ಮಂಗಳೂರು : ಕರಾವಳಿಯ ನಿಗಿನಿಗಿ ಕೋಮು ಗಲಭೆಯ ಮಧ್ಯೆ ಮಹಾಮಾರಿ ಕೊರೊನಾನೂ ಎದ್ದು ನಿಂತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು ಶುಕ್ರವಾರ 20 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಜೊತೆಗೆ ಮಹಾಮಾರಿ ಕೊರೊನಾಕ್ಕೆ ಒಂದು ಜೀವ ಬಲಿಯಾಗಿದೆ.
ಇದುವರೆಗೆ ಜಿಲ್ಲೆಯಲ್ಲಿ 1854 ಜನರು ಕೊರೊನಾಕ್ಕೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಶುಕ್ರವಾರ ಶೇಕಡ 2.35 ರಷ್ಟು ಪಾಸಿಟಿವಿಟಿ ರೇಟ್ ದಾಖಲಾಗಿದೆ.
17 ಮಂದಿ ಕೊರೊನಾದಿಂದ ಗುಣಮುಖರಾಗಿದ್ದು ಪ್ರಸ್ತುತ ಜಿಲ್ಲೆಯಲ್ಲಿ 83 ಸಕ್ರೀಯ ಪ್ರಕರಣಗಳಿವೆ. ಇದುವರೆಗೆ ಒಟ್ಟು 136217 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.