Connect with us

bengaluru

ಬೆಂಗಳೂರು: ರಾಜ್ಯದ ನೂತನ ಅಡ್ವೋಕೇಟ್ ಜನರಲ್‌ ಆಗಿ ಶಶಿ ಕಿರಣ್ ಶೆಟ್ಟಿ ನೇಮಕ

Published

on

ರಾಜ್ಯ ಸರ್ಕಾರದ ನೂತನ ಅಡ್ವೋಕೇಟ್ ಜನರಲ್‌ ಆಗಿ ಹಿರಿಯ ವಕೀಲ ಶಶಿ ಕಿರಣ್ ಶೆಟ್ಟಿ ಅವರನ್ನು ಸರಕಾರ ನೇಮಕ ಮಾಡಿದೆ.

ಬೆಂಗಳೂರು: ರಾಜ್ಯ ಸರ್ಕಾರದ ನೂತನ ಅಡ್ವೋಕೇಟ್ ಜನರಲ್‌ ಆಗಿ ಹಿರಿಯ ವಕೀಲ ಶಶಿ ಕಿರಣ್ ಶೆಟ್ಟಿ ಅವರನ್ನು ಸರಕಾರ ನೇಮಕ ಮಾಡಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಅಡ್ವೊಕೇಟ್‌ ಜನರಲ್‌ ಹುದ್ದೆಗೆ ಯಾರು ನೇಮಕ ಚರ್ಚೆಯಲ್ಲಿತ್ತು.

ಆದರೆ ಎಜಿ ಆಯ್ಕೆ ಅಧಿಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಿಡಲಾಗಿತ್ತು.

ಅದರಂತೆ ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ ಅವರನ್ನು ಎಜಿ ಆಗಿ ನೇಮಕ ಮಾಡಿದೆ.

ಹಿಂದಿನ ಜೆಡಿಎಸ್ – ಸಮ್ಮಿಶ್ರ ಸರಕಾರದಲ್ಲಿ ಉದಯ್‌ ಹೊಳ್ಳ ಅಡ್ವೋಕೇಟ್‌ ಜನರಲ್ ಆಗಿದ್ದರು.

ನಂತರ ಅಸ್ತಿತ್ವಕ್ಕೆ ಬಂದ ಬಿಜೆಪಿ ಸರಕಾರದಲ್ಲಿ ಬಿ ಎಸ್ ಯಡಿಯೂರಪ್ಪ ಅವರ ಅವಧಿಯಲ್ಲಿ ಪ್ರಭುಲಿಂಗ.ಕೆ. ನಾವಡಗಿ ಅಡ್ವೋಕೇಟ್‌ ಜನರಲ್ ಆಗಿ ನೇಮಕಗೊಂಡಿದ್ದರು.

ಬಸವರಾಜ ಬೊಮ್ಮಾಯಿ ಸರಕಾರದಲ್ಲೂ  ಅವರೇ ಎಜಿಯಾಗಿ ಮುಂದುವರಿದಿದ್ದರು.

ಇದೀಗ ಕಾಂಗ್ರೆಸ್ ಸರಕಾರದಲ್ಲಿ ಶಶಿಕಿರಣ್‌ ಶೆಟ್ಟಿ ಅಡ್ವೋಕೇಟ್ ಜನರಲ್‌ ಆಗಿದ್ದಾರೆ. ಇವರು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್‌ ಶೆಟ್ಟಿ ಅವರ ಮಗನಾಗಿದ್ದಾರೆ.

Click to comment

Leave a Reply

Your email address will not be published. Required fields are marked *

bangalore

ವಿಧಾನ ಪರಿಷತ್ ನಲ್ಲಿ ಕೋಲಾಹಲ..ಕೈ ಕೈ ಮಿಲಾಯಿಸೋ ಹಂತಕ್ಕೆ ಹೋದ ನಾಯಕರು

Published

on

ಬೆಂಗಳೂರು : ವಿಧಾನಸೌಧ ಆವರಣದಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ್ದಾರೆ ಎಂಬ ಆರೋಪ ವಿಧಾನ ಪರಿಷತ್ ಕಲಾಪದಲ್ಲೂ ಭಾರೀ ಕೋಲಾಹಲ ಹುಟ್ಟು ಹಾಕಿತು.


ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ವಿಷಯ ಪ್ರಸ್ತಾಪಿಸಿ ವಾಗ್ದಾಳಿ ನಡೆಸಿದರು. ಪಾಕಿಸ್ತಾನ ಪರ ಘೋಷಣೆ ಹಾಕಿರುವ ವಿಚಾರಕ್ಕೆ ಕಿಡಿಕಾರಿದ ಪರಿಷತ್​ ಸದಸ್ಯ ಎನ್​ ರವಿಕುಮಾರ್ ​​ ಇದು “ದೇಶದ್ರೋಹಿ ಸರ್ಕಾರ” ಎಂದರು. ಇದರಿಂದ ಕೆರಳಿದ ಕಾಂಗ್ರೆಸ್​​​ ಸದಸ್ಯ ಅಬ್ದುಲ್ ಜಬ್ಬಾರ್ “ಅವನ ಬಾಯಿ ಬಂದ್ ಮಾಡಿ” ಎಂದು ರವಿಕುಮಾರ್​ ಅವರನ್ನು ಏಕವಚನದಲ್ಲೇ ಉಲ್ಲೇಖಿಸಿದ್ದು, ಪರಿಷತ್ ನಲ್ಲಿ ಕೋಲಾಹಲ ಎಬ್ಬಿಸಿತು. ಅಬ್ದುಲ್ ಜಬ್ಬಾರ್ ಮಾತಿಗೆ ರೊಚ್ಚಿಗೆದ್ದ ಬಿಜೆಪಿ ಸದಸ್ಯರು ಏಕವಚನದಲ್ಲಿ ಮಾತಾಡಿದರೆ ಸರಿ ಇರಲ್ಲವೆಂದರು. ಬಳಿಕ ರವಿಕುಮಾರ್ ಎದ್ದು ಅಬ್ದುಲ್​ ಜಬ್ಬರ್​ ಬಳಿ ಹೋದರು. ರವಿಕುಮಾರ್ ಜೊತೆ ತುಳಸಿ ಮುನಿರಾಜುಗೌಡ ಮುನ್ನುಗ್ಗಿ ಹೋದರು. ಎರಡೂ ಕಡೆಯ ಸದಸ್ಯರು ಸಭಾಪತಿಗಳ ಮುಂದೆಯೇ ಕೈಕೈ ಮಿಲಾಯಿಸಲು ಮುಂದಾದರು. ಈ ವೇಳೆ ಪರಿಸ್ಥಿತಿಯನ್ನು ನಿಯಂತ್ರಿಸಲು ಮಾರ್ಷಲ್‌ಗಳು ಹರಸಾಹಸಪಟ್ಟರು. ಮಧ್ಯ ಪ್ರವೇಶಿಸಿದ ಸಚಿವ ಹೆಚ್‌.ಕೆ.ಪಾಟೀಲ್‌ ಎರಡೂ ಕಡೆಯವರನ್ನು ಸಮಾಧಾನಪಡಿಸಿ ಕ್ಷಮೆ ಕೇಳುವಂತೆ ಸಲಹೆ ನೀಡಿದರು. ಇದಕ್ಕೆ ಎನ್​. ರವಿಕುಮಾರ್​ ದೇಶದ ಪರವಾಗಿ ಮಾತನಾಡಿದ್ದೇನೆ, ಅದು ಕ್ಷಮೆ ಕೇಳುವ ವಿಷಯವಾ ಎಂದರು. ಇತ್ತ ಅಬ್ದುಲ್ ಜಬ್ಬಾರ್ ನಿಮ್ಮ ಮೂಲಕ ನಾನು ಆಡಿದ ಮಾತು ವಾಪಸ್ ಪಡೆಯುತ್ತೇನೆ ಎಂದರು.

Continue Reading

bengaluru

ಶಾಲೆಯಲ್ಲಿ ಕೊಟ್ಟ ಮಾತ್ರೆ ನುಂಗಿ 4ನೇ ತರಗತಿ ವಿದ್ಯಾರ್ಥಿನಿ ಸಾವು..!

Published

on

ಬೆಂಗಳೂರು: ಶಾಲೆಯಲ್ಲಿ ಕೊಟ್ಟ ಪ್ರೊಟೀನ್ ಮಾತ್ರೆ ನುಂಗಿ 4ನೇ ತರಗತಿ ಮೃತಪಟ್ಟ ಘಟನೆ ಬೆಂಗಳೂರಿನ ಕರಿಸಂದ್ರದ ಉರ್ದು ಶಾಲೆಯಲ್ಲಿ ನಡೆದಿದೆ.


ಝೋಯಾ (9) ಮೃತಪಟ್ಟ ವಿದ್ಯಾರ್ಥಿನಿ. ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ಝೋಯಾ ಶಾಲೆಯಲ್ಲಿ ಕೊಟ್ಟ ಪ್ರೊಟೀನ್ ಮಾತ್ರೆ ಸೇವಿಸಿದ್ದಳು. ಆಕೆ ಮಾತ್ರೆ ತಿನ್ನುತ್ತಿದ್ದಂತೆ ಆರೋಗ್ಯದಲ್ಲಿ ಏರು ಪೇರು ಉಂಟಾಗಿದೆ. ಆ ಬಳಿಕ ವಿದ್ಯಾರ್ಥಿನಿಯನ್ನು ಖಾಸಗಿ ಆಸ್ಪತ್ರೆಗೆ ರವಾನಿಸಿದರು. ಆದರೆ ಚಿಕಿತ್ಸೆ ಫಲಿಸದೆ ಝೋಯಾ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾಳೆ

Continue Reading

bangalore

ಕೊಳೆತ ಬಟ್ಟೆ ನೋಡಿ ರೈತನನ್ನು ಮೆಟ್ರೋಗೆ ಹತ್ತಿಸದ ಸಿಬ್ಬಂದಿ – ಭಾರಿ ಆಕ್ರೋಶ..!

Published

on

ಬೆಂಗಳೂರು: ಮೂಟೆ ಹೊತ್ತುಕೊಂಡು ರೈತನೋರ್ವ ಮೆಟ್ರೋ ರೈಲಿಗೆ ಹತ್ತುವಾಗ ಮೆಟ್ರೋ ಸಿಬ್ಬಂದಿ ಗಲೀಜು ಬಟ್ಟೆ ಹಾಕಿದ್ದಾನೆ ಎಂದು ಅವರನ್ನು ಒಳಗೆ ಬಿಡದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಇದೀಗ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದ ಬೆನ್ನಲೆ ಭಾರಿ ವಿರೋಧಕ್ಕೆ ಕಾರಣವಾಗಿದೆ.

ಹಿಂದಿ ಭಾಷೆಯನ್ನಾಡುವ ರೈತನೊಬ್ಬ ಬೆಂಗಳೂರಿನ ರಾಜಾಜಿನಗರದ ಮೆಟ್ರೋ ನಿಲ್ದಾಣದಲ್ಲಿ ಟಿಕೆಟ್ ಪಡೆದು ಮೆಟ್ರೋದಲ್ಲಿ ಪ್ರಯಾಣಿಸಲು ಮುಂದಾಗಿದ್ದಾರೆ. ಈ ವೇಳೆ ಲಗೇಜ್ ಪರಿಶೀಲನೆ ಮಾಡುವ ಸಿಬ್ಬಂದಿ ರೈತನನ್ನು ತಡೆದಿದ್ದಾರೆ. ಗಲೀಜು ಬಟ್ಟೆ ಹಾಕಿದ್ದೀರಾ, ತಲೆ ಮೇಲೆ ಮೂಟೆ ಇದೆ ಎಂದು ಹೇಳಿ ರೈತನನ್ನ ಮೆಟ್ರೋದಲ್ಲಿ ಪ್ರಯಾಣಿಸಲು ಅನುಮತಿ ಕೊಟ್ಟಿಲ್ಲ ಎನ್ನವ ವಿಡಿಯೋ ವೈರಲ್ ಆಗಿದೆ.

 

Continue Reading

LATEST NEWS

Trending