Connect with us

    DAKSHINA KANNADA

    ‘ಬ್ರ‍್ಯಾಂಡ್ ಮಂಗಳೂರು’ ಪ್ರಶಸ್ತಿಗೆ ಸುರೇಶ್‌ ಡಿ ಪಳ್ಳಿ, ಭರತ್‌ರಾಜ್‌ ಸನಿಲ್‌ ಆಯ್ಕೆ

    Published

    on

    ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದತೆ ಪ್ರತಿ ಬಿಂಬಿಸುವ ವರದಿಗೆ ನೀಡಲಾಗುವ ಬ್ರ‍್ಯಾಂಡ್ ಮಂಗಳೂರು ಪ್ರಶಸ್ತಿಗೆ ಪತ್ರಿಕಾ ಮಾಧ್ಯಮ ವಿಭಾಗದಲ್ಲಿ ಹೊಸದಿಗಂತ ವರದಿಗಾರ ಸುರೇಶ್‌ ಡಿ.ಪಳ್ಳಿ ಮತ್ತು ದೃಶ್ಯ ಮಾಧ್ಯಮ ವಿಭಾಗದಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವರದಿಗಾರ ಭರತ್‌ರಾಜ್‌ ಕೆ. ಸನಿಲ್‌ ಆಯ್ಕೆಯಾಗಿದ್ದಾರೆ.

     ಭರತ್‌ರಾಜ್ ಸನಿಲ್‌                                                 ಸುರೇಶ್ ಡಿ. ಪಳ್ಳಿ

    ಹೊಸದಿಗಂತ ಪತ್ರಿಕೆಯಲ್ಲಿ 2022ರ ಜೂ.13ರಂದು ಪ್ರಕಟಗೊಂಡ “ಮತ್ತೆ ಒಂದಾಗಲಿ ಒಡೆದ ಮನಸ್ಸುಗಳು” ಮತ್ತು ಸುವರ್ಣ ನ್ಯೂಸ್‌ನಲ್ಲಿ 2022ರ ಏ.19ರಂದು ಪ್ರಸಾರಗೊಂಡ “ಹಿಂದೂ ಕುಶಲಕರ್ಮಿಯ ಕೈಚಳಕ, ಕೋಮು ಸೂಕ್ಷ್ಮಮಂಗಳೂರಿನ ಸೌಹಾರ್ದತೆಯ ಕಥೆ” ವಿಶೇಷ ವರದಿಗೆ ಪ್ರಶಸ್ತಿ ಲಭಿಸಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ತೀರ್ಪುಗಾರರಾಗಿ ಪತ್ರಿಕಾ ವಿಭಾಗದಲ್ಲಿ ಹಿರಿಯ ಪತ್ರಕರ್ತ ಹಿಲರಿ ಕ್ರಾಸ್ತ, ರಂಗ ಸಾಹಿತಿ, ನ್ಯಾಯವಾದಿ ಶಶಿರಾಜ್‌ ಕಾವೂರು, ಕರಾವಳಿ ಲೇಖಕಿ ಮತ್ತು ವಾಚಕಿಯರ ಸಂಘದ ಅಧ್ಯಕ್ಷೆ ಜ್ಯೋತಿ ಚೆಳ್ಯಾರು, ದೃಶ್ಯ ಮಾಧ್ಯಮ ವಿಭಾಗದಲ್ಲಿ ಉಜಿರೆ ಎಸ್‌ಡಿಎಂ ಪತ್ರಿಕೋದ್ಯಮ ಉಪನ್ಯಾಸಕ ಸುನಿಲ್‌ ಹೆಗ್ಡೆ, ನಮ್ಮ ಕುಡ್ಲ ವಾಹಿನಿಯ ಹಿರಿಯ ಪತ್ರಕರ್ತ ಲ್ಯಾನ್ಸಿ ಡಿಸೋಜ ಸಹಕರಿಸಿದ್ದರು.
    ಜು.1ರಂದು ಪೂರ್ವಾಹ್ನ 11 ಗಂಟೆಗೆ ಪತ್ರಿಕಾಭವನದಲ್ಲಿ ನಡೆಯಲಿರುವ ಪತ್ರಿಕಾ ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

    ಪೊಲೀಸ್‌ ಕಮಿಷನರ್‌ ಕುಲದೀಪ್‌ ಜೈನ್‌, ಆಕಾಶವಾಣಿ ನಿವೃತ್ತ ಅಧಿಕಾರಿ ಸದಾನಂದ ಪೆರ್ಲ ಪ್ರಶಸ್ತಿ ಪ್ರದಾನ ಮಾಡುವರು.
    ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್‌ ಇಂದಾಜೆ ಅಧ್ಯಕ್ಷತೆ ವಹಿಸುವರು. ಪ್ರೆಸ್‌ಕ್ಲಬ್‌ ಅಧ್ಯಕ್ಷ ಪಿ.ಬಿ.ಹರೀಶ್‌ ರೈ, ಪತ್ರಿಕಾಭವನ ಟ್ರಸ್ಟ್‌ ಅಧ್ಯಕ್ಷ ರಾಮಕೃಷ್ಣ ಆರ್.‌ ಉಪಸ್ಥಿತರಿರುವರು.

    ಸುರೇಶ್ ಡಿ. ಪಳ್ಳಿ
    ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಪಳ್ಳಿ ಗ್ರಾಮದವರು. ಸಮೂಹ ಸಂಹವನ ಮತ್ತು ಪತ್ರಿಕೋದ್ಯಮ-ಸ್ನಾತಕೋತ್ತರ ಪದವೀಧರರು. 16 ವರ್ಷಗಳಿಂದ ಹೊಸ ದಿಗಂತ ಪತ್ರಿಕೆಯ ಮಂಗಳೂರು ವಿಭಾಗದಲ್ಲಿ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 2013ನೆಯ ಸಾಲಿನ ಪದ್ಯಾಣ ಗೋಪಾಲಕೃಷ್ಣ (ಪ.ಗೋ) ಪ್ರಶಸ್ತಿಗೆ ಭಾಜನರಾಗಿದ್ದರು. ಇವರ ವಿಶೇಷ ವರದಿಯೊಂದು ಅಖಿಲ ಭಾರತ ಮಟ್ಟದ-ಜಾಗತಿಕ ಸಮಾಜ ಕಾರ್ಯ ಸಂಸ್ಥೆ ಪ್ರಕಟಿಸುವ ‘ಹಂಗರ್ ಪ್ರಾಜೆಕ್ಟ್’ನ ಪುಸ್ತಕದಲ್ಲಿ ಆಂಗ್ಲ ಭಾಷೆಗೆ ತರ್ಜುಮೆಗೊಂಡು ಪ್ರಕಟವಾಗಿದೆ.

    ಭರತ್‌ರಾಜ್ ಸನಿಲ್
    ಕುಂಪಲದ ಭರತ್‌ರಾಜ್‌ ಅವರಿಗೆ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ. 18ನೇ ವಯಸ್ಸಿನಲ್ಲೇ ಜಯಕಿರಣ ಪತ್ರಿಕೆಯಲ್ಲಿ ಪತ್ರಿಕೋದ್ಯಮ ಆರಂಭಿಸಿ ಬಳಿಕ ದೂರ ಶಿಕ್ಷಣದಲ್ಲಿ ಬಿ.ಎ ಪತ್ರಿಕೋದ್ಯಮ ಪದವಿ ಪೂರೈಸಿದರು. ಬಿಟಿವಿ ನ್ಯೂಸ್ ಜಿಲ್ಲಾ ‌ವರದಿಗಾರನಾಗಿ ಬಳಿಕ 2017ರಿಂದ ಸುವರ್ಣ ನ್ಯೂಸ್‌ನಲ್ಲಿ ಜಿಲ್ಲಾ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಮಸ್ಕತ್ ನಲ್ಲಿ ಬಿರುವ ಜವನೆರ್ ಸಂಯೋಜನೆಯ ಕ್ರೀಡಾಕೂಟ

    Published

    on

    ಮಂಗಳೂರು/ಮಸ್ಕತ್  : ಬಿರುವ ಜವನೆರ್ ಮಸ್ಕತ್ ಆಯೋಜಿಸಿದ ಕರ್ನಾಟಕ ಪ್ರೀಮಿಯಾರ್ ಲೀಗ್ ನ 2024 ನೇ ಸಾಲಿನ ಕ್ರೀಡಾಕೂಟ ಮಸ್ಕತ್ ನ ಅಲ್ ಹೈಲ್ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದ ಉದ್ಘಾಟನೆಯನ್ನು  ಓಮನ್ ಕ್ರಿಕೆಟ್ ನ ಟಿ20 ತಂಡದ ನಾಯಕ ವಿನಾಯಕ್ ಶುಕ್ಲ ನೆರವೇರಿಸಿದರು.

    ಈ ಸಂದರ್ಭ  ಉತ್ತಮ್ ಕೋಟ್ಯಾನ್, ಮುಸ್ತಫಾ, ರಮಾನಂದ್ ಬಂಗೇರ, ಚಂದ್ರಕಾಂತ್ ಕೋಟ್ಯಾನ್, ದಾಮೋದರ್ ಶೆಟ್ಟಿ, ಪದ್ಮಾಕರ್ ಮೆಂಡನ್ ಮತ್ತಿತರರು ಉಪಸ್ಥಿತರಿದ್ದರು.

    ಪುದರ್ ದೀತಿಜಿ ನಾಟಕದ ಪೋಸ್ಟರ್ ಬಿಡುಗಡೆ :

    ಇದೇ ಸಂದರ್ಭದಲ್ಲಿ ಜನವರಿ 10 ರಂದು ಮಸ್ಕತ್ ನ ಆಲ್ ಫಾಜಾಜ್ ಹೋಟೆಲ್ ನಲ್ಲಿ ನಡೆಯಲಿರುವ  ಕಾಪಿಕಾಡ್ ಅವರ ಚಾ ಪರ್ಕ ತಂಡದ ” ಪುದರ್ ದೀತಿಜಿ ” ನಾಟಕದ ಪೋಸ್ಟರ್ ಬಿಡುಗಡೆ ಹಾಗೂ ಪ್ರಚಾರ ಅಭಿಯಾನಕ್ಕೆ ಡಾ. ದೇವದಾಸ್ ಕಾಪಿಕಾಡ್ ಹಾಗೂ ಅರ್ಜುನ್ ಕಾಪಿಕಾಡ್ ಚಾಲನೆ ನೀಡಿದರು.

    Continue Reading

    DAKSHINA KANNADA

    ‘ಕಾಂತಾರ ಚಾಪ್ಟರ್ – 1’ ಗೆ ವಿ*ಘ್ನ; ಬಸ್ ಪ*ಲ್ಟಿಯಾಗಿ 6 ಮಂದಿ ಗಂ*ಭೀರ !

    Published

    on

    ಉಡುಪಿ : ರಿಷಬ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಕಾಂತಾರ ಸಿನಿಮಾ ಕಲಾವಿದರಿದ್ದ ಬಸ್ ಪ*ಲ್ಟಿಯಾಗಿದ್ದು, ಆರು ಮಂದಿ ಗಂ*ಭೀರ ಗಾ*ಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ಮುದೂರಿನಲ್ಲಿ ನಡೆದಿದೆ.

    ಕರಾವಳಿ ಭಾಗದ ಬೇರೆ ಬೇರೆ ಕಡೆಗಳಲ್ಲಿ ‘ಕಾಂತಾರ ಚಾಪ್ಟರ್​ 1’ ಸಿನಿಮಾಗೆ ಶೂಟಿಂಗ್ ಮಾಡಲಾಗುತ್ತಿದೆ. ವಿವಿಧ ಕಲಾವಿದರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಮುದೂರಿನಲ್ಲಿ ಚಿತ್ರೀಕರಣ ಮುಗಿಸಿ ಕಲಾವಿದರು ಕೊಲ್ಲೂರಿಗೆ ಹೋಗುತ್ತಿದ್ದ ವೇಳೆ ಅ*ಪಘಾತ ಸಂಭವಿಸಿದೆ. ‘ಹೊಂಬಾಳೆ ಫಿಲ್ಮ್ಸ್​’ ಮೂಲಕ ವಿಜಯ್ ಕಿರಗಂದೂರು ಅವರು ‘ಕಾಂತಾರ: ಚಾಪ್ಟರ್​ 1’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ರಿಷಬ್​ ಶೆಟ್ಟಿ ಅವರು ನಿರ್ದೇಶನ ಮಾಡುವುದರ ಜೊತೆಗೆ ಮುಖ್ಯ ಭೂಮಿಕೆಯಲ್ಲೂ ನಟಿಸುತ್ತಿದ್ದಾರೆ. ‘ಕಾಂತಾರ’ ಚಿತ್ರದ ಪ್ರೀಕ್ವೆಲ್​ ಆಗಿ ‘ಕಾಂತಾರ: ಚಾಪ್ಟರ್​ 1’ ಸಿನಿಮಾ ಮೂಡಿಬರುತ್ತಿದೆ. ಬಸ್​ ಪ*ಲ್ಟಿ ಆಗಿದ್ದರಿಂದ ಚಿತ್ರತಂಡದಲ್ಲಿ ಬೇಸರ ಆವರಿಸಿದೆ.

    ಪಲ್ಟಿಯಾದ ಹಿನ್ನಲೆ ಚಾಲಕನ ಮೇಲೆ ಹಲ್ಲೆಗೆ ವಾಹನದಲ್ಲಿದ್ದ ಹುಡುಗರು ಮುಂದಾಗಿದ್ದಾರೆ . ಬಸ್ ನಲ್ಲಿ ಹುಡುಗರು ವಾಹನ ಚಾಲಕ ನಿರ್ಲಕ್ಷದಿಂದ ವಾಹನ ಚಲಾಯಿಸಿದ್ದಾನೆ ಎಂದು ಆರೋಪಿಸಿ ಹ*ಲ್ಲೆ ನಡೆಸಿದ್ದಾರೆ. ಲೋಕಲ್ ಚಾಲಕನ ಮೇಲೆ ಹ*ಲ್ಲೆಯಾದ ಹಿನ್ನೆಲೆ ಸ್ಥಳೀಯರ ಅಕ್ರೋಶ, ರಿಷಬ್ ಶೆಟ್ಟಿ ಮಧ್ಯವರ್ತಿಯಲ್ಲಿ ಸಂಧಾನ ನಡೆದಿದ್ದು, ಎಲ್ಲರಿಗೂ ಕರೆದು ಮಾತನಾಡುತ್ತೇನೆ ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ ಎಂದು ತಿಳಿದು ಬಂದಿದೆ.

    ಕಾಂತಾರ ಚಿತ್ರವು ದೈವ ಹಾಗೂ ದೈವಾರಾಧನೆಗೆ ಸಂಬಂಧಿಸಿದ ಕಥಾ ಹಂದರವನ್ನುಹೊಂದಿದ್ದು, ಈ ಚಿತ್ರ ಬಿಡುಗಡೆಗೊಂಡು ಬಹಳಷ್ಟು ಮೆಚ್ಚುಗೆಯನ್ನು ಗಳಿಸಿತ್ತು. ಚಿತ್ರ ಬಿಡುಗಡೆಗೊಂಡ ಬಳಿಕ ಹಲವುಕಡೆ ದೈವದ ವೇಷವನ್ನುಅಸಭ್ಯವಾಗಿ ತೊಟ್ಟು ಅಭಿಮಾನಿಗಳು ನರ್ತಿಸಿ ದೈವಕ್ಕೆ ಅಪಮಾನ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದ್ದು, ದೈವಾರಾಧಕರು ಚಿತ್ರದ ವಿರುದ್ಧ ಅಸಮಧಾನ ಹೊಂದಿದ್ದಾರೆ.

    ಕಾಂತಾರ ಯಶಸ್ಸಿನ ಬಳಿಕ ರಿಷಬ್ ಶೆಟ್ಟಿ ‘ಕಾಂತಾರ ಚಾಪ್ಟರ್ – 1’ ಮಾಡುವುದಾಗಿ ಘೋಷಿಸಿದ ಬಳಿಕ ತುಳುನಾಡಿನ್ಲಿ ತೀವ್ರ ಆಕ್ರೋಷ ಕೇಳಿ ಬಂದಿತ್ತು. ಚಿತ್ರತಂಡವು ಚಿತ್ರೀಕರಣ ನಡೆಸುವ ಈ ಸಂದರ್ಭ ಹಲವು ವಿಘ್ನಗಳು ಎದುರಾಗುತ್ತಿದ್ದು, ಇದು ದೈವದ ಕೋಪವೋ, ಇಲ್ಲ ದೈವನರ್ತಕರ ಶಾಪವಿರಬೇಕು ಎಂಬ ಗುಮನಿಗಳು ಶುರುವಾಗಿದೆ.

