DAKSHINA KANNADA
ರಾಷ್ಟ್ರಮಟ್ಟದ ನೀಟ್ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ
2023ನೇ ಸಾಲಿನ ರಾಷ್ಟ್ರಮಟ್ಟದ ನೀಟ್ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ 1, 733 ವಿದ್ಯಾರ್ಥಿಗಳು ಹಾಜರಾಗಿದ್ದು, ರಾಷ್ಟ್ರೀಯ ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿಭಾಗದಲ್ಲಿ 1, 525 ವಿದ್ಯಾರ್ಥಿಗಳು ಪ್ರವೇಶಾತಿ ಅರ್ಹತೆಯನ್ನು ಪಡೆದಿದ್ದಾರೆ. ಶೇಕಡಾ 87.99 ಫಲಿತಾಂಶ ದಾಖಲಾಗಿದೆ.
ಮೂಡುಬಿದಿರೆ: 2023ನೇ ಸಾಲಿನ ರಾಷ್ಟ್ರಮಟ್ಟದ ನೀಟ್ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ 1, 733 ವಿದ್ಯಾರ್ಥಿಗಳು ಹಾಜರಾಗಿದ್ದು, ರಾಷ್ಟ್ರೀಯ ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿಭಾಗದಲ್ಲಿ 1, 525 ವಿದ್ಯಾರ್ಥಿಗಳು ಪ್ರವೇಶಾತಿ ಅರ್ಹತೆಯನ್ನು ಪಡೆದಿದ್ದಾರೆ. ಶೇಕಡಾ 87.99 ಫಲಿತಾಂಶ ದಾಖಲಾಗಿದೆ.
ಒಟ್ಟು 720 ಅಂಕದಲ್ಲಿ 650ರ ಮೇಲೆ ಐವರು ವಿದ್ಯಾರ್ಥಿಗಳು , 600ಕ್ಕಿಂತ ಅಧಿಕ 32 ವಿದ್ಯಾರ್ಥಿಗಳು, 500ಕ್ಕಿಂತ ಅಧಿಕ 206 ವಿದ್ಯಾರ್ಥಿಗಳು ಪಡೆದಿದ್ದು, 400ಕ್ಕಿಂತ ಅಧಿಕ ಅಂಕವನ್ನು 684 ವಿದ್ಯಾರ್ಥಿಗಳು ಗಳಿಸಿದ್ದು, ಇವರೆಲ್ಲರೂ ಸರಕಾರಿ ಜನರಲ್ ಕೋಟಾದ ಅಡಿಯಲ್ಲಿ ಪ್ರವೇಶಾತಿ ಪಡೆಯಲು ಅರ್ಹತೆ ಪಡೆದಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಅಖಿಲ ಭಾರತ ಮಟ್ಟದಲ್ಲಿ ಕೆಟಗರಿ ವಿಭಾಗದಲ್ಲಿ ನಂದಿನಿ 171ನೇ ರ್ಯಾಂಕ್, ಪ್ರಶಾಂತ್ ಪಾಟೀಲ್ 249, ಚಂದ್ರ ಕುಮಾರ್ ಎಂ 560 ಹಾಗೂ ಎನ್ ವಿನೀತ್ 1,076ನೇ ರ್ಯಾಂಕ್ ಪಡೆದಿದ್ದಾರೆ.
ಪರಿಶಿಷ್ಟ ಜಾತಿ ಕೆಟಗರಿಯಲ್ಲಿ 70 ವಿದ್ಯಾರ್ಥಿಗಳು, ಪರಿಶೀಷ್ಟ ಪಂಗಡ ಕೆಟಗರಿಯಲ್ಲಿ 44 ವಿದ್ಯಾರ್ಥಿಗಳು, ಹೈದರಾಬಾದ್ ಕರ್ನಾಟಕ ಕೆಟಗರಿಯಲ್ಲಿ 313 ವಿದ್ಯಾರ್ಥಿಗಳು, 400ಕ್ಕಿಂತ ಅಧಿಕ ಅಂಕ ಪಡೆದಿದ್ದು, ಸರಕಾರಿ ಕೋಟಾದಡಿ ಪ್ರವೇಶ ಪಡೆಯಬಹುದಾಗಿದೆ.
ಅರ್ಹತೆ ಪಡೆದ ವಿದ್ಯಾರ್ಥಿಗಳಲ್ಲಿ ಭೌತಶಾಸ್ತ್ರದಲ್ಲಿ 143 ವಿದ್ಯಾರ್ಥಿಗಳು, ರಸಾಯನ ಶಾಸ್ತ್ರದಲ್ಲಿ 192 ವಿದ್ಯಾರ್ಥಿಗಳು ಮತ್ತು ಜೀವಶಾಸ್ತ್ರದಲ್ಲಿ 124 ವಿದ್ಯಾರ್ಥಿಗಳು 96 ಪರ್ಸೆಂಟೈಲ್ಗಿಂತ ಅಧಿಕ ಶ್ರೇಣಿಯಲ್ಲಿ ಅರ್ಹತೆ ಪಡೆದಿದ್ದಾರೆ.
ಭೌತಶಾಸ್ತ್ರದಲ್ಲಿ 358, ರಸಾಯನ ಶಾಸ್ತ್ರದಲ್ಲಿ 336 ಮತ್ತು ಜೀವಶಾಸ್ತ್ರದಲ್ಲಿ 324 ವಿದ್ಯಾರ್ಥಿಗಳು 90 ಪರ್ಸೆಂಟೈಲ್ಗಿಂತ ಅಧಿಕ ಶ್ರೇಣಿಯಲ್ಲಿ ಅರ್ಹತೆ ಗಳಿಸಿದ್ದಾರೆ.
ನೀಟ್ ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ 500 ಅಂಕಗಗಳಿಗಿಂತ ಅಧಿಕ ಪಡೆದ 206 ವಿದ್ಯಾರ್ಥಿಗಳಲ್ಲಿ 138 ವಿದ್ಯಾರ್ಥಿಗಳು ಸಂಸ್ಥೆಯ ದತ್ತು ಶಿಕ್ಷಣ ಸ್ವೀಕಾರದಡಿಯಲ್ಲಿ ವಿದ್ಯಾಭ್ಯಾಸವನ್ನು ಮಾಡಿದ್ದು, 2 ಕೋಟಿ ರೂಪಾಯಿಗಳಷ್ಟು ಹಣವನ್ನು ಈ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಬಳಸಲಾಗಿದೆ ಎಂದು ನುಡಿದರು.
DAKSHINA KANNADA
ಹರೇಕಳ ಹಾಜಬ್ಬ ಶಾಲೆಯ ಕಂಪೌಂಡ್ ಕುಸಿತ..! ವಿದ್ಯಾರ್ಥಿನಿ ಸಾ*ವು..!
ಮಂಗಳೂರು : ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರ ನ್ಯೂಪಡ್ಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಂಪೌಂಡ್ ವಾಲ್ ಕುಸಿತಗೊಂಡಿದೆ. ಕುಸಿತಗೊಂಡ ವಾಲ್ ಅಡಿಗೆ ಸಿಲುಕಿದ 3 ನೇ ತರಗತಿ ವಿದ್ಯಾರ್ಥಿನಿ ಅಸುನೀಗಿದ್ದಾಳೆ. ಹರೇಕಳ ಗ್ರಾ.ಪಂ ವ್ಯಾಪ್ತಿಯ ನ್ಯೂಪಡ್ಪುವಿನಲ್ಲಿ ಮೇ 20ರ ಸಂಜೆ ವೇಳೆ ಈ ದುರ್ಘಟನೆ ಸಂಭವಿಸಿದೆ. ಸಂಜೆ ವೇಳೆ ಸುರಿದ ಧಾರಕಾರ ಮಳೆಯಿಂದಾಗಿ ದುರ್ಘಟನೆ ಸಂಭವಿಸಿದೆ.
