Connect with us

DAKSHINA KANNADA

ಉಡುಪಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ : ಮೂವರು ಆರೋಪಿಗಳಿಗೆ ಜೀವಿತಾವಧಿ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ..!

Published

on

ಉಡುಪಿ: ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಉಡುಪಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಮೂವರು ಪ್ರಮುಖ ಆರೋಪಿಗಳು ದೋಷಿ ಎಂದು ಉಡುಪಿ ಜಿಲ್ಲಾ ನ್ಯಾಯಾಲಯ ಇಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. 

ಆರೋಪಿಗಳು ಭಾಸ್ಕರ್ ಶೆಟ್ಟಿಯನ್ನು ಕೊಲೆಗೈದು ಹೋಮಕುಂಡದಲ್ಲಿ ಸುಟ್ಟಿರುವ ಆರೋಪ ಸಾಬೀತಾಗಿದ್ದು, ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳು ದೋಷಿ ಎಂದು ಉಡುಪಿ ಜಿಲ್ಲಾ ನ್ಯಾಯಾಲಯ ತೀರ್ಪು ಪ್ರಕಟ ಮಾಡಿ ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. .

ಪ್ರಮುಖ ಮೂವರು ಆರೋಪಿಗಳಾದ ಭಾಸ್ಕರ್ ಶೆಟ್ಟಿ ಅವರ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ, ರಾಜೇಶ್ವರಿ ಆಪ್ತ ಗೆಳೆಯ ಜ್ಯೋತಿಷಿ ನಿರಂಜನ ಭಟ್ ಗೆ ಮಾನ್ಯ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಪ್ರಕರಣದ ನಾಲ್ಕನೇ ಆರೋಪಿ ನಿರಂಜನ್ ಭಟ್ ಅವರ ತಂದೆ ಶ್ರೀನಿವಾಸ್ ಭಟ್ ಅನಾರೋಗ್ಯದಿಂದ ಮೃತಪಟ್ಟಿದ್ದರೆ ಐದನೇ ಆರೋಪಿ ಚಾಲಕ ರಾಘವೇಂದ್ರ ಖುಲಾಸೆಗೊಂಡಿದ್ದಾನೆ.

2016 ರ ಜುಲೈ 28 ರಂದು ಈ ಪ್ರಕರಣ ನಡೆದಿದ್ದು ಉಡುಪಿಯ ಇಂದ್ರಾಳಿಯಲ್ಲಿರುವ ತಮ್ಮ ಮನೆಯಿಂದ ಉದ್ಯಮಿ ಭಾಸ್ಕರ್ ಶೆಟ್ಟಿ ಕಣ್ಮರೆಯಾಗಿದ್ದರು. ಮಣಿಪಾಲ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿ ಪೋಲೀಸರು ಪತ್ನಿ ಮತ್ತು ಮಗನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾಗ  ಭಾಸ್ಕರ್ ಶೆಟ್ಟಿ ಕೊಲೆ ವಿಚಾರ ಬಹಿರಂಗಗೊಂಡಿತ್ತು.

ಬಳಿಕ ಮೃತದೇಹವನ್ನು ನಂದಳಿಕೆಯಲ್ಲಿರುವ ನಿರಂಜನ ಭಟ್ ಮನೆಯಲ್ಲಿನ ಹೋಮ ಕುಂಡದಲ್ಲಿ ಹಾಕಿ ಸುಟ್ಟಿದ್ದರು.

ಇದೀಗ ಉಡುಪಿ ನ್ಯಾಯಾಲಯದಿಂದ ಆರೋಪಿಗಳನ್ನು ದೋಷಿಗಳು ಎಂದು ಪರಿಗಣಿಸಿ ಅಂತಿಮ ತೀರ್ಪು ಹೊರಬಿದ್ದಿದೆ.

ವಿಶೇಷ ಸರ್ಕಾರಿ ಅಭಿಯೋಜಕ ಶಾಂತರಾಮ್ ಶೆಟ್ಟಿ ಭಾಸ್ಕರ್ ಶೆಟ್ಟಿ ಪರವಾಗಿ ವಾದಿಸಿದ್ದರು. ಇನ್ನು ನ್ಯಾಯಾಲಯದ ಸುತ್ತಮುತ್ತ ಭಾರೀ ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಭಾಸ್ಕರ್ ಶೆಟ್ಟಿ ತೀರ್ಪು ಬರುತ್ತಿದ್ದಂತೆ ಅವರ ಸಹೋದರಿ ಕಣ್ಣಾಲಿಗಳಲ್ಲಿ ನೀರು ತುಂಬಿಕೊಂಡಿದ್ದು, ಕೊನೆಗೂ ತೀರ್ಪು ಹೊರಬಿದ್ದ ಸಮಾಧಾನ ಅವರ ಮುಖದಲ್ಲಿ ಕಂಡು ಬರುತ್ತಿತ್ತು.

 

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending