Friday, June 2, 2023

ಟೀಚರ್ ಹೀಗೆ ಹೊಡೆಯೋದು ಸರೀನಾ: ಶಿಕ್ಷಕಿಯ ಪೆಟ್ಟಿಗೆ ಬಾಲಕಿ ದುರಂತ ಅಂತ್ಯ..!

ಬೆಂಗಳೂರು: ಶಿಕ್ಷಕರು ಕೊಟ್ಟ ಏಟಿನಿಂದ ಶಾಲಾ ಬಾಲಕಿಯೋರ್ವಳು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ರಾಮಚಂದ್ರಾಪುರದ ಖಾಸಗಿ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿದ್ದ ನಿಶಿತಾ ಎಂಬ ವಿದ್ಯಾರ್ಥಿನಿ ಮೃತಪಟ್ಟ ದುರ್ದೈವಿ ಬಾಲಕಿ.


ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದ್ದು, ಶಿಕ್ಷಕನ ಹೊಡೆತಕ್ಕೆ ವಿದ್ಯಾರ್ಥಿನಿ ತರಗತಿಯಲ್ಲೇ ಎಚ್ಚರ ತಪ್ಪಿ ಬಿದ್ದಿದ್ದಾಳೆ.

ಕೂಡಲೇ ಆಕೆಯನ್ನು ರಾಮಯ್ಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.

ಈ ಸಂಬಂಧ ಗಂಗಮ್ಮನ ಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನೂ, ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

LEAVE A REPLY

Please enter your comment!
Please enter your name here

Hot Topics