Connect with us

bangalore

Bengaluru: ಪೊಲೀಸ್ ಸೋಗಿನಲ್ಲಿ ಬಂದು ಚಿನ್ನಾಭರಣ ದರೋಡೆ..!

Published

on

ಮೂವರು ದುಷ್ಕರ್ಮಿಗಳು ಪೊಲೀಸರಂತೆ ನಟಿಸಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರು ಚಾಲಕನ ಚಿನ್ನಾಭರಣ ದರೋಡೆ ಮಾಡಿ ಪರಾರಿಯಾದ ಘಟನೆ ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ನಡೆದಿದೆ.

ಬೆಂಗಳೂರು: ಮೂವರು ದುಷ್ಕರ್ಮಿಗಳು ಪೊಲೀಸರಂತೆ ನಟಿಸಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರು ಚಾಲಕನ ಚಿನ್ನಾಭರಣ ದರೋಡೆ ಮಾಡಿ ಪರಾರಿಯಾದ ಘಟನೆ ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ನಲ್ಲಿ ನಡೆದಿದೆ.

ಕೊಡಗಿನ ವಿರಾಜಪೇಟೆ ತಾಲೂಕಿನ ಅರಪಟ್ಟು ನಿವಾಸಿ ಕೆ.ಕೆ ಮುತ್ತಪ್ಪ ದರೋಡೆಗೊಳಗಾದ ವ್ಯಕ್ತಿ.

ಮುತ್ತಪ್ಪ ಅವರು ಬೆಂಗಳೂರಿನಲ್ಲಿ ವೈದ್ಯರನ್ನು ಸಂಪರ್ಕಿಸಿ ನಂತರ ಆಸ್ಪತ್ರೆಯಿಂದ ವಿರಾಜಪೇಟೆಗೆ ಹಿಂತಿರುಗುತ್ತಿದ್ದ ವೇಳೆ ಕತ್ತಲಾಗಿತ್ತು.

ಹೀಗಾಗಿ ಬೆಂಗಳೂರಿನಲ್ಲಿ ರಾತ್ರಿ ಊಟ ಮುಗಿಸಿಕೊಂಡು ಎಕ್ಸ್‌ಪ್ರೆಸ್‌ವೇನಲ್ಲಿ ಪ್ರಯಾಣ ಆರಂಭಿಸಿದರು.

ಪ್ರಯಾಣದ ಸಂದರ್ಭ ನಿದ್ದೆ ಬಂದ ಹಿನ್ನಲೆ ಸುಮಾರು 2:30ರ ತಡರಾತ್ರಿಗೆ ಮದ್ದೂರಿನ ಐಶ್ವರ್ಯ ಇಂಟರ್‌ನ್ಯಾಶನಲ್ ಪಬ್ಲಿಕ್ ಸ್ಕೂಲ್‌ನ ನಿರ್ಗಮನದಲ್ಲಿ ಕಾರು ನಿಲ್ಲಿಸಿ, ಕಾರಿನಲ್ಲಿಯೇ ನಿದ್ರಿಸಿದರು.

ಕಾರಿನಲ್ಲಿ ನಿದ್ದೆ ಮಂಪರಿನಲ್ಲಿದ್ದ ಮುತ್ತಪ್ಪ ಅವರನ್ನು ಒರ್ವನು ಕಿಟಕಿ ಬಡಿದು ಎಬ್ಬಿಸಿ ತಾನು ಪೊಲೀಸ್ ಅಧಿಕಾರಿ ಎಂದು ಹೇಳಿದನು.

ನಂತರ ಆತ ನೀವು ಕುಡಿದು ವಾಹನ ಚಲಾಯಿಸಿದ್ದಿರಿ, ಪರಿಶೀಲಿಸಬೇಕು ಕೆಳಗೆ ಇಳಿ ಎಂದರು.

ಇದಕ್ಕೆ ಮುತ್ತಪ್ಪ ಅವರು ಬಾಗಿಲು ತೆರೆದಾಗ ದುಷ್ಕರ್ಮಿ ಚಾಕು ತೋರಿಸಿ ಬೆದರಿಕೆ ಹಾಕಿದರು.

ಈ ವೇಳೆ ಮುತ್ತಪ್ಪ ಅವರು ತಪ್ಪಿಸಿಕೊಳ್ಳಲು ಪ್ರಯತ್ನಿಸಿದರು.

ಆದರೆ ಮತ್ತೊಂದು ಬದಿಯಲ್ಲಿ ನಿಂತಿದ್ದ ದುಷ್ಕರ್ಮಿ ಚಾಕು ತೋರಿಸಿದನು.

