸೇರಿ 8 ಜಿಲ್ಲೆಗಳಲ್ಲಿ ಕೆಲವೆಡೆ ಮಳೆ ಬೀಳಬಹುದು ಎಂದು ಹೇಳಿದೆ.

ತಾಪಮಾನ ಹೆಚ್ಚಳ :
ಭಾರತೀಯ ಹವಾಮಾನ ಇಲಾಖೆ ದೇಶದ ಹಲವು ಭಾಗಗಳಲ್ಲಿ ಬಿಸಿಲಿನ ತಾಪ ತೀವ್ರವಾಗಲಿದೆ ಎಂದು ಕೂಡ ಮಾಹಿತಿ ನಡಿದೆ. ಅದರಲ್ಲೂ ಪೂರ್ವ ಮತ್ತು ದಕ್ಷಿಣ ಭಾರತದ ಹೆಚ್ಚಿನ ಭಾಗಗಳಲ್ಲಿ ಶಾಖದ ಅಲೆಗಳು ಹೆಚ್ಚಲಿವೆ ಎಂದಿದೆ. ಏಪ್ರಿಲ್ 25 ರ ವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಏಪ್ರಿಲ್ 27 ರ ವರೆಗೆ ಈ ಪ್ರದೇಶಗಳಲ್ಲಿ ಉಷ್ಣಾಂಶ 2 ರಿಂದ 2 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ : ಖತರ್ನಾಕ್ ಕಳ್ಳನನ್ನು ಬಂಧಿಸಿದ ಕೋಟ ಪೊಲೀಸರು; ‘ನನ್ನ ಬಗ್ಗೆ ಮಾಹಿತಿ ಬೇಕಾದ್ರೆ ಯೂಟ್ಯೂಬ್ ನೋಡಿ’ ಎಂದ ಖದೀಮ!

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಏಪ್ರಿಲ್ 6 ರಂದು ರಾಜಧಾನಿಯಲ್ಲಿ ಗರಿಷ್ಠ 37.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದು ಎಂಟು ವರ್ಷಗಳಲ್ಲಿ ಅತಿ ಹೆಚ್ಚು ಎಂದು ವರದಿಯಾಗಿದೆ.

ಮುಂದಿನವಾರ ನಗರದಲ್ಲಿ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

Continue Reading

bangalore

ಮಹಿಳೆಯ ಅತಿಯಾದ ಕಾಮದಾಹ…! ದಾಹಕ್ಕೆ ಅಂತ್ಯ ಹಾಡಿದ ಯುವಕ..!

Published

on

ಬೆಂಗಳೂರು : ಆಕೆ 48 ವರ್ಷ ಪ್ರಾಯದ ಮಹಿಳೆಯಾಗಿದ್ದು, ತನ್ನಿಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಮಾಡಿಸಿ ಗಂಡನ ಮನೆಗೆ ಕಳುಹಿಸಿ ಕೊಟ್ಟಿದ್ದಾಳೆ. ಬೆಂಗಳೂರಿನ ಕೊಡಿಗೆ ಹಳ್ಳಿಯಲ್ಲಿ ಮನೆ ಮಾಡಿಕೊಂಡು ಒಂಟಿಯಾಗಿದ್ದ ಆಕೆಯ ದೇಹ ನಗ್ನವಾಗಿ ಬೆಡ್‌ರೂಮಿನಲ್ಲಿ ಪತ್ತೆಯಾಗಿತ್ತು. ಎಪ್ರಿಲ್ 19 ರಂದು ನಡೆದಿದ್ದ ಈ ಘಟನೆಯನ್ನು ಭೇದಿಸಿದ ಪೊಲೀಸರಿಗೆ ಶಾಕ್ ಆಗುವಂತ ವಿಚಾರಗಳು ಗೊತ್ತಾಗಿದೆ.

ಕೊಡಿಗೆ ಹಳ್ಳಿಯ ಭದ್ರಪ್ಪ ಲೇಔಟ್‌ನಲ್ಲಿ ನಡೆದಿದ್ದ ಶೋಭಾ ಎಂಬ ಮಹಿಳೆಯ ಕೊ*ಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ ಕೊಲೆ ಆರೋಪಿಯಾಗಿರುವ ನವೀನ್ ಎಂಬ ಯುವಕನನ್ನು ಕೊಡಿಗೆ ಹಳ್ಳಿಯ ಪೊಲೀಸರು ಬಂದಿಸಿದ್ದಾರೆ. ವಿಚಾರಣೆ ವೇಳೆ ಬಾಯ್ಬಿಟ್ಟ ವಿಚಾರ ಕೇಳಿ ಪೊಲೀಸರೇ ಸುಸ್ತಾಗಿದ್ದಾರೆ. ಬಳಿಕ ಹೆಚ್ಚಿನ ತನಿಖೆ ನಡೆಸಿದ ಪೊಲೀಸರಿಗೆ ಶೋಭಾಳ ಕಾಮದಾಹ ಬೆಳಕಿಗೆ ಬಂದಿದೆ.