ನ್ಯೂಪಡ್ಪು ನಿವಾಸಿ ಸಿದ್ದೀಖ್ – ಜಮೀಲಾ ದಂಪತಿ ಪುತ್ರಿ ಶಾಝಿಯಾ ಬಾನು (7) ಮೃತ ಬಾಲಕಿ. ಹರೇಕಳ ಹಾಜಬ್ಬರ ಶಾಲೆಯಲ್ಲಿ ಕಳೆದ ಎರಡು ದಿನಗಳಿಂದ ಮುಡಿಪು ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳ ಶಿಬಿರ ನಡೆಯುತ್ತಿದೆ. ಶಾಲೆಯ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳು ಇದ್ದ ಹಿನ್ನೆಲೆಯಲ್ಲಿ ಶಾಲೆಯ ಸಮೀಪದಲ್ಲೇ ಇರುವ ವಿದ್ಯಾರ್ಥಿನಿ ಶಾಝಿಯಾ ಭಾನು ಭಾಗವಹಿಸಿದ್ದಳು.
ಸಂಜೆ ವೇಳೆ ಮನೆಗೆ ಹಿಂತಿರುಗುವ ಸಂದರ್ಭ ಶಾಲಾ ಕಂಪೌಂಡ್ ಗೇಟಿನಲ್ಲಿ ಆಟವಾಡುವ ಸಂದರ್ಭ ಕಂಪೌಂಡ್ ಬಾಲಕಿ ಶಾಝಿಯಾ ಮೇಲೆ ಕುಸಿದುಬಿದ್ದಿದೆ. ತಕ್ಷಣ ಸ್ಥಳೀಯರು ರಕ್ಷಣೆಗೆ ಧಾವಿಸಿದರೂ, ಬಾಲಕಿ ಪ್ರಾಣಪಕ್ಷಿ ಹಾರಿಹೋಗಿತ್ತು. ಬೆಳಿಗ್ಗೆಯಿಂದ ಉಳ್ಳಾಲ ತಾಲೂಕು ವ್ಯಾಪ್ತಿಯಲ್ಲಿ ಆಗಾಗ್ಗ ಮಳೆಯಾಗುತ್ತಿದ್ದು, ಇದರಿಂದಾಗಿ ಕಂಪೌಂಡ್ ಶಿಥಿಲಗೊಂಡು ಬಿದ್ದಿದೆ. ಘಟನಾ ಸ್ಥಳಕ್ಕೆ ಹರೇಕಳ ಗ್ರಾ.ಪಂ ಅಧಿಕಾರಿಗಳು, ಕೊಣಾಜೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
DAKSHINA KANNADA
ಪಡೀಲ್ ಕಣ್ಣೂರು ಬಳಿ ಭೀಕರ ವಾಹನ ಅಪಘಾ*ತ; ಕೇಬಲ್ ಟೆಕ್ನಿಷಿಯನ್ ವಿಧಿವ*ಶ
ಮಂಗಳೂರು : ಪಡೀಲ್ ಕಣ್ಣೂರು ಬಳಿ ನಡೆದ ರಸ್ತೆ ಅಪಘಾ*ತದಲ್ಲಿ ನಮ್ಮ ಕುಡ್ಲ ವಾಹಿನಿಯ ಸಹಸಂಸ್ಥೆ ವಿಝಾರ್ಡ್ ಕೇಬಲ್ ನೆಟ್ ವರ್ಕ್ನ ಸಿಬಂದಿ ಹರೀಶ್ (45) ವಿಧಿವ*ಶರಾಗಿದ್ದಾರೆ. ಕರ್ತವ್ಯ ನಿಮಿತ್ತ ಫರಂಗಿಪೇಟೆಗೆ ತೆರಳಿದ್ದ ಹರೀಶ್ ಪಡೀಲ್ ಕಣ್ಣೂರು ಬಳಿ ಬೈಕ್ ನಿಲ್ಲಿಸಿದ್ದ ವೇಳೆ ವೇಗವಾಗಿ ಬಂದ ಡಸ್ಟರ್ ಕಾರೊಂದು ಬೈಕ್ಗೆ ಡಿ*ಕ್ಕಿ ಹೊಡೆದಿದೆ.
ಮಹಿಳೆಯೊಬ್ಬರು ಕಾರು ಚಲಾಯಿಸುತ್ತಿದ್ದು, ಬೈಕ್ಗೆ ಡಿ*ಕ್ಕಿ ಹೊಡೆದ ಬಳಿಕ ಅಲ್ಪ ದೂರ ಚಲಿಸಿದ ಕಾರಣ ಬೈಕ್ ಸಹಿತ ಹರೀಶ್ ಕಾರಿನ ಅಡಿಗೆ ಸಿಲುಕಿಕೊಂಡಿದ್ದರು. ಈ ಭೀಕರ ಅಪಘಾ*ತದಲ್ಲಿ ಗಂಭೀರ ಗಾಯಗೊಂಡಿದ್ದ ಹರೀಶ್ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರೆ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.
ಹರೀಶ್ ಕಲ್ಲಾಪು ಅವರು ಹಲವಾರು ವರ್ಷಗಳಿಂದ ವಿಝಾರ್ಡ್ ಕೆಬಲ್ ನೆಟ್ವರ್ಕ್ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಕಾರ್ಕಳ : ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿ*ಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾ*ವು
ಅಗಲಿದ ಸಿಬ್ಬಂದಿಗೆ ನಮ್ಮ ಕುಡ್ಲ ವಾಹಿನಿಯ ನಿರ್ದೇಶಕರು ಹಾಗೂ ಸಿಬಂದಿ ಸಂತಾಪ ಸೂಚಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಮೃ*ತ ಹರೀಶ್ ಅವರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.
DAKSHINA KANNADA
ಕದ್ದ ಫೋನ್ ಸ್ವಿಚ್ ಆಫ್ ಆಗಿದ್ರೂ ಸುಲಭದಲ್ಲಿ ಕಂಡುಹಿಡಿಯಬಹುದು.. ಹೇಗೆ ಗೊತ್ತಾ?
ಮಂಗಳೂರು: ನಿಮ್ಮ ಸ್ಮಾರ್ಟ್ಫೋನ್ ಕದ್ದರೆ ಮತ್ತು ಕಳ್ಳರು ಆ ಫೋನನ್ನು ಸ್ವಿಚ್ ಆಫ್ ಮಾಡಿದರೆ ಅದನ್ನು ಹುಡುಕುವುದು ದೊಡ್ಡ ಕಷ್ಟ. ಆದರೆ ಮುಂಬರುವ ಗೂಗಲ್ನ ನವೀಕರಣ, ಆಂಡ್ರಾಯ್ಡ್ ಬಳಕೆದಾರರ ಫೋನ್ ಸ್ವಿಚ್ ಆಫ್ ಆಗಿದ್ದರೂ ಅವರ ಸ್ಮಾರ್ಟ್ಫೋನ್ ನಿಖರವಾದ ಸ್ಥಳವನ್ನು ಸುಲಭವಾಗಿ ಹುಡುಕಲು ಸಾಧ್ಯವಾಗುತ್ತದೆ.
ಗೂಗಲ್ ಶೀಘ್ರದಲ್ಲೇ ತನ್ನ ಆಂಡ್ರಾಯ್ಡ್ 15 ಅಪ್ಡೇಟ್ ಅನ್ನು ತರಲಿದೆ. ಇದನ್ನು ಇನ್ಸ್ಟಾಲ್ ಮಾಡಿದ ನಂತರ ಆಂಡ್ರಾಯ್ಡ್ ಬಳಕೆದಾರರು ಸ್ವಿಚ್ ಆಫ್ ಮಾಡಿದ ನಂತರವೂ ತಮ್ಮ ಫೋನ್ ಅನ್ನು ಸುಲಭವಾಗಿ ಹುಡುಕಲು ಸಾಧ್ಯವಾಗುತ್ತದೆ. ಇಲ್ಲಿಯವರೆಗೆ ಈ ವೈಶಿಷ್ಟ್ಯವು ಆಂಡ್ರಾಯ್ಡ್ ಫೋನ್ಗಳಲ್ಲಿ ಲಭ್ಯವಿರಲಿಲ್ಲ.