ನಂತರ ಮುತ್ತಪ್ಪ ಅವರನ್ನು ಕಾರಿನಿಂದ ಸ್ವಲ್ಪ ದೂರದವರೆಗೆ ಎಳೆದುಕೊಂಡು ಹೋಗಿ ಚಿನ್ನದ ಸರವನ್ನು ದರೋಡೆ ಮಾಡಿ ಮುತ್ತಪ್ಪ ಅವರನ್ನು ಅಲ್ಲಿಯೇ ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ.

ಮುತ್ತಪ್ಪ ಅವರು ತಕ್ಷಣ 112 ತುರ್ತು ಸಂಖ್ಯೆಗೆ ಕರೆ ಮಾಡಿದರು.

ಈ ಕೂಡಲೆ ಹೆದ್ದಾರಿ ಪೊಲೀಸರು ಸ್ಥಳಕ್ಕೆ ಧಾವಿಸಿದರು.

ಸ್ಥಳ ಪರಿಶೀಲಿಸಿ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

ಕೊಡಗಿನ ವಿರಾಜಪೇಟೆ ತಾಲೂಕಿನ ಅರಪಟ್ಟು ನಿವಾಸಿ ಕೆ.ಕೆ ಮುತ್ತಪ್ಪ ಅವರ 3.5 ಲಕ್ಷ ಮೌಲ್ಯದ ಚಿನ್ನದ ಸರವನ್ನು ಆರೋಪಿಗಳು ದೋಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

bangalore

‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಬಿ ರಿಲೀಸ್ ಡೇಟ್ ಚೇಂಜ್…!

Published

on

ರಕ್ಷಿತ್ ಶೆಟ್ಟಿ ನಟನೆಯ ಸಪ್ತ ಸಾಗರದಾಚೆ ಎಲ್ಲೋ ಸಿನೆಮಾದ ಸೈಡ್ ಬಿ ಅಕ್ಟೋಬರ್​ 20ರ ಬದಲಿಗೆ ಅಕ್ಟೋಬರ್​ 27ರಂದು ರಿಲೀಸ್​ ಆಗಲಿದೆ.

 

ರಕ್ಷಿತ್ ಶೆಟ್ಟಿ ನಟಿಸಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ತೆಲುಗಿನಲ್ಲೂ ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿದ್ದು ಚಿತ್ರತಂಡ ಮೊದಲೇ ಘೋಷಿಸಿದಂತೆ ಅಕ್ಟೋಬರ್ 20ಕ್ಕೆ ಬಿಡುಗಡೆ ಆಗಬೇಕಿತ್ತು.

ಆದ್ರೆ ಅಕ್ಟೋಬರ್ 20ಕ್ಕೆ ಸಪ್ತ ಸಾಗರದಾಚೆ ಸಿನೆಮಾ ರಿಲೀಸ್ ಆಗುತ್ತಿಲ್ಲ.

ಸೈಡ್ ಬಿ ಪಾರ್ಟ್ ನೋಡಲು ಅಭಿಮಾನಿಗಳು ತುದಿಗಾಲಲ್ಲಿ ನಿಂತು ಕಾಯುತ್ತಿದ್ದರು. ಭಾರೀ ಬಜೆಟ್ ಚಿತ್ರಗಳು, ಸ್ಟಾರ್ ನಟರ ಚಿತ್ರಗಳು, ಪರಭಾಷೆಯ ಚಿತ್ರಗಳ ಹಾವಳಿಯಿಂದಾಗಿ ಚಿತ್ರ ಬಿಡುಗಡೆಯ ದಿನಾಂಕ ಬದಲಾಗಿದೆ.

ಹೀಗಾಗಿ ಚಿತ್ರತಂಡ ಅಕ್ಟೋಬರ್ 27ಕ್ಕೆ ಪಾರ್ಟ್ ಬಿ ರಿಲೀಸ್ ಮಾಡುವ ಘೋಷಣೆಯನ್ನು ಮಾಡಿದೆ.

ಹೌದು ..ಅಕ್ಟೋಬರ್​ 20ರ ಬದಲಿಗೆ ಅಕ್ಟೋಬರ್​ 27ರಂದು ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ ರಿಲೀಸ್​ ಆಗಲಿದೆ.

ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್ ನಟನೆಯ ‘ಸಪ್ತಸಾಗರದಾಚೆ ಎಲ್ಲೋ’ ತೆಲುಗು ನೆಲದಲ್ಲೂ ಸದ್ದು ಮಾಡಿದೆ. ಸ್ಯಾಂಡಲ್‌ವುಡ್‌ನಲ್ಲಿ ಕಮಾಲ್ ಮಾಡಿದ ಈ ಸಿನಿಮಾ, ಈಗ ತೆಲುಗಿನಲ್ಲೂ ಅತ್ಯುತ್ತಮ ಪ್ರತಿಕ್ರಿಯೆನ್ನು ಕಂಡಿದೆ.

ಹೇಮಂತ್ ನಿರ್ದೇಶಿಸಿದ ದೃಶ್ಯ ಕಾವ್ಯಕ್ಕೆ ಕನ್ನಡಿಗರು ಫಿದಾ ಆಗಿದ್ದಾರೆ. ಮನು- ಪ್ರಿಯಾ ಜೋಡಿಯ ಪ್ರೇಮ್ ಕಹಾನಿ ನೋಡಿ ಪ್ರೇಕ್ಷಕರು ಚಪ್ಪಾಳೆ ತಟ್ಟಿದ್ದಾರೆ.

ಫೈನಲಿ ಜನ ಕಾತುರದಿಂದ ಕಾಯುತ್ತಿರುವ ಸಪ್ತ ಸಾಗರದಾಚೆ ಸಿನೆಮಾದ ಪಾರ್ಟ್ ಬಿ ಅಕ್ಟೋಬರ್ 27ರಂದು ಅದ್ದೂರಿಯಾಗಿ ಬಿಡುಗಡೆಗೆ ಸಿದ್ದವಾಗಿದೆ.

 

Continue Reading

bangalore

SHOCKING! ಗುರುತೇ ಸಿಗದಷ್ಟು ಬದಲಾದ ‘ಹುಚ್ಚ’ ಖ್ಯಾತಿಯ ನಟಿ ರೇಖಾ …!

Published

on

ಶಾಕಿಂಗ್ ಲುಕ್ ನಲ್ಲಿ ಕಾಣಿಸಿಕೊಂಡ ಕಿಚ್ಚ ಸುದೀಪ್ ಜೊತೆ ‘ಹುಚ್ಚ’ ಚಿತ್ರದಲ್ಲಿ ನಟಿಸಿ ಮನೆ ಮಾತಾಗಿದ್ದ ನಟಿ ರೇಖಾ ವೇದವ್ಯಾಸ್.

 

ಬೆಂಗಳೂರು : ಕಿಚ್ಚ ಸುದೀಪ್ ಜೊತೆ ‘ಹುಚ್ಚ’ ಚಿತ್ರದಲ್ಲಿ ನಟಿಸಿ ಮನೆ ಮಾತಾಗಿದ್ದ ನಟಿ ರೇಖಾ ವೇದವ್ಯಾಸ್ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ.

ಅಷ್ಟೊಂದು ಮುದ್ದು ಮುದ್ದು ಮುಖ, ಹೊಳೆಯುತ್ತಿದ್ದ ಕಣ್ಣು, ಮಿನುಗುತ್ತಿದ್ದ ಕೆನ್ನೆಯನ್ನು ಇಂದಿಗೂ ಅಭಿಮಾನಿಗಳು ನೆನೆಸಿಕೊಳ್ಳುತ್ತಾರೆ.ಆದ್ರೆ ಈಗ ಅದೇ ರೇಖಾ ಗುರುತೆ ಸಿಗದಷ್ಟರ ಮಟ್ಟಿಗೆ ಬದಲಾಗಿ ಹೋಗಿದ್ದಾರೆ.

ಸಣಕಲು ದೇಹ, ಬತ್ತಿದ ಕಣ್ಣುಗಳು, ಬಾಡಿದ ಕೆನ್ನೆಗಳು ರೇಖಾ ಅವರ ನಿಜ ಸ್ವರೂಪವನ್ನೇ ಬದಲಾಯಿಸಿ ಬಿಟ್ಟಿದೆ.

ಒಂದು ಕಾಲದಲ್ಲಿ ಬೆಳ್ಳಿ ತೆರೆಯಲ್ಲಿ ಮಿರ ಮಿರ ಮಿಂಚಿ ಮರೆಯಾಗಿರುವ ನಟಿ ರೇಖಾ ದಿಢೀರನೆ ತೆಲುಗು ಕಿರುತೆರೆ ಕಾರ್ಯಕ್ರಮದಲ್ಲಿ ಪ್ರತ್ಯಕ್ಷ ಆಗಿದ್ದಾರೆ.