    ಚಿತ್ರೀಕರಣ ಮುಗಿಸಿ ತೆರಳುವಾಗ ಕೊಲ್ಲೂರು ಮಾರ್ಗದಲ್ಲಿ ಈ ದು*ರ್ಘಟನೆ ಸಂಭವಿಸಿದ್ದು, ಬಸ್‌ನಲ್ಲಿ 25 ಕಲಾವಿದರಿದ್ದರು. ಹಲವರು ಸಣ್ನ ಪುಟ್ಟ ಗಾ*ಯಗಳಿಂದ ಪಾರಾಗಿದ್ದರೆ, ಆರು ಜನರಿಗೆ ಗಂಭೀರ ಗಾ*ಯವಾಗಿದೆ. ಗಾಯಾಳುಗಳನ್ನು ಕುಂದಾಪುರ  ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು.  ಸ್ಥಳಕ್ಕೆ ಕೊಲ್ಲೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

    Continue Reading

    DAKSHINA KANNADA

    ಉಳ್ಳಾಲ: ಚಲಿಸುತ್ತಿದ್ದ ರಿಕ್ಷಾ ಮರಕ್ಕೆ ಡಿ*ಕ್ಕಿ: ಓರ್ವ ಮೃ*ತ್ಯು, ಮೂವರಿಗೆ ಗಾ*ಯ

    Published

    on

    ಉಳ್ಳಾಲ: ಆಟೋ ರಿಕ್ಷಾವೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಮೃ*ತಪಟ್ಟು ಮೂವರು ಗಾ*ಯಗೊಂಡಿರುವ ಘಟನೆ ಉಳ್ಳಾಲ ತಾಲೂಕಿನ ಕೊಣಾಜೆ ಸಮೀಪದ ಪುಳಿಂಚಾಡಿ ಎಂಬಲ್ಲಿ ಭಾನುವಾರ (ನ.24) ಸಂಜೆ ಸಂಭವಿಸಿದೆ.

    ಕಾಸರಗೋಡು ಜಿಲ್ಲೆಯ ಕುಂಬಳೆ ಮಂಜತ್ತಡ್ಕ ನಿವಾಸಿ ನಾರಾಯಣ ಗಟ್ಟಿ (50) ಮೃ*ತರು ಎಂದು ಗುರುತಿಸಲಾಗಿದೆ.

    ಸಂಬಂಧಿಕರೊಬ್ಬರ ಆರೋಗ್ಯ ವಿಚಾರಿಸಲೆಂದು ಕೊಣಾಜೆ ಪುಳಿಂಚಾಡಿಯ ಕಲ್ಕಾರ್ ಎಂಬಲ್ಲಿಗೆ ನಾರಾಯಣ ಗಟ್ಟಿ ಅವರು ರಿಕ್ಷಾದಲ್ಲಿ ತೆರಳಿದ್ದರು. ಅಲ್ಲಿ ಇಳಿಜಾರು ಪ್ರದೇಶದಲ್ಲಿ ರಿಕ್ಷಾ ಇಳಿಯುತ್ತಿದ್ದಂತೆ ಬ್ರೇಕ್ ವೈಫಲ್ಯಕ್ಕೀಡಾಗಿ ಮರವೊಂದಕ್ಕೆ ಡಿ*ಕ್ಕಿ ಹೊಡೆದಿದೆ.

    ಈ ಸಂದರ್ಭ ಗಂಭೀರ ಗಾಯಗೊಂಡ ನಾರಾಯಣ ಗಟ್ಟಿ ಅವರು ಮೃ*ತಪಟ್ಟಿದ್ದು, ಘಟನೆಯಲ್ಲಿ ರಿಕ್ಷಾದೊಳಗಿದ್ದ ಸಂಬಂಧಿ ಮಹಿಳೆ, ಅವರ ಪುತ್ರ ಹಾಗೂ ಇನ್ನೋರ್ವರಿಗೆ ಗಾ*ಯಗಳಾಗಿವೆ. ನಾರಾಯಣ ಗಟ್ಟಿ ಅವರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಮಂಗಳೂರು ದಕ್ಷಿಣ ಟ್ರಾಫಿಕ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    LATEST NEWS

    Trending