ಇದನ್ನೂ ಓದಿ ಗಂಡ-ಹೆಂಡತಿ ಬೇರೆ ಬೇರೆ ಮಲಗಿದ್ರೆ ಏನೆಲ್ಲಾ ಪ್ರಯೋಜನ ಇದೆ ಗೊತ್ತಾ?

ಶೋಭಾಳಿಗೆ ಇನ್‌ಸ್ಟಾಗ್ರಾಂ ಮೂಲಕ ಪರಿಚಿತನಾಗಿದ್ದ ನವೀನ್ ಬಳಿಕ ಸ್ನೇಹಿತನಾಗಿ, ಅದು ಪ್ರೀತಿಗೆ ತಿರುಗಿ ಬಳಿಕ ಇಬ್ಬರ ನಡುವೆ ಅನೈತಿಕ ಸಂಬಂಧದವರೆಗೂ ಬಂದು ನಿಂತಿತ್ತು. ಮಗನ ವಯಸ್ಸಿನ ಹುಡುಗನ ಜೊತೆಯಲ್ಲಿ ನಿರಂತರ ಸೆಕ್ಸ್ ಮಾಡುತ್ತಿದ್ದ ಶೋಭಾಳ ಅತಿಯಾದ ಕಾಮಧಾಹದಿಂದ ಬೇಸತ್ತು ಆಕೆಯನ್ನು ಕೊಲೆ ಮಾಡಿದ್ದಾಗಿ ಹೇರೋಹಳ್ಳಿ ಮೂಲದ ಆರೋಪಿ ನವೀನ್ ಹೇಳಿಕೆ ನೀಡಿದ್ದಾನೆ.

ಕೊಲೆ ನಡೆದ ದಿನವೂ ಶೋಭಾ ಮನೆಗೆ ನವೀನ್ ಬಂದಿದ್ದ. ಏ.19ರಂದು ಇಬ್ಬರು ದೈಹಿಕ ಸಂರ್ಪಕವನ್ನು ಬೆಳೆಸಿದ್ದರು. ಆ ನಂತರ ಶೋಭಾ ಮತ್ತೆ ನವೀನ್‌ಗೆ ಸೆಕ್ಸ್‌ಗೆ ಒತ್ತಾಯಿಸಿದ್ದು ನಿರಾಕರಿಸಿದಾಗ ಬ್ಲ್ಯಾಕ್‌ಮೇಲ್ ಮಾಡಿದ್ದಾಳೆ. ಈಕೆ ಅತಿಯಾಗಿ ಸೆಕ್ಸ್‌ಗೆ ಒತ್ತಾಯಿಸಿದ್ದಕ್ಕೆ ಬೇಸರಗೊಂಡ ನವೀನ್‌ ಬೆಡ್‌ ರೂಮಿನಲ್ಲೇ ಆಕೆಯ ಕಥೆ ಮುಗಿಸಿದ್ದ.

48ರ ಮಹಿಳೆಗೆ ಯುವಕರ ಮೇಲೆ ಹುಚ್ಚು

48ರ ಶೋಭಾ ಕೇವಲ ನವೀನ್ ಮಾತ್ರವಲ್ಲದೇ ಅನೇಕ ಯುವಕರ ಸಹವಾಸ ಬೆಳೆಸಿದ್ದಳು. ಒಬ್ಬೊಬ್ಬ ಹುಡುಗರಿಗೂ ಒಂದೊಂದು ಹಣ್ಣಿನ ಹೆಸರಿಟ್ಟಿದ್ದು, ನವೀನ್‌ಗೆ ಆ್ಯಪಲ್ ಎಂದು ಹೆಸರಿಟ್ಟಿದ್ದಳಂತೆ. ಆ್ಯಪಲ್, ಆರೆಂಜ್, ಬನಾನ ಹೆಸರಿನಲ್ಲಿ ಹುಡುಗರ ಹೆಸರು ಸೇವ್ ಮಾಡಿಕೊಳ್ಳುತ್ತಿದ್ದಳು. ಆ್ಯಪ್‌ಗಳಲ್ಲಿಯೂ ಆ್ಯಕ್ಟಿವ್ ಆಗಿದ್ದ ಶೋಭಾ ಸುಮಾರು 20 ಕ್ಕೂ ಹೆಚ್ಚು ಹುಡುಗರನ್ನು ಖೆಡ್ಡಾಗೆ ಬೀಳಿಸಿಕೊಂಡಿದ್ದಳು. ಈಕೆ ಕರೆದಾಗ ಯುವಕರು ಏನಾದರೂ ಬಾರದೆ ಇದ್ದರೆ ಅವರ ಮನೆ ಬಳಿಯೇ ಹೋಗುತ್ತಿದ್ದಳು. ನಂತರ ಕಾರಿನ ಹಾರ್ನ್ ಜೋರಾಗಿ ಹಾಕುತ್ತಿದ್ದಳು. ಇಷ್ಟಕ್ಕೂ ಜಗ್ಗದೆ ಹೋದರೆ ಮನೆಯವರಿಗೆ ಖಾಸಗಿ ಫೋಟೊವನ್ನು ತೋರಿಸುವುದಾಗಿ ಬೆದರಿಕೆ ಹಾಕುತ್ತಿದ್ದಳು. ಅಷ್ಟೇ ಅಲ್ಲದೆ ಆ ಯುವಕರ ಮದುವೆಗೂ ಅಡ್ಡಿ ಪಡಿಸಿ ಮದುವೆ ನಿಲ್ಲಿಸಿದ್ದಳು.

ಇದನ್ನೂ ಓದಿ ರಿಯಾಲಿಟಿ ಶೋಗಳಲ್ಲೂ ಕಾಸ್ಟಿಂಗ್ ಕೌಚ್! ಡ್ಯಾನ್ಸಿಂಗ್ ಕ್ವೀನ್ ಬಿಚ್ಚಿಟ್ಟ ಸತ್ಯವೇನು?

ಕೊಲೆಯಾದ ದಿನವೂ ನವೀನ್‌ಗೆ ಬ್ಲಾಕ್ ಮೇಲ್ ಮಾಡಿ ಕರೆಸಿಕೊಂಡಿದ್ದಳು. ನವೀನ್‌ ಎಡಗೈಗೆ ಗಾಯವಾಗಿತ್ತು, ಗಾಯದ ಮೇಲೆ ಕೂತು ನೀನು‌ ಮದುವೆ ಆಗಬಾರದು, ಹೀಗೆ ನನ್ನ ಜತೆ ಇರಬೇಕು. ಮದುವೆ ಆದರೆ ಅಲ್ಲೆ ಬಂದು ಗಲಾಟೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಳು. ಇದರಿಂದ ಬೇಸತ್ತ ನವೀನ್‌, ಶೋಭಾಳ ಕತ್ತು ಹಿಸುಕಿ ಕೊ*ಲೆ‌ ಮಾಡಿದ್ದಾಗಿ ವಿಚಾರಣೆ ವೇಳೆ ಹೇಳಿದ್ದಾನೆ.

Continue Reading

bangalore

ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಕೆಎಸ್ ಈಶ್ವರಪ್ಪ ಬಿಜೆಪಿ ಪಕ್ಷದಿಂದ ಉಚ್ಛಾಟನೆ..!

Published

on

ಬೆಂಗಳೂರು: ಬಿಜೆಪಿ ಹಿರಿಯ ಮುಖಂಡ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಆರು ವರ್ಷಗಳ ಕಾಲ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶಿಸಿ ಬಿಜೆಪಿ ಶಿಸ್ತು ಸಮಿತಿ ಈ ನಿರ್ಧಾರ ಕೈಗೊಂಡಿದೆ.

ishwarappaishwarappa

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಕೆಎಸ್‌ ಈಶ್ವರಪ್ಪ, ತಮ್ಮ ನಾಮಪತ್ರವನ್ನು ಹಿಂಪಡೆಯಲು ನಿನ್ನೆ(ಎ.22) ಕೊನೆಯ ದಿನವಾಗಿತ್ತು. ಆದರೆ, ಈಶ್ವರಪ್ಪ ನಾಮಪತ್ರವನ್ನು ಹಿಂಪಡೆಯಲು ನಿರಾಕರಿಸಿದ ಕಾರಣ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ. ಆರು ವರ್ಷಗಳ ಕಾಲ ಅವರು ಬಿಜೆಪಿ ಪಕ್ಷದಡಿ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ.

ಮುಂದೆ ಓದಿ..; ಚೌಟ ಪರ ಪ್ರಚಾರಕ್ಕೆ ಪುತ್ತೂರಿಗೆ ಬರಲಿದ್ದಾರೆ ಅಣ್ಣಾಮಲೈ

ಬಿಜೆಪಿ ಪಕ್ಷದಲ್ಲೇ ಇದ್ದುಕೊಂಡ ಕೆ ಎಸ್ ಈಶ್ವರಪ್ಪ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡು ನಿಂದಿಸುತ್ತಿದ್ದರು. ಬಿ ಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬ ರಾಜಕಾರಣವನ್ನು ಕೆ ಎಸ್ ಈಶ್ವರಪ್ಪ ತೀವ್ರವಾಗಿ ಟೀಕಿಸುತ್ತಿದ್ದರು. ತನ್ನ ಬೆಂಬಲ ಮೋದಿ ಪ್ರಧಾನಿಗೆ ಇದೆ ಎಂದು ಹೇಳಿಕೊಂಡಿದ್ದ ಈಶ್ವರಪ್ಪ ತಾನು ಗೆದ್ದ ಬಳಿಕ ಮೋದಿಗೆ ಬೆಂಬಲ ನೀಡುವುದಾಗಿ ಹೇಳಿಕೆ ನೀಡುತ್ತಿದ್ದರು. ಆದರೆ ಇದೀಗ ಪಕ್ಷದಿಂದಲೇ ಇವರನ್ನು ಉಚ್ಛಾಟಿಸಲಾಗಿದೆ.

Continue Reading

LATEST NEWS

Trending