ತೆಲುಗಿನ ‘ಶ್ರೀದೇವಿ ಡ್ರಾಮಾ ಕಂಪನಿ’ ಕಾಮಿಡಿ ಶೋಗೆ ಅತಿಥಿಯಾಗಿ ಬಂದಿದ್ದ ರೇಖಾ ಎಲ್ಲರಿಗೂ ಶಾಕ್ ನೀಡಿದ್ದಾರೆ.

ಬೆಂಗಳೂರಿನಲ್ಲಿ ಹುಟ್ಟಿಬೆಳೆದ ರೇಖಾ ಕನ್ನಡದ ‘ಹುಚ್ಚ’ ಚಿತ್ರದಲ್ಲಿ ಮೊದಲಿಗೆ ಆಕೆ ಬಣ್ಣ ಹಚ್ಚಿದ್ದರು.

ಅಲ್ಲಿಂದ ಮುಂದೆ ಕನ್ನಡ ಸಿನಿರಸಿಕರಿಗೆ ‘ಹುಚ್ಚ’ ನಟಿ ರೇಖಾ ಅಂತ್ಲೇ ಪರಿಚಿತರಾದರು.

ಕನ್ನಡ ಜೊತೆ ಜೊತೆಗೆ ತೆಲುಗು, ತಮಿಳು ಸಿನಿಮಾಗಳಲ್ಲಿ ರೇಖಾ ಮಿಂಚಿದರು. ತೆಲುಗಿನಲ್ಲೂ ಆಕೆ ಹಲವು ಹಿಟ್ ಸಿನಿಮಾಗಳಲ್ಲಿ ಮಿಂಚಿದ್ದಾರೆ.

ಕಾಲೇಜು ದಿನಗಳಲ್ಲೇ ಮಾಡೆಲಿಂಗ್ ಆರಂಭಿಸಿದ ಚೆಲುವೆಗೆ ಚಿತ್ರರಂಗಕ್ಕೆ ಬರುವುದು ಕಷ್ಟವಾಗಲಿಲ್ಲ.

‘ಚಿತ್ರ’, ‘ತುಂಟಾಟ’, ‘ಮೋನಲಿಸಾ’, ‘ಚೆಲ್ಲಾಟ’ ಹೀಗೆ ಹಿಟ್ ಸಿನಿಮಾಗಳಲ್ಲಿ ಮಿಂಚಿದರು.

ಬಳಿಕ ತೆಲುಗು, ತಮಿಳು ಸಿನಿಮಾಗಳತ್ತ ಮುಖ ಮಾಡಿದ್ದರು. ಗಣೇಶ್ ಜೋಡಿಯಾಗಿ ‘ಹುಡುಗಾಟ’ ಚಿತ್ರದ ಮೂಲಕ ಮತ್ತೆ ಕನ್ನಡಕ್ಕೆ ಬಂದ ರೇಖಾ ಮತ್ತೊಮ್ಮೆ ಕಮಾಲ್ ಮಾಡಿದರು.

ನಟಿ ರೇಖಾ 2014ರ ನಂತರ ಬೆಳ್ಳಿತೆರೆ ಮೇಲೆ ಕಾಣಿಸಿಕೊಂಡಿಲ್ಲ. ಅವಕಾಶಗಳು ಸಿಕ್ಕಿಲ್ವೋ ಅಥವಾ ಸಿನಿಮಾ ಮೇಲಿನ ಆಸಕ್ತಿ ಕಮ್ಮಿ ಆಯ್ತೋ ಗೊತ್ತಿಲ್ಲ.

ಆದರೆ ಇದ್ದಕ್ಕಿಂದ್ದಂತೆ ಬಿಗ್ ಸ್ಕ್ರೀನ್​ನಿಂದ ಮಾಯವಾಗಿದ್ದ ರೇಖಾ ಸಿನಿಪ್ರೇಮಿಗಳಿಗೆ ಅಪರೂಪದ ತಾರೆಯಾಗಿ ಉಳಿದುಕೊಂಡು ಬಿಟ್ರು.

ಆದಷ್ಟು ಬೇಗ ಕನ್ನಡ ಮುದ್ದು ಮುಖದ ನಟಿ ರೇಖಾ ವೇದವ್ಯಾಸ್ ಗುಣ ಮುಖರಾಗಿ ಮೊದಲಿನ ಮಂದಹಾಸ ಬರಲಿ ಅನ್ನೋದೆ ಅವರ ಅಭಿಮಾನಿಗಳ ಆಸೆ.

 

Continue Reading

bangalore

ಹಾಫ್ ಸೆಂಚುರಿ ಖುಷಿಯಲ್ಲಿ ಸೀತಾ-ರಾಮ ಸೀರಿಯಲ್

Published

on

ಕನ್ನಡ ಕಿರುತೆರೆಯ ನಂಬರ್ ಒನ್ ಧಾರವಾಹಿ “ಸೀತಾ-ರಾಮ” ಯಶಸ್ವಿ 50 ಸಂಚಿಕೆಗಳನ್ನು ಪೂರೈಸಿದೆ. 

 

ಬೆಂಗಳೂರು : ಕನ್ನಡ ಕಿರುತೆರೆಯಲ್ಲಿ ಸದ್ಯ ಸೀತಾರಾಮ ಧಾರವಾಹಿ ಮಾಡಿರುವ ಮೋಡಿ ಅಷ್ಟಿಷ್ಟಲ್ಲ. ರಾತ್ರಿ 9.30 ಕ್ಕೆ ಸರಿಯಾಗಿ ಪುಟ್ಟ ಮಕ್ಕಳಿಂದ ಹಿಡಿದು, ಹುಡುಗೀರು, ಆಂಟಿಯಂದಿರು ಟಿವಿ ಮುಂದೆ ಹಾಜರಿರ್ತಾರೆ.

ಇದೀಗ ನಂಬರ್ ಒನ್ ಸೀರಿಯಲ್ ಆಗಿರುವ ಸೀತಾರಾಮ 50 ದಿನಗಳನ್ನು ಯಶಸ್ವಿಯಾಗಿ ಪೂರೈಸಿದೆ. ಕಥೆ ರಿಮೇಕ್ ಆದ್ರೂ ಕನ್ನಡದ ನೇಟಿವಿಟಿಗೆ ತಕ್ಕಂತೆ ಧಾರವಾಹಿ ಕಥಾ ಹಂದರವನ್ನು ಬಳಸಲಾಗಿದೆ.

ಅದ್ರಲ್ಲೂ ವೈಷ್ಣವಿ ಇದ್ದಾರೆ ಅಂದ್ರೆ ಅಲ್ಲಿ ಟಿ.ಆರ್.ಪಿ ರೇಟ್ ಗಗನಕ್ಕೇರುತ್ತೆ.

ಬಿಗ್ ಬಾಸ್ ಬಳಿಕ ವೈಷ್ಣವಿ ಸೀತಾ ರಾಮ ಪ್ರೋಜೆಕ್ಟ್ ಮೂಲಕ ಜನರ ಮನಸ್ಸನ್ನು ಗೆದ್ದು ಈಗ 50 ಸಂಚಿಕೆಗಳನ್ನು ಪೂರೈಸಿರುವ ಸಂತೋಷದಲ್ಲಿದ್ದಾರೆ.

ಬಡ ಮನೆಯ ಹೆಣ್ಣು ಮಗಳು ಬದುಕಿನ ಹೋರಾಟದಲ್ಲಿ ಎದುರಿಸುವ ನಾನಾ ಸಂಕಷ್ಟಗಳನ್ನುಇಟ್ಟುಕೊಂಡು ಧಾರವಾಹಿಯ ಕಥೆಯನ್ನು ಹೆಣೆಯಲಾಗಿದೆ.

ಹೀರೋ- ಹೀರೋಹಿನ್ ಕೆಮೆಸ್ಟ್ರೀ ಕ್ಲಿಕ್ ಆಗಿದ್ದು, ಇವರಿಬ್ಬರೂ ರಿಯಲ್ ಲೈಫಲ್ಲೂ ಒಂದಾದ್ರೆ ಚೆನ್ನಾಗಿರುತ್ತೆ ಅಲ್ವಾ ಅಂತ ಯೋಚ್ನೆ ಮಾಡ್ತಿದ್ದಾರೆ.

ಧಾರವಾಹಿ ನೂರು ಸಂಚಿಕೆಗಳನ್ನು ಯಶಸ್ವಿಯಾಗಿ ಪೂರೈಸಲಿ ಅನ್ನೋದೆ ಸೀತಾ-ರಾಮ ಧಾರವಾಹಿ ಅಭಿಮಾನಿಗಳ ಆಸೆ. ನಮ್ಮ ಕಡೆಯಿಂದಲೂ ಆಲ್ ದ ವೆರೀ ಬೆಸ್ಟ್.

Continue Reading

LATEST NEWS

Trending