ಗೂಗಲ್ ಕಂಪನಿಯು ಆಂಡ್ರಾಯ್ಡ್ 15 ಸಿಸ್ಟಮ್ನಲ್ಲಿ ಕಾರ್ಯನಿರ್ವಹಿಸುತ್ತಿದೆ. ಇದು ಗೂಗಲ್ನ ಮುಂಬರುವ ಮೊಬೈಲ್ ಆಪರೇಟಿಂಗ್ ಸಿಸ್ಟಮ್ ಆಗಿದೆ. ಆಂಡ್ರಾಯ್ಡ್ 15 ಓಎಸ್ನಲ್ಲಿ ಸ್ಮಾರ್ಟ್ಫೋನ್ ಬಳಕೆದಾರರಿಗೆ ಗೂಗಲ್ ಉತ್ತಮ ವೈಶಿಷ್ಟ್ಯವನ್ನು ನೀಡಲಿದೆ. ಇದರಲ್ಲಿ ಬಳಕೆದಾರರಿಗೆ ಫೋನ್ ಸ್ವಿಚ್ ಆಫ್ ಆಗಿದ್ದರೂ ಅದನ್ನು ಪತ್ತೆ ಮಾಡುವ ಆಯ್ಕೆ ಕೂಡ ಒಂದು.
ಗೂಗಲ್ನ ಮುಂಬರುವ OS ಆಂಡ್ರಾಯ್ಡ್ 15 ನಲ್ಲಿ ಪಾಸ್ವರ್ಡ್ ಮೂಲಕ ಹುಡುಕುವ ವೈಶಿಷ್ಟ್ಯವು ಲಭ್ಯವಿರುತ್ತದೆ. ಈ ಹೊಸ ವ್ಯವಸ್ಥೆಯು ಪೂರ್ವ ಕಂಪ್ಯೂಟೆಡ್ ಬ್ಲೂಟೂತ್ ಬೀಕನ್ ಆಗಿರುತ್ತದೆ. ಇದು ಸಾಧನದ ಮೆಮೊರಿಯಿಂದ ನಿಯಂತ್ರಿಸಲ್ಪಡುತ್ತದಂತೆ. ಇದಕ್ಕಾಗಿ ಫೋನ್ನ ಹಾರ್ಡ್ವೇರ್ನಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕಾಗುತ್ತದೆ.
ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಆಂಡ್ರಾಯ್ಡ್ ತಜ್ಞ ಮಿಶಾಲ್ ರೆಹಮಾನ್ ಈ ಬಗ್ಗೆ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಪಿಕ್ಸೆಲ್ 8 ಮತ್ತು ಪಿಕ್ಸೆಲ್ 8 ಪ್ರೊ ಜೊತೆಗೆ ಗೂಗಲ್ನ ಮುಂಬರುವ ಸ್ಮಾರ್ಟ್ಫೋನ್ಗಳಲ್ಲಿ ಈ ವೈಶಿಷ್ಟ್ಯವನ್ನು ಒದಗಿಸಲಾಗುವುದು ಎಂದು ಅವರು ಹೇಳಿದ್ದಾರೆ. ಪ್ರಸ್ತುತ ಆಂಡ್ರಾಯ್ಡ್ 15 ಓಎಸ್ ಬಿಡುಗಡೆಗೆ ಯಾವುದೇ ನಿಖರವಾದ ದಿನಾಂಕವನ್ನು ಗೂಗಲ್ ಬಹಿರಂಗಪಡಿಸಿಲ್ಲ.
- DAKSHINA KANNADA2 days ago
ವೈರಲ್ ಆಯ್ತು ಮೆಟರ್ನಿಟಿ ಶೂಟ್..! ಮೆಚ್ಚುಗೆ ಪಡೆದ ಫೋಟೋಗ್ರಾಫರ್..!
- LATEST NEWS3 days ago
ಕೊನೆಗೂ ಮೌನ ಮುರಿದ ಎಚ್ಡಿ ದೇವೇಗೌಡ..! ಪ್ರಜ್ವಲ್ ಬಗ್ಗೆ ಹೇಳಿದ್ದೇನು?
- LATEST NEWS19 hours ago
ಮಲತಾಯಿಯ ಕ್ರೌರ್ಯಕ್ಕೆ ಮೂರು ವರ್ಷದ ಮಗು ಬ*ಲಿ
- LATEST NEWS6 days ago
ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಮತ್ತೆ ಚಿನ್ನದ ಬೆಲೆಯಲ್ಲಿ ಇಳಿಕೆ